spot_img
spot_img

NEET EXAM REFORMS – NTA ಈಗ ಪ್ರವೇಶ ಪರೀಕ್ಷೆಗಳಿಗೆ ಮಾತ್ರ ಸೀಮಿತ

spot_img
spot_img

Share post:

Neet Exam  News :

2025 ರಿಂದ ಎನ್‌ಟಿಎ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಪ್ರವೇಶ ಪರೀಕ್ಷೆಗಳನ್ನು ಮಾತ್ರ ನಡೆಸುತ್ತದೆ ಮತ್ತು ಸರ್ಕಾರಿ ಉದ್ಯೋಗಗಳಿಗೆ ನೇಮಕಾತಿ ಪರೀಕ್ಷೆಗಳನ್ನು ನಡೆಸುವುದಿಲ್ಲ ಎಂದು ಅವರು ಇದೇ ವೇಳೆ ಸ್ಪಷ್ಟಪಡಿಸಿದ್ದಾರೆ.NTA 2025 ಪರೀಕ್ಷೆಗಳಲ್ಲಿ ಅನೇಕ ಕ್ರಾಂತಿಕಾರಿ ಬದಲಾವಣೆಗಳನ್ನು ತರಲಾಗುವುದು ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ.

Pen-paper or Online:

ಭವಿಷ್ಯದಲ್ಲಿ computer ಅಡಾಪ್ಟಿವ್ ಪರೀಕ್ಷೆ ಮತ್ತು ಟೆಕ್ ಆಧಾರಿತ ಪ್ರವೇಶ ಪರೀಕ್ಷೆಗಳನ್ನು ನಡೆಸಲು ಸರ್ಕಾರ ಚಿಂತಿಸುತ್ತಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. 2025ರಲ್ಲಿ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಯನ್ನೂ ಸಂಪೂರ್ಣವಾಗಿ ಶುದ್ಧೀಕರಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.ಮುಂದಿನ ವರ್ಷದಿಂದ NEET-UG ಪರೀಕ್ಷೆಯನ್ನು ಪೆನ್-ಪೇಪರ್ ಮೋಡ್ ಅಥವಾ ಆರೋಗ್ಯ ಸಚಿವಾಲಯದೊಂದಿಗೆ ಸೇರಿಕೊಂಡು ಆನ್‌ಲೈನ್‌ನಲ್ಲಿ ನಡೆಸಬೇಕು ಎಂದು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ.

NTA for Entrance Tests only – Limited to:

ಸಾಮಾನ್ಯ ವಿಶ್ವವಿದ್ಯಾಲಯ ಪ್ರವೇಶ ಪರೀಕ್ಷೆ (CUTE) -ಯುಜಿ ವರ್ಷಕ್ಕೊಮ್ಮೆ ನಡೆಸಲಾಗುವುದು . ಶೂನ್ಯ ದೋಷ ಪರೀಕ್ಷೆಯನ್ನು ಖಚಿತಪಡಿಸಿಕೊಳ್ಳಲು NTA ಕಾರ್ಯಗಳಲ್ಲಿ ಅನೇಕ ಬದಲಾವಣೆಗಳಿರುತ್ತವೆ ಎಂದು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ.ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶಕ್ಕಾಗಿ ಇರುವ ಪ್ರವೇಶ ಪರೀಕ್ಷೆಗಳನ್ನು ನಡೆಸುವುದಷ್ಟೇ NTA ಸೀಮಿತವಾಗಿರುತ್ತದೆ. ಮುಂದಿನ ವರ್ಷದಿಂದ ಎನ್​​ ಟಿಎದಿಂದ ಯಾವುದೇ ಸರ್ಕಾರಿ ನೇಮಕಾತಿ ಪರೀಕ್ಷೆಗಳನ್ನು ನಡೆಸಲಾಗುವುದಿಲ್ಲ.

Question Paper Leak Background Radical Change:

NTA ಕೇವಲ ಪ್ರವೇಶ ಪರೀಕ್ಷೆಗಳನ್ನು ನಡೆಸಲು ಮಾತ್ರ ಸೀಮಿತವಾಗಿದೆ. ಉದ್ಯೋಗ ಸಂಬಂಧಿತ ಪರೀಕ್ಷೆಗಳನ್ನು ನಡೆಸಲು ಬೇರೊಂದು ವ್ಯವಸ್ಥೆ ಮಾಡಲು ಕೇಂದ್ರ ಶಿಕ್ಷಣ ಸಚಿವಾಲಯ ತೀರ್ಮಾನಿಸಿದೆ.ಈ ವರ್ಷ NEET ಪರೀಕ್ಷೆಯ ಪತ್ರಿಕೆ ಸೋರಿಕೆ ಮತ್ತು ಇತರ ದೋಷಗಳಿಂದಾಗಿ ಅನೇಕ ಪರೀಕ್ಷೆಗಳು ರದ್ದಾದ ಕಾರಣ NTA ಅನ್ನು ಸಂಪೂರ್ಣವಾಗಿ ಸ್ವಚ್ಛಗೊಳಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಈ ಹಿನ್ನೆಲೆಯಲ್ಲಿ ಉನ್ನತ ಮಟ್ಟದ ಸಮಿತಿಯ ಶಿಫಾರಸಿನಂತೆ ಇತ್ತೀಚಿನ ಸುಧಾರಣೆಗಳನ್ನು ತರಲಾಗಿದೆ

Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

MOTOROLA EDGE 60 FUSION – ಅದ್ಭುತವಾದ ಕ್ಯಾಮೆರಾ ಸೆಟಪ್, ವಾಟರ್ ಪ್ರೊಟೆಕ್ಷನ್ – ಮೊಟೊರೊಲಾದ ಹೊಸ ಫೋನ್ನ ಬೆಲೆ ಕೇವಲ ಇಷ್ಟೇ!

Motorola Edge 60 Fusion: ಬಹುನಿರೀಕ್ಷಿತ ' MOTOROLA EDGE 60 FUSION' ಕೊನೆಗೂ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಕಂಪನಿಯು ಇದನ್ನು ' MOTOROLA EDGE...

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...