spot_img
spot_img

ಸರ್ಜಾಪುರದಲ್ಲಿ ಸ್ವಿಫ್ಟ್ ಸಿಟಿ : ಸರ್ಕಾರ ಸ್ಥಾಪಿತ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ಬೆಂಗಳೂರು: ಸ್ವಿಫ್ಟ್ ಸಿಟಿ ನಿರ್ಮಾಣಕ್ಕಾಗಿ ಸರ್ಜಾಪುರ ಕೈಗಾರಿಕಾ ಪ್ರದೇಶದಲ್ಲಿ 1,000 ಎಕರೆಗೂ ಹೆಚ್ಚು ಜಮೀನನ್ನು ಮೀಸಲಿಡಲಾಗುವುದು ಎಂದು ಎಂ.ಬಿ.ಪಾಟೀಲ್ ತಿಳಿಸಿದ್ದಾರೆ.

ರಾಜ್ಯದ ಕೈಗಾರಿಕಾ ಬೆಳವಣಿಗೆಗೆ ವ್ಯಾಪಕತೆ ಮತ್ತು ಸಮಗ್ರತೆ ತಂದುಕೊಡುವ ದೃಷ್ಟಿಯಿಂದ ಬೆಂಗಳೂರಿನ ಸರ್ಜಾಪುರದಲ್ಲಿ ‘ಸ್ವಿಫ್ಟ್ ಸಿಟಿ’ (SWIFT- ಪ್ರಾರಂಭ, ಕೆಲಸದ ಸ್ಥಳಗಳು, ಗುಪ್ತಚರ, ಹಣಕಾಸು ಮತ್ತು ತಂತ್ರಜ್ಞಾನ) ಎನ್ನುವ ವಿನೂತನ ಉಪಕ್ರಮದ ಅಭಿವೃದ್ಧಿಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ್ ಮುಂದಾಗಿದ್ದಾರೆ.

ಇದು ಎಲೆಕ್ಟ್ರಾನಿಕ್ ಸಿಟಿ, ಐಟಿಪಿಎಲ್ ನಂತರ ಸರ್ಕಾರವೇ ಸ್ಥಾಪಿಸುತ್ತಿರುವ ಯೋಜಿತ ನಗರವಾಗಲಿದೆ. ಹೆಸರೇ ಹೇಳುವಂತೆ ಇದು ನವೋದ್ಯಮಗಳು, ಕೆಲಸದ ಸ್ಥಳಗಳು, ಹಣಕಾಸು ಮತ್ತು ತಂತ್ರಜ್ಞಾನ ಈ ಐದೂ ಔದ್ಯಮಿಕ ಧಾರೆಗಳನ್ನು ಮುಖ್ಯವಾಗಿ ಪರಿಗಣಿಸಿದೆ.

ಇದನ್ನು ಮೂಲಭೂತವಾಗಿ ನಾವೀನ್ಯತೆ ಮತ್ತು ಬೆಳವಣಿಗೆಗಳ ಆಡುಂಬೊಲವನ್ನಾಗಿ ಬೆಳೆಸಬೇಕು ಎನ್ನುವುದು ಸಚಿವರ ದೂರದೃಷ್ಟಿಯಾಗಿದೆ. ಇದನ್ನು ಸಾಧಿಸಲು ಸರ್ಜಾಪುರ ಕೈಗಾರಿಕಾ ಪ್ರದೇಶದಲ್ಲಿ 1,000 ಎಕರೆಗೂ ಹೆಚ್ಚು ಜಮೀನನ್ನು ಮೀಸಲಿಡಲಾಗುವುದು ಎಂದು ಎಂ. ಬಿ. ಪಾಟೀಲ್​ ತಮ್ಮ ಮಹತ್ವಾಕಾಂಕ್ಷೆಯನ್ನು ಹಂಚಿಕೊಂಡಿದ್ದಾರೆ.

