spot_img
spot_img

ರಸ್ತೆ ತೆರವಿಗೆ ಕೋರಿದ್ದ ಅರ್ಜಿ ವಜಾ : ಸುಪ್ರೀಂಕೋರ್ಟ್ ಆದೇಶ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ನವದೆಹಲಿ: ಈ ವಿಷಯ ಈಗಾಗಲೇ ನ್ಯಾಯಾಲಯದ ಮುಂದೆ ವಿಚಾರಣೆಗೆ ಬಾಕಿಯಿದ್ದು, ಈ ಕುರಿತ ಪುನರಾವರ್ತಿತ ಅರ್ಜಿಗಳನ್ನು ಪರಿಗಣಿಸಲು ಸಾಧ್ಯವಿಲ್ಲ. ಪಂಜಾಬ್‌ನಲ್ಲಿ ರೈತರು ಪ್ರತಿಭಟನೆ ನಡೆಸುತ್ತಿರುವ ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಗಳಲ್ಲಿನ ದಿಗ್ಬಂಧನಗಳನ್ನು ತಕ್ಷಣವೇ ತೆರವುಗೊಳಿಸಲು ಕೇಂದ್ರ ಮತ್ತು ಇತರ ಅಧಿಕಾರಿಗಳಿಗೆ ನಿರ್ದೇಶನಗಳನ್ನು ಕೋರಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ವಜಾಗೊಳಿಸಿದೆ.

ಈ ವಿಷಯ ಈಗಾಗಲೇ ನ್ಯಾಯಾಲಯದ ಮುಂದೆ ವಿಚಾರಣೆಗೆ ಬಾಕಿಯಿದ್ದು, ಈ ಕುರಿತ ಪುನರಾವರ್ತಿತ ಅರ್ಜಿಗಳನ್ನು ಪರಿಗಣಿಸಲು ಸಾಧ್ಯವಿಲ್ಲ ಎಂದು ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಮನಮೋಹನ್ ಅವರನ್ನೊಳಗೊಂಡ ನ್ಯಾಯಪೀಠ ಹೇಳಿತು.

ಸಂಯುಕ್ತ ಕಿಸಾನ್ ಮೋರ್ಚಾ ಮತ್ತು ಕಿಸಾನ್ ಮಜ್ದೂರ್ ಮೋರ್ಚಾದ ರೈತರು ಮತ್ತೆ ಪ್ರತಿಭಟನೆ ಆರಂಭಿಸಿದ್ದು, ಪಂಜಾಬ್ ಮತ್ತು ಹರಿಯಾಣ ನಡುವಿನ ಶಂಭು ಮತ್ತು ಖಾನೌರಿ ಗಡಿ ಬಿಂದುಗಳಲ್ಲಿ ಮೊಕ್ಕಾಂ ಹೂಡಿದ್ದಾರೆ.

ರೈತರ ಪ್ರತಿಭಟನೆಯಿಂದ ಪಂಜಾಬ್‌ನ ಸಂಪೂರ್ಣ ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಗಳು ಅನಿರ್ದಿಷ್ಟ ಅವಧಿಯವರೆಗೆ ನಿರ್ಬಂಧಿಸಿವೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿಗಳು ಮತ್ತು ರೈಲ್ವೆ ಹಳಿಗಳನ್ನು ಹೋರಾಟ ಮಾಡುವ ರೈತರಿಂದ ನಿರ್ಬಂಧಿಸದಂತೆ ನಿರ್ದೇಶನ ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲಾಗಿತ್ತು.

