spot_img
spot_img

ಕ್ಯೂಆರ್ ಕೋಡ್ ಮತ್ತು ಚಿಪ್ ಆಧಾರಿತ ಕಾರ್ಡ್‌ಗಳು ವಿತರಣೆ : ಸಾರಿಗೆ ಸಚಿವ ಸೂಚನೆ

spot_img
spot_img

Share post:

ಬೆಂಗಳೂರು : ಡ್ರೈವಿಂಗ್ ಲೈಸೆನ್ಸ್ (DL) ಹಾಗೂ ವಾಹನ ನೋಂದಣಿ (RC) ಕಾರ್ಡ್‌ಗಳನ್ನು ಇನ್ನಷ್ಟು ಹೈಟೆಕ್ ಹಾಗೂ ಗುಣ ಮಟ್ಟದ ರೂಪದಲ್ಲಿ ಕೊಡಲು ಸಾರಿಗೆ ಇಲಾಖೆ ಯೋಜನೆ ಸಿದ್ಧಪಡಿಸಿದೆ. ಕ್ಯೂಆರ್ ಕೋಡ್ ಮತ್ತು ಚಿಪ್ ಆಧಾರಿತ ಕಾರ್ಡ್‌ಗಳು ವಿತರಣೆಯಾಗಲಿದ್ದು, 2025ರ ಜನವರಿ ಅಥವಾ ಫೆಬ್ರವರಿಯಿಂದ ಹೊಸ ಸ್ಮಾರ್ಟ್ ಕಾರ್ಡ್ ಯೋಜನೆ ಅನುಷ್ಠಾನ ಪ್ರಕ್ರಿಯೆ ಆರಂಭವಾಗಲಿದೆ. ಈ ಕುರಿತು ಇ ಆಡಳಿತ ಕ್ರಮಕ್ಕೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಸೂಚನೆ ನೀಡಿದ್ದಾರೆ.

ಆರ್‌ಸಿ ಹಾಗೂ ಡಿಎಲ್‌ಗಳು ಪಾಲಿ ವಿನೈಲ್ ಕ್ಲೋರೈಡ್ (ಪಿವಿಸಿ) ಕಾರ್ಡ್‌ಗಳಾಗಿವೆ.ಹೊಸ ಯೋಜನೆಯಲ್ಲಿ ಪಾಲಿ ಕಾರ್ಬನೇಟ್ ಕಾರ್ಡ್ (ಪಿಸಿಸಿ)ಗಳನ್ನು ವಿತರಣೆ ಮಾಡಲಾಗುತ್ತದೆ. ಇವು ಬ್ಯಾಂಕ್‌ಗಳು ವಿತರಿಸುವ ಕಾರ್ಡ್‌ಗಳ ಮಾದರಿಯಲ್ಲಿ ಅತ್ಯಂತ ಉತ್ತಮ ಗುಣಮಟ್ಟದ ಕಾರ್ಡ್‌ಗಳಾಗಿರುತ್ತವೆ.

ಮೊದಲಿನ ಕಾರ್ಡ್‌ಗಳಲ್ಲಿ ಹಳೆಯದಾಗುತ್ತಿದ್ದಂತೆ ಕಾರ್ಡ್ ಮೇಲಿರುವ ಅಕ್ಷರಗಳು ಅಳಿಸಿ ಹೋಗುತ್ತಿತ್ತು. ಆದರೆ, ಪಿಸಿಸಿ ಕಾರ್ಡ್‌ಗಳಲ್ಲಿ ಲೇಸರ್ ಇನ್‌ಗ್ರೀಡಿಂಗ್ ಇರುವುದರಿಂದ ಎಷ್ಟೇ ವರ್ಷಗಳಾದರೂ ಅಕ್ಷರಗಳು ಅಳಿಸಿ ಹೋಗುವುದಿಲ್ಲ. ಕಾರ್ಡ್‌ಗಳು ಸಹ ಮುರಿಯುವ ಸಾಧ್ಯತೆ ಕಡಿಮೆ.ಹೊಸ ಸ್ಮಾರ್ಟ್ ಕಾರ್ಡ್ ಯೋಜನೆಗೆ ಈಗಾಗಲೇ ಟೆಂಡ‌ರ್ ಆಹ್ವಾನಿಸಿದ್ದು, ಅದರಂತೆ ಟೆಂಡರ್ ಪ್ರಕ್ರಿಯೆಗಳು ಮುಂದುವರಿದಿದೆ.

ಈವರೆಗೆ ಸ್ಮಾರ್ಟ್‌ ಕಾರ್ಡ್‌ಗಳಲ್ಲಿ ಬರೀ ಚಿಪ್ ವ್ಯವಸ್ಥೆ ಇತ್ತು. ಹೊಸ ಕಾರ್ಡ್‌ಗಳಲ್ಲಿ ಚಿಪ್ ಜತೆಗೆ ಕ್ಯೂಆರ್ ಕೋಡ್ ಸಹ ಇರಲಿದೆ. ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿದರೆ ಡಿಎಲ್ ಹಾಗೂ ಆರ್‌ಸಿ ಕಾರ್ಡ್‌ನಲ್ಲಿರುವ ಪ್ರಾಥಮಿಕ ಮಾಹಿತಿ ತಕ್ಷಣವೇ ಸಿಗಲಿದೆ. ಸಂಪೂರ್ಣ ಮಾಹಿತಿ ಬೇಕಾದರೆ ಚಿಪ್‌ ಕಾರ್ಡ್ ರೀಡರ್ ಬಳಸಿ ನೋಡಬಹುದು.

ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿದರೆ ವಾಹನ, ಮಾಲೀಕರ ವಿವರ ಲಭ್ಯವಾಗುತ್ತದೆ‌. ಅಪಘಾತ, ಕಳ್ಳತನ, ಸಂಚಾರ ನಿಯಮ ಉಲ್ಲಂಘನೆ ವೇಳೆ ಪರಿಶೀಲನೆಗೆ ಉಪಯುಕ್ತವಾಗಿದೆ‌. ವಾಹನ ಹಾಗೂ ವಾಹನ ಮಾಲೀಕರ ಮಾಹಿತಿ ದೃಢೀಕರಣ ಪೊಲೀಸರಿಗೆ ಸುಲಭ ಕಾರ್ಯ. ಕಾರ್ಡ್‌ಗಳಲ್ಲಿರುವ ಅಕ್ಷರ ಅಳಿಸಿ ಹೋಗಲ್ಲ, ಮುರಿದು ಹೋಗುವ ಸಾಧ್ಯತೆಯೂ ಕಡಿಮೆ. ಹಳೇ ಕಂಪ್ಯೂಟರ್. ಪ್ರಿಂಟರ್‌ಗಳಿಂದ ತುಂಬಿರುವ ಕಚೇರಿಗಳಿಗೆ ಹೈಟೆಕ್ ಸೌಲಭ್ಯ ಇದರಿಂದ‌ ಇ ಆಡಳಿತ ಸೇವೆಗೆ‌ ಬಲ. ಕೇಂದ್ರೀಕೃತ ವ್ಯವಸ್ಥೆ ಜಾರಿಯಿಂದ ಸ್ಮಾರ್ಟ್ ಕಾರ್ಡ್ ಪೂರೈಕೆಯಲ್ಲಿ ವ್ಯತ್ಯಾಸ ಆಗುವುದಿಲ್ಲ.

ಸ್ಮಾರ್ಟ್‌ ಕಾರ್ಡ್ ಪ್ರಿಂಟಿಂಗ್ ವ್ಯವಸ್ಥೆಯನ್ನು ಆಯಾ ಆರ್‌ಟಿಒ ಕಚೇರಿಯಲ್ಲೇ ಮಾಡಲಾಗಿತ್ತು. ಆದರೆ, ಹೊಸ ಯೋಜನೆಯಲ್ಲಿ ಶಾಂತಿನಗರದಲ್ಲಿರುವ ಸಾರಿಗೆ ಆಯುಕ್ತರ ಕೇಂದ್ರ ಕಚೇರಿಯಲ್ಲೇ ಕೇಂದ್ರೀಕೃತ ವ್ಯವಸ್ಥೆ ಮಾಡಲಾಗುವುದು. ಒಂದೇ ಕಡೆ ಮುದ್ರಿಸಿ ಎಲ್ಲ ಆರ್‌ಟಿಒ ಕಚೇರಿಗಳಿಗೆ ಪೂರೈಕೆ ಮಾಡಲಾಗುವುದು.

ವಾಹನ ಮಾಲೀಕನ ಹೆಸರು, ವಿಳಾಸ, ಫೋಟೋ, ಜನ್ಮ ದಿನಾಂಕ, ಸಿಂಧುತ್ವ ಅವಧಿ, ಮೊಬೈಲ್ ಸಂಖ್ಯೆ ಸೇರಿ 25ಕ್ಕೂ ಹೆಚ್ಚು ವಿವರ ಡಿಎಲ್‌ನಲ್ಲಿ ಇರಲಿದೆ. ಆರ್‌ಸಿ ಕಾರ್ಡ್‌ನಲ್ಲಿ ವಾಹನ ಮಾದರಿ, ನೋಂದಣಿ ದಿನಾಂಕ, ತಯಾರಿಕಾ ದಿನ, ಮಾಲೀಕರ ವಿವರ, ತಯಾರಿಕಾವಿವರ, ಇಂಜಿನ್ ನಂಬರ್, ಚಾಸ್ಸಿ ನಂಬರ್, ನೋಂದಣಿ ಸಂಖ್ಯೆ ಇನ್ನಿತರ ಮಾಹಿತಿ ಇರಲಿದೆ.

Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

MOTOROLA EDGE 60 FUSION – ಅದ್ಭುತವಾದ ಕ್ಯಾಮೆರಾ ಸೆಟಪ್, ವಾಟರ್ ಪ್ರೊಟೆಕ್ಷನ್ – ಮೊಟೊರೊಲಾದ ಹೊಸ ಫೋನ್ನ ಬೆಲೆ ಕೇವಲ ಇಷ್ಟೇ!

Motorola Edge 60 Fusion: ಬಹುನಿರೀಕ್ಷಿತ ' MOTOROLA EDGE 60 FUSION' ಕೊನೆಗೂ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಕಂಪನಿಯು ಇದನ್ನು ' MOTOROLA EDGE...

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...