spot_img
spot_img

‘ಎನ್​ಡಿಆರ್​ಎಫ್​ ವ್ಯಾಜ್ಯ ಶೀಘ್ರ ಇತ್ಯರ್ಥಪಡಿಸಿಕೊಳ್ಳಿ’ : ಸುಪ್ರೀಂ ಕೋರ್ಟ್‌ ತೀರ್ಪು

spot_img
spot_img

Share post:

ನವದೆಹಲಿ: ಎನ್​ಡಿಆರ್​ಎಫ್‌ನಿಂದ ನೆರವು​ ಬಿಡುಗಡೆಗೊಳಿಸುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿ ಕರ್ನಾಟಕ ಸರ್ಕಾರ ಸಲ್ಲಿಸಿರುವ ಅರ್ಜಿಯನ್ನು ಇಂದು (ಮಂಗಳವಾರ) ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಿತು.

ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿ (ಎನ್​ಡಿಆರ್​​ಎಫ್​) ಕುರಿತು ಕರ್ನಾಟಕ ಮತ್ತು ಕೇಂದ್ರ ಸರ್ಕಾರದ ನಡುವಿನ ವ್ಯಾಜ್ಯವನ್ನು ಬಗೆಹರಿಸಿಕೊಳ್ಳಲು ಸುಪ್ರೀಂ ಕೋರ್ಟ್​ ಮಂಗಳವಾರದ ವಿಚಾರಣೆಯಲ್ಲಿ ಮೌಖಿಕ ಸಲಹೆ ನೀಡಿದೆ.

ಕರ್ನಾಟಕಕ್ಕೆ ಈವರೆಗೆ ಎಷ್ಟು ಎನ್​​ಡಿಆರ್​​ಎಫ್​ ನಿಧಿ ಬಿಡುಗಡೆಯಾಗಿದೆ ಎಂದು ಪ್ರಶ್ನಿಸಿತು. ಕೇಂದ್ರದ ಪರ ಹಾಜರಿದ್ದ ಅಟಾರ್ನಿ ಜನರಲ್​​ ಆರ್​.ವೆಂಕಟರಮಣಿ, ರಾಜ್ಯ ಸರ್ಕಾರ ಕೇಳಿದ 18,171 ಕೋಟಿ ರೂಪಾಯಿಗಳಲ್ಲಿ 3,819 ಕೋಟಿ ರೂಪಾಯಿ ನೀಡಲಾಗಿದೆ. ಈ ಬಗ್ಗೆ ಅಫಿಡವಿಟ್​ ಸಲ್ಲಿಸಲು ಕಾಲಾವಕಾಶ ಬೇಕು ಎಂದು ಮನವಿ ಮಾಡಿದರು.

ಬರ ನಿರ್ವಹಣೆಗಾಗಿ ರಾಜ್ಯಕ್ಕೆ ಎನ್‌ಡಿಆರ್‌ಎಫ್‌ನಿಂದ ಹಣಕಾಸು ನೆರವು ಬಿಡುಗಡೆ ಮಾಡುವಂತೆ ಕೇಂದ್ರಕ್ಕೆ ನಿರ್ದೇಶನ ನೀಡಲು ಕೋರಿ ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ ಮತ್ತು ಕೆ.ವಿ.ವಿಶ್ವನಾಥನ್ ಅವರಿದ್ದ ಪೀಠ ವಿಚಾರಣೆ ನಡೆಸಿತು.

ಇದಕ್ಕೆ ಸ್ಪಂದಿಸಿದ ಪೀಠ, ಎನ್​ಡಿಆರ್​ಎಫ್​ ನಿಧಿ ಬಿಡುಗಡೆ ಕುರಿತ ವ್ಯಾಜ್ಯವನ್ನು ಕೇಂದ್ರ ಸರ್ಕಾರ ಶೀಘ್ರವೇ ಅಂತ್ಯಗೊಳಿಸಲು ಪ್ರಯತ್ನಿಸಬೇಕು ಎಂದು ತಿಳಿಸಿ, ಮುಂದಿನ ವಿಚಾರಣೆಯನ್ನು 2025ರ ಜನವರಿಗೆ ಮುಂದೂಡಿತು.

