spot_img
spot_img

ರಾಜ್ಯದಲ್ಲಿ 78 ಲಕ್ಷ ರೈತರು, 125 ಲಕ್ಷ ಕೃಷಿ ಕಾರ್ಮಿಕರಿದ್ದಾರೆ: ಸಚಿವ ಚಲುವನಾರಾಯಣಸ್ವಾಮಿ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ಬೆಂಗಳೂರು: ಐದು ಗ್ಯಾರಂಟಿ ಯೋಜನೆಗಳ ಮೂಲಕ ಕೃಷಿ ಸಮುದಾಯ ಹಾಗೂ ಜನಸಾಮಾನ್ಯರಿಗೆ ನಮ್ಮ ಸರ್ಕಾರ ನೆರವು ಒದಗಿಸಿದೆ.

ಕೃಷಿ ಪದವೀಧರರು ಸ್ವಯಂ ಉದ್ಯೋಗ ಅಳವಡಿಸಿಕೊಂಡು ಇತರರಿಗೆ ಉದ್ಯೋಗ ಹಾಗೂ ಮಾರ್ಗದರ್ಶನ ನೀಡಬೇಕು ಎಂದು ಕೃಷಿ ಸಚಿವ ಚಲುವನಾರಾಯಣಸ್ವಾಮಿ ಕರೆ ನೀಡಿದರು.

ಬೆಂಗಳೂರಿನ ಗಾಂಧಿ ಕೃಷಿ ವಿಶ್ವವಿದ್ಯಾಲಯ ಕೇಂದ್ರ (ಜಿಕೆವಿಕೆ) ಅವರಣದಲ್ಲಿ ಗುರುವಾರ ಆಯೋಜಿಸಿದ್ದ ಕೃಷಿಮೇಳ-2024 ಉದ್ಘಾಟಿಸಿ ಮಾತನಾಡಿದ ಅವರು, ದೇಶದಲ್ಲಿ ಶೇ.75ರಷ್ಟು ಜನರು ಕೃಷಿಯನ್ನು ಅವಲಂಭಿಸಿದ್ದಾರೆ.

60ರ ದಶಕದಲ್ಲಿ ದೇಶದಲ್ಲಿ ನಡೆದ ಹಸಿರು ಕ್ರಾಂತಿಯಿಂದ ಆಹಾರ ಧಾನ್ಯಗಳ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಲು ಸಾಧ್ಯವಾಯಿತು.

1964-64ರಲ್ಲಿ ಆಹಾರ ಉತ್ಪಾದನೆ ರಾಷ್ಟ್ರಮಟ್ಟದಲ್ಲಿ 45.4 ಮಿಲಿಯನ್ ಟನ್‌ಗಳಷ್ಟಿದ್ದು, 2023-24ರ ಸಾಲಿನಲ್ಲಿ 332.22 ಮಿಲಿಯನ್ ಟನ್‌ಗಳಿಗೆ ಏರಿಕೆಯಾಗಿದೆ. 2047ರ ವೇಳೆಗೆ 437 ಮಿಲಿಯನ್ ಟನ್‌ಗಳ ಆಹಾರ ಉತ್ಪಾದನೆ ಅವಶ್ಯವಿದೆ ಎಂದರು.

ಜಿಕೆವಿಕೆ ರಾಜ್ಯದಲ್ಲಿ ಸ್ಥಾಪನೆಯಾದ ಮೊಟ್ಟ ಮೊದಲ ಕೃಷಿ ವಿಶ್ವವಿದ್ಯಾಲಯವಾಗಿದ್ದು, 60 ದಶಕಗಳಿಂದ ರಾಜ್ಯದ ರೈತರಿಗೆ ಕೃಷಿಯಲ್ಲಿ ನೂತನ ತಂತ್ರಜ್ಞಾನಗಳನ್ನು ಆವಿಷ್ಕರಿಸಿ ರೈತರ ಮನೆ ಬಾಗಿಲಿಗೆ ತಲುಪಿಸುತ್ತಿದೆ.

ಈ ವಿಶ್ವವಿದ್ಯಾಲಯವು ವಿದ್ಯಾರ್ಥಿಗಳನ್ನು ಸಜ್ಜುಗೊಳಿಸುವುದರ ಜೊತೆಗೆ ಸಂಶೋಧನೆಗಳಿಗೆ ಹೆಚ್ಚು ಒತ್ತು ನೀಡುತ್ತಿದೆ.

