spot_img
spot_img

ಗಲಭೆ ಕೋರರಿಂದಲೇ ನಷ್ಟ ವಸೂಲಿಗೆ ಮುಂದಾದ ಯೋಗಿ ಸರ್ಕಾರ

spot_img
spot_img

Share post:

ಲಕ್ನೋ(ಉತ್ತರ ಪ್ರದೇಶ): ಸಂಭಾಲ್​ನಲ್ಲಿ ನಡೆದ ಹಿಂಸಾಚಾರದಲ್ಲಿ ಸಾರ್ವಜನಿಕ ಆಸ್ತಿಪಾಸ್ತಿಗೆ ಉಂಟಾದ ನಷ್ಟದ ಪರಿಹಾರವನ್ನು ಗಲಭೆಕೋರರಿಂದಲೇ ವಸೂಲಿ ಮಾಡಲು ಯುಪಿ ಸರ್ಕಾರ ನಿರ್ಧರಿಸಿದೆ.
ಸಂಭಾಲ್ ಹಿಂಸಾಚಾರದಲ್ಲಿ ಸಾರ್ವಜನಿಕ ಆಸ್ತಿಪಾಸ್ತಿಗಳಿಗೆ ಉಂಟಾದ ನಷ್ಟದ ಪರಿಹಾರವನ್ನು ಗಲಭೆಕೋರರಿಂದಲೇ ವಸೂಲು ಮಾಡಲು ಉತ್ತರ ಪ್ರದೇಶ ಸರ್ಕಾರ ಮುಂದಾಗಿದೆ. ಈ ನಿಟ್ಟಿನಲ್ಲಿ ಹಿಂಸಾಚಾರದಲ್ಲಿ ಕಲ್ಲು ತೂರಾಟ ನಡೆಸಿ ಆಸ್ತಿಪಾಸ್ತಿಗಳಿಗೆ ಹಾನಿ ಮಾಡಿದ ಗಲಭೆಕೋರರ ಫೋಟೊಗಳನ್ನು ಸಾರ್ವಜನಿಕ ಸ್ಥಳಗಳಲ್ಲಿ ಪ್ರದರ್ಶಿಸಲಾಗುವುದು ಎಂದು ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ.
ನ್ಯಾಯಾಲಯದ ಆದೇಶದ ಮೇರೆಗೆ ನಗರದ ಕೋಟ್ ಗರ್ವಿ ಪ್ರದೇಶದ ಶಾಹಿ ಜಾಮಾ ಮಸೀದಿಯ ಸರ್ವೇ ಕಾರ್ಯ ನಡೆಸುತ್ತಿರುವ ಸಂದರ್ಭದಲ್ಲಿ ಭಾನುವಾರ ಭುಗಿಲೆದ್ದ ಘರ್ಷಣೆಯಲ್ಲಿ ನಾಲ್ವರು ಸಾವನ್ನಪ್ಪಿದ್ದು, ಪೊಲೀಸರು ಸೇರಿದಂತೆ ಹಲವಾರು ಜನ ಗಾಯಗೊಂಡಿದ್ದಾರೆ.
“ಸಂಭಾಲ್ ಹಿಂಸಾಚಾರದಲ್ಲಿ ಭಾಗಿಯಾಗಿರುವ ವ್ಯಕ್ತಿಗಳ ವಿರುದ್ಧ ಯುಪಿ ಸರ್ಕಾರ ಕಠಿಣ ನಿಲುವು ತಳೆದಿದೆ. ಕಲ್ಲು ತೂರಾಟಗಾರರು ಮತ್ತು ದುಷ್ಕರ್ಮಿಗಳ ಪೋಸ್ಟರ್‌ಗಳನ್ನು ಸಾರ್ವಜನಿಕವಾಗಿ ಪ್ರದರ್ಶಿಸಲಾಗುವುದು ಮತ್ತು ನಷ್ಟದ ಪರಿಹಾರವನ್ನು ಅವರಿಂದಲೇ ವಸೂಲಿ ಮಾಡಲಾಗುವುದು. ಗಲಭೆಕೋರರನ್ನು ಬಂಧಿಸಲು ಸಹಾಯಕವಾಗುವಂಥ ಮಾಹಿತಿ ನೀಡಿದವರಿಗೆ ಬಹುಮಾನವನ್ನು ಸಹ ಘೋಷಿಸಬಹುದು” ಎಂದು ಅಧಿಕೃತ ವಕ್ತಾರರು ತಿಳಿಸಿದ್ದಾರೆ.
ಭಾನುವಾರ ಸಂಭಾಲ್​​ನಲ್ಲಿ ಸಮೀಕ್ಷಾ ತಂಡವು ತನ್ನ ಕೆಲಸವನ್ನು ಪುನರಾರಂಭಿಸುತ್ತಿದ್ದಂತೆ ಮಸೀದಿಯ ಬಳಿ ದೊಡ್ಡ ಜನಸಮೂಹ ಜಮಾಯಿಸಿ ಘೋಷಣೆಗಳನ್ನು ಕೂಗಲು ಪ್ರಾರಂಭಿಸಿತ್ತು. ನಂತರ ಪ್ರತಿಭಟನಾಕಾರರು ಭದ್ರತಾ ಸಿಬ್ಬಂದಿಯೊಂದಿಗೆ ಘರ್ಷಣೆಗಿಳಿದು ವಾಹನಗಳಿಗೆ ಬೆಂಕಿ ಹಚ್ಚಿ ಕಲ್ಲು ತೂರಾಟ ನಡೆಸಿದಾಗ ಪರಿಸ್ಥಿತಿ ಉಲ್ಬಣಗೊಂಡಿತು.
