spot_img
spot_img

Groundnut crop damage : 53,977 ಹೆಕ್ಟೆರ್ ಅಡಕೆ ಬೆಳೆ ಹಾನಿ!

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

Groundnut crop damage

ಎಲೆಚುಕ್ಕಿ ರೋಗದಿಂದ ರಾಜ್ಯದಲ್ಲಿ ಸುಮಾರು 53,977 ಹೆಕ್ಟೆರ್‌ನಲ್ಲಿ ಬೆಳೆದಿರುವ ಅಡಕೆ ಬೆಳೆಗೆ ಹಾನಿಯಾಗಿದೆ,’’ಎಂದು ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವ ಎಸ್‌.ಎಸ್‌. ಮಲ್ಲಿಕಾರ್ಜುನ್‌ ಅಂಕಿ ಅಂಶಗಳ ಸಮೇತ ಗಮನ ಸೆಳೆದರು.ಮಲೆನಾಡು ಭಾಗದಲ್ಲಿ ಎಲೆಚುಕ್ಕಿ ರೋಗ ವ್ಯಾಪಕವಾಗಿದೆ. ಅಡಿಕೆ ಬೆಳೆಗಾರರಿಗೆ ದೊಡ್ಡ ಚಿಂತೆಯಾಗಿದೆ. ತೋಟಕ್ಕೆ ತೋಟವೇ ಒಣಗುತ್ತಿದೆ. ಇದು ಬೆಳೆಗಾರರನ್ನು ಚಿಂತೆಗೀಡು ಮಾಡಿದೆ. ಈ ವಿಚಾರ ಬೆಳಗಾವಿ ಅಧಿವೇಶನದಲ್ಲೂ ಸದ್ದು ಮಾಡಿದೆ.

Belgaum news

“ರೋಗ ಹರಡದಂತೆ ನಿಯಂತ್ರಣ ಮಾಡಲು ಸರಕಾರ ಶಿವಮೊಗ್ಗ ಕೃಷಿ ಮತ್ತು ತೋಟಗಾರಿಕೆ ವಿಶ್ವ ವಿದ್ಯಾಲಯದ ತಜ್ಞರ ನೇತೃತ್ವದ ತಂಡ ರಚನೆ ಮಾಡಿದ್ದು, ಸಂಶೋಧನೆಗೆ 50ಲಕ್ಷ ರೂ. ಅನುದಾನ ಒದಗಿಸಿದೆ,’’ಎಂದು ಶುಕ್ರವಾರ ವಿಧಾನಸಭೆ ಪ್ರಶ್ನೋತ್ತರ ಕಲಾಪದಲ್ಲಿಉತ್ತರಿಸಿದರು.‘‘ಎಲೆಚುಕ್ಕಿ ರೋಗದಿಂದ ರಾಜ್ಯದಲ್ಲಿ ಸುಮಾರು 53,977 ಹೆಕ್ಟೆರ್‌ನಲ್ಲಿ ಬೆಳೆದಿರುವ ಅಡಕೆ ಬೆಳೆಗೆ ಹಾನಿಯಾಗಿದೆ,’’ಎಂದು ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವ ಎಸ್‌.ಎಸ್‌. ಮಲ್ಲಿಕಾರ್ಜುನ್‌ ಮಾಹಿತಿ ನೀಡಿದರು.‘‘ಎಲೆಚುಕ್ಕಿ ರೋಗದಿಂದ ರಾಜ್ಯದಲ್ಲಿ ಸುಮಾರು 53,977 ಹೆಕ್ಟೆರ್‌ನಲ್ಲಿ ಬೆಳೆದಿರುವ ಅಡಕೆ ಬೆಳೆಗೆ ಹಾನಿಯಾಗಿದೆ,’’ಎಂದು ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವ ಎಸ್‌.ಎಸ್‌. ಮಲ್ಲಿಕಾರ್ಜುನ್‌ ಮಾಹಿತಿ ನೀಡಿದರು.‘‘ಸರಕಾರ ಎಲೆಚುಕ್ಕಿ ರೋಗದಿಂದ ಹಾನಿಯಾದ ಅಡಕೆ ಬೆಳೆಯುವ ರೈತರಿಗೆ ರೋಗ ನಿಯಂತ್ರಣಕ್ಕಾಗಿ ಸಸ್ಯ ಸಂರಕ್ಷಣಾ ಔಷಧಗಳಾದ ಹೆಕ್ಸೋಕೋನೊಜೋಲ್‌, ಟೆಬುಕೊನೊಜೋಲ್‌ ಮತ್ತು ಪ್ರೋಪಿಕೊನೊಜೋಲ್‌ ನೀಡಲಾಗುತ್ತಿದೆ. ಇದಕ್ಕಾಗಿ 2023-24ನೇ ಸಾಲಿನಲ್ಲಿ6,250 ಹೆಕ್ಟೆರ್‌ ಪ್ರದೇಶದ 12,300 ಅಡಕೆ ಬೆಳೆಗಾರರಿಗೆ 2.50 ಕೋಟಿ ರೂ.ಅನುದಾನವನ್ನು ನೀಡಲಾಗಿದೆ,’’ಎಂದು ವಿವರಿಸಿದರು.“ಎಲೆಚುಕ್ಕಿ ರೋಗವು 3 ವಿಧದ ಶಿಲೀಂಧ್ರಗಳಿಂದ ಹರಡುತ್ತಿದೆ. ನೆಲಕ್ಕೆ ಬಿದ್ದ ಗರಿಗಳಲ್ಲಿ ಶಿಲೀಂಧ್ರ ಬೆಳವಣಿಯಾಗುತ್ತದೆ. ಮಳೆ ಹನಿಗಳ ಚಿಮ್ಮುವಿಕೆಯಿಂದ ಶಿಲೀಂಧ್ರದ ಕಣಗಳು ಗಾಳಿಯಲ್ಲಿ ಸೇರಿ ಇತರೆ ಗಿಡಗಳು ಹಾಗೂ ತೋಟಗಳಿಗೆ ಹರಡುತ್ತವೆ.”

