spot_img
spot_img

ROZGAR MELA : ಒಂದೂವರೆ ವರ್ಷದಲ್ಲಿ ದಾಖಲೆಯ 10 ಲಕ್ಷ ಯುವಕರಿಗೆ ಖಾಯಂ ಸರ್ಕಾರಿ ಉದ್ಯೋಗ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

New Delhi News:

ವರ್ಚುವಲ್ ಕಾರ್ಯಕ್ರಮದ ಮೂಲಕ ರೋಜಗಾರ್ ಮೇಳದಲ್ಲಿ ನೇಮಕಗೊಂಡವರನ್ನುದ್ದೇಶಿಸಿ ಮಾತನಾಡಿದ ಅವರು, ಮೇಳದಲ್ಲಿ 71,000 ಕ್ಕೂ ಹೆಚ್ಚು ಜನರಿಗೆ ನೇಮಕಾತಿ ಪತ್ರಗಳನ್ನು ನೀಡಲಾಗಿದೆ. ಈ ಹಿಂದಿನ ಯಾವುದೇ ಸರ್ಕಾರಗಳ ಅವಧಿಯಲ್ಲಿಯೂ ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ಸರ್ಕಾರಿ ನೌಕರಿಗಳನ್ನು ನೀಡಿರುವ ಉದಾಹರಣೆ ಇಲ್ಲ ಎಂದು ಹೇಳಿದರು.ಕಳೆದ ಒಂದು ಅಥವಾ ಒಂದೂವರೆ ವರ್ಷದಲ್ಲಿ ನಮ್ಮ ಸರ್ಕಾರ ಸುಮಾರು 10 ಲಕ್ಷ ಯುವಕರಿಗೆ ಖಾಯಂ ಸರಕಾರಿ ಉದ್ಯೋಗಗಳನ್ನು ಒದಗಿಸಿದ್ದು, ಇದೊಂದು ದಾಖಲೆಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಹೇಳಿದ್ದಾರೆ. ರೋಜಗಾರ ಮೇಳ ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಿದರು.

Our government’s policy is to focus on the youth:

ಅಧಿಕ ಸಂಖ್ಯೆಯ ಮಹಿಳೆಯರು ಉದ್ಯೋಗಗಳಿಗೆ ನೇಮಕಗೊಂಡಿರುವುದನ್ನು ಪ್ರಸ್ತಾಪಿಸಿದ ಮೋದಿ, ಮಹಿಳೆಯರನ್ನು ಪ್ರತಿಯೊಂದು ಕ್ಷೇತ್ರದಲ್ಲಿ ಸ್ವಾವಲಂಬಿಯನ್ನಾಗಿ ಮಾಡುವುದು ನಮ್ಮ ಸರ್ಕಾರದ ಗುರಿಯಾಗಿದೆ ಎಂದರು.ಯುವಜನತೆಯನ್ನು ಕೇಂದ್ರೀಕರಿಸಿ ತಮ್ಮ ಸರ್ಕಾರ ನೀತಿಗಳನ್ನು ರೂಪಿಸುತ್ತಿದೆ ಎಂದು ತಿಳಿಸಿದ ಪ್ರಧಾನಿ ಪ್ರಾಮಾಣಿಕತೆ ಮತ್ತು ಪಾರದರ್ಶಕತೆಯಿಂದ ನೇಮಕಾತಿ ಪ್ರಕ್ರಿಯೆಯನ್ನು ನಡೆಸಲಾಗಿದೆ ಎಂದರು.

26 weeks maternity leave for women :

ಹೆರಿಗೆ ರಜೆ ನೀಡುವ ಸರ್ಕಾರದ ನಿರ್ಧಾರವು ಅವರ ವೃತ್ತಿಜೀವನದಲ್ಲಿ ಸಾಕಷ್ಟು ಸಹಾಯ ಮಾಡಿದೆ. ‘ಪಿಎಂ ಆವಾಸ್ ಯೋಜನೆ’ ಅಡಿಯಲ್ಲಿ ನಿರ್ಮಿಸಲಾದ ಮನೆಯ ಬಹುಪಾಲು ಮಾಲೀಕರು ಮಹಿಳೆಯರೇ ಆಗಿದ್ದಾರೆ. ದೇಶದಲ್ಲಿ ಮಹಿಳಾ ನೇತೃತ್ವದ ಅಭಿವೃದ್ಧಿ ನಡೆಯುತ್ತಿದೆ” ಎಂದು ಅವರು ಹೇಳಿದರು.

Maximum utilization of youth potential is our priority:

