spot_img
spot_img

ಕಾರ್ಮಿಕ ಕಲ್ಯಾಣ ಮಂಡಳಿ ನಕಲಿ ಸದಸ್ಯರ ಪತ್ತೆಗೆ ಅರ್ಜಿ : ಸರ್ಕಾರ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ಬೆಂಗಳೂರು: ಕಾರ್ಮಿಕ ಕಲ್ಯಾಣ ಮಂಡಳಿಯಲ್ಲಿ ನಕಲಿ ಸದಸ್ಯರ ಪತ್ತೆಗೆ ಕೋರಿ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಆಕ್ಷೇಪಣೆ ಸಲ್ಲಿಸಲು ಸರ್ಕಾರಕ್ಕೆ ಸೂಚಿಸಿ ವಿಚಾರಣೆ ಮುಂದೂಡಿತು.

ಕಟ್ಟಡ ಹಾಗೂ ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನೋಂದಾಯಿಸಿಕೊಂಡಿರುವ ಬೋಗಸ್(ನಕಲಿ) ಸದಸ್ಯರನ್ನು ಪತ್ತೆ ಹಚ್ಚಲು ತನಿಖೆ ನಡೆಸುವಂತೆ ನಿರ್ದೇಶನ ನೀಡಲು ಕೋರಿ ಸಲ್ಲಿಸಲಾದ ಅರ್ಜಿಗೆ ಸಂಬಂಧಿಸಿದಂತೆ ಎರಡು ವಾರಗಳಲ್ಲಿ ಆಕ್ಷೇಪಣೆ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಮಂಗಳವಾರ ನಿರ್ದೇಶಿಸಿದೆ.

ಕರ್ನಾಟಕ ರಾಜ್ಯ ನಿರ್ಮಾಣ ಕಾರ್ಮಿಕರ ಕೇಂದ್ರ ಸಂಘ ಹಾಗೂ ಕರ್ನಾಟಕ ರಾಜ್ಯ ಕಟ್ಟಡ ಕಟ್ಟುವ ಮತ್ತು ಕಲ್ಲು ಒಡೆಯುವ ಕ್ವಾರಿ ಕಾರ್ಮಿಕರ ಸಂಘ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ನ್ಯಾಯಮೂರ್ತಿ ಜ್ಯೋತಿ ಮೂಲಿಮನಿ ಅವರಿದ್ದ ಏಕಸದಸ್ಯ ಪೀಠ ನಡೆಸಿತು.

ಮಂಡಳಿಯಲ್ಲಿ ನಿಧಿ ಹೇಗೆ ಸಂಗ್ರಹವಾಗುತ್ತದೆ, ಕಾರ್ಡ್ ಯಾರಿಗೆ ಕೊಡುತ್ತಾರೆ, ನಿಧಿಯ ಹಣವನ್ನು ಕಾರ್ಡು ಹೊಂದಿರುವ ಸದಸ್ಯರಿಗೆ ಯಾವ ವಿಧದಲ್ಲಿ ಖರ್ಚು ಮಾಡಲಾಗುತ್ತದೆ ಎಂಬ ವಿವರಣೆಯ ಅವಶ್ಯಕತೆ ಕಂಡುಬರುತ್ತಿದೆ.

ಆದ್ದರಿಂದ ರಾಜ್ಯ ಸರ್ಕಾರ ಹಾಗೂ ಸಂಬಂಧಪಟ್ಟ ಇಲಾಖೆ ಆ ವಿವರಣೆ ಒದಗಿಸಬೇಕು. ಅದೇ ರೀತಿ ಅರ್ಜಿಗೆ ಸಂಬಂಧಿಸಿದಂತೆ ಆಕ್ಷೇಪಣೆಗಳಿದ್ದರೆ ಎರಡು ವಾರಗಳಲ್ಲಿ ಸಲ್ಲಿಸಬೇಕೆಂದು ಕಾರ್ಮಿಕ ಇಲಾಖೆ ಹಾಗೂ ಕಟ್ಟಡ ಹಾಗೂ ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಗೆ ನಿರ್ದೇಶನ ನೀಡಿ ವಿಚಾರಣೆ ಮುಂದೂಡಿತು.

ಕಟ್ಟಡ ಹಾಗೂ ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ 2019-20ರಲ್ಲಿ 17.57 ಲಕ್ಷ ಸದಸ್ಯರು ನೋಂದಾಯಿಸಿಕೊಂಡಿದ್ದರು. ಕೊರೊನಾ ಅವಧಿಯಲ್ಲಿ ಸದಸ್ಯರ ಸಂಖ್ಯೆ ಗಣನೀಯವಾಗಿ ಹೆಚ್ಚಳವಾಯಿತು. 2020ರಿಂದ 2023ರವರೆಗೆ ಸದಸ್ಯರ ಸಂಖ್ಯೆ 47 ಲಕ್ಷಕ್ಕೆ ಏರಿಕೆಯಾಯಿತು.

