spot_img
spot_img

ನ.25 ರಿಂದ ಚಳಿಗಾಲ ಸಂಸತ್​ ಅಧಿವೇಶನ : ವಕ್ಫ್​ ತಿದ್ದುಪಡಿ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ನವದೆಹಲಿ: ದೇಶದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿರುವ ಮುಸಲ್ಮಾನ್​ ವಕ್ಫ್(ತಿದ್ದುಪಡಿ) ವಿಧೇಯಕ-2024 ಇದೇ ತಿಂಗಳ 25ರಿಂದ ಆರಂಭವಾಗಲಿರುವ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಮಂಡನೆಗೆ ಬರಲಿದೆ ಎಂದು ಲೋಕಸಭೆ ಸೆಕ್ರೆಟರಿಯೇಟ್ ತಿಳಿಸಿದ್ದಾರೆ.

ಈ ಹಿಂದಿನ ಅಧಿವೇಶನದಲ್ಲಿ ಆಗಸ್ಟ್ 8 ರಂದು ಸದನದ ಮುಂದೆ ಮಂಡಿಸಲಾದ ವಿಧೇಯಕವನ್ನು ಮರುದಿನ ಹೆಚ್ಚಿನ ಅಧ್ಯಯನಕ್ಕಾಗಿ ಜಂಟಿ ಸಂಸದೀಯ ಸಮಿತಿಗೆ (ಜೆಪಿಸಿ) ಕಳುಹಿಸಲಾಗಿತ್ತು. ಜೆಪಿಸಿಯು ಸುದೀರ್ಘ ಚರ್ಚೆ, ಸಭೆ, ಜನರ ಅಭಿಪ್ರಾಯ ಸಂಗ್ರಹಿಸಿದೆ.

ಸಮಿತಿಯು ವರದಿಯನ್ನು ಚಳಿಗಾಲದ ಅಧಿವೇಶನದ ಮೊದಲ ವಾರದ ಕೊನೆಯ ದಿನದಂದು ಸಂಸತ್ತಿಗೆ ಸಲ್ಲಿಸುವಂತೆ ಈಗಾಗಲೇ ಸೂಚಿಸಲಾಗಿದೆ. ಹೀಗಾಗಿ ಜಂಟಿ ಸಂಸದೀಯ ಸಮಿತಿಯು ತನ್ನ ವರದಿಯನ್ನು ನವೆಂಬರ್​ 29ರೊಳಗೆ ಸದನದ ಮುಂದೆ ಮಂಡಿಸುವ ಸಾಧ್ಯತೆ ಇದೆ.

ಬಳಿಕ ಉಭಯ ಸದನದಲ್ಲಿ ಇದಕ್ಕೆ ಸಂಬಂಧಿಸಿದ ವಿಧೇಯಕವು ಚರ್ಚೆಗೆ ಬಂದು ಮಂಡನೆಯಾಗಲಿದೆ. ಇದಲ್ಲದೇ, ಕಳೆದ ಆಗಸ್ಟ್​ನಲ್ಲಿ ಮಂಡಿಸಲಾಗಿದ್ದ ವಿಪತ್ತು ನಿರ್ವಹಣೆ-ತಿದ್ದುಪಡಿ ವಿಧೇಯಕ, ರೈಲ್ವೇ ಮಸೂದೆ ಮತ್ತು ಬ್ಯಾಂಕಿಂಗ್ ಕಾನೂನಿನಂತಹ ವಿಧೇಯಕಗಳು ಮತ್ತೆ ಸದನದಲ್ಲಿ ಮಂಡನೆಗೆ ಬರಲಿವೆ ಎಂದು ಸಚಿವಾಲಯ ತಿಳಿಸಿದೆ.

ಮತ್ತೊಂದೆಡೆ, ಜಂಟಿ ಸಂಸದೀಯ ಸಮಿತಿ (ಜೆಪಿಸಿ) ವರದಿಯನ್ನು ಅಂತಿಮಗೊಳಿಸಲಿದೆ. ಅದರ ಭಾಗವಾಗಿ ಬಿಜೆಪಿ ಸಂಸದ ಜಗದಾಂಬಿಕಾ ಪಾಲ್ ನೇತೃತ್ವದ ಸಮಿತಿ ಗುರುವಾರ ಸಭೆ ನಡೆಸಲಿದೆ. ವಕ್ಫ್ ವಿಧೇಯಕದ ವರದಿಯು ಅಂತಿಮವಾಗುವ ಸಾಧ್ಯತೆ ಇದೆ.