“ರಾಷ್ಟ್ರೀಯ ಶಿಕ್ಷಣ ನೀತಿಯಡಿ ಯುವಜನರ ಅಭಿವೃದ್ಧಿಗೆ ಹಲವಾರು ಕ್ರಮಗಳನ್ನು ಕೈಗೊಳ್ಳಲಾಗಿದೆ. ಮಾತೃಭಾಷೆಗಳ ಬಳಕೆಗೆ ಒತ್ತು ನೀಡಲಾಗಿದೆ. ಯುವಕರು ಈಗ 13 ಭಾರತೀಯ ಭಾಷೆಗಳಲ್ಲಿ ನೇಮಕಾತಿ ಪರೀಕ್ಷೆಗಳನ್ನು ಬರೆಯಬಹುದಾಗಿದೆ” ಎಂದು ಅವರು ತಿಳಿಸಿದರು. ಭಾರತೀಯ ಯುವಕರ ಸಾಮರ್ಥ್ಯ ಮತ್ತು ಪ್ರತಿಭೆಯನ್ನು ಗರಿಷ್ಠವಾಗಿ ಬಳಸಿಕೊಳ್ಳುವುದು ತಮ್ಮ ಸರ್ಕಾರದ ಆದ್ಯತೆಯಾಗಿದೆ ಎಂದು ಹೇಳಿದ ಮೋದಿ, ಯುವಕರು ಸ್ಟಾರ್ಟ್ ಅಪ್ ಇಂಡಿಯಾ, ಡಿಜಿಟಲ್ ಇಂಡಿಯಾ ಅಥವಾ ಬಾಹ್ಯಾಕಾಶ ಮತ್ತು ರಕ್ಷಣಾ ಕ್ಷೇತ್ರಗಳಲ್ಲಿನ ಸುಧಾರಣೆಗಳು ಸೇರಿದಂತೆ ಹಲವಾರು ಯೋಜನೆಗಳ ಕೇಂದ್ರಬಿಂದುವಾಗಿದ್ದಾರೆ ಎಂದು ಹೇಳಿದರು.

29% of the order takers today are OBCs:

ಈ ಸಂದರ್ಭದಲ್ಲಿ ಮಾತನಾಡಿದ ಕೇಂದ್ರ ಸಚಿವ ಜಿತೇಂದ್ರ ಸಿಂಗ್, ನೇಮಕಗೊಂಡ 71,000 ಜನರಲ್ಲಿ ಶೇಕಡಾ 29 ಕ್ಕೂ ಹೆಚ್ಚು ಒಬಿಸಿ ವರ್ಗಕ್ಕೆ ಸೇರಿದವರು ಎಂದು ಹೇಳಿದರು. ಯುಪಿಎ ಸರಕಾರಕ್ಕೆ ಹೋಲಿಸಿದರೆ ಮೋದಿ ಸರಕಾರದಲ್ಲಿ ಹಿಂದುಳಿದ ವರ್ಗದವರ ನೇಮಕಾತಿಯಲ್ಲಿ ಶೇ 27ರಷ್ಟು ಹೆಚ್ಚಳವಾಗಿದೆ ಎಂದು ಅವರು ಮಾಹಿತಿ ನೀಡಿದರು.

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

EDUCATION SOCIETY : 5 ಮತ್ತು 8 ನೇ ತರಗತಿ ವಿದ್ಯಾರ್ಥಿಗಳಿಗೆ ‘ನೋ-ಡಿಟೆನ್ಷನ್ ನೀತಿ’ ರದ್ದುಗೊಳಿಸಿದ ಕೇಂದ್ರ

New Delhi News: 2019 ರ ಶಿಕ್ಷಣ ಹಕ್ಕು ಕಾಯಿದೆ(ಆರ್‌ಟಿಇ) ತಿದ್ದುಪಡಿಯ ನಂತರ, ಕನಿಷ್ಠ 16 ರಾಜ್ಯಗಳು ಮತ್ತು ಎರಡು ಕೇಂದ್ರಾಡಳಿತ ಪ್ರದೇಶಗಳು ಈಗಾಗಲೇ ಈ...

J AND K AND LADAKH HIGH COURT – ಮಹಿಳಾ ವಕೀಲರು ಬುರ್ಖಾ ಧರಿಸಿ ವಾದ ಮಾಡುವಂತಿಲ್ಲ

Srinagar News: ಬುರ್ಖಾ ಧರಿಸಿ ವಾದ ಮಾಡುವಂತಿಲ್ಲ ಎಂದು ಜಮ್ಮು- ಕಾಶ್ಮೀರ ಮತ್ತು ಲಡಾಖ್ ಹೈಕೋರ್ಟ್ ತಿಳಿಸಿದೆ. ಬಾರ್ ಕೌನ್ಸಿಲ್ ಆಫ್ ಇಂಡಿಯಾದ ವಸ್ತ್ರ ಸಂಹಿತೆ...

C T RAVI CASE – ಕೆಲವು ಬಾರಿ ಸರ್ಕಾರಕ್ಕೆ ಮುಜುಗರ

Bangalore News: "ಕೆಲವು ಬಾರಿ ಸರ್ಕಾರಕ್ಕೆ ‌ಮುಜುಗರ ಆಗುತ್ತದೆ" ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು."ಪೊಲೀಸರಿಗೆ ಅವರದ್ದೇ ಆದ ನಿಯಮವಿದೆ. ಎಲ್ಲದಕ್ಕೂ ನಮ್ಮನ್ನು ಕೇಳಬೇಕಿಲ್ಲ. ಉನ್ನತ...

BENGALURU SECURITY – ಕ್ರಿಸ್ಮಸ್, ಹೊಸ ವರ್ಷಾಚರಣೆ ವೇಳೆ ಅಹಿತಕರ ಘಟನೆ ನಡೆದರೆ ಡಿಸಿಪಿಗಳೇ ಹೊಣೆ

Bangalore News: ಬೆಂಗಳೂರಿನ ಎಂ.ಜಿ.ರಸ್ತೆ, ಬಿಗ್ರೇಡ್ ರಸ್ತೆ ಹಾಗೂ ಚರ್ಚ್ ಸ್ಟ್ರೀಟ್​​ನಲ್ಲಿ ಹೊಸ ವರ್ಷ ಆಚರಿಸಲು ಸಾರ್ವಜನಿಕರಿಗೆ ನಿರ್ಬಂಧ ವಿಧಿಸಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್...