spot_img
spot_img

ಮೊದಲ ಹಂತದ ಮತದಾನಕ್ಕೆ ಸಜ್ಜಾದ ಜಾರ್ಖಂಡ್

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ರಾಂಚಿ:ಸಂಚಾರ ಮಾರ್ಗ ದುರ್ಗಮ ಆಗಿರುವ ಪ್ರದೇಶಗಳಿಗೆ ಹೆಲಿಕಾಪ್ಟರ್​​ಗಳ ಬಳಕೆ ಮಾಡಿಕೊಳ್ಳುತ್ತಿದ್ದು, ದೊಡ್ಡ ಪ್ರಮಾಣದಲ್ಲಿ ಬಸ್​ ಮತ್ತು ಟ್ರೈನ್​ಗಳಲ್ಲಿ ಕೂಡ ಸಿಬ್ಬಂದಿ ಕರ್ತವ್ಯಕ್ಕೆ ತೆರಳುತ್ತಿದ್ದಾರೆ. ದಟ್ಟಾರಣ್ಯದ ಮತ ಕೇಂದ್ರಗಳಿಗೆ ಹೆಲಿಕಾಪ್ಟರ್​ ಮೂಲಕ ತೆರಳಿದ ಸಿಬ್ಬಂದಿ.
ಜಾರ್ಖಂಡ್​ ಮೊದಲ ಹಂತದ ಮತದಾನಕ್ಕೆ ಸಜ್ಜಾಗಿದೆ. ನವೆಂಬರ್​ 13 ರಂದು 43 ವಿಧಾನಸಭಾ ಕ್ಷೇತ್ರಕ್ಕೆ ಮತದಾನ ನಡೆಯಲಿದೆ. ಇದಕ್ಕಾಗಿ ಚುನಾವಣಾ ಕರ್ತವ್ಯಕ್ಕೆ ಅಧಿಕಾರಿಗಳು ಸಜ್ಜಾಗಿದ್ದಾರೆ. ರಾಜ್ಯದ ಸಂಪರ್ಕ ಸಾಧಿಸಲಾಗದ ಕುಗ್ರಾಮದ ಪ್ರದೇಶಗಳಿಗೆ ಅಧಿಕಾರಿಗಳು ಕರ್ತವ್ಯಕ್ಕೆ ಎರಡು ದಿನ ಮೊದಲೇ ಪೂರ್ವಭಾವಿಯಾಗಿ ತೆರಳುತ್ತಿದ್ದು, ಸುಗಮ ಮತದಾನಕ್ಕೆ ಎಲ್ಲ ಕ್ರಮಗಳನ್ನು ಕೇಂದ್ರ ಚುನಾವಣಾ ಆಯೋಗ ತೆಗೆದುಕೊಂಡಿದೆ. ರಾಜ್ಯದ ಐದು ಜಿಲ್ಲೆಗಳಾದ ಪಶ್ಚಿಮ ಸಿಂಗಭೂಮ್​, ಲೇತ್ಹರ್​, ಲೊಹರ್ದಗ್​, ಗುಮ್ಲಾ ಮತ್ತು ಗರ್ವ್ಹದ ಒಟ್ಟು 225 ಮತ ಕೇಂದ್ರಗಳಲ್ಲಿ ಚುನಾವಣಾಧಿಕಾರಿಗಳು ಕರ್ತವ್ಯಕ್ಕೆ ತೆರಳಿದ್ದಾರೆ ಎಂದು ಆಯೋಗ ಮಾಹಿತಿ ನೀಡಿದೆ.
ಮೊದಲ ಹಂತದ ಮತದಾನದ ಚುನಾವಣಾ ಪ್ರಚಾರ ಸೋಮವಾರ ಸಂಜೆ ಅಂದರೆ ಇಂದು ಅಂತ್ಯವಾಗಲಿದೆ. ಸಂಚಾರ ಮಾರ್ಗ ದುರ್ಗಮವಾಗಿರುವ ಪ್ರದೇಶಗಳಿಗೆ ಹೆಲಿಕಾಪ್ಟರ್​​ಗಳ ಬಳಕೆ ಮಾಡಿಕೊಳ್ಳಲಾಗುತ್ತಿದೆ. ದೊಡ್ಡ ಪ್ರಮಾಣದಲ್ಲಿ ಬಸ್​ ಮತ್ತು ಟ್ರೈನ್​ಗಳಲ್ಲಿ ಕೂಡ ಸಿಬ್ಬಂದಿ ಕರ್ತವ್ಯಕ್ಕೆ ತೆರಳುತ್ತಿದ್ದಾರೆ.
ರಾಜ್ಯದ ಈ ಐದು ಜಿಲ್ಲೆಗಳು ದಟ್ಟ ಅರಣ್ಯ ಮತ್ತು ಬೆಟ್ಟಗಳಿಂದ ಕೂಡಿದೆ. ಮಾವೋವಾದಿಗಳ ಪರಿಣಾಮ ಹೊಂದಿರುವ ಈ ಹಿನ್ನಲೆ ಈ ಪ್ರದೇಶಗಳನ್ನು ಅತಿ ಸೂಕ್ಷ್ಮ ಪ್ರದೇಶಗಳು ಎಂದು ವರ್ಗೀಕರಿಸಲಾಗಿದೆ. ಈ ಪ್ರದೇಶಗಳಲ್ಲಿ ಸುರಕ್ಷಿತ ಮತದಾನ ನಡೆಸುವುದು ಕೂಡ ಸವಾಲಿನಿಂದ ಕೂಡಿದೆ. ಅಂತಹ ಅನೇಕ ಮತಕೇಂದ್ರದಲ್ಲಿ ಎರಡು ದಿನದ ಮೊದಲೇ ಬಿಗಿ ಬಂದೋಬಸ್ತ್​ ಕೈಗೊಳ್ಳಲಾಗಿದೆ.
ಸೋಮವಾರ ಮತ್ತು ಮಂಗಳವಾರ ಮತದಾನ ಸಿಬ್ಬಂದಿಗಳು ಕ್ಲಸ್ಟರ್​ನಲ್ಲಿ ಉಳಿಯಲಿದ್ದು, ಬುಧವಾರ ಮತದಾನದ ದಿನದಂದು ನವಂಬರ್​ 13ರಂದು ಬೆಳಗ್ಗೆ ಮತ ಕೇಂದ್ರಕ್ಕೆ ತೆರಳಲಿದ್ದಾರೆ.
ಮೊದಲ ಹಂತದಲ್ಲಿ ರಾಜ್ಯದ 43 ವಿಧಾನಸಭಾ ಕ್ಷೇತ್ರಗಳಿದ್ದು, 683 ಅಭ್ಯರ್ಥಿಗಳು ಕಣದಲ್ಲಿದ್ದು, 1,37,10,717 ಮತದಾರರ ಹೆಸರು ಮತಚಲಾಯಿಸಲಿದ್ದಾರೆ. ಇದರಲ್ಲಿ 68,73,455 ಪುರುಷ ಮತ್ತು 68,36,959 ಮಹಿಳಾ ಮತದಾರರಿದ್ದು, 303 ತೃತೀಯ ಲಿಂಗಿಗಳಿದ್ದಾರೆ.
ರಾಜ್ಯದಲ್ಲಿ ಎರಡನೇ ಹಂತದ ಮತದಾನ ನವೆಂಬರ್​ 20 ರಂದು ನಡೆಯಲಿದ್ದು, ಮತ ಏಣಿಕೆ ನವೆಂಬರ್​ 23ರಂದು ನಡೆಯಲಿದೆ.