ಕೃಷಿಯಿಂದ ವಿಮುಕ್ತರಾಗುತ್ತಿರುವ ಯುವಕರನ್ನು ಕೃಷಿಯತ್ತ ಆಕರ್ಷಿಸಲು ಕೃಷಿ ಲಾಭದಾಯಕ ಕ್ಷೇತ್ರವೆಂದು ತೋರಿಸಲು ಕೃಷಿ ವಿವಿಗಳು ಮುಂದಾಗಬೇಕು. ದೇಶದ ಬಹುತೇಕ ಜನರು ಕೃಷಿ ಮೇಲೆ ಅವಲಂಬಿತರಾಗಿದ್ದಾರೆ. ಈ ನಿಟ್ಟಿನಲ್ಲಿ ಆರ್ಥಿಕವಾಗಿ ಸಬಲರನ್ನಾಗಿ ಮಾಡಲು ಸದಾ ಹಸಿರು ಕ್ರಾಂತಿ ಅತ್ಯವಶ್ಯಕ.

ಈ ಮೇಳವನ್ನು ‘ಹವಾಮಾನ ಚತುರ ಡಿಜಿಟಲ್ ಕೃಷಿ’ ಎಂಬ ಘೋಷವಾಕ್ಯದೊಂದಿಗೆ ಆಯೋಜಿಸುತ್ತಿರುವುದು ಕೃಷಿ ಕ್ಷೇತ್ರದ ಸಕಾಲಿಕ ಚಿಂತನೆಯಾಗಿ ಎದ್ದು ಕಾಣುತ್ತಿದೆ ಎಂದು ತಿಳಿಸಿದರು.

ರಾಜ್ಯದಲ್ಲಿ ಸುಮಾರು 78 ಲಕ್ಷಕ್ಕೂ ಹೆಚ್ಚು ರೈತರು ಹಾಗೂ 125 ಲಕ್ಷಕ್ಕೂ ಹೆಚ್ಚು ಕೃಷಿ ಕಾರ್ಮಿಕರು ಕೃಷಿಯಲ್ಲಿ ತೊಡಗಿದ್ದಾರೆ.

ರಾಜ್ಯ ಸರ್ಕಾರ ಕೃಷಿಗೆ ಗರಿಷ್ಠ ಆದ್ಯತೆ ನೀಡಿದೆ. ಕಳೆದ ಸಾಲಿನಲ್ಲಿ ಸುಮಾರು ಒಂದು ಸಾವಿರ ಕೋಟಿ ರೂಪಾಯಿ ಸಬ್ಸಿಡಿಯೊಂದಿಗೆ ಯಂತ್ರೋಪಕರಣ, ನೀರಾವರಿ ಸಲಕರಣೆಗಳ ಖರೀದಿಗೆ ನೀಡಲಾಗಿತ್ತು.

2100 ಕೋಟಿ ರೂಪಾಯಿ ಬೆಳೆವಿಮೆ ಹಣವನ್ನು ನೇರ ನಗದು ವರ್ಗಾವಣೆ ಮೂಲಕ ರೈತರಿಗೆ ವಿತರಿಸಲಾಗಿದೆ. ಹೈಟೆಕ್ ಹಾರ್ವೆಸ್ಟರ್ ಹಬ್ ಯೋಜನೆ ರೂಪಿಸಿ ಅತ್ಯಧಿಕ ಆರ್ಥಿಕ ನೆರವಿನೊಂದಿಗೆ ಬೃಹತ್ ಬೆಳೆ ಕಟಾವು ಯಂತ್ರಗಳನ್ನು ವಿತರಿಸಲಾಗಿದೆ ಎಂದು ಸಚಿವರು ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ರಾಜ್ಯ ಮಟ್ಟದ ಅತ್ಯುತ್ತಮ ರೈತ ಪ್ರಶಸ್ತಿಯನ್ನು ಚಿಕ್ಕಬಳ್ಳಾಪುರ ಜಿಲ್ಲೆಯ ಕುರಟಹಳ್ಳಿಯ ಸಿ.ಆರ್.ರಾಧಾಕೃಷ್ಣ ಅವರಿಗೆ ಕ್ಯಾನ್ ಬ್ಯಾಂಕ್ ರಾಜ್ಯ ಮಟ್ಟದ ಅತ್ಯುತ್ತಮ ರೈತ ಪ್ರಶಸ್ತಿಯನ್ನು ಚನ್ನರಾಯಪಟ್ಟಣ ತಾಲೂಕಿನ ಹಿರಿಹಳ್ಳಿಯ ವಿ.ಎಸ್.ಪ್ರವೀಣ್, ಕ್ಯಾನ್ ಬ್ಯಾಂಕ್ ರಾಜ್ಯ ಮಟ್ಟದ ಅತ್ಯುತ್ತಮ ರೈತ ಮಹಿಳೆ ಪ್ರಶಸ್ತಿಯನ್ನು ರಾಮನಗರದ ಕಗ್ಗಲಹಳ್ಳಿಯ ವೈ.ಸಿ.ಶಾಂತಮ್ಮ ಅವರಿಗೆ ಪ್ರದಾನ ಮಾಡಿ ಸನ್ಮಾನಿಸಲಾಯಿತು.

