ಬೆಂಗಳೂರು: 1924ರಲ್ಲಿ ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಅಂಗವಾಗಿ ವರ್ಷವಿಡೀ ʻಗಾಂಧೀ ಭಾರತʼ ಹೆಸರಿನಲ್ಲಿ ಅರ್ಥಪೂರ್ಣ ಕಾರ್ಯಕ್ರಮಗಳ ಆಯೋಜನೆಗೆ ಸಿದ್ಧತೆಗಳನ್ನು ಆರಂಭಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಸೂಚನೆ ನೀಡಿದ್ದಾರೆ.
ಮಹಾತ್ಮ ಗಾಂಧೀಜಿ ಅವರ ಅಧ್ಯಕ್ಷತೆಯಲ್ಲಿ 1924ರಲ್ಲಿ ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಅಂಗವಾಗಿ ಡಿಸೆಂಬರ್ 26 ಮತ್ತು 27ರಂದು ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಗುವುದು.
ಶತಮಾನೋತ್ಸವ ಅಂಗವಾಗಿ ವರ್ಷವಿಡೀ ʻಗಾಂಧೀ ಭಾರತʼ ಹೆಸರಿನಲ್ಲಿ ಅರ್ಥಪೂರ್ಣ ಕಾರ್ಯಕ್ರಮಗಳ ಆಯೋಜನೆಗೆ ಸಿದ್ಧತೆಗಳನ್ನು ಆರಂಭಿಸಲು ಸೂಚನೆ ನೀಡಲಾಗಿದೆ.
ಬೆಳಗಾವಿಯಲ್ಲಿ ಡಿ.26ರಂದು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ಮತ್ತು ಡಿ.27ರಂದು ಸಾರ್ವಜನಿಕ ಸಭೆ ನಡೆಸಲು ನಿರ್ಧರಿಸಲಾಗಿದೆ. ಮೈಸೂರು ದಸರಾ ಮಾದರಿಯಲ್ಲಿ ಬೆಳಗಾವಿ ನಗರದ ಪ್ರಮುಖ 32 ಕಿಮೀ ಉದ್ದದ ರಸ್ತೆ ಹಾಗೂ 30 ವೃತ್ತಗಳ ದೀಪಾಲಂಕಾರ ಮಾಡಲಾಗುವುದು.
ಕಾಂಗ್ರೆಸ್ ಅಧಿವೇಶನ ನಡೆದ ಸ್ಥಳದಲ್ಲಿ ವೀರಸೌಧ ಅಭಿವೃದ್ಧಿ. ಈ ಸ್ಥಳದಲ್ಲಿ ಗ್ರಂಥಾಲಯ ಮತ್ತು ಗಾಂಧಿ ಪ್ರತಿಮೆ ಅನಾವರಣ ಮಾಡಲಾಗುವುದು. ಬೆಳಗಾವಿಯ 2.1 ಕಿ.ಮೀ ಉದ್ದದ ಕಾಂಗ್ರೆಸ್ ರಸ್ತೆಯಲ್ಲಿ ಶತಮಾನೋತ್ಸವದ ಸ್ಮಾರಕವಾಗಿ ತಾತ್ಕಾಲಿಕ ವಿರೂಪಾಕ್ಷ ಗೋಪುರ ನಿರ್ಮಾಣ, ರೈಲು ಮಾರ್ಗದ ತಡೆಗೋಡೆಯುದ್ದಕ್ಕೂ ಉಬ್ಬು ಶಿಲ್ಪಗಳ ನಿರ್ಮಾಣ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ನಿರ್ಧರಿಸಲಾಗಿದೆ.
ಕಲಬರಗಿಯಲ್ಲಿ ಗಂಗಾಧರ ರಾವ್ ದೇಶಪಾಂಡೆಯವರ ಸ್ಮಾರಕದಲ್ಲಿ ಮೂರ್ತಿ ಸ್ಥಾಪನೆ, ಮ್ಯೂಸಿಯಂ ಉದ್ಘಾಟನೆ. ಹುದಲಿಯಲ್ಲಿ ಗಾಂಧೀ ಸ್ಮಾರಕ ಹಾಗೂ ಛಾಯಾಚಿತ್ರ ಗ್ಯಾಲರಿಯ ಅಭಿವೃದ್ಧಿ ಮತ್ತು ಗಾಂಧೀಜಿ ಅವರು ವಿವಿಧ ಕಾಲಘಟ್ಟಗಳಲ್ಲಿ ಭೇಟಿ ನೀಡಿದ ರಾಜ್ಯದ 120 ಸ್ಥಳಗಳಲ್ಲಿ ನೆನಪಿನ ಸ್ತಂಭಗಳನ್ನು ನಿರ್ಮಿಸಲು ತೀರ್ಮಾನಿಸಲಾಗಿದೆ.
ಅಟನ್ ಬರೋ ನಿರ್ಮಿಸಿದ ಪ್ರಸಿದ್ಧ ʻಗಾಂಧಿʼ ಸಿನೆಮಾವನ್ನು ಕನ್ನಡದಲ್ಲಿ ನಿರ್ಮಿಸುವ ಬಗ್ಗೆ, ಸುವರ್ಣ ವಿಧಾನಸೌಧದಲ್ಲಿ ಕಾಂಗ್ರೆಸ್ ಅಧಿವೇಶನ, ಸ್ವಾತಂತ್ರ್ಯ ಚಳವಳಿಯನ್ನು ಪ್ರತಿಬಿಂಬಿಸುವ ಛಾಯಾಚಿತ್ರ ಗ್ಯಾಲರಿ ನಿರ್ಮಾಣ, ಡಿ.26 ರಂದು ಗಣ್ಯ ಪ್ರತಿನಿಧಿಗಳಿಗಾಗಿ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಡಿ.27 ರಂದು ಸಾರ್ವಜನಿಕರಿಗೆ ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ಶತಮಾನೋತ್ಸವದ ನೆನಪಿಗೆ ವಿಶೇಷ ಅಂಚೆ ಚೀಟಿ ಬಿಡುಗಡೆಗೆ ನಿರ್ಧಾರ ಕೈಗೊಳ್ಳಲಾಯಿತು.
ವರ್ಷವಿಡೀ ಎಲ್ಲಾ ಶಾಲೆಗಳಲ್ಲಿ ʻಗಾಂಧಿ ಭಾರತʼ ಅಡಿಯಲ್ಲಿ ʻನಾವು ಮನುಜರುʼ ಕಾರ್ಯಕ್ರಮಗಳ ಆಯೋಜನೆ. ಮಕ್ಕಳಲ್ಲಿ ಗಾಂಧೀಜಿ ವಿಚಾರಧಾರೆ ಬಗ್ಗೆ ಅರಿವು ಮೂಡಿಸಲು ವಿವಿಧ ಸ್ಪರ್ಧಾ ಕಾರ್ಯಕ್ರಮಗಳ ಆಯೋಜಿಸುವ ಕುರಿತು ಹಾಗೂ ಗಾಂಧೀಜಿ ಅವರು ಬೋಧಿಸಿದ ಸಪ್ತ ಪಾತಕಗಳು ಹಾಗೂ ಸಂವಿಧಾನದ ಪೀಠಿಕೆಗಳನ್ನು ಮುದ್ರಿಸಿ ಎಲ್ಲಾ ಶಾಲೆಗಳಲ್ಲಿ ವಿತರಣೆ ಮಾಡಲು ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.
WhatsApp Group
Join Now
Telegram Group
Join Now
Instagram Account
Follow Now
Facebook Page
Follow Now