What to do for the traditional garden?

ಈ ಯೋಜನೆಯಡಿ 2023-24ನೇ ಸಾಲಿಗೆ 1,201 ಫಲಾನುಭವಿಗಳಿಗೆ 3.66 ರೂ. ಕೋಟಿ ಸಹಾಯಧನ ನೀಡಲಾಗಿದೆ. ಸಂಪ್ರದಾಯಕವಾಗಿ ಅಡಕೆ ಬೆಳೆಯುವ ಪ್ರದೇಶದಲ್ಲಿ ಅಡಕೆ ಬೆಳೆ ಕಟಾವು ಹಾಗೂ ಸಿಂಪರಣೆಗಾಗಿ ದೋಟಿ ಖರೀದಿಸಲು ಕೃಷಿ ಯಾಂತ್ರೀಕರಣ ಯೋಜನೆಯಡಿ ಸಾಮಾನ್ಯ ವರ್ಗದವರಿಗೆ ಶೇ.40 ಹಾಗೂ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರಿಗೆ ಶೇ.50 ಸಹಾಯಧನ ನೀಡಲಾಗುತ್ತಿದೆ.ರೋಗದ ನಿಯಂತ್ರಣ ಕುರಿತು ಕೃಷಿ ಮತ್ತು ತೋಟಗಾರಿಕೆ ವಿಜ್ಞಾನ ವಿಶ್ವ ವಿದ್ಯಾಲಯದ ತಜ್ಞರಿಂದ ಮಾಹಿತಿ ಹಾಗೂ ಪ್ರಚಾರ ಕಾರ್ಯ ಮಾಡಲಾಗುತ್ತಿದೆ,’’ಎಂದು ಹೇಳಿದರು.

Study by experts:

‘‘ರೋಗದ ಅಧ್ಯಯನಕ್ಕಾಗಿ ಕೇಂದ್ರ ಸರಕಾರ ನೇಮಿಸಿರುವ ವೈಜ್ಞಾನಿಕ ತಂಡ ಚಿಕ್ಕಮಗಳೂರು, ಶಿವಮೊಗ್ಗ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಭೇಟಿ ನೀಡಿ ಅಧ್ಯಯನ ನಡೆಸಿ, ತಾಂತ್ರಿಕ ಸಲಹೆಗಳನ್ನು ನೀಡಿದೆ. ಕೇಂದ್ರೀಯ ತೋಟದ ಬೆಳೆಗಳ ಸಂಶೋಧನಾ ಸಂಸ್ಥೆ ಮೂಲಕ ಕೇಂದ್ರ ಸರಕಾರಕ್ಕೆ 225.73 ಕೋಟಿ ರೂ.ಪರಿಹಾರ ನೀಡಲು ಪ್ರಸ್ತಾವನೆ ಸಲ್ಲಿಸಲಾಗಿದೆ,’’ ಎಂದು ಸಚಿವ ಎಸ್‌.ಎಸ್‌.ಮಲ್ಲಿಕಾರ್ಜುನ್‌ ಹೇಳಿದರು.

