spot_img
spot_img

ಭಾರಿ ಪ್ರವಾಹಕ್ಕೆ ರಸ್ತೆ ಸಂಪರ್ಕ ಬಂದ್; ಬೆಳಗಾವಿ-ಮೀರಜ್ ನಡುವೆ ವಿಶೇಷ ರೈಲು ಸಂಚಾರ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ಬೆಳಗಾವಿ: ಪಶ್ಚಿಮ ಘಟ್ಟದಲ್ಲಿ ಭಾರಿ ಮಳೆ ಆಗುತ್ತಿದ್ದು, ಸಪ್ತ ನದಿಗಳು ಹರಿಯುವ ಬೆಳಗಾವಿ (Belagavi) ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದೆ. ಗ್ರಾಮಗಳು, ಸಾವಿರಾರು ಎಕರೆ ಜಮೀನು, ಸೇತುವೆಗಳು ಮುಳುಗಿ ಜನರ ಬದುಕು ದಾರಿಗೆ ಬಂದಿದೆ. ಇನ್ನು ಕೃಷ್ಣಾ ನದಿಯಿಂದ 3 ಲಕ್ಷ ಕ್ಯೂಸೆಕ್ ನೀರು ಮತ್ತು ಘಟಪ್ರಭಾದಿಂದ 73 ಸಾವಿರ ಕ್ಯೂಸೆಕ್‌ಗಿಂತ ಹೆಚ್ಚು ನೀರನ್ನು ಹರಿಬಿಡುತ್ತಿರುವ ಹಿನ್ನೆಲೆ ಬೆಳಗಾವಿ ಜಿಲ್ಲೆಯ ಕೃಷ್ಣಾ ಹಾಗೂ ಘಟಪ್ರಭಾ ನದಿಯ ವ್ಯಾಪ್ತಿಯಲ್ಲಿ 44ಕ್ಕೂ ಹೆಚ್ಚು ಸೇತುವೆಗಳು ಜಲಾವೃತಗೊಂಡು ರಸ್ತೆ ಸಾರಿಗೆ ಸಂಪರ್ಕ ಕಡಿತಗೊಂಡಿದೆ. ಹೀಗಾಗಿ ಬೆಳಗಾವಿ ಮತ್ತು ಮಹಾರಾಷ್ಟ್ರದ ಮೀರಜ್ ನಡುವೆ ಪ್ರಯಾಣಿರ ಅನುಕೂಲಕ್ಕಾಗಿ ವಿಶೇಷ ಪ್ಯಾಸೆಂಜರ್ ರೈಲು ಸಂಚಾರ ನಡೆಸಲಿದೆ.

ಭಾರಿ ಮಳೆಯಿಂದಾಗಿ ರಸ್ತೆ ಮಾರ್ಗ ಸ್ಥಗಿತಗೊಂಡಿದ್ದು ಬೆಳಗಾವಿ ಮತ್ತು ಮಹಾರಾಷ್ಟ್ರದ ಮೀರಜ್ ನಡುವೆ ಪ್ರತಿ ದಿನ ಪ್ರಯಾಣ ಬೆಳೆಸುತ್ತಿದ್ದ ಪ್ರಯಾಣಿಕರಿಗೆ ಅನುಕೂಲವಾಗಲೆಂದು ದಕ್ಷಿಣ ನೈರುತ್ಯ ರೈಲ್ವೆ ಬೆಳಗಾವಿ-ಮೀರಜ್ ನಡುವೆ ವಿಶೇಷ ಪ್ಯಾಸೆಂಜರ್ ರೈಲು ಓಡಾಟದ ಸೌಕರ್ಯ ಕಲ್ಪಿಸಿದೆ. ಆಗಸ್ಟ್ 1 ರಿಂದ 4ರ ವರೆಗೆ ಪ್ಯಾಸೆಂಜರ್ ವಿಶೇಷ ರೈಲು ಓಡಾಡಲಿದೆ.

