spot_img
spot_img

ಚಳಿಗಾಲದ ಅಧಿವೇಶನ : ನಂದಿನಿ ಹಾಲಿನ ದರ ಹೆಚ್ಚಳ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ಬೆಂಗಳೂರು: ಕೆಎಂಎಫ್ ಅಧ್ಯಕ್ಷ ಭೀಮಾ ನಾಯಕ್ ಅವರು ಚಳಿಗಾಲದ ಅಧಿವೇಶನದ ಬಳಿಕ ನಂದಿನಿ ಹಾಲಿನ ದರ ಹೆಚ್ಚಳದ ಬಗ್ಗೆ ತೀರ್ಮಾನ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.
ನಂದಿನಿ ಹಾಲಿನ ದರವನ್ನು ಲೀಟರ್‌ಗೆ 5 ರೂಪಾಯಿ ಹೆಚ್ಚಿಸುವಂತೆ ರೈತರು ಹಾಗೂ ಹಾಲು ಉತ್ಪಾದಕರು ಒತ್ತಾಯಿಸಿದ್ದಾರೆ. ಚಳಿಗಾಲದ ಅಧಿವೇಶನದ ಬಳಿಕ ಈ ಕುರಿತು ಸಿಎಂ, ಡಿಸಿಎಂ ಹಾಗೂ ಸಹಕಾರ ಸಚಿವರ ಜೊತೆ ಚರ್ಚಿಸಿ ತೀರ್ಮಾನ ಕೈಗೊಳ್ಳುವುದಾಗಿ ಕೆಎಂಎಫ್ ಅಧ್ಯಕ್ಷ ಭೀಮಾ ನಾಯಕ್ ತಿಳಿಸಿದ್ದಾರೆ.
ಈಗಾಗಲೇ ದೈನಂದಿನ ವಸ್ತುಗಳ ಬೆಲೆ ಏರಿಕೆಯಾಗಿದ್ದು, ಕೆಎಂಎಫ್ ನಂದಿನಿ ಹಾಲಿನ ದರ ಮತ್ತೆ ಏರಿಕೆಯಾಗುವ ಸಾಧ್ಯತೆಯಿದೆ. ಈ ಹಿಂದೆ ಪ್ರತಿ ಲೀಟರ್​ಗೆ ಹೆಚ್ಚುವರಿಯಾಗಿ 50 ಎಂಎಲ್ ನೀಡಿ 2 ರೂಪಾಯಿ ಏರಿಕೆ ಮಾಡಲಾಗಿತ್ತು. ಆಗ ಅರ್ಧ ಲೀಟರ್ ಹಾಲಿನ ಪ್ಯಾಕೆಟ್ ದರ 22 ರಿಂದ 24 ರೂಪಾಯಿಗೆ ಏರಿಕೆಯಾಗಿತ್ತು. ಒಂದು ಲೀಟರ್ ಹಾಲಿನ ದರ 42 ರಿಂದ 44 ರೂಪಾಯಿಗೆ ಏರಿಕೆಯಾಗಿತ್ತು.
ಕೆಲ ದಿನಗಳ ಹಿಂದೆ ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್ ಅವರು ಹಾಲಿನ ದರ ಏರಿಕೆಯ ಯಾವುದೇ ಪ್ರಸ್ತಾವನೆ ಇಲ್ಲ ಎಂದು ಹೇಳಿದ್ದರು. ಆದರೆ, ಇದೀಗ ಭೀಮಾ ನಾಯ್ಕ್ ಅವರು ಚಳಿಗಾಲದ ಅಧಿವೇಶನದ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜತೆಗೆ ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತೇವೆ ಎನ್ನುವ ಹೇಳಿಕೆ ಹಲವು ಪ್ರಶ್ನೆಗಳನ್ನು ಹುಟ್ಟು ಹಾಕಿದೆ.
ಸಾಮಾಜಿಕ ಮಾಧ್ಯಮದಲ್ಲೂ ಕೂಡಾ ವಿನಾಕಾರಣ ರಾಜಕಾರಣ ಮಾಡಿ ಜನರಿಗೆ ತಪ್ಪು ಸಂದೇಶ ಹೋಗುವಂತೆ ನಡೆದುಕೊಳ್ಳಲಾಗುತ್ತಿದೆ. ನಾವೂ ಯಾವುದೇ ಒತ್ತಡಕ್ಕೆ ಮಣಿದಿಲ್ಲ. ಕೆಎಂಎಫ್ ಎಂಡಿ ವರ್ಗಾವಣೆಗೂ ಇದಕ್ಕೂ ಸಂಬಂಧ ಇಲ್ಲ. ಬಿಜೆಪಿಯವರು ಮೊದಲು ಯತ್ನಾಳ್ ಬಾಯಿ ಮುಚ್ಚಿಸಲಿ. ನಿಮ್ಮಲ್ಲಿರುವ ಒಡಕು ಸರಿಪಡಿಸಿಕೊಳ್ಳೋದನ್ನ ನೋಡಿ. ಬದಲಾಗಿ ಕೆಎಂಎಫ್ ಸಂಸ್ಥೆಯನ್ನು ರಾಜಕೀಯವಾಗಿ ಬಳಸಿಕೊಳ್ಳುವುದನ್ನು ಬಿಡಿ ಎಂದು ವಾಗ್ದಾಳಿ ನಡೆಸಿದ್ದಾರೆ.
ದೋಸೆ ಹಿಟ್ಟು ಮಾರಾಟದಲ್ಲಿ ನಮಗೆ ಆಹಾರ ಇಲಾಖೆಯಿಂದ ಕೆಲವು ಅಂಶಗಳ ಸೇರ್ಪಡೆಗೆ ಸೂಚನೆ ಇದೆ. ಆ ಬಗ್ಗೆ ನಾವೂ ಸಭೆ ಮಾಡಿದ್ದೇವೆ. ಶೀಘ್ರದಲ್ಲೇ ದೋಸೆ ಹಿಟ್ಟು ಉತ್ಪನ್ನ ಮಾರಾಟ ಮಾಡುತ್ತೇವೆ. ನಮಗೆ ತಿರುಪತಿಯಲ್ಲಿ ಆದ ಅಡ್ಡಿಯಿಂದ ಅನ್ಯ ರಾಜ್ಯದಲ್ಲಿ ದೋಸೆ ಹಿಟ್ಟು ಮಾರಾಟಕ್ಕೆ ಹಿಂದೇಟು ಹಾಕಿದ್ದೆವು. ಆದರೆ ಲಾಭಿ, ಒತ್ತಡ ನಮ್ಮ ಮೇಲೆ ಇಲ್ಲ. ಇಲ್ಲದ ಆರೋಪ ಬಿಜೆಪಿ ಮಾಡುತ್ತಿದೆ ಎಂದಿದ್ದಾರೆ.

