ಬೆಳಗಾವಿ: ಯುವನಿಧಿ ಯೋಜನೆಯಡಿ ಪ್ರಸಕ್ತ ಸಾಲಿನಲ್ಲಿ 1.45 ಲಕ್ಷ ಮಂದಿಗೆ ಹಣ ವರ್ಗಾಯಿಸಲಾಗಿದೆ ಎಂದು ಕೌಶಲ್ಯಾಭಿವೃದ್ಧಿ ಇಲಾಖೆ ಸಚಿವ ಡಾ.ಶರಣ್ ಪ್ರಕಾಶ್ ಪಾಟೀಲ್ ಮಾಹಿತಿ ನೀಡಿದರು.
ಪಂಚ ಗ್ಯಾರಂಟಿಗಳಲ್ಲಿ ಒಂದಾದ ಯುವನಿಧಿ ಯೋಜನೆಯಡಿ 2023-24ನೇ ಸಾಲಿನಲ್ಲಿ 1,81,690 ಮಂದಿ ಹೆಸರು ನೋಂದಾಯಿಸಿಕೊಂಡಿದ್ದಾರೆ. ಇದುವರೆಗೆ ಕೇವಲ 1.45 ಲಕ್ಷ ಅರ್ಹ ಅಭ್ಯರ್ಥಿಗಳಿಗೆ ಮಾತ್ರ ಹಣ ವರ್ಗಾಯಿಸಲಾಗಿದೆ ಎಂಬ ಬಿಜೆಪಿ ಸದಸ್ಯ ಕೆ.ಎಸ್.ನವೀನ್ ಮಾತಿಗೆ ಸಚಿವರು ಪ್ರತಿಕ್ರಿಯಿಸಿದರು.
ಯುವನಿಧಿ ಯೋಜನೆಯಡಿಯಲ್ಲಿ ಇದುವರೆಗೆ 1.45 ಲಕ್ಷ ಅಭ್ಯರ್ಥಿಗಳಿಗೆ ಹಣ ವರ್ಗಾಯಿಸಲಾಗಿದೆ ಎಂದು ಸಚಿವ ಶರಣ್ ಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.
ಈ ಪೈಕಿ 1.45 ಲಕ್ಷ ಅಭ್ಯರ್ಥಿಗಳ ಅರ್ಜಿ ಪರಿಶೀಲಿಸಿ ಹಣ ಮಂಜೂರು ಮಾಡಲಾಗಿದೆ. ಉನ್ನತ ಶಿಕ್ಷಣ ಸೇರಿರುವುದು, ಆದಾಯ ತೆರಿಗೆ ಹಾಗೂ ಜಿಎಸ್ಟಿ ವ್ಯಾಪ್ತಿಯಲ್ಲಿ ಬಂದಿರುವುದೂ ಸೇರಿದಂತೆ ವಿವಿಧ ಕಾರಣಗಳಿಗಾಗಿ ಯೋಜನೆಗೆ ಅನರ್ಹರಾಗಿದ್ದಾರೆ. ಇದು ನಿರಂತರ ಪ್ರಕ್ರಿಯೆ. ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿದರೆ ಸಮಗ್ರವಾಗಿ ಪರಿಶೀಲಿಸಿ ಯೋಜನೆಯ ಫಲಾನುಭವಿಗಳಾಗಬಹುದು ಎಂದು ಸಚಿವ ಪಾಟೀಲ್ ತಿಳಿಸಿದರು.
ಯುವನಿಧಿ ಯೋಜನೆಯಡಿ ಪ್ರಸ್ತಕ ಸಾಲಿನಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಉತ್ತೀರ್ಣರಾಗಿ ಆರು ತಿಂಗಳೊಳಗೆ ಉನ್ನತ ಶಿಕ್ಷಣ ಸೇರದಿದ್ದರೆ ಹಾಗೂ ನೌಕರಿ ಸಿಗದಿದ್ದರೆ ಅಂತಹ ಅಭ್ಯರ್ಥಿಗಳಿಗೆ 3 ಸಾವಿರ ರೂ ನೀಡಲಾಗುತ್ತಿದೆ.
2023-24ನೇ ಶೈಕ್ಷಣಿಕ ಸಾಲಿನಲ್ಲಿ 5.26 ಲಕ್ಷ ಅಭ್ಯರ್ಥಿಗಳು ಯೋಜನೆಗೆ ಅರ್ಹರಾಗಿದ್ದರೂ ಅರ್ಜಿ ಸಲ್ಲಿಸಿರುವವರು ಮಾತ್ರ 1.81 ಲಕ್ಷ ಮಂದಿ.