spot_img
spot_img

‘ಪಂಚಮಸಾಲಿಗರಿಗೆ 2ಎ ಮೀಸಲಾತಿ ನೀಡಬಾರದು’: ಸಿಎಂಗೆ ಹಿಂದುಳಿದ ಜಾತಿಗಳ ಒಕ್ಕೂಟದ ಮನವಿ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ಬೆಂಗಳೂರು: ಪಂಚಮಸಾಲಿ ಸಮುದಾಯವನ್ನು ಪ್ರವರ್ಗ 2ಎಗೆ ಸೇರಿಸಬಾರದು ಎಂದು ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟ ಇಂದು ಸಿಎಂ ಸಿದ್ದರಾಮಯ್ಯಗೆ ಮನವಿ ಸಲ್ಲಿಸಿತು.

ಪಂಚಮಸಾಲಿ ಸಮುದಾಯವನ್ನು ಹಿಂದುಳಿದ ಪ್ರವರ್ಗ-2ಎಗೆ ಸೇರಿಸಬಾರದು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟ ಸಿಎಂ ಸಿದ್ದರಾಮಯ್ಯಗೆ ಮನವಿ ಪತ್ರ ಸಲ್ಲಿಸಿದೆ. ಕಾವೇರಿ ನಿವಾಸದಲ್ಲಿ ಇಂದು ಸಿಎಂ ಅವರನ್ನು ಭೇಟಿಯಾದ ಒಕ್ಕೂಟದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು, ಪಂಚಮಸಾಲಿ ಸಮುದಾಯದ ಬೇಡಿಕೆಯನ್ನು ಯಾವುದೇ ಕಾರಣಕ್ಕೂ ಪರಿಗಣಿಸಬಾರದು. ಇಲ್ಲದಿದ್ದಲ್ಲಿ ರಾಜ್ಯಾದ್ಯಂತ ಹೋರಾಟ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿತು.

ಪಂಚಮಸಾಲಿ ಲಿಂಗಾಯತ ಸಮುದಾಯವನ್ನು ಪ್ರವರ್ಗ-2ಎ ಮೀಸಲಾತಿಯಲ್ಲಿ ಸೇರಿಸಿದಲ್ಲಿ ಹಾಲಿ ಇರುವ ಪ್ರವರ್ಗ-2ಎ ಯಲ್ಲಿ ಬರುವ ತೀರಾ ಹಿಂದುಳಿದ ಜಾತಿಗಳಾದ ಅಗಸ, ಸವಿತಾ ಸಮಾಜ, ತಿಗಳ, ಈಡಿಗ, ಕುರುಬ, ದೇವಾಂಗ ಸೇರಿದಂತೆ ಇತರೆ ಹಿಂದುಳಿದ ಜಾತಿಗಳಿಗೆ ಮೀಸಲಾತಿ ಸಿಗುವುದಿಲ್ಲ.

ಪಂಚಮಸಾಲಿ ಸಮುದಾಯವೇ ಎಲ್ಲಾ ಉದ್ಯೋಗ, ಶಿಕ್ಷಣ ಹಾಗೂ ರಾಜಕೀಯ ಮೀಸಲಾತಿಯನ್ನು ಪಡೆದುಕೊಳ್ಳುತ್ತದೆ. ಇದರಿಂದ ಪ್ರವರ್ಗ 2ಎರಲ್ಲಿ ಇರುವ ಜಾತಿಗಳಿಗೆ ಮೀಸಲಾತಿಯೇ ಸಿಗುವುದಿಲ್ಲ ಎಂದು ಒಕ್ಕೂಟ ಆತಂಕ ವ್ಯಕ್ತಪಡಿಸಿದೆ.

