spot_img
spot_img

ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ‘ಅರಿವು ಯೋಜನೆ’ಯಡಿ ಶೈಕ್ಷಣಿಕ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ಬೆಂಗಳೂರು : 2024-25 ನೇ ಸಾಲಿನ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್, ಪಾರ್ಸಿ ಜನಾಂಗದವರಿಗೆ ಅರಿವು (ರಿನಿವಲ್) ಯೋಜನೆಯಡಿಯಲ್ಲಿ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮದ ವತಿಯಿಂದ ಸಾಲಿಗೆ ಮತೀಯ ನಿಗಮದಿಂದ ಸಾಲ ಸೌಲಭ್ಯಗಳನ್ನು ನೀಡಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ಅರಿವು (ರಿನಿವಲ್) ವಿಧ್ಯಾಭ್ಯಾಸ ಯೋಜನೆಯಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ (ಕೆಇಎ ವಯ ಸಿಇಟಿ, ನೀಟ್ ಮುಖಾಂತರ) ವೈದ್ಯಕೀಯ, ದಂತ ವೈದ್ಯಕೀಯ, ಎಂಜಿನಿಯರಿಂಗ್ ಆರ್ಕಿಟೆಕ್ಚರ್, ಆಯುಷ್, ಫಾರ್ಮಸಿ, ಕೃಷಿ ವಿಜ್ಞಾನ ಮತ್ತು ಪಶು ವೈದ್ಯಕೀಯ, ಎಂಬಿಎ, ಎಂಸಿಎ ಮತ್ತು ಎಲ್‌ಎಲ್ಬಿ ವ್ಯಾಸಂಗಗಳಿಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಸಾಲವನ್ನು ನೀಡಲಾಗುತ್ತದೆ.

ವಿದ್ಯಾರ್ಥಿಗಳಿಗೆ “ಅರಿವು” (ರಿನಿವಲ್) ಯೋಜನೆಯಡಿ ಶೈಕ್ಷಣಿಕ ಸಾಲವನ್ನು ಪಡೆಯಲು ವೆಬ್ ಸೈಟ್ https://kmdconline.karnataka.gov.in/ ಮೂಲಕ ಆನ್ಲೈನ್ ಅರ್ಜಿ ಸಲ್ಲಿಸಬಹುದು.
ವಿದ್ಯಾರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಕಂಪ್ಯೂಟರ್ ನಲ್ಲಿ ಭರ್ತಿ ಮಾಡಿದ ಕೂಡಲೇ ಅರ್ಜಿಯನ್ನು ಪ್ರಿಂಟೌಟ್ ಪಡೆದು ಕ್ಯೂಆರ್ ಕೋಡ್ ಹೊಂದಿದ ಅರ್ಜಿಯೊಂದಿಗೆ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಎಸ್‌ಎಸ್‌ಎಲ್ಸಿ ಅಂಕಪಟ್ಟಿ. ಪಿಯುಸಿ ಅಂಕಪಟ್ಟಿ, ಆಧಾರ್ ಕಾರ್ಡ್, ಫೋಟೋ 04(ಪಾಸ್ ಪೋಟ್ ಸೈಜ್), ಸಿಇಟಿ, ನೀಟ್ ಹಾಲ್ ಟಿಕೆಟ್ ಪ್ರತಿಗಳು ಮತ್ತು ನೋಟರಿ ಮಾಡಿಸಿದ ಛಾಪ ಕಾಗದದಲ್ಲಿ Indemnity Bond ಈ ಎಲ್ಲಾ ದಾಖಲಾತಿಗಳನ್ನು “ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ, ಮೌಲಾನಾ ಅಜಾದ್ ಭವನ, ಗ್ರಾಮಾಂತರ ಪೋಲೀಸ್ ಠಾಣೆ ಹತ್ತಿರ, ಎಫ್.ಎಂ.ಸಿ ಕಾಲೇಜು ರಸ್ತೆ, ಮಡಿಕೇರಿ ತಾ. ಕೊಡಗು ಜಿಲ್ಲೆ ಈ ಕಚೇರಿಗೆ ಸಲ್ಲಿಸಲು ಸೂಚಿಸಿದೆ”.