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

CHALLENGING PRIYANKAS ELECTION – ಕೇರಳ ಹೈಕೋರ್ಟ್ ಮೊರೆ ಹೋದ ವಯನಾಡು ಬಿಜೆಪಿ ಅಭ್ಯರ್ಥಿ

Kochi, Kerala News: ಚುನಾವಣಾ ಆಯೋಗದ ನಿಯಮಗಳನ್ನು ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ಬಿಜೆಪಿ ಅಭ್ಯರ್ಥಿ ನವ್ಯಾ ಹರಿದಾಸ್​ ಕೇರಳ ಹೈಕೋರ್ಟ್​ ಮೆಟ್ಟಿಲೇರಿದ್ದಾರೆ. ಪ್ರಿಯಾಂಕಾ ಗಾಂಧಿ ವಾದ್ರಾ...

DEVEGOWDA FAMILY WORSHIPS KALARAM – ಮಾಜಿ ಪ್ರಧಾನಿ ದೇವೇಗೌಡ ಕುಟುಂಬದಿಂದ ಕಲಾರಾಮ್, ತ್ರಯಂಬಕೇಶ್ವರನಿಗೆ ಪೂಜೆ

Nashik (Maharashtra) News : ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಕುಟುಂಬ ಮಹಾರಾಷ್ಟ್ರದ ಕಾಲಾರಾಮ್​​ ಮತ್ತು ತ್ರಯಂಬಕೇಶ್ವರದ ಮಹಾದೇವ ದೇವಸ್ಥಾನಕ್ಕೆ ಭೇಟಿ ನೀಡಿ, ಪೂಜೆ ಸಲ್ಲಿಸಿದರು....

KANNADA SAHITYA SAMMELANA : ಮುಂದಿನ ವರ್ಷ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಬಳ್ಳಾರಿಯಲ್ಲಿರುತ್ತದೆ.

Mandya News: ಬರುವ ವರ್ಷ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಬಳ್ಳಾರಿಯಲ್ಲಿ ಆಯೋಜಿಸಲು ನಿನ್ನೆ ನಡೆದ ಕನ್ನಡ ಸಾಹಿತ್ಯ ಪರಿಷತ್ತು ಸಭೆಯಲ್ಲಿ ನಿರ್ಧರಿಸಲಾಗಿದೆ....

Centenary of the session : ಬೆಳಗಾವಿಯಲ್ಲಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ

Bangalore News: ಡಿಸೆಂಬರ್ 26 ರಂದು ಬೆಳಗಾವಿಯಲ್ಲಿ ನಡೆಯಲಿರುವ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯುಸಿ) ಸಭೆಯ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್...