“ಬೆಂಗಳೂರಿನಲ್ಲಿ ಇಂದು ಸಾವಿರಾರು ಕಂಪನಿಗಳಿವೆ. ಆದರೆ ಇವುಗಳಿಗೆ ಯೋಜಿತ ಮತ್ತು ವ್ಯವಸ್ಥಿತ ತಾಣಗಳಿಲ್ಲ. ಆದ್ದರಿಂದ ಸರ್ಜಾಪುರದಲ್ಲಿ ಇಂತಹ ಹೆಜ್ಜೆ ಇಡಲಾಗುತ್ತದೆ. ಇಲ್ಲಿ 150 ಮೀಟರ್​ ಅಗಲದ ಸಂಪರ್ಕ ರಸ್ತೆ ಮಾಡಿ, ಅಲ್ಲಿ ವಿಶ್ವ ದರ್ಜೆಯ ಸೌಲಭ್ಯಗಳು, ವಸತಿ ವ್ಯವಸ್ಥೆ, ಶಾಲೆಗಳು ಇರುವಂತೆ ಅಭಿವೃದ್ಧಿ ಪಡಿಸಲಾಗುವುದು. ನೆರೆ ರಾಜ್ಯಗಳಿಂದ ನಮಗೆ ತೀವ್ರ ಸ್ಪರ್ಧೆ ಇದೆ.

ಹೀಗಾಗಿ ಇಂತಹ ಉಪಕ್ರಮ ಅನಿವಾರ್ಯ” ಎನ್ನುವುದು ಅವರ ಮುಂದಾಲೋಚನೆ ಆಗಿದೆ. ಈ ಬಗ್ಗೆ ತಮ್ಮ ಚಿಂತನೆಗಳನ್ನು ಹಂಚಿಕೊಂಡಿರುವ ಸಚಿವ ಎಂ.ಬಿ. ಪಾಟೀಲ್, “ಸರ್ಜಾಪುರ ಪ್ರದೇಶವು ರಾಜಧಾನಿಯಲ್ಲಿರುವ ಐಟಿ ತಾಣಗಳಿಗೆ ಹತ್ತಿರದಲ್ಲಿದ್ದು, ರಾಷ್ಟ್ರೀಯ ಹೆದ್ದಾರಿ 44 ಮತ್ತು 48ಕ್ಕೆ ಹತ್ತಿರಲ್ಲಿದೆ. ಸಂಪರ್ಕ ಸೌಲಭ್ಯದ ದೃಷ್ಟಿಯಿಂದ ಇದು ವರದಾನವಾಗಿದೆ.

ಈ ಭಾಗದಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ಬೆಳವಣಿಗೆಗೆ ಇಂಬು ನೀಡಲು ಸೂಕ್ತ ಸ್ಥಳವಾಗಿದೆ. ಇದನ್ನೆಲ್ಲ ಪರಿಗಣಿಸಿ, ಇದನ್ನು ಸ್ವಿಫ್ಟ್ ಸಿಟಿಯನ್ನಾಗಿ ಅಭಿವೃದ್ಧಿ ಪಡಿಸಲಾಗುವುದು. ಇದು ಸ್ಟಾರ್ಟಪ್ ಹಬ್ ಆಗಲಿದ್ದು, ಇಲ್ಲಿ 8-10 ಅತ್ಯಾಧುನಿಕ ಪ್ಲಗ್ ಆ್ಯಂಡ್ ಪ್ಲೇ ಸೌಲಭ್ಯಗಳು ಇರಲಿವೆ. ಇಂತಹ ಒಂದೊಂದು ಸ್ಥಾವರಕ್ಕೂ 20-25 ಎಕರೆ ಕೊಡಲಾಗುವುದು” ಎಂದು ಹೇಳಿದ್ದಾರೆ.

“ಈ ಪ್ಲಗ್ ಆ್ಯಂಡ್ ಪ್ಲೇ ಪ್ರದೇಶದಲ್ಲಿ ಸುಸಜ್ಜಿತ ಕಚೇರಿಗಳು, ವಸತಿ ಪ್ರದೇಶಗಳು, ಕೋ-ವರ್ಕಿಂಗ್ ತಾಣಗಳು ಎಲ್ಲವೂ ಇರಲಿವೆ. ಈ ಮೂಲಕ ಉದ್ಯಮಗಳ ಒಂದು ವ್ಯವಸ್ಥಿತ ಜಾಲ ಏರ್ಪಡಲಿದ್ದು, ಅವು ಪರಸ್ಪರ ಸಹಭಾಗಿತ್ವ ಏರ್ಪಡಿಸಿಕೊಳ್ಳುವುದು ಸುಗಮವಾಗಲಿದೆ.