ಅನುಮಾನ ಮೂಡಿದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಯಿತು. ಹಾವೇರಿ ಜಿಲ್ಲೆಯೊಂದರಲ್ಲೇ 2.94 ಲಕ್ಷ ಸದಸ್ಯರಲ್ಲಿ 2.23 ಲಕ್ಷ ಬೋಗಸ್ ಸದಸ್ಯರಿದ್ದರು.

ಜಿಲ್ಲೆಯಲ್ಲಿ ಅರ್ಹ ಸದಸ್ಯರಿದ್ದರೆ 50 ಸಾವಿರ ರೂ. ಸೌಲಭ್ಯಗಳು ಸಿಗುತ್ತವೆ ಎಂಬ ಕಾರಣಕ್ಕೆ ನಕಲಿ ದಾಖಲೆಗಳನ್ನು ಕೊಟ್ಟು ಲಕ್ಷಾಂತರ ಜನ ನೋಂದಾಯಿಸಿಕೊಂಡಿದ್ದಾರೆ. ಆದ್ದರಿಂದ ಕಾರ್ಮಿಕರ ಆಯುಕ್ತರ ನೆರವು ಪಡೆದುಕೊಂಡು ಈ ಬೋಗಸ್ ಸದಸ್ಯರನ್ನು ಪತ್ತೆ ಹಚ್ಚಲು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನಿಖೆ ನಡೆಸಬೇಕು ಹಾಗೂ ಅಂತಹ ಬೋಗಸ್ ಸದಸ್ಯರನ್ನು ತೆಗೆದು ಹಾಕುವಂತೆ ಕಾರ್ಮಿಕ ಇಲಾಖೆ ಹಾಗೂ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಗೆ ನಿರ್ದೇಶನ ನೀಡಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

KEN BETWA RIVER LINKING PROJECT – ಕೆನ್-ಬೆಟ್ವಾ ನದಿ ಜೋಡಣೆಗೆ ಪ್ರಧಾನಿ ಮೋದಿ ಶಂಕುಸ್ಥಾಪನೆ

Khajuraho (Central Region): ಮಧ್ಯ ಪ್ರದೇಶದಲ್ಲಿ ಹುಟ್ಟುವ ಎರಡು ನದಿಗಳಾದ ಕೆನ್​ ಮತ್ತು ಬೆಟ್ವಾ ನದಿಗಳನ್ನು ಜೋಡಿಸಿ, ಅದರ ನೀರನ್ನು ಮಧ್ಯ ಪ್ರದೇಶ ಮತ್ತು ಉತ್ತರ...

KERALA NEWS – ಬುಧವಾರ ಸಂಜೆ ಶಬರಿಮಲೆ ಅಯ್ಯಪ್ಪನಿಗೆ ‘ತಂಗ ಅಂಗಿ’ ಆಭರಣ ತೊಡಿಸಿ ದೀಪಾರಾಧನೆ, ಡಿ.26 ರಂದು ಮಂಡಲಪೂಜೆ

 kerala (shabarimale) : ಶಬರಿಮಲೆ ಸನ್ನಿಧಾನದಲ್ಲಿ ಡಿ.25ರಂದು ವಿಶೇಷ ದೀಪಾರಾಧನೆ, ಡಿ.26 ಸಂಜೆ ಮಂಡಲಪೂಜೆ ನಡೆಯಲಿದೆ.ಅಯ್ಯಪ್ಪನಿಗೆ 'ತಂಗ ಅಂಗಿ' ಆಭರಣ ತೊಡಿಸಲಾಗುತ್ತದೆ. ರಾತ್ರಿ 11ಕ್ಕೆ ಹರಿವರಾಸನಂ...

BELAGAVI NEWS – ಬೆಳಗಾವಿ ತಾಲೂಕು ಶಾಲೆಗಳಿಗೆ ಡಿ.26, 27 ರಂದು ರಜೆ

Belagavi News : ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ಆಚರಣೆ- ಗಾಂಧಿ‌ ಭಾರತ ಕಾರ್ಯಕ್ರಮ ನಿಮಿತ್ತ ಬೆಳಗಾವಿ ತಾಲೂಕಿನ ಶೈಕ್ಷಣಿಕ ವಲಯದ (ನಗರ ಮತ್ತು ಗ್ರಾಮೀಣ) ಸರಕಾರಿ,...

BJP MLA MUNIRATHNA – BJP ಶಾಸಕ ಮುನಿರತ್ನ ಮೇಲೆ ಮೊಟ್ಟೆ ದಾಳಿ

Bangalore News: ಅಟಲ್ ಬಿಹಾರಿ ವಾಜಪೇಯಿ ಜನ್ಮದಿನಾಚರಣೆ ಕಾರ್ಯಕ್ರಮ ಮುಗಿಸಿ ಹೋಗುವಾಗ ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ದಾಳಿ ನಡೆದಿದೆ. ಘಟನೆ ನಡೆಯುತ್ತಿದ್ದಂತೆ ಸ್ಥಳದಲ್ಲಿದ್ದ...