spot_img
spot_img

ಅಂಚೆ ಮೂಲಕ ಕನ್ನಡ ಶಿಕ್ಷಣ ಯೋಜನೆ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ಉಡುಪಿ : ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯ ಹಾಗೂ ಮೈಸೂರಿನ ಭಾರತೀಯ ಭಾಷೆಗಳ ಕೇಂದ್ರಗಳು ಒಂದಾಗಿ 1985ರ ನವೆಂಬರ್ 1ರಿಂದ ರಾಜ್ಯದಲ್ಲಿರುವ ಕನ್ನಡ ಬಾರದ ಎಲ್ಲ ಸರಕಾರಿ ನೌಕರರಿಗಾಗಿ ಹನ್ನೆರಡು ತಿಂಗಳುಗಳ ಅಂಚೆ ಮೂಲಕ ಕನ್ನಡ ಶಿಕ್ಷಣ ಯೋಜನೆಯನ್ನು ನಡೆಸಲಾಗಿದೆ.
ಇದಕ್ಕೆ ರಾಜ್ಯದಲ್ಲಿರುವ ಎಲ್ಲಾ ನಗರಸಭೆ, ಕ.ವಿ.ಪ್ರ.ನಿ.ನಿ., ಕೆ.ಎಸ್.ಆರ್.ಟಿ.ಸಿ., ವಿಶ್ವವಿದ್ಯಾಲಯಗಳು, ಶಾಲಾ- ಕಾಲೇಜುಗಳು, ಸರಕಾರಿ ಅನುದಾನ ಪಡೆಯುವ ಸಂಸ್ಥೆಗಳ ನೌಕರರು ಮತ್ತು ಎಲ್ಲಾ ರಾಷ್ಟ್ರೀಕೃತ ಬ್ಯಾಂಕುಗಳ ನೌಕರರು ಉಚಿತವಾಗಿ ಹೆಸರುಗಳನ್ನು ನೋಂದಾಯಿಸಿ ಕೊಳ್ಳಬಹುದಾಗಿದೆ.
ಸರಕಾರಿ ನೌಕರರು ಸಂಪರ್ಕ ಶಿಬಿರ ಹಾಗೂ ಪರೀಕ್ಷೆಗಳಿಗೆ ಹಾಜರಾದ ದಿನದಂದು ಅವರ ಕಚೇರಿ ಗೈರುಹಾಜರಿಯನ್ನು ಅನ್ಯಕಾರ್ಯ ನಿಮಿತ್ತ ಎಂದು ಪರಿಗಣಿಸಲಾಗುತ್ತದೆ.
ಅಂಚೆ ಮೂಲಕ ಕನ್ನಡ ಶಿಕ್ಷಣ ಯೋಜನೆಗೆ ನೋಂದಾಯಿಸಿಕೊಂಡು ಉತ್ತೀರ್ಣರಾದವರಿಗೆ ಕರ್ನಾಟಕ ಲೋಕಸೇವಾ ಆಯೋಗದ ಕನ್ನಡ ಪರೀಕ್ಷೆಯಿಂದ ಕರ್ನಾಟಕ ಸರ್ಕಾರದ ಅಧಿಸೂಚನೆಯಲ್ಲಿ ತಿಳಿಸಿರುವಂತೆ ವಿನಾಯಿತಿ ಲಭ್ಯವಿದೆ.
ಈ ಯೋಜನೆಯನ್ನು ಈಗ ಸಾರ್ವಜನಿಕರಿಗೂ ವಿಸ್ತರಿಸಲಾಗಿದ್ದು, ಎಸೆಸೆಲ್ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಹಾಗೂ 18ರಿಂದ 50 ವಯಸ್ಸಿನ ಒಳಗಿನ ಆಸಕ್ತರು ಭರ್ತಿ ಮಾಡಿದ ಅರ್ಜಿಯ ಜೊತೆಯಲ್ಲಿ 250 ರೂ. ಡಿಮ್ಯಾಂಡ್ ಡ್ರಾಫ್ಟ್‌ನ್ನು ಕಳುಹಿಸಿ ಕೊಡಬೇಕು. ನೋಂದಾಯಿತರಿಗೆ ಇಪ್ಪತ್ತು ಪಾಠಾವಳಿ ಗಳನ್ನು ಕಳುಸಿಕೊಡಲಾಗುತ್ತದೆ. ತರಬೇತಿ ಮತ್ತು ಸಂಪರ್ಕ ಶಿಬಿರದ ಅಂತ್ಯದಲ್ಲಿ ಪರೀಕ್ಷೆಗಳನ್ನು ನಡೆಸಲಾಗುವುದು.
ತಂಡದ ತರಬೇತಿ ನವೆಂಬರ್ ತಿಂಗಳಿನಿಂದ ಪ್ರಾರಂಭಗೊಂಡಿದ್ದು, ಅರ್ಜಿ ಸಲ್ಲಿಸಲು ನವೆಂಬರ್ 30 ಕೊನೆಯ ದಿನ.
ಅರ್ಜಿ ನಮೂನೆ ಮತ್ತು ತರಬೇತಿ ವಿವರಗಳನ್ನು ಪ್ರಭಾರಿ ಅಧಿಕಾರಿ, ಅಂಚೆ ಮೂಲಕ ಕನ್ನಡ ಶಿಕ್ಷಣ ಯೋಜನೆ, ಭಾರತೀಯ ಭಾಷೆಗಳ ಕೇಂದ್ರ ಸಂಸ್ಥೆ, ಮಾನಸಗಂಗೊತ್ರಿ, ಮೈಸೂರು- 570006. ದೂ.ಸಂ.-0821-2345128 ಇವರಿಗೆ ಐದು ರೂ. ಅಂಚೆ ಚೀಟಿ ಹಚ್ಚಿದ ಸ್ವವಿಳಾಸ ಇರುವ ಲಕೋಟಿಯನ್ನು ಕಳುಹಿಸಿ ಪಡೆದುಕೊಳ್ಳಬಹುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಲಾಗಿದೆ.