ಬೆಳಗಾವಿ-ಮೀರಜ್

ಪ್ಯಾಸೆಂಜರ್ ವಿಶೇಷ ರೈಲು ವೇಳಾಪಟ್ಟಿ

  • ಬೆಳಗಾವಿ-ಮೀರಜ್ ರೈಲು ಆ-01 (07301) ಮುಂಜಾನೆ 6 ಗಂಟೆಗೆ ಬೆಳಗಾವಿ ನಿಲ್ದಾಣದಿಂದ ಹೊರಟು ಮು. 9ಕ್ಕೆ ಮೀರಜ್ ನಿಲ್ದಾಣ ತಲುಪಲಿದೆ.
  • ಮೀರಜ್-ಬೆಳಗಾವಿ ರೈಲು ಸಂಖ್ಯೆ (07302) ಮುಂಜಾನೆ 9.50ಕ್ಕೆ ಮೀರಜ್​ನಿಂದ ಹೊರಟು ಮಧ್ಯಾಹ್ನ 12.50 ಕ್ಕೆ ಬೆಳಗಾವಿ ನಿಲ್ದಾಣ ತಲುಪಲಿದೆ.
  • ಬೆಳಗಾವಿ-ಮೀರಜ್ ರೈಲು ಆ.01ರ ಮಧ್ಯಾಹ್ನ 01.30 ಗಂಟೆಗೆ ಬೆಳಗಾವಿ ನಿಲ್ದಾಣದಿಂದ ಹೊರಟು ಸಂಜೆ 04.30ಕ್ಕೆ ಮೀರಜ್ ತಲುಪಲಿದೆ.
  • ಮೀರಜ್-ಬೆಳಗಾವಿ ರೈಲು ಆ.01 ಸಂಜೆ 05.35 ಕ್ಕೆ ಮೀರಜ್​ನಿಂದ ಹೊರಟು ರಾತ್ರಿ 08.35 ಕ್ಕೆ ಬೆಳಗಾವಿ ನಿಲ್ದಾಣ ತಲುಪಲಿದೆ.ಆಗಸ್ಟ್ 01ರಿಂದ ಆಗಸ್ಟ್ 04ರ ವರೆಗೆ ಬೆಳಗಾವಿ-ಮೀರಜ್ ರೈಲು ದಿನಕ್ಕೆ 2 ಬಾರಿ ಓಡಾಟ ನಡೆಸಲಿದೆ.

 

ಮಂಗಳಮುಖಿಯರಿಂದ ಅಮಾನವೀಯ ವರ್ತನೆ ಯುವತಿಯ ಬಟ್ಟೆ ಬಿಚ್ಚಿ ಚಿತ್ರಹಿಂಸೆ !

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

ಎನ್ ಡಿ ಎ ಯು ಮಹಾರಾಷ್ಟ್ರದ ಪ್ರಗತಿಗೆ ಶ್ರಮಿಸಲಿದೆ : ಪ್ರಧಾನಿ ಮೋದಿ

ಹೊಸದಿಲ್ಲಿ : ಮಹಾರಾಷ್ಟ್ರದಲ್ಲಿ ಮಹಾಯುತಿ ಮೈತ್ರಿಕೂಟದ ಜಯವು ಉತ್ತಮ ಆಡಳಿತಕ್ಕೆ, ಅಭಿವೃದ್ಧಿಗೆ ಸಂದ ಜಯ. ಎನ್ ಡಿ ಎ ಯು ಮಹಾರಾಷ್ಟ್ರದ ಪ್ರಗತಿಗೆ ಶ್ರಮಿಸಲಿದೆ...

ಅಹಿಂದ ಮತಗಳ ದೃಢಿಕರಣ ಶಿಗ್ಗಾವಿ ಗೆಲುವಿಗೆ ನೆರವಾಯ್ತು: ಸತೀಶ್ ಜಾರಕಿಹೊಳಿ

ಬೆಳಗಾವಿ: ಉಪಚುನಾವಣೆ ಮೂರು ಕ್ಷೇತ್ರದಲ್ಲಿ ಗೆಲುವು ಸಾಧಿಸಲು ಕಾಂಗ್ರೆಸ್ ಸರಕಾರದ ಅಭಿವೃದ್ಧಿ, ಗ್ಯಾರಂಟಿ ಯೋಜನೆಗಳು ಯಶಸ್ವಿಯಾಗಿವೆ ಎಂದು ಸಚಿವ ಸತೀಶ ಜಾರಕಿಹೊಳಿ ಹೇಳಿದರು. ನಗರದಲ್ಲಿ ಸುದ್ದಿಗೋಷ್ಟಿಯಲ್ಲಿ...

3 ಕ್ಷೇತ್ರಗಳ ಉಪಸಮರದಲ್ಲಿ ಕಾಂಗ್ರೆಸ್ ಜಯಭೇರಿ

ಬೆಂಗಳೂರು: ವಿಧಾನಸಭೆ ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಗಳು ಭರ್ಜರಿ ಗೆಲುವು ಸಾಧಿಸಿದ್ದಾರೆ. ಮೂರು ಕ್ಷೇತ್ರಗಳ ಉಪಸಮರದಲ್ಲಿ ಕಾಂಗ್ರೆಸ್ ಗೆದ್ದು ಬೀಗಿದೆ. ಆ ಮೂಲಕ...

ಭಾರತದ ಡ್ರೈವಿಂಗ್ ಲೈಸೆನ್ಸ್‌ನಲ್ಲಿ ನೀವು ಈ 7 ದೇಶಗಳಲ್ಲಿ ವಾಹನ ಚಲಾಯಿಸಬಹುದು

ಯಾವುದೇ ದೇಶಕ್ಕೆ ಹೋಗಿ ನೆಲೆಸಲೆಂದೊ ಅಥವಾ ವಿದ್ಯಾಭ್ಯಾಸಕ್ಕೆಂದು ಹೋದಾಗ ಅಲ್ಲಿ ವಾಹನ ಓಡಿಸಬೇಕಾದಲ್ಲಿ ಅಂತಾರಾಷ್ಟ್ರೀಯ ಡ್ರೈವಿಂಗ್ ಲೈಸೆನ್ಸ್ ಪಡೆಯಬೇಕಾಗುತ್ತದೆ. ಅದಕ್ಕೆ ಹೊಸದಾಗಿ ಅರ್ಜಿ ಸಲ್ಲಿಸಿ...