ಈವರೆಗೆ ಪೊಲೀಸರು 25 ಜನರನ್ನು ಬಂಧಿಸಿದ್ದು, ಏಳು ಎಫ್ಐಆರ್​ಗಳನ್ನು ದಾಖಲಿಸಿದ್ದಾರೆ. ಇದರಲ್ಲಿ ಸಂಭಾಲ್​ನ ಸಮಾಜವಾದಿ ಪಕ್ಷದ ಸಂಸದ ಜಿಯಾ-ಉರ್-ರೆಹಮಾನ್ ಬರ್ಕ್, ಪಕ್ಷದ ಸ್ಥಳೀಯ ಶಾಸಕ ಇಕ್ಬಾಲ್ ಮೆಹಮೂದ್ ಅವರ ಪುತ್ರ ಸೊಹೈಲ್ ಇಕ್ಬಾಲ್ ಮತ್ತು 2,750ಕ್ಕೂ ಹೆಚ್ಚು ಅಪರಿಚಿತ ಶಂಕಿತರ ವಿರುದ್ಧ ಆರೋಪ ಹೊರಿಸಲಾಗಿದೆ.
ಘಟನೆಯ ಬಗ್ಗೆ ಮ್ಯಾಜಿಸ್ಟೀರಿಯಲ್ ತನಿಖೆ ನಡೆಯುತ್ತಿದ್ದು, ಪರಿಸ್ಥಿತಿ ಈಗ ನಿಯಂತ್ರಣದಲ್ಲಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಕೃಷ್ಣ ಕುಮಾರ್ ವಿಷ್ಣೋಯ್ ಸೋಮವಾರ ಹೇಳಿದ್ದಾರೆ. ಅಶಾಂತಿಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಭರವಸೆ ನೀಡಿದರು.
ಈ ಹಿಂದೆ 2020ರಲ್ಲಿ ಕೂಡ ಸಿಎಎ ವಿರೋಧಿ ಪ್ರತಿಭಟನೆಯ ಸಮಯದಲ್ಲಿ ಉತ್ತರ ಪ್ರದೇಶ ಸರ್ಕಾರ ಗಲಭೆಕೋರರ ಚಿತ್ರಗಳನ್ನು ಸಾರ್ವಜನಿಕವಾಗಿ ಪ್ರದರ್ಶಿಸಿತ್ತು. ರಾಜ್ಯ ರಾಜಧಾನಿ ಸೇರಿದಂತೆ ಹಲವಾರು ಸ್ಥಳಗಳಲ್ಲಿ ದುಷ್ಕರ್ಮಿಗಳ ಪೋಸ್ಟರ್​ಗಳನ್ನು ಸರ್ಕಾರ ಪ್ರದರ್ಶಿಸಿತ್ತು. ಆದರೆ ನ್ಯಾಯಾಲಯದ ಆದೇಶದ ನಂತರ ಇವನ್ನು ತೆಗೆದುಹಾಕಲಾಗಿತ್ತು.

Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

MOTOROLA EDGE 60 FUSION – ಅದ್ಭುತವಾದ ಕ್ಯಾಮೆರಾ ಸೆಟಪ್, ವಾಟರ್ ಪ್ರೊಟೆಕ್ಷನ್ – ಮೊಟೊರೊಲಾದ ಹೊಸ ಫೋನ್ನ ಬೆಲೆ ಕೇವಲ ಇಷ್ಟೇ!

Motorola Edge 60 Fusion: ಬಹುನಿರೀಕ್ಷಿತ ' MOTOROLA EDGE 60 FUSION' ಕೊನೆಗೂ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಕಂಪನಿಯು ಇದನ್ನು ' MOTOROLA EDGE...

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...