ಮುಖ್ಯವಾಗಿ, ಇಡೀ ರಾಜ್ಯವನ್ನೇ ಹಂತಹಂತವಾಗಿ ‘ಸಿಲಿಕಾನ್ ರಾಜ್ಯ’ವನ್ನಾಗಿ ಮಾಡಲಾಗುವುದು. ಸಿಲಿಕಾನ್ ಸಿಟಿ ಅಂದ್ರೆ ಬೆಂಗಳೂರು. ಈಗ ಅದನ್ನು ಇಡೀ ರಾಜ್ಯಕ್ಕೆ ವಿಸ್ತರಿಸುವುದು ನಮ್ಮ ಉದ್ದೇಶ. ವಿಜಯಪುರ, ಹುಬ್ಬಳ್ಳಿ-ಧಾರವಾಡ ಸೇರಿದಂತೆ ಐದು ನಗರಗಳಲ್ಲಿ ಮಿನಿ ಕ್ವಿನ್ ಸಿಟಿ ಅಭಿವೃದ್ಧಿಪಡಿಸುವುದರ ಮೂಲಕ ಇದನ್ನು ಸಾಕಾರಗೊಳಿಸುವ ಉದ್ದೇಶ ಇದೆ.

ಇದಕ್ಕೆ ಐಟಿ ಇಲಾಖೆಯ ಸಹಕಾರವನ್ನೂ ಪಡೆಯಲಾಗುವುದು. ಫೆಬ್ರವರಿಯಲ್ಲಿ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಈ ಸಂಬಂಧ ಹೆಚ್ಚಿನ ಮಾಹಿತಿ ನೀಡಲಾಗುವುದು” ಎಂದು ಸಚಿವರು ತಿಳಿಸಿದ್ದಾರೆ.

“ಇದು ತೀವ್ರ ಸ್ಪರ್ಧೆಯಿಂದ ಕೂಡಿರುವ ಕಾಲಘಟ್ಟ. ಕೈಗಾರಿಕೋದ್ಯಮದ ದೃಷ್ಟಿಯಿಂದ ಇಡೀ ಕರ್ನಾಟಕವು ಸೂಜಿಗಲ್ಲಿನಂತೆ ಹೂಡಿಕೆದಾರರನ್ನು ಸೆಳೆಯುವಂತಿರಬೇಕು. ಇದಕ್ಕಾಗಿ ಸ್ವಿಫ್ಟ್ ಸಿಟಿ ತರಹದ ವಿನೂತನ ಪರಿಕಲ್ಪನೆಗಳು ಅತ್ಯಗತ್ಯ. ಇಲ್ಲದೆ ಹೋದರೆ, ನೆರೆಹೊರೆಯ ರಾಜ್ಯಗಳು ಇಂಥ ಅವಕಾಶಗಳನ್ನು ಬಾಚಿಕೊಂಡು ಬಿಡುತ್ತವೆ.

ಎಲ್ಲರಿಗಿಂತ ಮೊದಲೇ ನಾವು ದಾಪುಗಾಲಿಟ್ಟುಕೊಂಡು ಮುನ್ನುಗ್ಗಬೇಕು ಎನ್ನುವುದು ರಾಜ್ಯ ಸರ್ಕಾರದ ಸಂಕಲ್ಪ. ಇದರಿಂದ ಬಂಡವಾಳ ಹೂಡಿಕೆ, ಉದ್ಯೋಗ ಸೃಷ್ಟಿ ಮತ್ತು ಆರ್ಥಿಕ ಬೆಳವಣಿಗೆ ಈ ಮೂರನ್ನೂ ಒಟ್ಟಿಗೇ ಸಾಧಿಸಬಹುದು” ಎಂದು ಸಚಿವರು ವಿವರಿಸಿದ್ದಾರೆ.

“ಇದಲ್ಲದೆ, ಸ್ವಿಫ್ಟ್ ಸಿಟಿಯಲ್ಲಿ ನೆಲೆಯೂರಲಿರುವ ಸಣ್ಣ ಮತ್ತು ಮಧ್ಯಮ ಸ್ತರದ ಸ್ಟಾರ್ಟಪ್ ಉದ್ಯಮಗಳಿಗೆ ಕನಿಷ್ಠ 5,000 ಚದರ್ ಅಡಿಗಳಿಂದ ಹಿಡಿದು ಗರಿಷ್ಠ 20,000 ಚದರ್​ ಅಡಿಗಳಷ್ಟು ಜಾಗವನ್ನು ಭೋಗ್ಯ, ಕ್ರಯ ಅಥವಾ ಬಂಡವಾಳ ಆಧಾರಿತ ಹಂಚಿಕೆ ಮಾದರಿಯಲ್ಲಿ ಒದಗಿಸಲಾಗುವುದು.

