ಬೆಂಗಳೂರು: ಸ್ಯಾಂಡಲ್ ವುಡ್ ನ ಖ್ಯಾತ ನಿರ್ದೇಶಕ ಹಾಗೂ ನಟ ಗುರುಪ್ರಸಾದ್ ಭಾನುವಾರ ನಿಧನರಾಗಿದ್ದಾರೆ.
ಮಠ, ಎದ್ದೇಳು ಮಂಜುನಾಥ ಖ್ಯಾತಿಯ ನಿರ್ದೇಶಕ ಗುರುಪ್ರಸಾದ್ ತಮ್ಮ ಅಪಾರ್ಟ್ ಮೆಂಟ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಅವರು ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ. ಗುರುಪ್ರಸಾದ್ ಅವರಿಗೆ 50 ವರ್ಷ ವಯಸ್ಸಾಗಿತ್ತು.
ಅವರ ಸಾವಿಗೆ ಸಾಲಗಾರರ ಕಾಟವೇ ಕಾರಣ ಎಂದು ಹೇಳಲಾಗಿದೆ. ಮಾದನಾಯಕಹಳ್ಳಿಯ ಅಪಾರ್ಟ್‌ಮೆಂಟ್‌ನಲ್ಲಿ ಅವರ ಮೃತ ದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಗುರುಪ್ರಸಾದ್ ಅವರು ಸಾಲಗಾರರಿಗೆ ಹೆದರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ.
ಮಠ, ಎದ್ದೇಳಿ ಮಂಜುನಾಥ ಖ್ಯಾತಿಯ ನಿರ್ದೇಶಕ ಗುರುಪ್ರಸಾದ್ ಬೆಂಗಳೂರಿನ ಟಾಟಾ ನ್ಯೂ ಹೆವನ್ ಅಪಾರ್ಟ್‌ಮೆಂಟ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನೇಣು ಬಿಗಿದ ಸ್ಥಿತಿಯಲ್ಲಿ ಅವರ ಶವ ಪತ್ತೆಯಾಗಿದೆ ಎಂದು ವರದಿಗಳು ತಿಳಿಸಿವೆ. ಕನಿಷ್ಠ 10 ದಿನಗಳ ಹಿಂದೆ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ ಎಂದು ಚರಣ ಅಪ್ಪು ಅವರು ಟ್ವೀಟ್ ಮಾಡಿದ್ದಾರೆ.
ಶ್ರೀನಿವಾಸ್ ಅವರಿಗೆ ಗುರುಪ್ರಸಾದ್ 30 ಲಕ್ಷ ಹಣ ನೀಡಬೇಕಿತ್ತು ಎನ್ನಲಾಗಿದೆ. ಹಣ ಪಡೆಯುವಾಗ ಗುರುಪ್ರಸಾದ್ ನೀಡಿದ್ದ ಚೆಕ್ ಬೌನ್ಸ್ ಆಗಿದ್ದು ಪ್ರಕರಣವು ಜಿಲ್ಲಾ ನ್ಯಾಯಾಲಯದಲ್ಲಿ ನಡೆಯುತ್ತಿತ್ತು. ವಿಚಾರಣೆಗೆ ಪದೇ ಪದೇ ಗುರುಪ್ರಸಾದ್ ಗೈರಾಗಿದ್ದ ಕಾರಣ ಅವರ ವಿರುದ್ಧ ಜಾಮೀನು ರಹಿತ ವಾರೆಂಟ್ ಹೊರಡಿಸಲಾಗಿತ್ತು.
2006 ರಲ್ಲಿ ಬಿಡುಗಡೆ ಆದ ‘ಮಠ’ ಸಿನಿಮಾವನ್ನು ಗುರುಪ್ರಸಾದ್ ನಿರ್ದೇಶನ ಮಾಡಿದ್ದರು. ಆ ಸಿನಿಮಾದಲ್ಲಿ ಜಗ್ಗೇಶ್ ನಟಿಸಿದ್ದರು. ಬಳಿಕ ‘ಎದ್ದೇಳು ಮಂಜುನಾಥ’ ಸಿನಿಮಾವನ್ನು ಗುರುಪ್ರಸಾದ್ ನಿರ್ದೇಶಿಸಿದ್ದರು, ಕಲ್ಟ್ ಸಿನಿಮಾ ಎಂದೇ ಹೆಸರಾಗಿರುವ ಈ ಸಿನಿಮಾದಲ್ಲಿಯೂ ಜಗ್ಗೇಶ್ ನಟಿಸಿದ್ದರು. ಡಾಲಿ ಧನಂಜಯ್ ನಟಿಸಿರುವ ‘ಡೈರೆಕ್ಟರ್ ಸ್ಪೆಷಲ್’ ಸಿನಿಮಾವನ್ನು ಗುರುಪ್ರಸಾದ್ ನಿರ್ದೇಶನ ಮಾಡಿದ್ದರು. ಇದೀಗ ಜಗ್ಗೇಶ್ ನಟಿಸುತ್ತಿರುವ ‘ರಂಗನಾಯಕ’ ಸಿನಿಮಾವನ್ನು ಗುರುಪ್ರಸಾದ್ ನಿರ್ದೇಶನ ಮಾಡುತ್ತಿದ್ದರು.
ಬೆಂಗಳೂರು ಉತ್ತರ ತಾಲೂಕಿನ ಮಾದನಾಯಕನಹಳ್ಳಿ ಬಳಿಯ ಅಪಾರ್ಟ್ಮೆಂಟ್ ಒಂದರಲ್ಲಿ ಗುರುಪ್ರಸಾದ್ ವಾಸವಿದ್ದರು, ಅದೇ ಮನೆಯಲ್ಲಿ ಈಗ ಗುರುಪ್ರಸಾದ್ ಅವರ ಶವ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸ್ಥಳಕ್ಕೆ ಮಾದನಾಯಕನಹಳ್ಳಿ ಪೊಲೀಸರು ದೌಡಾಯಿಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.