ಬೆಂಗಳೂರು: ಒಟ್ಟು 91 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದ್ದು, ಈ ಹುದ್ದೆಗಳನ್ನು ಸಂಪೂರ್ಣವಾಗಿ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಲಾಗುವುದು.
ಸೆಂಟರ್ ಫಾರ್ ಡೆವಲ್ಮೆಂಟ್ ಆಫ್ ಅಡ್ವಾನ್ಸ್ ಕಂಪ್ಯೂಟಿಂಗ್ (ಸಿ-ಡಾಕ್) ಬೆಂಗಳೂರಿನಲ್ಲಿ ಪ್ರಾಜೆಕ್ಟ್ ಇಂಜಿನಿಯರ್, ಪ್ರಾಜೆಕ್ಟ್ ಮ್ಯಾನೇಜರ್ ಮತ್ತು ಸೀನಿಯರ್ ಪ್ರಾಜೆಕ್ಟ್ ಇಂಜಿನಿಯರ್ ಸೇರಿದಂತೆ ಹಲವು ಹುದ್ದೆಗಳಿಗೆ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ.
ಒಟ್ಟು 91 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ್ದು, ಈ ಹುದ್ದೆಗಳನ್ನು ಸಂಪೂರ್ಣವಾಗಿ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಲಾಗುವುದು.
91 ಒಟ್ಟು ಹುದ್ದೆಗಳಿದ್ದು, ಪ್ರಾಜೆಕ್ಟ್ ಇಂಜಿನಿಯರ್ 52, ಪ್ರಾಜೆಕ್ಟ್ ಮ್ಯಾನೇಜರ್ 4, ಸೀನಿಯರ್ ಪ್ರಾಜೆಕ್ಟ್ ಇಂಜಿನಿಯರ್ – 35 ಅಭ್ಯರ್ಥಿಗಳು ಕಂಪ್ಯೂಟರ್ ಸೈನ್ಸ್ನಲ್ಲಿ ಬಿಇ, ಬಿಟೆಕ್, ಎಂಇ ಮತ್ತು ಎಂಟೆಕ್ ಹಾಗೂ ಸ್ನಾತಕೋತ್ತರ ಪದವಿ ಹೊಂದಿರಬೇಕು.
ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗೆ ಅಭ್ಯರ್ಥಿಗಳ ಗರಿಷ್ಠ ವಯೋಮಿತಿ 35,, ಪ್ರಾಜೆಕ್ಟ್ ಮ್ಯಾನೇಜರ್ ಹುದ್ದೆಗೆ ಗರಿಷ್ಠ 56 ಮತ್ತು ಸೀನಿಯರ್ ಪ್ರಾಜೆಕ್ಟ್ ಹುದ್ದೆಗೆ ಗರಿಷ್ಠ ವಯೋಮಿತಿ 40 ವರ್ಷ ಆಗಿದೆ.
ಸರ್ಕಾರದ ನಿಯಮಾವಳಿಯಂತೆ ಪ.ಜಾ, ಪ.ಪಂ ಮತ್ತು ಒಬಿಸಿ, ವಿಕಲಚೇತನ, ನಿವೃತ್ತ ಸೇವಾದಾರರಿಗೆ ವಯೋಮಿತಿ ಸಡಿಲಿಕೆ ಮಾಡಲಾಗಿದೆ.
ಈ ಹುದ್ದೆಗಳಿಗೆ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಯಾವುದೇ ಅರ್ಜಿ ಶುಲ್ಕ ನಿಗದಿ ಮಾಡಿಲ್ಲ. ಈ ಹುದ್ದೆಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಈ ಹುದ್ದೆಗೆ ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಡಿಸೆಂಬರ್ 5 ಆಗಿದೆ. ಈ ಹುದ್ದೆ ಕುರಿತು ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆಗೆ ಅಭ್ಯರ್ಥಿಗಳು cdac.in ಮುಖಾಂತರ ಅರ್ಜಿ ಸಲ್ಲಿಸಬಹುದು.