spot_img
spot_img

ಆರು ದಿಗ್ಗಜರಿಗೆ ಪ್ರತಿಷ್ಠಿತ ‘ಇನ್ಫೋಸಿಸ್‌’ ಪ್ರಶಸ್ತಿ: ವಿಜೇತರಿಗೆ ಸಿಗಲಿದೆ ತಲಾ ₹84.46 ಲಕ್ಷ ನಗದು ಬಹುಮಾನ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ಬೆಂಗಳೂರು: ಪ್ರತಿಷ್ಠಿತ ಇನ್ಫೋಸಿಸ್‌ ಸೈನ್ಸ್‌ ಫೌಂಡೇಷನ್‌ನ (ಐಎಸ್‌ಎಫ್‌) 16ನೇ ವಾರ್ಷಿಕ ಪ್ರಶಸ್ತಿ ಘೋಷಿಸಿದೆ. ಪ್ರಶಸ್ತಿಯು ತಲಾ 84.46 ಲಕ್ಷ ರೂಪಾಯಿ ನಗದು, ಚಿನ್ನದ ಪದಕ ಮತ್ತು ಸ್ಮರಣಿಕೆ ಒಳಗೊಂಡಿದೆ.

ಜಾಗತಿಕ ಖ್ಯಾತಿ ಹೊಂದಿರುವ ವಿದ್ವಾಂಸರು ಹಾಗೂ ತಜ್ಞರನ್ನು ಒಳಗೊಂಡ ತೀರ್ಪುಗಾರರ ಸಮಿತಿಯು 2024ನೇ ಸಾಲಿನ ಇನ್ಫೋಸಿಸ್‌ ಪ್ರಶಸ್ತಿಗೆ ಆರು ಮಂದಿಯ ಹೆಸರನ್ನು ಅಂತಿಮಗೊಳಿಸಿದೆ.

2025ರ ಜನವರಿ 11ರಂದು ಬೆಂಗಳೂರಿನಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಸಮಾಜ, ವಿಜ್ಞಾನ ಕ್ಷೇತ್ರದಲ್ಲಿ ಅದ್ವಿತೀಯ ಸಾಧನೆ ತೋರಿದವರಿಗೆ ಈ ಗೌರವ ಸಂದಿದೆ.

ಸಮಾಜ ಮತ್ತು ವಿಜ್ಞಾನ ಕ್ಷೇತ್ರದಲ್ಲಿ ಅದ್ವಿತೀಯ ಸಾಧನೆ ಮಾಡಿದ ಕನ್ನಡಿಗ ಸೇರಿದಂತೆ ವಿವಿಧ ಕ್ಷೇತ್ರಗಳ ಆರು ಸಾಧಕರು ‘ಇನ್ಫೋಸಿಸ್‌ ಪ್ರಶಸ್ತಿ’ಯ ಗೌರವಕ್ಕೆ ಭಾಜನರಾಗಿದ್ದಾರೆ.

ಜಾಗತಿಕ ಖ್ಯಾತಿ ಹೊಂದಿರುವ ವಿದ್ವಾಂಸರು ಹಾಗೂ ತಜ್ಞರನ್ನು ಒಳಗೊಂಡ ತೀರ್ಪುಗಾರರ ಸಮಿತಿಯು ಪ್ರಶಸ್ತಿಗೆ ಆರು ಮಂದಿಯ ಹೆಸರನ್ನು ಅಂತಿಮಗೊಳಿಸಿದೆ. ಪ್ರಶಸ್ತಿಯು ತಲಾ 84.46 ಲಕ್ಷ ರೂ. ನಗದು, ಚಿನ್ನದ ಪದಕ ಮತ್ತು ಸ್ಮರಣಿಕೆ ಒಳಗೊಂಡಿದೆ. 2025ರ ಜ.11ರಂದು ಬೆಂಗಳೂರಿನಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.

ಅರ್ಥಶಾಸ್ತ್ರ ವಿಭಾಗದಲ್ಲಿ ಕನ್ನಡಿಗ ಅರುಣ್‌ ಚಂದ್ರಶೇಖರ್‌, ಎಂಜಿನಿಯರಿಂಗ್‌ ಮತ್ತು ಗಣಕ ವಿಜ್ಞಾನ ವಿಭಾಗದಲ್ಲಿ ವಾಷಿಂಗ್ಟನ್‌ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಶ್ಯಾಮ್‌ ಗೊಲ್ಲಕೋಟ, ಮಾನವಿಕ ಮತ್ತು ಸಮಾಜ ವಿಜ್ಞಾನ ವಿಭಾಗದಲ್ಲಿ ಮಹಮೂದ್‌ ಕೂರಿಯಾ, ಜೀವ ವಿಜ್ಞಾನ ವಿಭಾಗದಲ್ಲಿ ಸಹ ಪ್ರಾಧ್ಯಾಪಕ ಸಿದ್ದೇಶ್‌ ಕಾಮತ್‌, ತಾತ್ವಿಕ ಸಂಖ್ಯಾಶಾಸ್ತ್ರ ಮತ್ತು ಗಣಿತ ವಿಭಾಗದ ಪ್ರಾಧ್ಯಾಪಕಿ ನೀನಾ ಗುಪ್ತಾ, ಭೌತ ವಿಜ್ಞಾನ ವಿಭಾಗದಲ್ಲಿ ಸ್ಟ್ಯಾನ್‌ಫೋರ್ಡ್‌ ವಿಶ್ವವಿದ್ಯಾಲಯದ ಸಹ ಪ್ರಾಧ್ಯಾಪಕಿ ವೇದಿಕಾ ಖೇಮಾನಿ ಅವರಿಗೆ ಪ್ರಶಸ್ತಿ ಲಭಿಸಿದೆ.