ರಾಜ್ಯದಲ್ಲಿ ತೀವ್ರ ಬರಗಾಲ ಕಾಡಿದೆ. ರೈತರು ನಷ್ಟಕ್ಕೀಡಾಗಿದ್ದಾರೆ. ಆರ್ಥಿಕ ಪರಿಹಾರ ನೀಡಲು ಕೇಂದ್ರ ಸರ್ಕಾರವು ರಾಜ್ಯದ ಪಾಲಿನ ಎನ್​ಡಿಆರ್​ಎಫ್​ ನಿಧಿಯನ್ನು ಬಿಡುಗಡೆ ಮಾಡಬೇಕು. ಈವರೆಗೂ 3400 ರೂಪಾಯಿ ಮಾತ್ರ ಸಿಕ್ಕಿದೆ ಎಂದು ಏಪ್ರಿಲ್​ 29 ರಂದು ನಡೆದ ವಿಚಾರಣೆಯಲ್ಲಿ ಕೋರ್ಟ್​ಗೆ ತಿಳಿಸಿತ್ತು.

2023ರ ಋತುವಿನಲ್ಲಿ ರಾಜ್ಯವು ಭೀಕರ ಬರಗಾಲ ಕಂಡಿದೆ. 236ರ ಪೈಕಿ 223 ತಾಲೂಕುಗಳನ್ನು ಬರ ಪೀಡಿತ ಎಂದು ಘೋಷಿಸಲಾಗಿದೆ. ಇದರಲ್ಲಿ 196 ತಾಲೂಕುಗಳು ತೀವ್ರ ಬರ ಪೀಡಿತವಾಗಿದ್ದರೆ, 27 ಮಧ್ಯಮ ಪೀಡಿತ ಎಂದು ಗುರುತಿಸಲಾಗಿದೆ ಎಂದು ಅರ್ಜಿಯಲ್ಲಿ ತಿಳಿಸಿದೆ. ಎನ್​ಡಿಆರ್​ಎಫ್​ ಹಣ ಬಿಡುಗಡೆಗೆ ವಿಳಂಬ ತೋರಿದ ಕೇಂದ್ರದ ವಿರುದ್ಧ ರಾಜ್ಯ ಕಾಂಗ್ರೆಸ್​ ಸರ್ಕಾರ ಸುಪ್ರೀಂ ಮೆಟ್ಟಿಲೇರಿದೆ.

ರಾಜ್ಯಕ್ಕೆ ಆರ್ಥಿಕ ನೆರವು ನಿರಾಕರಿಸುತ್ತಿರುವ ಮೂಲಕ ಕೇಂದ್ರವು ಸಂವಿಧಾನದ 14, 21ನೇ ವಿಧಿಗಳ ಅನುಸಾರ ಜನರ ಮೂಲಭೂತ ಹಕ್ಕುಗಳ ಉಲ್ಲಂಘಿಸಿದೆ. ಇದಲ್ಲದೆ, ವಿಪತ್ತು ನಿರ್ವಹಣಾ ಕಾಯಿದೆ- 2005, ಬರ ನಿರ್ವಹಣೆಯ ಕೈಪಿಡಿ, ರಾಜ್ಯ ವಿಪತ್ತು ನಿರ್ವಹಣಾ ನಿಧಿ ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿ, ಸಂವಿಧಾನ ಮತ್ತು ಆಡಳಿತದ ಮಾರ್ಗಸೂಚಿಗಳನ್ನು ಉಲ್ಲಂಘಿಸಿದಂತಾಗಿದೆ ಎಂದು ಆಪಾದಿಸಿದೆ.

Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

MOTOROLA EDGE 60 FUSION – ಅದ್ಭುತವಾದ ಕ್ಯಾಮೆರಾ ಸೆಟಪ್, ವಾಟರ್ ಪ್ರೊಟೆಕ್ಷನ್ – ಮೊಟೊರೊಲಾದ ಹೊಸ ಫೋನ್ನ ಬೆಲೆ ಕೇವಲ ಇಷ್ಟೇ!

Motorola Edge 60 Fusion: ಬಹುನಿರೀಕ್ಷಿತ ' MOTOROLA EDGE 60 FUSION' ಕೊನೆಗೂ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಕಂಪನಿಯು ಇದನ್ನು ' MOTOROLA EDGE...

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...