ಶಾಸಕರಾದ ಆರಗ ಜ್ಞಾನೇಂದ್ರ,ಭೀಮಣ್ಣ ನಾಯಕ್‌ ಸೇರಿದಂತೆ ಮಲೆನಾಡು ಹಾಗೂ ಕರಾವಳಿ ಭಾಗದ ಇತರೆ ಶಾಸಕರು, ಸರಕಾರ ರೋಗ ತಡೆಗೆ ಉಚಿತವಾಗಿ ಔಷಧೋಪಚಾರಗಳನ್ನು ನೀಡಬೇಕು. ಅಡಕೆ ಬೆಳೆಗಾರರಿಗೆ ವಿಶೇಷ ಪ್ಯಾಕೇಜ್‌ ಘೋಷಿಸಬೇಕು,’’ಎಂದು ಒತ್ತಾಯಿಸಿದರು.

 

 

 

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

Puri Jagannath Temple : ಹೊಸ ವರ್ಷದಿಂದ ಪುರಿ ಜಗನ್ನಾಥ ದೇಗುಲದಲ್ಲಿ ‘ನೂತನ ದರ್ಶನ ವ್ಯವಸ್ಥೆ’

Bhubaneswar News: ಪುರಿ ಜಗನ್ನಾಥನ ದರ್ಶನಕ್ಕಾಗಿ ದೇವಾಲಯಕ್ಕೆ ಭೇಟಿ ನೀಡುವ ಭಕ್ತಾದಿಗಳಿಗೆ ಇನ್ನು ಮುಂದೆ ಉತ್ತಮ ಸೌಲಭ್ಯದಿಂದ ಕೂಡಿದ ಹೊಸ ವ್ಯವಸ್ಥೆಯನ್ನು ಕಲ್ಪಿಸಲಾಗುವುದು ಎಂದು ಒಡಿಶಾ...

NAMMA METRO – ನಮ್ಮ ಮೆಟ್ರೋ ಹಳದಿ ಮಾರ್ಗಕ್ಕಾಗಿ ಜ. 15ರ ವೇಳೆಗೆ ಎರಡನೇ ರೈಲಿನ ಆಗಮನ

Bangalore Metro News: ಟಿಆರ್​ಎಸ್​ಎಸ್​ಎಲ್​ ಕಂಪನಿ ತನ್ನ ಮೊದಲ ರೈಲನ್ನ ಹಳದಿ ಮಾರ್ಗಕ್ಕೆ ಕಳುಹಿಸಿದೆ. ಇದು ಹೆಬ್ಬಗೋಡಿ ಮೆಟ್ರೋ ಡಿಪೋವನ್ನ ಜನವರಿ 15 ರ ವೇಳೆಗೆ...

COLD WEATHER – ಚಾಮುಂಡಿಬೆಟ್ಟದ ಮಂಜಿನಲೋಕದಲ್ಲಿ ಮಿಂದೇಳಲು ಇದು ಸಕಾಲ

Mysore News: ವಾಸಿಗರು ಇಲ್ಲಿಗೆ ಬರುವುದು ಸೂರ್ಯ ಉದಯಿಸಿದ ಬಳಿಕ. ಹೀಗಾಗಿ ಅವರಿಗೆ ಚಾಮುಂಡಿ ಬೆಟ್ಟದ ಈ ಸೊಬಗಿನ ಪರಿಚಯವಿಲ್ಲ. ಸ್ವತಃ ಮೈಸೂರಿನ ಅನೇಕರಿಗೇ ಇದರ...

BAGALKOTE HORTICULTURE FAIR – ಬಾಗಲಕೋಟೆಯಲ್ಲಿ 13ನೇ ತೋಟಗಾರಿಕಾ ಮೇಳ

Bagalkote News: ಬಾಗಲಕೋಟೆಯಲ್ಲಿ ಮೂರು ದಿನಗಳ ತೋಟಗಾರಿಕಾ ಮೇಳ ಆರಂಭವಾಗಿದೆ. ಮೇಳದಲ್ಲಿ ಫಲಪುಷ್ಪ ಪ್ರದರ್ಶನ ಆಕರ್ಷಣೆಯ ಕೇಂದ್ರಬಿಂದುವಾಗಿದೆ. ಇಲ್ಲಿನ ತೋಟಗಾರಿಕಾ ವಿಶ್ವವಿದ್ಯಾಲಯದಲ್ಲಿ 13ನೇ ತೋಟಗಾರಿಕಾ ಮೇಳಕ್ಕೆ...