spot_img
spot_img

ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿನ ಚಿಕಿತ್ಸಾ ದರ ಪರಿಷ್ಕರಣೆ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

spot_img
spot_img

Share post:

ದಾವಣಗೆರೆ: ರಾಜ್ಯ ಸರ್ಕಾರವು ಸರ್ಕಾರಿ ಆಸ್ಪತ್ರೆ ಚಿಕಿತ್ಸಾ ವೆಚ್ಚ ಹೆಚ್ಚಳ ಮಾಡುತ್ತಿದ್ದು, ಇದೂ ಕೂಡಾ ಗ್ಯಾರಂಟಿಗೆ ಹಣ ಕ್ರೋಢೀಕರಿಸುವ ನಿಟ್ಟಿನಲ್ಲಿ ನಡೆಯುತ್ತಿದೆಯೇ ಎಂಬ ಪ್ರಶ್ನೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟನೆ ನೀಡಿದ್ದಾರೆ.

ಸರ್ಕಾರವು ಪ್ರಾಥಮಿಕ ಆರೋಗ್ಯ ಕೇಂದ್ರಗಳ ಚಿಕಿತ್ಸಾ ವೆಚ್ಚವನ್ನು ಪರಿಷ್ಕರಿಸಲು ನಿರ್ಧರಿಸಿದ್ದು, ಈ ಬಗ್ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯಿಸಿದ್ದಾರೆ.

ನಗರದಲ್ಲಿ ಬುಧವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಪ್ರಾಥಮಿಕ ಕೇಂದ್ರಗಳಲ್ಲಿನ ಚಿಕಿತ್ಸಾ ವೆಚ್ಚದ ಹಣ ಸರ್ಕಾರಕ್ಕೆ ಬರುವುದಿಲ್ಲ.

ಅದು ಆರೋಗ್ಯ ರಕ್ಷಾ ಸಮಿತಿ(Arogya Raksha Simitis – ARS)ಗೆ ಹೋಗುತ್ತದೆ. ಬಹಳ ವರ್ಷಗಳ ಬಳಕ ಚಿಕಿತ್ಸಾ ವೆಚ್ಚ ಪರಿಷ್ಕರಿಸಲು ನಿರ್ಧರಿಸಲಾಗಿದೆ.

10ರೂ. ಇದ್ದದ್ದನ್ನು 20ರೂ.ಗೆ ಹಾಗೂ 20ರೂ. ಇದ್ದದ್ದನ್ನು 30ರೂ.ಗೆ ಪರಿಷ್ಕರಿಸಲು ನಿರ್ಧರಿಸಲಾಗಿದೆ. ಕೆಲವೆಡೆ 30ರೂ. ಇದ್ದದ್ದನ್ನು 40ರೂ.ಗೆ ಹೆಚ್ಚಳ ಮಾಡಲಾಗಿದೆ. ಜೊತೆಗೆ

ಈ ಚಿಕಿತ್ಸಾ ವೆಚ್ಚ ಹೆಚ್ಚಳದ ಹಣ ಆಸ್ಪತ್ರೆಗೆ ಹೋಗುತ್ತದೆ ವಿನಃ ಆ ಹಣ ಸರ್ಕಾರಕ್ಕೆ ಬರುವುದಿಲ್ಲ.

ಹೆಚ್ಚಳ ಏನು ದೊಡ್ಡ ವಿಚಾರ ಅಲ್ಲ. ಆದರೆ ಈ ಬಿಜೆಪಿಯವರು ಅದನ್ನೇ ದೊಡ್ಡದಾಗಿ ಮಾಡುತ್ತಿದ್ದಾರೆ. ಇದು ARS ಕಮೀಟಿಯ ತೀರ್ಮಾನ.

ಆಸ್ಪತ್ರೆ ಆದಾಯ ಹೆಚ್ಚು ಮಾಡಿಕೊಳ್ಳಲು ಈ ನಿರ್ಧಾರ ಮಾಡಿದ್ದಾರೆ. ಆದರೆ, ಈ ವಿಚಾರ ಮುಂದಿಟ್ಟುಕೊಂಡು ಬಿಜೆಪಿಯವರು ಗ್ಯಾರಂಟಿಗೆ ಹಣ ಕ್ರೋಢೀಕರಿಸುತ್ತಿದ್ದಾರೆ ಎಂದು ಹೇಳುತ್ತಿದ್ದಾರೆ.

ಗ್ಯಾರಂಟಿಗಳಿಗೂ ಇದಕ್ಕೂ ಯಾವುದೇ ಸಂಬಂಧ ಇಲ್ಲ. ಬಿಜೆಪಿಯವರು ಮೊದಲು ರೈತರಿಗೆ ಬರಬೇಕಾದ ನಬಾರ್ಡ್ ದುಡ್ಡು ಕೊಡಿಸಲಿ’ ಎಂದು ಸವಾಲು ಹಾಕಿದರು.

‘ಎಲ್ಲಾ ವಿಚಾರಗಳಿಗೂ ಗ್ಯಾರಂಟಿ ಯೋಜನೆಗಳನ್ನು ತಳುಕು ಹಾಕುವುದು ಹೆಚ್ಚಾಗುತ್ತಿದೆ. ದರ ಪರಿಷ್ಕರಣೆ ಎಲ್ಲ ಸರ್ಕಾರಗಳ ಅವಧಿಯಲ್ಲಿಯು ನಡೆಯುತ್ತಲೇ ಇರುತ್ತದೆ.

ವರ್ಷಗಳ ಬಳಿಕ ಆಸ್ಪತ್ರೆ ಸೇವೆಗಳ ದರದಲ್ಲಿ ಅಲ್ಪ ಪರಿಷ್ಕರಣೆಯಾಗಿದೆ. ಇದನ್ನು ಗ್ಯಾರಂಟಿ ಯೋಜನೆಗಳೊಂದಿಗೆ ಹೋಲಿಕೆ ಮಾಡುವುದು ಸರಿಯಲ್ಲ’ ಎಂದು ಸಚಿವ ದಿನೇಶ್ ಗುಂಡೂರಾವ್ ಅವರು ತಮ್ಮ ಎಕ್ಸ್​ ಖಾತೆಯಲ್ಲಿ ಪೋಸ್ಟ್​ ಮಾಡುವ ಮೂಲಕ ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದ್ದಾರೆ.

Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

MOTOROLA EDGE 60 FUSION – ಅದ್ಭುತವಾದ ಕ್ಯಾಮೆರಾ ಸೆಟಪ್, ವಾಟರ್ ಪ್ರೊಟೆಕ್ಷನ್ – ಮೊಟೊರೊಲಾದ ಹೊಸ ಫೋನ್ನ ಬೆಲೆ ಕೇವಲ ಇಷ್ಟೇ!

Motorola Edge 60 Fusion: ಬಹುನಿರೀಕ್ಷಿತ ' MOTOROLA EDGE 60 FUSION' ಕೊನೆಗೂ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಕಂಪನಿಯು ಇದನ್ನು ' MOTOROLA EDGE...

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...