ಈ ಸಮಸ್ಯೆಯನ್ನು ಪರಿಶೀಲಿಸುತ್ತಿದ್ದೇವೆ. ನೀವು ಮಾತ್ರ ಸಮಾಜದ ಆತ್ಮಸಾಕ್ಷಿಯ ಪಾಲಕರು ಅಲ್ಲ. ಪುನರಾವರ್ತಿತ ಅರ್ಜಿಗಳನ್ನು ಸಲ್ಲಿಸಬೇಡಿ. ಕೆಲವರು ಪ್ರಚಾರದ ಹಿತಾಸಕ್ತಿಗಾಗಿ ಅರ್ಜಿ ಸಲ್ಲಿಸುತ್ತಿದ್ದರೆ ಮತ್ತೆ ಕೆಲವರು ಸುಖಾಸುಮ್ಮನೆ ನ್ಯಾಯಾಲಯೊಂದಿಗೆ ಆಟಕ್ಕಾಗಿ ಇಂತಹ ಅರ್ಜಿ ಸಲ್ಲಿಸುತ್ತಿದ್ದಾರೆ. ಈ ಕುರಿತ ಪುನರಾವರ್ತಿತ ಅರ್ಜಿಗಳನ್ನು ಪರಿಗಣಿಸಲು ಸಾಧ್ಯವಿಲ್ಲ ಎಂದು ಪಂಜಾಬಿನ ಸಾಮಾಜಿಕ ಕಾರ್ಯಕರ್ತ ಎಂದು ಹೇಳಿಕೊಂಡ ಅರ್ಜಿದಾರ ಗೌರವ್ ಲೂತ್ರಾ ಅವರಿಗೆ ತಿಳಿಸಿದೆ.

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

ಪುನರ್‌ ಸಮೀಕರಣ : 2ಎ ಕಥೆ ಮುಗಿದು ಹೋಗಿದೆ

ಮೈಸೂರು: ಪಂಚಮಸಾಲಿ 2ಎ ಮೀಸಲಾತಿ ಹೋರಾಟಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ವಿಧಾನ ಪರಿಷತ್‌ ಸದಸ್ಯ ಹೆಚ್.‌ವಿಶ್ವನಾಥ್‌, 2ಎ ಕಥೆ ಈಗಾಗಲೇ ಮುಗಿದು ಹೋಗಿದೆ. ಅವುಗಳನ್ನು ಪುನರ್‌...

‘ಅನುಸೂಯ ಜಯಂತಿ’ಗೆ ಚಾಲನೆ

ಚಿಕ್ಕಮಗಳೂರು: ವಿಶ್ವ ಹಿಂದೂ ಪರಿಷತ್​, ಬಜರಂಗದಳದ ಮುಖಂಡರು ಮೆರವಣಿಗೆಯಲ್ಲಿ ಭಾಗವಹಿಸಿದ್ದು, ಬಿಗಿ ಪೊಲೀಸ್​ ಬಂದೋಬಸ್ತ್​ ಮಾಡಲಾಗಿತ್ತು. ಮೂರು ದಿನಗಳ ಕಾಲ ನಡೆಯುವ ದತ್ತ ಜಯಂತಿಗೆ ಇಂದು...

ಮಂಗಳೂರು-ಸಿಂಗಾಪುರ್ ನೇರ ವಿಮಾನ ಸೇವೆ

ಮಂಗಳೂರು: ಜನವರಿ 21ರಿಂದ ಆರಂಭವಾಗಲಿರುವ ಮಂಗಳೂರು ಹಾಗೂ ಸಿಂಗಾಪುರ್​ ನಡುವಿನ ನೇರ ವಿಮಾನ ಸೇವೆ ವಾರದಲ್ಲಿ ಎರಡು ದಿನ ಲಭ್ಯವಿರಲಿದೆ. ಏರ್ ಇಂಡಿಯಾ ಎಕ್ಸ್‌ಪ್ರೆಸ್ ಜನವರಿ...

ಪ್ರಧಾನಿ, ರಕ್ಷಣಾ ಸಚಿವರ ಭೇಟಿ : ಸಿಎಂ ಫಡ್ನವಿಸ್​

ನವದೆಹಲಿ: ಸಿಎಂ ಆದ ಬಳಿಕ ಮೊದಲ ಬಾರಿಗೆ ಪ್ರಧಾನಿ ಮೋದಿ ಅವರನ್ನು ನವದೆಹಲಿಯಲ್ಲಿ ಭೇಟಿಯಾದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವಿಸ್​, ಶಿವಾಜಿ ಪ್ರತಿಮೆಯನ್ನು ಉಡುಗೊರೆಯಾಗಿ...