ಬಾಕಿ ಇರುವ 13 ಸೇರಿ ಒಟ್ಟು 18 ವಿಧೇಯಕ ಪಟ್ಟಿಯನ್ನು ಲೋಕಸಭೆ ಹಾಗೂ ರಾಜ್ಯಸಭೆ ಸಚಿವಾಲಯಕ್ಕೆ ಕೇಂದ್ರ ಸರ್ಕಾರ ಸಲ್ಲಿಸಿದೆ. ಲೋಕಸಭೆಯಲ್ಲಿ 15 ಹಾಗೂ ರಾಜ್ಯಸಭೆಯಲ್ಲಿ 18 ವಿಧೇಯಕಗಳನ್ನು ಮಂಡಿಸುವ ಪ್ರಸ್ತಾವ ಇದೆ.

ಇದರ ಜೊತೆಗೆ, ರಾಷ್ಟ್ರೀಯ ಭದ್ರತೆ ಹಾಗೂ ವಾಣಿಜ್ಯ ಉದ್ದೇಶಕ್ಕಾಗಿ ಭಾರತದ ಹಡಗು ಹಾಗೂ ಭಾರತದ ಬಂದರುಗಳ ರಕ್ಷಣೆ ಮಸೂದೆ ಸೇರಿ ಸದನದಲ್ಲಿ 5 ಹೊಸ ಮಸೂದೆಗಳನ್ನೂ ಮಂಡಿಸಲು ಕೇಂದ್ರ ಸರ್ಕಾರ ಪಟ್ಟಿ ಮಾಡಿದೆ.

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

ಪೂರಕ ಪೌಷ್ಟಿಕ ಆಹಾರ ವಿತರಣೆ ಎನ್‌ಜಿಒಗಳಿಗೆ ವಹಿಸಿ : ಶಶೀಲ್ ನಮೋಶಿ

ಕಲಬುರಗಿ : ರಾಜ್ಯದ ಎಲ್ಲಾ ಮಕ್ಕಳಿಗೆ ವಾರದಲ್ಲಿ ಆರು ದಿನ ಪೌಷ್ಟಿಕ ಆಹಾರ ನೀಡುತ್ತಿರುವ 'ಪೂರಕ ಪೌಷ್ಟಿಕ ಆಹಾರ ವಿತರಣೆ' ಯೋಜನೆಯನ್ನು ಎನ್‌ಜಿಒಗಳಿಗೆ ವಹಿಸಬೇಕೆಂದು...

ಗಯಾನಾದಲ್ಲಿ ಜನೌಷಧಿ ಕೇಂದ್ರಗಳ ಸ್ಥಾಪನೆ: ಪ್ರಧಾನಿ ಮೋದಿ ಸಹಿ

ಜಾರ್ಜ್‍ಟೌನ್ : ಕೆರಿಬಿಯನ್ ರಾಷ್ಟ್ರ ಗಯಾನಾಕ್ಕೆ ಭಾರತವು ತನ್ನ ಔಷಧೀಯ ಉತ್ಪನ್ನಗಳ ರಫ್ತನ್ನು ಹೆಚ್ಚಿಸಲಿದೆ ಮತ್ತುಜನೌಷಧಿ ಕೇಂದ್ರಗಳನ್ನು ಸ್ಥಾಪಿಸಲು ಯೋಜಿಸುತ್ತಿದೆ ಎಂದು ಪ್ರಧಾನಿ ನರೇಂದ್ರ...

ರೈತರ ಜಮೀನಿನ ಪಹಣಿ :ವಕ್ಫ್‌ ಹೆಸರು ಬೇಡ

ಬೆಂಗಳೂರು : ವಕ್ಫ್‌ ಮಂಡಳಿ ರದ್ದಾಗಬೇಕು, ರೈತರ ಜಮೀನಿನ ಪಹಣಿಯಲ್ಲಿ ಬರೆದ ವಕ್ಫ್‌ ಹೆಸರು ತೆಗೆದುಹಾಕಬೇಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್‌ ಆಗ್ರಹಿಸಿದರು. ಸ್ವಾತಂತ್ರ್ಯ ಉದ್ಯಾನದಲ್ಲಿ...

ರೈತರ ಕಂಗೆಡಿಸಿದ ಡೀಮ್ಡ್ ಫಾರೆಸ್ಟ್

ಚಿಕ್ಕಬಳ್ಳಾಪುರ : ಜಿಲ್ಲೆಯಲ್ಲಿ ರೈತರು ಸಾಗುವಳಿ ಮಾಡುತ್ತಿರುವ ಜಮೀನಿಗೂ ಅರಣ್ಯ ಇಲಾಖೆಯಿಂದ ಬೇಲಿ ಹಾಕುತ್ತಿದ್ದರು. ಕೃಷಿ ಮಾಡುತ್ತಿದ್ದ ರೈತರೆಲ್ಲ ದಿಕ್ಕೆಟ್ಟು ಕೂತಿದ್ದರು. ಕೆಲವೆಡೆ ಸರಕಾರವೇ...