ಐಎಸ್‌ಎಫ್‌, ಕಳೆದ 15 ವರ್ಷಗಳಲ್ಲಿ ಜನಜೀವನದ ಎಲ್ಲಾ ಆಯಾಮಗಳಿಗೂ ಕೊಡುಗೆ ನೀಡಿರುವ ಅತ್ಯುತ್ತಮ ಸಂಶೋಧಕರ ಪಾಂಡಿತ್ಯವನ್ನು ಗುರುತಿಸುವ ಕೆಲಸ ಮಾಡಿದೆ. ಐಎಸ್‌ಎಫ್‌ ಪ್ರಶಸ್ತಿಯು, ವಿಜ್ಞಾನ ಮತ್ತು ಸಂಶೋಧನಾ ಕ್ಷೇತ್ರದ ಅನನ್ಯ ಸಾಧನೆಗಳನ್ನು ಗುರುತಿಸುವ ವಿಚಾರದಲ್ಲಿ ಭಾರತದಲ್ಲಿಅತಿ ದೊಡ್ಡ ಪ್ರಶಸ್ತಿ ಎಂಬ ಹೆಗ್ಗಳಿಕೆ ಪಡೆದಿದೆ.

”ದೇಶದಲ್ಲಿ ಸಂಶೋಧನೆ ಮತ್ತು ವಿಜ್ಞಾನದ ಭವಿಷ್ಯ ರೂಪಿಸುತ್ತಿರುವ ಅದ್ವಿತೀಯ ಸಾಧಕರನ್ನು ಗುರುತಿಸುವಲ್ಲಿ ಇನ್ಫೋಸಿಸ್‌ ಪ್ರಶಸ್ತಿಯು ಮಹತ್ವದ ಪಾತ್ರ ವಹಿಸಿದೆ. ಸಂಸ್ಥೆಯು ಕಳೆದ 15 ವರ್ಷಗಳಿಂದ 92 ಪ್ರತಿಭಾವಂತರನ್ನು ಗುರುತಿಸಿದ್ದು, ಅತ್ಯುತ್ತಮ ಹಾಗೂ ಸೃಜನಶೀಲ ವೈಜ್ಞಾನಿಕ ಸಂಶೋಧನೆಗೆ ಪ್ರೋತ್ಸಾಹ ನೀಡುತ್ತಿದೆ.

ಈ ಬಾರಿ 40 ವರ್ಷದೊಳಗಿನ ಮತ್ತು ವೃತ್ತಿ ಜೀವನದಲ್ಲಿ ಆರಂಭಿಕ ಹಂತದಲ್ಲಿರುವ ಸಾಧಕರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಈ ಸಾಧಕರ ಸಂಶೋಧನೆಗಳು ಮಾನವ ಜೀವನದ ಪ್ರತಿ ನೆಲೆಯ ಮೇಲೆ ಪ್ರಭಾವ ಬೀರಿವೆ,” ಎಂದು ಐಎಸ್‌ಎಫ್‌ ಅಧ್ಯಕ್ಷ ಕ್ರಿಸ್‌ ಗೋಪಾಲಕೃಷ್ಣನ್‌ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಇನ್ಫೋಸಿಸ್‌ ಸೈನ್ಸ್‌ ಫೌಂಡೇಷನ್‌ ಟ್ರಸ್ಟಿಗಳಾದ ನಾರಾಯಣ ಮೂರ್ತಿ, ಮೋಹನದಾಸ್‌ ಪೈ, ಕೆ ದಿನೇಶ್‌, ಡಾ. ಪ್ರತಿಮಾ ಮೂರ್ತಿ ಮತ್ತು ಎಸ್‌ಡಿ ಶಿಬುಲಾಲ್‌ ಹಾಜರಿದ್ದರು.

ಅರ್ಥಶಾಸ್ತ್ರ ವಿಭಾಗದಲ್ಲಿ ಕನ್ನಡಿಗ ಅರುಣ್‌ ಚಂದ್ರಶೇಖರ್‌ ಅವರು ಪ್ರಶಸ್ತಿಯ ಗೌರವಕ್ಕೆ ಭಾಜನರಾಗಿದ್ದಾರೆ. ಮೂಲತಃ ಬೆಂಗಳೂರಿನ ಅರುಣ್‌ ಚಂದ್ರಶೇಖರ್‌, ಸದ್ಯ ಸ್ಟ್ಯಾನ್‌ಫೋರ್ಡ್‌ ವಿಶ್ವವಿದ್ಯಾಲಯದ ಅರ್ಥಶಾಸ್ತ್ರ ವಿಭಾಗದಲ್ಲಿ ಪ್ರಾಧ್ಯಾಪಕರಾಗಿದ್ದಾರೆ.

