ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರವು ಗುಡ್‌ನ್ಯೂಸ್ ಹಾಗೂ ಅವಧಿ ವಿಸ್ತರಣೆಯನ್ನು ಕೇಂದ್ರವು ಅವಕಾಶ ನೀಡಲಾಗಿದೆ.
ಕರ್ನಾಟಕದಲ್ಲಿ ಈ ಹಿಂದೆ ಕೊಡಲಾಗುತ್ತಿದ್ದ ಗ್ರೇಸ್ ಮಾರ್ಕ್ಸ್ ಆಯ್ಕೆಯನ್ನು ನಿಲ್ಲಿಸಲಾಗಿದೆ. ಹೀಗಾಗಿ, ಈ ಬಾರಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು ಈ ಹಿಂದೆಗಿಂತ ತುಸು ಹೆಚ್ಚು ಪರಿಶ್ರಮ ಹಾಕುವ ಅವಶ್ಯಕತೆ ಇದೆ. ಇದೀಗ ರಾಜ್ಯ ಸರ್ಕಾರವು ಎಸ್‌ಎಸ್‌ಎಲ್‌ಸಿ ಪರೀಕ್ಷೆ – 1ಕ್ಕೆ ನೊಂದಾಯಿಸುವ ಅವಧಿ (ದಿನಾಂಕವನ್ನು) ವಿಸ್ತರಿಸಲಾಗಿದೆ.
2025ನೇ ಮಾರ್ಚ್ ತಿಂಗಳಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ-1 ನಡೆಯಲಿದೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆ ದಿನಾಂಕ ಸಮೀಪಿಸುತ್ತಿದ್ದು, ಎಲ್ಲಾ ವಿದ್ಯಾರ್ಥಿಗಳು ಈಗಲಿಂದಲೇ ಪರೀಕ್ಷೆಗೆ ಬೇಕಾದ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದಾರೆ.
ಕರ್ನಾಟಕದ ಎಲ್ಲಾ ಸರ್ಕಾರಿ ಹಾಗೂ ಸರ್ಕಾರದಿಂದ ಮಾನ್ಯತೆ ಪಡೆದುಕೊಂಡಿರುವ ಅನುದಾನಿತ ಮತ್ತು ಅನುದಾನರಹಿತ ಶಾಲೆಗಳಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಹಾಜರಾಗುವ ಅರ್ಹ ಶಾಲಾ ವಿದ್ಯಾರ್ಥಿಗಳು, ಖಾಸಗಿ ಅಭ್ಯರ್ಥಿಗಳು ಹಾಗೂ ಪುನರಾವರ್ತಿತ ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಆನ್‌ಲೈನ್ ಮೂಲಕ ನೊಂದಾಯಿಸಿಕೊಳ್ಳುವುದಕ್ಕೆ ಹೇಳಲಾಗಿತ್ತು.
ಇದಕ್ಕೆ ಸಂಬಂಧಿಸಿದಂತೆ ಈ ಮೊದಲು ಎಲ್ಲಾ ವಿದ್ಯಾರ್ಥಿಗಳಿಗೂ ನಿಗದಿ ಮಾಡಲಾಗಿದ್ದ ರಿಜಿಸ್ಟ್ರೇಷನ್ ದಿನಾಂಕಕ್ಕೆ ಆಕ್ಷೇಪಣೆ ವ್ಯಕ್ತವಾಗಿತ್ತು. ಆದರೆ, ಇದು ತುಂಬಾ ಕಡಿಮೆಯ ಅವಧಿ ಎಂದು ಕೆಲವರು ಆಕ್ಷೇಪ ವ್ಯಕ್ತಪಡಿಸಿದ್ದರು.
ಕರ್ನಾಟಕದ ವಿವಿಧ ಶಾಲೆಗಳಿಂದ ಹಾಗೂ ಪೋಷಕರಿಂದಲೂ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಮಂಡಳಿಗೆ ಈ ಅವಧಿಯನ್ನು ವಿಸ್ತರಿಸುವಂತೆ ಮನವಿ ಮಾಡಲಾಗಿತ್ತು. ಹೀಗಾಗಿ, ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ವಿವರ ನೊಂದಾಯಿಸುವ (ರಿಜಿಸ್ಟ್ರೇಷನ್) ದಿನಾಂಕವನ್ನು ಈ ಮೊದಲೂ ವಿಸ್ತರಿಸಲಾಗಿತ್ತು. ಇದೀಗ ಮತ್ತೊಮ್ಮೆ ಈ ಅವಧಿಯನ್ನು ವಿಸ್ತರಿಸಲಾಗಿದೆ.
