spot_img
spot_img

‘ಒಂದು ರಾಷ್ಟ್ರ, ಒಂದು ಚುನಾವಣೆ’ಗೆ ಕೇಂದ್ರ ಸಂಪುಟ ಗ್ರೀನ್​​ಸಿಗ್ನಲ್

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಇಂದು ಕೇಂದ್ರ ಸಚಿವ ಸಂಪುಟ ಸಭೆ ನಡೆಯಿತು. ಮಹತ್ವದ ಈ ಸಭೆಯಲ್ಲಿ ‘ಒಂದು ರಾಷ್ಟ್ರ, ಒಂದು ಚುನಾವಣೆ’ಗೆ ಮಂತ್ರಿಮಂಡಲ ಅನುಮೋದನೆ ನೀಡಿದೆ ಎಂದು ವರದಿಯಾಗಿದೆ. ಅಂತೆಯೇ ಸಂಸತ್​​ನಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ‘One Nation, One Election’ ಬಿಲ್ ಮಂಡಿಸಿ ಅಂಗೀಕಾರ ಪಡೆಯುವ ಲೆಕ್ಕಾಚಾರದಲ್ಲಿ ಕೇಂದ್ರ ಸರ್ಕಾರ ಇದೆ.

ಸಂಸತ್​​ನಲ್ಲಿ ಮಂಡನೆ ಮಾಡಲು ಹೊರಟಿರುವ ಕೇಂದ್ರ ಸರ್ಕಾರಕ್ಕೆ ಒಂದಷ್ಟು ಸವಾಲುಗಳು ಎದುರಾಗಲಿವೆ. ಕೋವಿಂದ್ ಸಮಿತಿ ನೀಡಿರುವ ಶಿಫಾರಸು ಕಾರ್ಯಗತಗೊಳಿಸುವುದು ಅಷ್ಟು ಸುಲಭವಿಲ್ಲ. ಇದಕ್ಕಾಗಿ ಸಂವಿಧಾನಕ್ಕೆ ತಿದ್ದುಪಡಿ ತರಬೇಕು. ಅಲ್ಲದೇ ರಾಜಕೀಯ ಒಮ್ಮತವೂ ಅಗತ್ಯವಾಗಿದೆ.

ಲೋಕಸಭೆಗೆ ಹಾಗೂ ಎಲ್ಲಾ ರಾಜ್ಯ ವಿಧಾನಸಭೆಗಳಿಗೆ ಏಕಕಾಲದಲ್ಲಿ ಚುನಾವಣೆಗಳನ್ನು ನಡೆಸುವುದೇ ‘ಒಂದು ರಾಷ್ಟ್ರ, ಒಂದು ಚುನಾವಣೆ’ಯ ಪ್ರಮುಖ ಉದ್ದೇಶ. ಈ ಹಿಂದೆ ಇದರ ಸಾಧಕ-ಬಾಧಕಗಳ ತಿಳಿದುಕೊಳ್ಳಲು ಕೇಂದ್ರ ಸರ್ಕಾರ ಸಮಿತಿ ರಚಿಸಿತ್ತು.

ಮಾಜಿ ರಾಷ್ಟ್ರಪತಿ ರಾಮನಾಥ ಕೋವಿಂದ್‌ ನೇತೃತ್ವದಲ್ಲಿ ಸಮಿತಿ ರಚನೆಯಾಗಿ, ಅದರ ವರದಿ ಸರ್ಕಾರದ ಕೈ ಸೇರಿದೆ. ಕೋವಿಂದ್ ಸಮಿತಿಯು ಒಂದು ದೇಶ, ಒಂದು ಚುನಾವಣೆಗೆ ಒಂದಷ್ಟು ಶಿಫಾರಸು ಮಾಡಿದೆ.

ಲೋಕಸಭೆ ಹಾಗೂ ವಿಧಾನಸಭೆಗೆ ಏಕಕಾಲದಲ್ಲಿ ಚುನಾವಣೆ ನಡೆಸಲು ಹಲವು ಸವಾಲುಗಳು ಇವೆ. ಇದು ಪ್ರಜಾಪ್ರಭುತ್ವವನ್ನೇ ದುರ್ಬಲಗೊಳಿಸಬಹುದು ಅನ್ನೋದು ಹಲವರ ಅಭಿಪ್ರಾಯ. ಭಾರತಂಥ ಬೃಹತ್ ಜನಸಂಖ್ಯೆಯುಳ್ಳ ದೇಶಕ್ಕೆ ಇದು ಕಾರ್ಯಸಾಧುವಲ್ಲ ಎಂದು ವಿಪಕ್ಷಗಳು ಹೇಳಿವೆ.