ಗಣಕ ವಿಜ್ಞಾನ ಹಾಗೂ ಮೆಷಿನ್‌ ಲರ್ನಿಂಗ್‌ನಿಂದ ತಾತ್ವಿಕ ಮಾದರಿಗಳ ನೆರವು ಪಡೆದು, ಕರ್ನಾಟಕದ ಹಲವು ಗ್ರಾಮಗಳಿಂದ ದತ್ತಾಂಶ ಸಂಗ್ರಹಿಸಿ ಸಾಮಾಜಿಕ ಮತ್ತು ಆರ್ಥಿಕ ಜಾಲಗಳ ಅಧ್ಯಯನಕ್ಕೆ ಅವರು ಅನನ್ಯ ಕೊಡುಗೆ ನೀಡಿದ್ದಾರೆ. ಅವರ ಸಂಶೋಧನೆಯು ಆಧುನಿಕ ಅರ್ಥ ವ್ಯವಸ್ಥೆ ಹಾಗೂ ನೀತಿ ನಿರೂಪಣೆಗೆ ಪೂರಕವಾಗಿದೆ.

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

ಮಣಿಪುರದಲ್ಲಿ ಇನ್ನೂ ಮೂರು ದಿನ ಮೊಬೈಲ್ ಇಂಟರ್ನೆಟ್ ನಿಷೇಧ

ಇಂಫಾಲ್: ನವೆಂಬರ್ 16 ರಂದು, ಸರ್ಕಾರ, ಬ್ರಾಡ್‌ಬ್ಯಾಂಡ್ ಮತ್ತು ಮೊಬೈಲ್ ಇಂಟರ್ನೆಟ್ ಸೇವೆಗಳನ್ನು ಅಮಾನತುಗೊಳಿಸಿತ್ತು. ಮಣಿಪುರ ಸರ್ಕಾರವು ಬುಧವಾರ ಮೊಬೈಲ್ ಇಂಟರ್ನೆಟ್ ಸೇವೆ ಅಮಾನತು ಆದೇಶವನ್ನು...

ಬಿಗ್ ಬಾಸ್ ಮನೆಯಲ್ಲಿ ಒಂದೇ ಟಾಸ್ಕ್​ನಲ್ಲೇ ವೀಕ್ಷಕರ ಹೃದಯ ಗೆದ್ದ ಶೋಭಾ ಶೆಟ್ಟಿ

ಕನ್ನಡದ ಬಿಗ್​ಬಾಸ್​ ಸೀಸನ್​ 11ರ ಆಟದ ಕಿಚ್ಚು ಜೋರಾಗಿ ಹೊತ್ತಿ ಉರಿಯುತ್ತಿದೆ. ಕನ್ನಡ ಬಿಗ್​ಬಾಸ್​ನಲ್ಲಿ​ ಇತಿಹಾಸದಲ್ಲೇ ಬಂದ ಮೊದಲ ದಿನನೇ ಯಾವ ವೈಲ್ಡ್​ ಕಾರ್ಡ್...

ಸಾರ್ವಜನಿಕ ಆಸ್ಪತ್ರೆಗಳಲ್ಲಿ ಶೇ. 20ರಷ್ಟು ಸೇವಾ ಶುಲ್ಕ ಹೆಚ್ಚಳ

ಮಂಗಳೂರು : ಶುಲ್ಕ ಹೆಚ್ಚಳ ಮಾಡುವ ಮೂಲಕ ಗ್ಯಾರಂಟಿಗಳಿಗೆ ಹಣ ಹೊಂದಿಸಬೇಕಾದ ಪರಿಸ್ಥಿತಿ ಸರ್ಕಾರಕ್ಕೆ ಎದುರಾಗಿಲ್ಲ. ಆಸ್ಪತ್ರೆಗಳಲ್ಲಿ ಸಂಗ್ರಹವಾಗುವ ಸೇವಾ ಶುಲ್ಕವನ್ನ ಸರ್ಕಾರ ತೆಗೆದುಕೊಳ್ಳುವುದಿಲ್ಲ...

20 ಬೋಗಿಗಳ ಹೊಸ ವಂದೇ ಭಾರತ್‌ ರೈಲು; ಕರ್ನಾಟಕದ ಈ ಮಾರ್ಗದಲ್ಲಿ ಸಂಚಾರ

ಬೆಂಗಳೂರು: ಬೇಡಿಕೆ ಹಿನ್ನೆಲೆ ತಿರುವನಂತಪುರ - ಮಂಗಳೂರು - ತಿರುವನಂತಪುರ ಮಾರ್ಗದಲ್ಲಿ 20 ಬೋಗಿಯ ವಂದೇ ಭಾರತ್‌ ರೈಲು ಓಡಿಸಲು ನಿರ್ಧರಿಸಲಾಗಿದೆ. ಮಂಗಳೂರು-ತಿರುವನಂತಪುರ ವಂದೇ ಭಾರತ್‌...