ಇನ್ನು ಎಸ್‌ಎಸ್‌ಎಲ್‌ಸಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿ ಪರೀಕ್ಷಾ ಮಂಡಳಿ ವೆಬ್‌ಸೈಟ್‌ಗೆ ಶಾಲಾ ಲಾಗಿನ್ ಮೂಲಕ CCERF, CCEPF, CCERR ಹಾಗೂ CCEPR ವಿದ್ಯಾರ್ಥಿಗಳ ಮಾಹಿತಿಯನ್ನು ಅಪ್‌ಲೋಡ್ ಮಾಡಲು ನಿಗದಿಪಡಿ ಮಾಡಲಾಗಿದ್ದ ನ. 30. 2024 ರಿಂದ ಡಿ.07.2024 ರ ವರೆಗೆ (ಮಾಹಿತಿ ಅಪ್ಲೋಡ್, ಚಲನ್ ಹಾಗೂ ಬ್ಯಾಂಕ್ ಜಮೆ ಬೇರೆ ಬೇರೆ ದಿನಾಂಕ) ಮಾಡಲಾಗಿದೆ.
ಅಲ್ಲದೇ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಪರೀಕ್ಷಾ ಶುಲ್ಕದ ಚಲನ್ ಮುದ್ರಿಸಲು ನಿಗದಿ ಮಾಡಲಾಗಿದ್ದ ದಿನಾಂಕವನ್ನೂ ಸಹ ವಿಸ್ತರಿಸಲಾಗಿದೆ. ಈ ಹಿಂದೆ ಇದನ್ನು ಡಿ.02. 2024 ರಿಂದ ಡಿ. 07. 2024 ರ ವರೆಗೆ ಕಾಲಾವಕಾಶ ನಿಗದಿ ಮಾಡಲಾಗಿತ್ತು. ಇದೀಗ ಈ ಅವಧಿಯನ್ನು ಡಿ. 09. 2024 ರಿಂದ ಡಿ. 16. 2024ರ ವರೆಗೆ ವಿಸ್ತರಣೆ ಮಾಡಿ ಆದೇಶ ಹೊರಡಿಸಲಾಗಿದೆ.
ಇನ್ನು ಇದಕ್ಕೆ ಸಂಬಂಧಿಸಿದಂತೆ ಎಸ್‌ಎಸ್‌ಎಲ್‌ಸಿ ಮಂಡಳಿ ಜಾಲತಾಣದ ಶಾಲಾ ಲಾಗಿನ್ ಮೂಲಕ CCEPF, CCERR ಹಾಗೂ CCEPR ವಿದ್ಯಾರ್ಥಿಗಳ ಪರೀಕ್ಷಾ ಶುಲ್ಕದ ಚಲನ್ ಮುದ್ರಿಸಿಕೊಳ್ಳಲು ಅವಕಾಶ ನೀಡಲಾಗಿದೆ.
ವಿದ್ಯಾರ್ಥಿಗಳು ಹಾಗೂ ಶಾಲಾ ಮಂಡಳಿ ಅನುಕೂಲಕ್ಕಾಗಿ ದಿನಾಂಕ ವಿಸ್ತರಿಸಲಾಗಿದೆ.
ಈ ದಿನಾಂಕ ವಿಸ್ತರಣೆಯ ಅವಧಿಯನ್ನು ಎಲ್ಲರೂ ಸದುಪಯೋಗಪಡಿಸಿಕೊಳ್ಳಬೇಕು ಎಂದು ಎಸ್‌ಎಸ್‌ಎಲ್‌ಸಿ ಪರೀಕ್ಷಾ ಮಂಡಳಿಯು ಮನವಿ ಮಾಡಿದೆ. ಇನ್ನು ಈ ಹಿಂದೆ ನೀಡಲಾಗುತ್ತಿದ್ದ ಗ್ರೇಸ್ ಮಾರ್ಕ್ಸ್ ಅನ್ನು ರಾಜ್ಯ ಸರ್ಕಾರವು ರದ್ದು ಮಾಡಿದೆ. ಇದರಿಂದ ವಿದ್ಯಾರ್ಥಿಗಳು ತುಸು ಹೆಚ್ಚೇ ಪರಿಶ್ರಮವಾಗಿ ವಿದ್ಯಾಭ್ಯಾಸ ಮಾಡಬೇಕಿದೆ.