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

ಪೂರಕ ಪೌಷ್ಟಿಕ ಆಹಾರ ವಿತರಣೆ ಎನ್‌ಜಿಒಗಳಿಗೆ ವಹಿಸಿ : ಶಶೀಲ್ ನಮೋಶಿ

ಕಲಬುರಗಿ : ರಾಜ್ಯದ ಎಲ್ಲಾ ಮಕ್ಕಳಿಗೆ ವಾರದಲ್ಲಿ ಆರು ದಿನ ಪೌಷ್ಟಿಕ ಆಹಾರ ನೀಡುತ್ತಿರುವ 'ಪೂರಕ ಪೌಷ್ಟಿಕ ಆಹಾರ ವಿತರಣೆ' ಯೋಜನೆಯನ್ನು ಎನ್‌ಜಿಒಗಳಿಗೆ ವಹಿಸಬೇಕೆಂದು...

ಗಯಾನಾದಲ್ಲಿ ಜನೌಷಧಿ ಕೇಂದ್ರಗಳ ಸ್ಥಾಪನೆ: ಪ್ರಧಾನಿ ಮೋದಿ ಸಹಿ

ಜಾರ್ಜ್‍ಟೌನ್ : ಕೆರಿಬಿಯನ್ ರಾಷ್ಟ್ರ ಗಯಾನಾಕ್ಕೆ ಭಾರತವು ತನ್ನ ಔಷಧೀಯ ಉತ್ಪನ್ನಗಳ ರಫ್ತನ್ನು ಹೆಚ್ಚಿಸಲಿದೆ ಮತ್ತುಜನೌಷಧಿ ಕೇಂದ್ರಗಳನ್ನು ಸ್ಥಾಪಿಸಲು ಯೋಜಿಸುತ್ತಿದೆ ಎಂದು ಪ್ರಧಾನಿ ನರೇಂದ್ರ...

ರೈತರ ಜಮೀನಿನ ಪಹಣಿ :ವಕ್ಫ್‌ ಹೆಸರು ಬೇಡ

ಬೆಂಗಳೂರು : ವಕ್ಫ್‌ ಮಂಡಳಿ ರದ್ದಾಗಬೇಕು, ರೈತರ ಜಮೀನಿನ ಪಹಣಿಯಲ್ಲಿ ಬರೆದ ವಕ್ಫ್‌ ಹೆಸರು ತೆಗೆದುಹಾಕಬೇಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್‌ ಆಗ್ರಹಿಸಿದರು. ಸ್ವಾತಂತ್ರ್ಯ ಉದ್ಯಾನದಲ್ಲಿ...

ರೈತರ ಕಂಗೆಡಿಸಿದ ಡೀಮ್ಡ್ ಫಾರೆಸ್ಟ್

ಚಿಕ್ಕಬಳ್ಳಾಪುರ : ಜಿಲ್ಲೆಯಲ್ಲಿ ರೈತರು ಸಾಗುವಳಿ ಮಾಡುತ್ತಿರುವ ಜಮೀನಿಗೂ ಅರಣ್ಯ ಇಲಾಖೆಯಿಂದ ಬೇಲಿ ಹಾಕುತ್ತಿದ್ದರು. ಕೃಷಿ ಮಾಡುತ್ತಿದ್ದ ರೈತರೆಲ್ಲ ದಿಕ್ಕೆಟ್ಟು ಕೂತಿದ್ದರು. ಕೆಲವೆಡೆ ಸರಕಾರವೇ...