ಈ ಮೂಲಕ, ಪ್ರವರ್ಧಮಾನಕ್ಕೆ ಬರುತ್ತಿರುವ ಹೊಸ ಬಗೆಯ ಉದ್ಯಮಗಳ ಅಗತ್ಯಗಳನ್ನು ಪೂರೈಸುವುದು ಸಾಧ್ಯವಾಗಬೇಕೆನ್ನುವುದು ನಮ್ಮ ಚಿಂತನೆಯಾಗಿದೆ. ಮುಖ್ಯವಾಗಿ ಇದು ಆರ್ಟಿಫಿಶಿಯಲ್ ಇಂಟೆಲಿಜೆನ್ಸ್, ಡೇಟಾ ಅನಲಿಟಿಕ್ಸ್ ಮತ್ತು ಫಿನ್-ಟೆಕ್ ನಾವೀನ್ಯತಾ ಕೇಂದ್ರವಾಗಿಯೂ ಮುಂಚೂಣಿಗೆ ಬರಲಿದೆ” ಎಂದಿದ್ದಾರೆ.

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

C T RAVI ARREST ISSUE – ಸಿ.ಟಿ ರವಿ ಫೇಕ್ ಎನ್ಕೌಂಟರ್ ಮಾಡುವ ಉದ್ದೇಶ ಪೊಲೀಸರಿಗೆ ಇತ್ತಾ?

Hubli News: "ತರಾತುರಿಯಲ್ಲಿ ಸಿ. ಟಿ. ರವಿ‌ ವಿರುದ್ಧ ಎಫ್​ಐಆರ್ ಮಾಡಲಾಗಿದೆ. ಕಾಮನ್ ಸೆನ್ಸ್ ಬೇಡ್ವಾ ಬೆಳಗಾವಿ ಕಮಿಷನರ್​ಗೆ. ಬೆಳಗಾವಿ ಕಮಿಷನರ್ ಅನ್​ಫಿಟ್ ಇದ್ದಾರೆ" ಎಂದು...

PM MODI TO ATTEND CHRISTMAS – ಪ್ರಧಾನಿ ಮೋದಿ ನಾಳೆ ಕ್ರಿಸ್ಮಸ್ ಆಚರಣೆಯಲ್ಲಿ ಭಾಗಿ

New Delhi News: ಸೋಮವಾರದಂದು ಪ್ರಧಾನಿ ನರೇಂದ್ರ ಮೋದಿ ಕ್ರಿಸ್​ಮಸ್ ಆಚರಣೆ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ. ಕ್ಯಾಥೊಲಿಕ್ ಬಿಷಪ್ಸ್ ಕಾನ್ಫರೆನ್ಸ್ ಆಫ್ ಇಂಡಿಯಾ (ಸಿಬಿಸಿಐ) ಸೋಮವಾರ ಸಂಜೆ...

BANDIPUR FOREST – ಬಂಡೀಪುರ ರಾತ್ರಿ ಸಂಚಾರ ನಿಷೇಧ ಸಮಸ್ಯೆ

BANDIPUR NEWS : ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ (BTR) ಮೂಲಕ ಹಾದು ಹೋಗುವ 24.7 ಕಿ.ಮೀ ವ್ಯಾಪ್ತಿಯಲ್ಲಿ ರಾತ್ರಿ ಸಂಚಾರ ನಿಷೇಧಕ್ಕೆ ಸಂಬಂಧಿಸಿದ ಸಮಸ್ಯೆಗಳು...

JAYADEVA HOSPITAL – ನೂತನ ಜಯದೇವ ಆಸ್ಪತ್ರೆ ಸಿಎಂ ಸಿದ್ದರಾಮಯ್ಯ ಉದ್ಘಾಟನೆ

Kalaburagi News: ಹೃದ್ರೋಗ ಆಸ್ಪತ್ರೆಯನ್ನು ಉದ್ಘಾಟಿಸುವ ಮುನ್ನ ಸಿದ್ದರಾಮಯ್ಯ, ಆಸ್ಪತ್ರೆಯ ನೀಲಿ ನಕಾಶೆಯನ್ನು ವೀಕ್ಷಿಸಿದರು. ಆಸ್ಪತ್ರೆಯನ್ನು ವಿಕ್ಷೀಸಿದ ಸಿದ್ದರಾಮಯ್ಯ ನಂತರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್​ ಖರ್ಗೆಯವರೊಂದಿಗೆ...