 

ಪಂಚಮಸಾಲಿ ಲಿಂಗಾಯತ ಸಮುದಾಯ ಶೈಕ್ಷಣಿಕ, ಸಾಮಾಜಿಕ, ಆರ್ಥಿಕ ಹಾಗೂ ರಾಜಕೀಯವಾಗಿ ಮುಂದುವರೆದಿದೆ. ಡಾ.ನಾಗನಗೌಡ ಸಮಿತಿ, ಎಲ್.ಜಿ.ಹಾವನೂರು ಆಯೋಗದ ವರದಿ, ವೆಂಕಟಸ್ವಾಮಿ ಹಿಂದುಳಿದ ವರ್ಗಗಳ 2ನೇ ಆಯೋಗದ ವರದಿ, ನ್ಯಾಯಮೂರ್ತಿ ಒ.ಚಿನ್ನಪ್ಪರೆಡ್ಡಿ ವರದಿ ಸೇರಿದಂತೆ ಎಲ್ಲಾ ವರದಿಗಳಲ್ಲೂ ಪಂಚಮಸಾಲಿ ಸಮುದಾಯವು ಮುಂದುವರೆದ ಸಮಾಜವೆಂದು ವರದಿ ಮಾಡಿವೆ.

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

ಬಿಗ್​ಬಾಸ್​ ಕೊಟ್ಟ ಟಾಸ್ಕ್​ ಆಡಲು ಸ್ಪರ್ಧಿಗಳ ಹರಸಾಹಸ

ಕನ್ನಡದ ಬಿಗ್​ಬಾಸ್​ ಸೀಸನ್​ 11ರಲ್ಲಿ ವೈಲ್ಡ್​ ಕಾರ್ಡ್​ ಸ್ಪರ್ಧಿಗಳು ಸಖತ್​ ಸದ್ದು ಮಾಡುತ್ತಿದ್ದಾರೆ. ತಮ್ಮ ಹಳ್ಳಿ ಸೊಗಡಿನ ರೀತಿಯಲ್ಲೇ ಹಾಡು ಹಾಡಿ ವೀಕ್ಷಕರಿಗೆ ಮನರಂಜನೆ...

ರಾಜ್ಯದ 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಬೆಂಗಳೂರು: ಕನ್ಯಾಕುಮಾರಿ ಮತ್ತು ಶ್ರೀಲಂಕಾ ಪ್ರದೇಶದಲ್ಲಿ ವಾಯುಭಾರ ಕುಸಿತವಾಗಿದ್ದು, ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮನ್ನಾರ್ ಗಲ್ಫ್...

ಹಿಂದುಳಿದ ವರ್ಗಗಳ ಮೀಸಲಾತಿಗೆ ಆಗ್ರಹ : ಪಂಚಮಸಾಲಿಗರ ಹೋರಾಟ ತೀವ್ರ!

ಬೆಂಗಳೂರು: ಪ್ರತಿಭಟನಾಕಾರರ ಮೇಲೆ ಪೊಲೀಸರ ಲಾಠಿ ಚಾರ್ಜ್ ವಿರೋಧಿಸಿ ಸುವರ್ಣಸೌಧದ ಬಳಿ ಇರುವ ಅಂಬೇಡ್ಕರ್ ಪ್ರತಿಮೆ ಎದುರು ವಿಪಕ್ಷ ನಾಯಕ ಆರ್, ಅಶೋಕ್ ನೇತೃತ್ವದಲ್ಲಿ...

ಆಸ್ತಿ ತೆರಿಗೆ ಕಟ್ಟಲು ನಿರಾಕರಣೆ : ರಸ್ತೆ ಸರಿಪಡಿಸಿದ ಪಂಚಾಯಿತಿ ಸದಸ್ಯರು

ಬೆಂಗಳೂರು: ಆಸ್ತಿ ತೆರಿಗೆ ಕಟ್ಟುವುದಿಲ್ಲ ಎಂಬ ನಾಗರಿಕರಿಂದ ಬೆದರಿಕೆ ಬಂದ ಹಿನ್ನೆಲೆಯಲ್ಲಿ ಹಾಲನಾಯಕನಹಳ್ಳಿ ಪಂಚಾಯಿತಿಯ 15 ಸದಸ್ಯರು ತಮ್ಮ ಜೇಬಿನಿಂದ ಸುಮಾರು 5 ಲಕ್ಷ...