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

ಸ್ಟೀಲ್ ನಟ್​ಗಳಲ್ಲಿ ಅರಳಿದ ಆದಿಯೋಗಿಯ ವಿಗ್ರಹ : ಉಡುಪಿ ಕಲಾವಿದನ ಕೈಚಳಕ

ಉಡುಪಿ: ಉಡುಪಿಯ ಮಟ್ಟು ಗ್ರಾಮದ ಡಿಪ್ಲೋಮಾ ಪದವೀಧರರೊಬ್ಬರು ಮೈಲ್ಡ್ ಸ್ಟೀಲ್ ನಟ್ಸ್​ಗಳಿಂದ 58 ಕೆ.ಜಿ. ತೂಕದ ಆದಿಯೋಗಿಯ ವಿಗ್ರಹ ತಯಾರಿಸಿ ಇಂಡಿಯನ್ ಬುಕ್ ಆಫ್...

ಭರತನಾಟ್ಯದ 52 ಮುದ್ರೆ 3 ವರ್ಷದ ಮಗು ಪ್ರದರ್ಶನ : ಗಿನ್ನಿಸ್ ದಾಖಲೆ ನಿರ್ಮಾಣ

ಕೇರಳ: ಭರತನಾಟ್ಯದ ಎಲ್ಲ 52 ಮುದ್ರೆಗಳನ್ನು ಪ್ರದರ್ಶಿಸುವ ಮೂಲಕ ಕೇರಳದ 3 ವರ್ಷದ ಪುಟ್ಟ ಮಗುವೊಂದು ಇಂಡಿಯಾ ಬುಕ್​ ಆಫ್​ ರೆಕಾರ್ಡ್ಸ್​ನಲ್ಲಿ ದಾಖಲೆ ನಿರ್ಮಿಸಿದೆ. "ನನ್ನ...

ಅಂಚೆ ಚೀಟಿ ಸಂಗ್ರಹ : ಗಿನ್ನೆಸ್​ ಬುಕ್​ ಆಫ್​ ರೆಕಾರ್ಡ್ ನಿಮಿಸಿದ ನಿವೃತ್ತ ನೌಕರ

ಉಡುಪಿ: ಕೆಲವೊಮ್ಮೆ ವ್ಯಕ್ತಿಗಳ ಹವ್ಯಾಸವೇ ಅವರನ್ನು ದೊಡ್ಡ ಸಾಧನೆಯತ್ತ ಕೊಂಡೊಯ್ಯುತ್ತದೆ. ಅದರಂತೆ ಕಾಲೇಜೊಂದರ ನಿವೃತ್ತ ಕಚೇರಿ ಸಹಾಯಕ ಡೇನಿಯಲ್​ ಮೊಂತೇರೊ ಅವರು ಅಂಚೆ ಚೀಟಿ...

ಎಸ್ ಸಿ ಎಸ್ ಟಿ ಗಳ ದೌರ್ಜನ್ಯ : ಸರ್ಕಾರದ ಬ್ರಹ್ಮಾಸ್ತ್ರ

ಬೆಂಗಳೂರು: SC/ ST ಸಮುದಾಯದ ಜನರ ಮೇಲೆ ನಡೆಯುವ ದೌರ್ಜನ್ಯ ಪ್ರಕರಣಗಳ ತಡೆಗೆ ಸರ್ಕಾರ ಬ್ರಹ್ಮಾಸ್ತ್ರ ರೆಡಿ ಮಾಡಿದೆ. SC/ST ಸಮುದಾಯದ ಜನರ ಮೇಲೆ...