spot_img
spot_img

‘KAS ಪರೀಕ್ಷೆ’ ಬರೆಯಲು ‘ವಿಶೇಷ ಸಾಂದರ್ಭಿಕ ರಜೆ’ ಮಂಜೂರು

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ಎನ್ನುವಂತೆ ನಾಳೆ ಕೆಪಿಎಸ್ಸಿಯಿಂದ ನಡೆಯುತ್ತಿರುವಂತ ಕೆಎಎಸ್ ಪೂರ್ವಭಾವಿ ಪರೀಕ್ಷೆ ಬರೆಯಲು ವಿಶೇಷ ಸಾಂದರ್ಭಿಕ ರಜೆ ಮಂಜೂರು ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರ ಉಪ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದೆ.
ಮಂಗಳವಾರದಂದು ನಡೆಸಲು ಕರ್ನಾಟಕ ಲೋಕಸೇವಾ ಆಯೋಗವು ತೀರ್ಮಾನಿಸಿರುವ ಹಿನ್ನೆಲೆಯಲ್ಲಿ, 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ಸ್ ಗ್ರೂಪ್ ಎ ಮತ್ತು ಗ್ರೂಪ್ ಬಿ ವೃಂದದ ಹುದ್ದೆಗಳ ನೇಮಕಾತಿಯ ಪೂರ್ವಭಾವಿ ಪರೀಕ್ಷೆಯನ್ನು ಬರೆಯಬಹುದು ಎಂದು ಆದೇಶಿಸಿದೆ.

ಸದರಿ ಪರೀಕ್ಷೆಗೆ ಅನುವಾಗುವ 214 ಸರ್ಕಾರಿ, 189 ಅನುದಾನಿತ ಮತ್ತು 161 ಶಾಸಗಿ ಶಾಲಾ-ಕಾಲೇಜುಗಳು ಸೇರಿದಂತೆ, ಒಟ್ಟಾರೆ 564 ಪರೀಕ್ಷಾ ಉಪ ಕೇಂದ್ರಗಳಿಗೆ, ಅನ್ವಯಿಸಿದಂತೆ ಒಂದು ದಿನದ (ಅ. 27, 2024) ವಿಶೇಷ/ ಸಾರ್ವತ್ರಿಕ ರಜೆಯನ್ನು ಘೋಷಿಸಲಾಗಿದೆ ಎಂದಿದ್ದಾರೆ.

ಸದರಿ ದಿನಾಂಕವನ್ನು ಸಾರ್ವತ್ರಿಕ ರಜೆಯನ್ನಾಗಿ Negotiable Instrument Act 1881ರ ಅಡಿಯಲ್ಲಿ ಘೋಷಿಸಲಾಗಿದೆ.

ಪರೀಕ್ಷಾ ಉಪ ಕೇಂದ್ರಗಳಲ್ಲಿ ಅ. 27, 2024 ರಂದು ಯಾವುದೇ ಶೈಕ್ಷಣಿಕ ಪರೀಕ್ಷೆಗಳು ಹಾಗೂ ಇನ್ನಿತರೆ ಪೂರ್ವನಿರ್ಧರಿತ ಕಾರ್ಯಕ್ರಮಗಳು ನಿಗದಿಯಾಗಿದ್ದಲ್ಲಿ, ಸೂಕ್ತ ಕ್ರಮ ಕೈಗೊಂಡು ಪ್ರಸಕ್ತ ಸಾಲಿನ ಗೆಜೆಟೆಡ್ ಪ್ರೊಬೇಷನರ್ಸ್ ಪೂರ್ವಭಾವಿ ಪರೀಕ್ಷೆ ನಡೆಸಲು ಅಡಚಣೆಯಾಗದಿರುವುದನ್ನು ಸಂಬಂಧಿತ ಶೈಕ್ಷಣಿಕ ಸಂಸ್ಥೆಗಳ ಮುಖ್ಯಸ್ಥರು/ ಆಡಳಿತ ಮಂಡಳಿಯು ಖಾತರಿ ಪಡಿಸುವುದು.

ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು, ಪ್ರಾಥಮಿಕ, ಪ್ರೌಢ ಶಿಕ್ಷಣ ಹಾಗೂ ಪದವಿ ಪೂರ್ವ ಇಲಾಖೆ ಹಾಗೂ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು, ಉನ್ನತ ಶಿಕ್ಷಣ ಇಲಾಖೆ ಅಡಿಯಲ್ಲಿ ಬರುವಂತಹ ಶೈಕ್ಷಣಿಕ ಸಂಸ್ಥೆಗಳಿಗೆ ಈ ಆದೇಶವನ್ನು ಅನುಷ್ಠಾನಗೊಳಿಸಲು ಸೂಕ್ತ ನಿರ್ದೇಶನ ನೀಡುವುದು.