ಹೆಚ್ಚಿನ ಮಾಹಿತಿ ಪಡೆಯಲು ಈ ಕಚೇರಿಯ ದೂ.ಸಂ.08272-201449 ಗೆ ಸಂಪರ್ಕಿಸಬಹುದು. “ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ನವೆಂಬರ್, 15 ರವರೆಗೆ ಅವಧಿ ವಿಸ್ತರಿಸಲಾಗಿದೆ” ಎಂದು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರಾದ ಕೃಷ್ಣಮೂರ್ತಿ ಅವರು ತಿಳಿಸಿದ್ದಾರೆ.

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

ಪೂರಕ ಪೌಷ್ಟಿಕ ಆಹಾರ ವಿತರಣೆ ಎನ್‌ಜಿಒಗಳಿಗೆ ವಹಿಸಿ : ಶಶೀಲ್ ನಮೋಶಿ

ಕಲಬುರಗಿ : ರಾಜ್ಯದ ಎಲ್ಲಾ ಮಕ್ಕಳಿಗೆ ವಾರದಲ್ಲಿ ಆರು ದಿನ ಪೌಷ್ಟಿಕ ಆಹಾರ ನೀಡುತ್ತಿರುವ 'ಪೂರಕ ಪೌಷ್ಟಿಕ ಆಹಾರ ವಿತರಣೆ' ಯೋಜನೆಯನ್ನು ಎನ್‌ಜಿಒಗಳಿಗೆ ವಹಿಸಬೇಕೆಂದು...

ಗಯಾನಾದಲ್ಲಿ ಜನೌಷಧಿ ಕೇಂದ್ರಗಳ ಸ್ಥಾಪನೆ: ಪ್ರಧಾನಿ ಮೋದಿ ಸಹಿ

ಜಾರ್ಜ್‍ಟೌನ್ : ಕೆರಿಬಿಯನ್ ರಾಷ್ಟ್ರ ಗಯಾನಾಕ್ಕೆ ಭಾರತವು ತನ್ನ ಔಷಧೀಯ ಉತ್ಪನ್ನಗಳ ರಫ್ತನ್ನು ಹೆಚ್ಚಿಸಲಿದೆ ಮತ್ತುಜನೌಷಧಿ ಕೇಂದ್ರಗಳನ್ನು ಸ್ಥಾಪಿಸಲು ಯೋಜಿಸುತ್ತಿದೆ ಎಂದು ಪ್ರಧಾನಿ ನರೇಂದ್ರ...

ರೈತರ ಜಮೀನಿನ ಪಹಣಿ :ವಕ್ಫ್‌ ಹೆಸರು ಬೇಡ

ಬೆಂಗಳೂರು : ವಕ್ಫ್‌ ಮಂಡಳಿ ರದ್ದಾಗಬೇಕು, ರೈತರ ಜಮೀನಿನ ಪಹಣಿಯಲ್ಲಿ ಬರೆದ ವಕ್ಫ್‌ ಹೆಸರು ತೆಗೆದುಹಾಕಬೇಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್‌ ಆಗ್ರಹಿಸಿದರು. ಸ್ವಾತಂತ್ರ್ಯ ಉದ್ಯಾನದಲ್ಲಿ...

ರೈತರ ಕಂಗೆಡಿಸಿದ ಡೀಮ್ಡ್ ಫಾರೆಸ್ಟ್

ಚಿಕ್ಕಬಳ್ಳಾಪುರ : ಜಿಲ್ಲೆಯಲ್ಲಿ ರೈತರು ಸಾಗುವಳಿ ಮಾಡುತ್ತಿರುವ ಜಮೀನಿಗೂ ಅರಣ್ಯ ಇಲಾಖೆಯಿಂದ ಬೇಲಿ ಹಾಕುತ್ತಿದ್ದರು. ಕೃಷಿ ಮಾಡುತ್ತಿದ್ದ ರೈತರೆಲ್ಲ ದಿಕ್ಕೆಟ್ಟು ಕೂತಿದ್ದರು. ಕೆಲವೆಡೆ ಸರಕಾರವೇ...