spot_img
spot_img

ತಿರುಮಲದಲ್ಲಿ ರಾಜಕೀಯ, ದ್ವೇಷ ಭಾಷಣಗಳಿಗೆ ನಿಷೇಧ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ತಿರುಮಲ: ಪವಿತ್ರ ತಿರುಮಲದ ಪವಿತ್ರತೆ ಮತ್ತು ಆಧ್ಯಾತ್ಮಿಕ ಶಾಂತಿಯನ್ನು ಕಾಪಾಡುವ ಉದ್ದೇಶದಿಂದ ರಾಜಕೀಯ ಮತ್ತು ದ್ವೇಷದ ಭಾಷಣಗಳನ್ನು ನಿಷೇಧಿಸಲಾಗಿದೆ ಎಂದು ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ಶನಿವಾರ ಘೋಷಿಸಿವೆ.

ಹಿಂದೂಗಳ ಪವಿತ್ರ ಯಾತ್ರಾತಾಣ ತಿರುಮಲದಲ್ಲಿ ರಾಜಕೀಯ, ದ್ವೇಷ ಭಾಷಣಗಳಿಗೆ ನಿಷೇಧ ಹೇರಿ ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ಆದೇಶ ಹೊರಡಿಸಿದೆ.

ರಾಜಕೀಯ ನಾಯಕರು ಸೇರಿದಂತೆ ಕೆಲವರು ದೇವರ ದರ್ಶನ ಪಡೆದ ಬಳಿಕ ದೇವಸ್ಥಾನದ ಎದುರು ಮಾಧ್ಯಮಗಳ ಮುಂದೆ ರಾಜಕೀಯ ದ್ವೇಷದ ಹೇಳಿಕೆಗಳನ್ನು ನೀಡುವ ಮೂಲಕ ಆಧ್ಯಾತ್ಮಿಕತೆಗೆ ಧಕ್ಕೆ ಉಂಟು ಮಾಡುತ್ತಿರುವುದು ಗಮನಕ್ಕೆ ಬಂದಿದೆ.

ಈ ನಿರ್ಧಾರಕ್ಕೆ ಎಲ್ಲರೂ ಸಹಕರಿಸುವಂತೆ ಮನವಿ ಮಾಡುತ್ತೇವೆ. ಹಾಗೆಯೇ ನಿಯಮಗಳನ್ನು ಉಲ್ಲಂಘಿಸುವವರ ವಿರುದ್ಧ ಕಾನೂನು ಕ್ರಮ ಜರುಗಿಸುವುದಾಗಿ ಹೇಳಿದ್ದಾರೆ.

ಈ ಬಗ್ಗೆ ಟಿಟಿಡಿ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದು, ‘ಸದಾ ಗೋವಿಂದ ನಾಮಸ್ಮರಣೆ ಮೊಳಗುವ ಪವಿತ್ರ ತಿರುಮಲ ದೈವಸ್ಥಾನದಲ್ಲಿ ಇತ್ತೀಚಿನ ದಿನಗಳಲ್ಲಿ ರಾಜಕೀಯ ಮಾತುಗಳು ವಿವಾದಗಳು ಕೇಳಿಬರುತ್ತಿವೆ.

ಇದೇ ವೇಳೆ ‘ತಿರುಮಲದಲ್ಲಿ ಕೆಲಸ ಮಾಡುವ ಪ್ರತಿಯೊಬ್ಬರೂ ಹಿಂದೂಗಳೇ ಆಗಿರಬೇಕು’ ಎಂದು ಪ್ರತಿಪಾದಿಸಿರುವ ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ಮಂಡಳಿಯ ನೂತನ ಅಧ್ಯಕ್ಷ ಬಿ.ಆರ್‌. ನಾಯ್ಡು ಅವರು, ‘ಇದಕ್ಕಾಗಿ ನಾನು ಕಾರ್ಯ ನಿರ್ವಹಿಸುತ್ತೇನೆ. ಇತರ ಧರ್ಮಕ್ಕೆ ಸೇರಿದ ಸಿಬ್ಬಂದಿ ಕುರಿತು ಆಂಧ್ರಪ್ರದೇಶ ಸರ್ಕಾರದ ಜತೆ ಚರ್ಚಿಸಲಾಗುವುದು.