ಸಂಬಂಧಪಟ್ಟ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಸದರಿ ಪರೀಕ್ಷೆಯನ್ನು ಯಾವುದೇ ಅಡಚಣೆ ಉಂಟಾಗದಂತೆ ಪಾರದರ್ಶಕವಾಗಿ ಮತ್ತು ಸುಸೂತ್ರವಾಗಿ ನಡೆಸಲು ಸಂಪೂರ್ಣ ಸಹಕಾರ ನೀಡುವುದು.

ಮೇಲೆ ತಿಳಿಸಿರುವ ಪರೀಕ್ಷೆಗೆ ಅರ್ಜಿ ಸಲ್ಲಿಸಿರುವ ರಾಜ್ಯ ಸರ್ಕಾರದ, ಶಾಲಾ ಕಾಲೇಜುಗಳ (ಅನುದಾನಿತ ಶಿಕ್ಷಣ ಸಂಸ್ಥೆಗಳು ಒಳಗೊಂಡಂತೆ) ಹಾಗೂ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳ ಸೇವಾ ನಿರತ ಅಭ್ಯರ್ಥಿಗಳು, ಅವರುಗಳ ಪರೀಕ್ಷಾ ಪ್ರವೇಶ ಪತ್ರವನ್ನು ರಜಾ ಮಂಜೂರು ಮಾಡುವ ಸಂಬಂಧಿತ ಪ್ರಾಧಿಕಾರಕ್ಕೆ ಕಡ್ಡಾಯವಾಗಿ ಒದಗಿಸುವ ಷರತ್ತಿಗೊಳಪಟ್ಟು, ಒಂದು ದಿನದ ವಿಶೇಷ ಸಾಂದರ್ಭಿಕ ರಜೆಯನ್ನು (ಅ. 27, 2024 ರಂದು) ನೀಡಲು ಆದೇಶಿಸಿದ್ದಾರೆ.

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

ರೈತರ ಜಮೀನಿನ ಪಹಣಿ :ವಕ್ಫ್‌ ಹೆಸರು ಬೇಡ

ಬೆಂಗಳೂರು : ವಕ್ಫ್‌ ಮಂಡಳಿ ರದ್ದಾಗಬೇಕು, ರೈತರ ಜಮೀನಿನ ಪಹಣಿಯಲ್ಲಿ ಬರೆದ ವಕ್ಫ್‌ ಹೆಸರು ತೆಗೆದುಹಾಕಬೇಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್‌ ಆಗ್ರಹಿಸಿದರು. ಸ್ವಾತಂತ್ರ್ಯ ಉದ್ಯಾನದಲ್ಲಿ...

ರೈತರ ಕಂಗೆಡಿಸಿದ ಡೀಮ್ಡ್ ಫಾರೆಸ್ಟ್

ಚಿಕ್ಕಬಳ್ಳಾಪುರ : ಜಿಲ್ಲೆಯಲ್ಲಿ ರೈತರು ಸಾಗುವಳಿ ಮಾಡುತ್ತಿರುವ ಜಮೀನಿಗೂ ಅರಣ್ಯ ಇಲಾಖೆಯಿಂದ ಬೇಲಿ ಹಾಕುತ್ತಿದ್ದರು. ಕೃಷಿ ಮಾಡುತ್ತಿದ್ದ ರೈತರೆಲ್ಲ ದಿಕ್ಕೆಟ್ಟು ಕೂತಿದ್ದರು. ಕೆಲವೆಡೆ ಸರಕಾರವೇ...

ಹಳದಿ ಮಾರ್ಗದ ಹಳಿಗೆ ಬರಲು ಸಜ್ಜಾಗಿವೆ ಮೆಟ್ರೋ ರೈಲುಗಳು

ಬೆಂಗಳೂರು: ಮೆಟ್ರೋ ಹಳದಿ ಮಾರ್ಗದಲ್ಲಿ ಆರಂಭದಲ್ಲಿ ಮೂರು ರೈಲುಗಳನ್ನು ಮಾತ್ರ ಓಡಿಸಲು ನಿರ್ಧರಿಸಲಾಗಿದೆ. ಪ್ರತಿ 30 ನಿಮಿಷಗಳ ಅಂತರದಲ್ಲಿ ರೈಲುಗಳು ಸಂಚರಿಸಲಿವೆ. 2025ರ ಆಗಸ್ಟ್‌ ವೇಳೆಗೆ...

ಆದಷ್ಟು ಬೇಗ ಭಾರತಕ್ಕೆ ಕಾಲಿಡಲಿದೆ ರೆಡ್​ಮಿ ನೋಟ್​ 14 ಸೀರಿಸ್

Redmi Note 14 5G Series: ಆದಷ್ಟು ಬೇಗ ರೆಡ್​ಮಿ ನೋಟ್​ 14 ಸೀರಿಸ್​ ಭಾರತಕ್ಕೆ ಕಾಲಿಡಲಿದೆ. ಈ ಬಗ್ಗೆ ಕಂಪನಿ ಅಧಿಕೃತವಾಗಿ ಮಾಹಿತಿ...