ದೊಡ್ಡಬಳ್ಳಾಪುರ : ಪ್ರತಿ ಮನೆ ಮನೆಗೆ ತೆರಳಿ ಬಿಪಿ, ಶುಗರ್ ಪರೀಕ್ಷಿಸುವ ಯೋಜನೆ ಜಾರಿಗೆ ತರಲಾಗುತ್ತಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.
ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಸರಕಾರಿ ಆಸ್ಪತ್ರೆ ಆವರಣದಲ್ಲಿ ಒಪಿಡಿ ಬ್ಲಾಕ್, ಡಯಾಲಿಸಿಸ್ ಕೇಂದ್ರ ಹಾಗೂ ಬ್ಲಡ್ ಬ್ಯಾಂಕ್ ಕೇಂದ್ರಗಳನ್ನು ಉದ್ಘಾಟಿಸಿ ಮಾತನಾಡಿದ ಅವರು ರಾಜ್ಯದ ಸರಕಾರಿ ಆಸ್ಪತ್ರೆಗಳಲ್ಲಿ ಗುಣಮಟ್ಟದ ಚಿಕಿತ್ಸೆ ನೀಡಲು ಸರಕಾರ ಆದ್ಯತೆ ನೀಡಿದೆ. ಇದರ ಭಾಗವಾಗಿ ರಾಜ್ಯದಲ್ಲಿ 8 ಸಾವಿರ ಡಯಾಲಿಸಿಸ್ ಯಂತ್ರಗಳನ್ನು ಸರಕಾರಿ ಆಸ್ಪತ್ರೆಗಳಿಗೆ ನೀಡಲಾಗಿದೆ ಎಂದರು.
ಈ ಯೋಜನೆಯು ಗ್ರಾಮೀಣ ಸಮುದಾಯಗಳಿಗೆ ವೈದ್ಯಕೀಯ ಪ್ರವೇಶವನ್ನು ಸುಧಾರಿಸುವಲ್ಲಿ ನೆರವಾಗುತ್ತದೆ.ಈ ಕಾಯಿಲೆಗಳು ಮುಂದಿನ ದಿನಗಳಲ್ಲಿ ಬೇರೆ ಬೇರೆ ಕಾಯಿಲೆಗಳಿಗೆ ದಾರಿ ಮಾಡಿಕೊಡುತ್ತವೆ. ಇದರಿಂದ ಎಚ್ಚರವಹಿಸಬೇಕಾಗಿದೆ.
ಇತ್ತೀಚೆಗೆ ಬಿಪಿ, ಶುಗರ್ ಪ್ರಕರಣಗಳಲ್ಲಿ ಹೆಚ್ಚಳವಾಗುತ್ತಿದ್ದು, ಮನೆ ಮನೆಗೆ ತೆರಳಿ ಪರೀಕ್ಷಿಸುವ ಯೋಜನೆ ಜಾರಿಗೆ ತರಲಾಗುತ್ತಿದೆ. ಸರಕಾರಿ ಆಸ್ಪತ್ರೆಗಳಲ್ಲಿ ಗುಣಮಟ್ಟದ ಸೇವೆ ನೀಡಲು ಸರಕಾರ ನಿರಂತರವಾಗಿ ಪ್ರಯತ್ನಿಸುತ್ತಿದೆ.
ಅಜಾಕ್ಸ್ ಎಂಜಿನಿಯರಿಂಗ್‌ನಂತಹ ಕಂಪನಿಗಳು ಈ ಕಾರ್ಯಾಚರಣೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವುದನ್ನು ನೋಡಲು ಖುಷಿಯಾಗುತ್ತದೆ. ಸರಕಾರಿ ಆಸ್ಪತ್ರೆಯಲ್ಲಿ ಈ ಹಿಂದೆ 250 ರಿಂದ 300 ಅಗತ್ಯ ಔಷಧಿಗಳು ದೊರೆಯುತಿದ್ದು, ಅವುಗಳ ಸಂಖ್ಯೆಯನ್ನು 1 ಸಾವಿರಕ್ಕೆ ಹೆಚ್ಚಿಸಲು ತೀರ್ಮಾನಿಸಲಾಗಿದೆ ಎಂದರು.
ದೊಡ್ಡಬಳ್ಳಾಪುರ ನೂತನ ಡಯಾಲಿಸಿಸ್ ಕೇಂದ್ರಕ್ಕೆ 1.5 ಕೋಟಿ ವೆಚ್ಚದ ಉಪಕರಣಗಳು ಹಾಗೂ ಪ್ರತಿ ವರ್ಷ ಮಾನವ ಸಂಪನ್ಮೂಲಗಳಿಗೆ 50 ಲಕ್ಷ ರೂ. ಒದಗಿಸಲಾಗುವುದು. ಈ ನಿಟ್ಟಿನಲ್ಲಿ ಎಜಾಕ್ಸ್ ಸಂಸ್ಥೆಯು ಉತ್ತಮ ಕೆಲಸ ಮಾಡುತಿದ್ದು, ಶಿಕ್ಷಣ ಕ್ಷೇತ್ರಕ್ಕೂ ಉತ್ತಮ ಕೆಲಸಗಳನ್ನು ಮಾಡುತ್ತಿದೆ ಎಂದರು. ಜಿಲ್ಲೆಯ ಹಲವಾರು ಸಮುದಾಯ ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲು ಡಿಎಚ್‌ಒ ಪಟ್ಟಿ ನೀಡಿದ್ದು ಅವುಗಳ ಮೇಲ್ದರ್ಜೆಗೆ ಸಚಿವರು ಸಮ್ಮತಿಸಿದ್ದಾರೆ,” ಎಂದು ಹೇಳಿದರು.
ಈಗಾಗಲೇ ನೆಲಮಂಗಲ ತಾಲೂಕು ಕೇಂದ್ರಕ್ಕೆ ತಾಲೂಕು ಆಸ್ಪತ್ರೆ ಮಂಜೂರಾಗಿದ್ದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸಂಪೂರ್ಣ ಆರೋಗ್ಯ ಕ್ಷೇತ್ರದ ಅಭಿವೃದ್ಧಿಗೆ ಸಹಕಾರ ನೀಡಲಾಗುವುದೆಂದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾಉಸ್ತುವಾರಿ ಸಚಿವರಾದ ಕೆಎಚ್ ಮುನಿಯಪ್ಪ ಮಾತನಾಡಿ, “ಶೇ. 80ರಷ್ಟು ಜನ ಸರಕಾರಿ ಆಸ್ಪತ್ರೆಗಳನ್ನು ಅವಲಂಬಿಸಿದ್ದು, ಸರಕಾರ ಎಲ್ಲರಿಗೂ ಉತ್ತಮ ಆರೋಗ್ಯ ಸೇವೆಗಳನ್ನು ನೀಡಲು ಶ್ರಮಿಸುತ್ತಿದೆ.