ಶಾಸಕ ಎಸ್.ಆರ್.ವಿಶ್ವನಾಥ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಶಾಸಕರಾದ ಶರತ್ ಬಚ್ಚೇಗೌಡ, ಬೆಂಗಳೂರು ಕೃಷಿ ವಿವಿ ಕುಲಪತಿ ಡಾ.ಎಸ್.ವಿ.ಸುರೇಶ, ವಿಶೇಷ ಅತಿಥಿಯಾಗಿ ಬಾಗಲಕೋಟೆ ತೋಟಗಾರಿಕೆ ವಿವಿ ಕುಲಪತಿ ಡಾ.ವಿಷ್ಣುವರ್ಧನ ಸೇರಿದಂತೆ ಗಣ್ಯರು ಭಾಗವಹಿಸಿದ್ದರು.

 

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

KARAN NAIR : ದೇಶಿ ಕ್ರಿಕೆಟ್ನಲ್ಲಿ ಇತಿಹಾಸ ಸೃಷ್ಟಿಸಿದ ಕನ್ನಡಿಗ;

Karun Nair News: ದೇಶಿ ಕ್ರಿಕೆಟ್​ನಲ್ಲಿ ಬ್ಯಾಕ್​ ಟು ಬ್ಯಾಕ್ ಅಜೇಯ​ ಶತಕ ಸಿಡಿಸಿ ಕನ್ನಡಿಗ ನಾಯರ್ ದಾಖಲೆಯನ್ನು ಬರೆದಿದ್ದಾರೆ. ​ವೀರೇಂದ್ರ ಸೆಹ್ವಾಗ್​ ಬಳಿಕ ಟೆಸ್ಟ್​ನಲ್ಲಿ...

NUWA PEN CES 2025 : ಟೆಕ್ ಲೋಕದಲ್ಲಿ ಮತ್ತೊಂದು ಅದ್ಭುತ:

Nueva Pen Chess 2025 News: ಡಿಜಿಟಲ್​ ಫೀಚರ್​ನಿಂದ ತುಂಬಿರುವ NUWA PEN ​ ಈಗ ಎಲ್ಲರ ಗಮನ ಸೆಳೆಯುತ್ತಿದೆ. ಇದರಿಂದ ಬರೆದ ಒಂದೊಂದು ಅಕ್ಷರವೂ...

RAJATH KISHAN : ಉಸ್ತುವಾರಿಯಲ್ಲಿ ಎಡವಿದ ರಜತ್ ಬೆವರಿಳಿಸಿದ ಕಿಚ್ಚ ಸುದೀಪ್:

Bigg Boss News: ನನ್ನದು ನೇರನುಡಿ, ಮೋಸ ಮಾಡೋನಲ್ಲ, ಬಕೇಟ್​ ಹಿಡಿಯೋನಲ್ಲ ಅನ್ನೋ RAJATH KISHAN​​ ಅವರ ಉಸ್ತುವಾರಿ ಬಗ್ಗೆ ಹಲವು ಪ್ರಶ್ನೆಗಳೆದ್ದಿದ್ದವು. ಇದೀಗ ಕಿಚ್ಚನ...

EMERGENCY FILM SPECIAL SCREENING : ನಾಗ್ಪುರದಲ್ಲಿ ಕಂಗನಾ, ಅನುಪಮ್ ಖೇರ್ ಜೊತೆ ಕುಳಿತು

Nagpur News: ನಾಗ್ಪುರದಲ್ಲಿ ಸಚಿವ ನಿತಿನ್ ಗಡ್ಕರಿ 'ಎಮರ್ಜೆನ್ಸಿ' ಸಿನಿಮಾ ವೀಕ್ಷಿಸಿದರು.ಈ ಬಗ್ಗೆ ಇನ್​ಸ್ಟಾಗ್ರಾಮ್​ನಲ್ಲಿ ಪೋಸ್ಟ್ ಮಾಡಿರುವ ಕಂಗನಾ, FILMದ ವಿಶೇಷ ಸ್ಕ್ರೀನಿಂಗ್​ನ ಕೆಲ FILMಗಳನ್ನು...