ಹಿಂದಿನ ವೈಎಸ್‌ಆರ್‌ ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ ತಿರುಮಲದಲ್ಲಿ ಅವ್ಯವಹಾರಗಳು ನಡೆದಿವೆ ಎಂದ ಅವರು, ದೇವಾಲಯದ ಪಾವಿತ್ರ್ಯಕ್ಕೆ ಧಕ್ಕೆ ಆಗದಂತೆ ನೋಡಿಕೊಳ್ಳುವುದಾಗಿ ಭರವಸೆ ನೀಡಿದರು. ಅಂತೆಯೇ ತಿರುಪತಿಯ ಲಾಡು ಕಲಬೆರಕೆ ಪ್ರಕರಣದ ತನಿಖೆಗೆ ಆಂಧ್ರಪ್ರದೇಶ ಸರ್ಕಾರ ನೇಮಕ ಮಾಡಿರುವ ಗುಂಟೂರು ಐ.ಜಿ ತ್ರಿಪಾಠಿ ನೇತೃತ್ವದ ವಿಶೇಷ ತಂಡವು (ಎಸ್‌ಐಟಿ) ತನ್ನ ತನಿಖೆ ಆರಂಭಿಸಿದೆ ಎಂದರು.

ಈ ಸಿಬ್ಬಂದಿಯನ್ನು ಸರ್ಕಾರದ ಇತರ ಇಲಾಖೆಗಳಿಗೆ ನಿಯುಕ್ತಿಗೊಳಿಸುವ ಅಥವಾ ಸ್ವಯಂ ನಿವೃತ್ತಿಗೆ (ವಿಆರ್‌ಎಸ್‌) ಅವಕಾಶ ಕಲ್ಪಿಸುವ ಕುರಿತು ಸಮಾಲೋಚನೆ ನಡೆಸಲಾಗುವುದು ಎಂದು ಅವರು ಹೇಳಿದರು.

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

C T RAVI ARREST ISSUE – ಸಿ.ಟಿ ರವಿ ಫೇಕ್ ಎನ್ಕೌಂಟರ್ ಮಾಡುವ ಉದ್ದೇಶ ಪೊಲೀಸರಿಗೆ ಇತ್ತಾ?

Hubli News: "ತರಾತುರಿಯಲ್ಲಿ ಸಿ. ಟಿ. ರವಿ‌ ವಿರುದ್ಧ ಎಫ್​ಐಆರ್ ಮಾಡಲಾಗಿದೆ. ಕಾಮನ್ ಸೆನ್ಸ್ ಬೇಡ್ವಾ ಬೆಳಗಾವಿ ಕಮಿಷನರ್​ಗೆ. ಬೆಳಗಾವಿ ಕಮಿಷನರ್ ಅನ್​ಫಿಟ್ ಇದ್ದಾರೆ" ಎಂದು...

PM MODI TO ATTEND CHRISTMAS – ಪ್ರಧಾನಿ ಮೋದಿ ನಾಳೆ ಕ್ರಿಸ್ಮಸ್ ಆಚರಣೆಯಲ್ಲಿ ಭಾಗಿ

New Delhi News: ಸೋಮವಾರದಂದು ಪ್ರಧಾನಿ ನರೇಂದ್ರ ಮೋದಿ ಕ್ರಿಸ್​ಮಸ್ ಆಚರಣೆ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ. ಕ್ಯಾಥೊಲಿಕ್ ಬಿಷಪ್ಸ್ ಕಾನ್ಫರೆನ್ಸ್ ಆಫ್ ಇಂಡಿಯಾ (ಸಿಬಿಸಿಐ) ಸೋಮವಾರ ಸಂಜೆ...

BANDIPUR FOREST – ಬಂಡೀಪುರ ರಾತ್ರಿ ಸಂಚಾರ ನಿಷೇಧ ಸಮಸ್ಯೆ

BANDIPUR NEWS : ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ (BTR) ಮೂಲಕ ಹಾದು ಹೋಗುವ 24.7 ಕಿ.ಮೀ ವ್ಯಾಪ್ತಿಯಲ್ಲಿ ರಾತ್ರಿ ಸಂಚಾರ ನಿಷೇಧಕ್ಕೆ ಸಂಬಂಧಿಸಿದ ಸಮಸ್ಯೆಗಳು...

JAYADEVA HOSPITAL – ನೂತನ ಜಯದೇವ ಆಸ್ಪತ್ರೆ ಸಿಎಂ ಸಿದ್ದರಾಮಯ್ಯ ಉದ್ಘಾಟನೆ

Kalaburagi News: ಹೃದ್ರೋಗ ಆಸ್ಪತ್ರೆಯನ್ನು ಉದ್ಘಾಟಿಸುವ ಮುನ್ನ ಸಿದ್ದರಾಮಯ್ಯ, ಆಸ್ಪತ್ರೆಯ ನೀಲಿ ನಕಾಶೆಯನ್ನು ವೀಕ್ಷಿಸಿದರು. ಆಸ್ಪತ್ರೆಯನ್ನು ವಿಕ್ಷೀಸಿದ ಸಿದ್ದರಾಮಯ್ಯ ನಂತರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್​ ಖರ್ಗೆಯವರೊಂದಿಗೆ...