Shivamogga (Jog Falls) :
ಜನವರಿ 01 ರಿಂದ ಮಾರ್ಚ್ 15ರ ವರೆಗೆ 3 ತಿಂಗಳುಗಳ ಕಾಲ ಸಾರ್ವಜನಿಕರ ಮತ್ತು ಪ್ರವಾಸಿಗರ entry ಇರುವುದಿಲ್ಲ ಎಂದು ಜಿಲ್ಲಾಧಿಕಾರಿ ಹಾಗೂ ಜೋಗ ನಿರ್ವಹಣಾ ಪ್ರಾಧಿಕಾರ ಹಾಗೂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜೋಗ ಜಲಪಾತದ ಮುಖ್ಯದ್ವಾರ ಕಾಮಗಾರಿ ಹಾಗೂ ಪ್ರವಾಸಿಗರಿಗೆ ಮೂಲಭೂತ ಸೌಲಭ್ಯ ಒದಗಿಸಲು ಸಮಗ್ರ Development ಕಾಮಗಾರಿ ಹಿನ್ನೆಲೆಯಲ್ಲಿ ಪ್ರವಾಸಿಗರಿಗೆ ಪ್ರವೇಶ ನಿರ್ಬಂಧಿಸಲಾಗಿದೆ.ಅಭಿವೃದ್ಧಿ ಕಾಮಗಾರಿ ಹಿನ್ನೆಲೆಯಲ್ಲಿ ಜಗತ್ ಪ್ರಸಿದ್ಧ jog falls ವೀಕ್ಷಣೆಗೆ 3 months ಕಾಲ ನಿರ್ಬಂಧ ಹೇರಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶ ಹೊರಡಿಸಿದ್ದಾರೆ.
ಸಾರ್ವಜನಿಕರು ಮತ್ತು ಪ್ರವಾಸಿಗರು ಸಹಕರಿಸಬೇಕು ಎಂದು ಪ್ರಕಟಣೆಯಲ್ಲಿ ಮನವಿ ಮಾಡಲಾಗಿದೆ.ಕಾಮಗಾರಿ ಅನುಷ್ಠಾನದ ಸಂದರ್ಭದಲ್ಲಿ ಸಾರ್ವಜನಿಕರು ಮತ್ತು ಪ್ರವಾಸಿಗರಿಗೆ ತೊಂದರೆಯಾಗಬಾರದೆಂಬ ಕಾರಣಕ್ಕೆ ಈ ಕ್ರಮ ಕೈಗೊಳ್ಳಲಾಗಿದೆ.
Development:
jog falls ಇನ್ನಷ್ಟು ಅಭಿವೃದ್ಧಿಪಡಿಸಲು, ಪ್ರವಾಸಿಗರಿಗೆ ಮೂಲಭೂತ ಸೌಕರ್ಯ ಒದಗಿಸಬೇಕೆಂದು ರಾಜ್ಯ ಸರ್ಕಾರವು 185 crore ವೆಚ್ಚದಲ್ಲಿ ವಿವಿಧ ಕಾಮಗಾರಿ ಕೈಗೆತ್ತಿಕೊಂಡಿದೆ. ಇದರಲ್ಲಿ falls ವೀಕ್ಷಣಾ ಗೋಪುರ, ರೋಪ್ ವೇ, ರೈನ್ ಡ್ಯಾನ್ಸ್, ಗಾರ್ಡನ್, ವಾಣಿಜ್ಯ ಮಳಿಗೆಗಳು, ಉದ್ಯಾನವನ, ಪ್ರವಾಸಿ ಲಾಡ್ಜ್ ಕಾಮಗಾರಿ ಹಾಗೂ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗುತ್ತಿದೆ.