ರಾಜಕೀಯ ಕಾರಣಗಳಿಂದ ವಿಧಾನಸಭೆಯನ್ನು ವಿಸರ್ಜಿಸಿದರೂ ಮುಂದಿನ ಅವಧಿಯವರೆಗೆ ಚುನಾವಣೆಗೆ ಕಾಯಬೇಕಾದ ಪ್ರಸಂಗ ಬರಲಿದೆ. ಇದರಿಂದ ಒಕ್ಕೂಟದ ವ್ಯವಸ್ಥೆಗೆ ಪೆಟ್ಟು ಬೀಳಲಿದೆ ಅನ್ನೋದು ವಿಪಕ್ಷಗಳ ವಾದವಾಗಿದೆ.

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

ಬಿಗ್​ಬಾಸ್​ ಕೊಟ್ಟ ಟಾಸ್ಕ್​ ಆಡಲು ಸ್ಪರ್ಧಿಗಳ ಹರಸಾಹಸ

ಕನ್ನಡದ ಬಿಗ್​ಬಾಸ್​ ಸೀಸನ್​ 11ರಲ್ಲಿ ವೈಲ್ಡ್​ ಕಾರ್ಡ್​ ಸ್ಪರ್ಧಿಗಳು ಸಖತ್​ ಸದ್ದು ಮಾಡುತ್ತಿದ್ದಾರೆ. ತಮ್ಮ ಹಳ್ಳಿ ಸೊಗಡಿನ ರೀತಿಯಲ್ಲೇ ಹಾಡು ಹಾಡಿ ವೀಕ್ಷಕರಿಗೆ ಮನರಂಜನೆ...

ರಾಜ್ಯದ 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಬೆಂಗಳೂರು: ಕನ್ಯಾಕುಮಾರಿ ಮತ್ತು ಶ್ರೀಲಂಕಾ ಪ್ರದೇಶದಲ್ಲಿ ವಾಯುಭಾರ ಕುಸಿತವಾಗಿದ್ದು, ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮನ್ನಾರ್ ಗಲ್ಫ್...

ಹಿಂದುಳಿದ ವರ್ಗಗಳ ಮೀಸಲಾತಿಗೆ ಆಗ್ರಹ : ಪಂಚಮಸಾಲಿಗರ ಹೋರಾಟ ತೀವ್ರ!

ಬೆಂಗಳೂರು: ಪ್ರತಿಭಟನಾಕಾರರ ಮೇಲೆ ಪೊಲೀಸರ ಲಾಠಿ ಚಾರ್ಜ್ ವಿರೋಧಿಸಿ ಸುವರ್ಣಸೌಧದ ಬಳಿ ಇರುವ ಅಂಬೇಡ್ಕರ್ ಪ್ರತಿಮೆ ಎದುರು ವಿಪಕ್ಷ ನಾಯಕ ಆರ್, ಅಶೋಕ್ ನೇತೃತ್ವದಲ್ಲಿ...

ಆಸ್ತಿ ತೆರಿಗೆ ಕಟ್ಟಲು ನಿರಾಕರಣೆ : ರಸ್ತೆ ಸರಿಪಡಿಸಿದ ಪಂಚಾಯಿತಿ ಸದಸ್ಯರು

ಬೆಂಗಳೂರು: ಆಸ್ತಿ ತೆರಿಗೆ ಕಟ್ಟುವುದಿಲ್ಲ ಎಂಬ ನಾಗರಿಕರಿಂದ ಬೆದರಿಕೆ ಬಂದ ಹಿನ್ನೆಲೆಯಲ್ಲಿ ಹಾಲನಾಯಕನಹಳ್ಳಿ ಪಂಚಾಯಿತಿಯ 15 ಸದಸ್ಯರು ತಮ್ಮ ಜೇಬಿನಿಂದ ಸುಮಾರು 5 ಲಕ್ಷ...