spot_img
spot_img

YEAR ENDER 2024 – ರಾಜ್ಯ ರಾಜಕೀಯದಲ್ಲಿ ಅಚ್ಚರಿಯ ಬೆಳವಣಿಗೆಗಳು, ಮೇಲಾಟಗಳ ಮೆಲುಕು

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

Bangalore News:

2024ರಲ್ಲಿ ಲೋಕಸಭೆ ಚುನಾವಣೆ, ನಂತರ ನಡೆದ ಉಪ ಚುನಾವಣೆಗಳಿಂದಾಗಿ ಕರ್ನಾಟಕ ಸಾಕಷ್ಟು ಅಚ್ಚರಿ, ಮೇಲಾಟಗಳನ್ನು ಕಂಡಿದೆ. 2023 ಇನ್ನೇನು ಕೆಲವೇ ದಿನಗಳಲ್ಲಿ ಕೊನೆಗೊಳ್ಳಲಿದ್ದು, ವರ್ಷದ ಮಹತ್ವದ ರಾಜಕೀಯ ಬೆಳವಣಿಗೆಗಳ ಮೇಲೊಂದು ಕ್ವಿಕ್‌ ರೌಂಡ್‌ ಅಪ್‌.2024 ಮುಗಿದು ಇನ್ನೇನು 2025ರ ಹೊಸ ವರ್ಷದ ಹೊಸ್ತಿಲಲ್ಲಿದ್ದೇವೆ. ಈ ವರ್ಷ ಲೋಕಸಭೆ ಚುನಾವಣೆ, ಪಕ್ಷಾಂತರಗಳು, ಮೈತ್ರಿ ರಾಜಕೀಯ, ಉಪ ಚುನಾವಣೆಯ ಫಲಿತಾಂಶ, ಬಣ ಬಡಿದಾಟ, ಬಂಡಾಯ ಹೀಗೆ ಹಲವು ವಿದ್ಯಮಾನಗಳಿಗೆ ರಾಜ್ಯ ಸಾಕ್ಷಿಯಾಗಿದೆ.

Lok Sabha Elections:

ಬೆಂಗಳೂರು ಗ್ರಾಮಾಂತರ ಕ್ಷೇತ್ರ ಕುತೂಹಲ ಕೆರಳಿಸಿತ್ತು. ಡಿಸಿಎಂ ಡಿ.ಕೆ.ಶಿವಕುಮಾರ್ ಸಹೋದರ ಡಿ.ಕೆ.ಸುರೇಶ್ ಸೋಲುವ ಮೂಲಕ ಅಚ್ಚರಿಯ ಫಲಿತಾಂಶ ಹೊರಬಂದಿತ್ತು. ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್.ಮಂಜುನಾಥ್ ಡಿ.ಕೆ.ಸುರೇಶ್ ಅವರನ್ನು ಸೋಲಿಸಿ ಕಾಂಗ್ರೆಸ್​ಗೆ ದೊಡ್ಡ ಶಾಕ್ ಕೊಟ್ಟರು. ಮತ್ತೊಂದು ಹೈ ಪ್ರೊಫೈಲ್ ಕ್ಷೇತ್ರ ಮಂಡ್ಯದಲ್ಲಿ ಹೆಚ್.ಡಿ.ಕುಮಾರಸ್ವಾಮಿ ಗೆದ್ದರು.  ವಿಧಾನಸಭೆ ಚುನಾವಣೆಯಲ್ಲಿ ಗೆದ್ದು ಬೀಗಿದ್ದ ಆಡಳಿತಾರೂಢ ಕಾಂಗ್ರೆಸ್, ವರ್ಷದ ಬಳಿಕ ನಡೆದ ಲೋಕಸಭೆ ಚುನಾವಣೆಯಲ್ಲಿ ಹಿನ್ನಡೆ ಅನುಭವಿಸಿತು. ಬಿಜೆಪಿ 17 ಕ್ಷೇತ್ರಗಳಲ್ಲಿ ಗೆದ್ದರೆ ಜೆಡಿಎಸ್ 2, ಕಾಂಗ್ರೆಸ್ 9 ಕ್ಷೇತ್ರಗಳಲ್ಲಿ ಗೆಲುವು ಕಂಡಿತು.‌ ಕಳೆದ ಲೋಕಸಭೆ ಚುನಾವಣೆಗೆ ಹೋಲಿಸಿದರೆ ಕಾಂಗ್ರೆಸ್ ತನ್ನ ಗೆಲುವಿನ ಸಂಖ್ಯೆ ಹೆಚ್ಚಿಸಿಕೊಂಡಿದೆ. ಆದರೆ, ವಿಧಾನಸಭೆ ಚುನಾವಣೆಯ ಯಶಸ್ಸನ್ನು ಪುನಾರಾವರ್ತಿಸಲು ಸಾಧ್ಯವಾಗಲಿಲ್ಲ.

Politics of BJP-JDS alliance:

ದೀರ್ಘಕಾಲದ ಮೈತ್ರಿಯ ಉದ್ದೇಶದೊಂದಿಗೆ ಜೆಡಿಎಸ್ ಹಾಗೂ ಬಿಜೆಪಿ ರಾಜ್ಯದಲ್ಲಿ ದೋಸ್ತಿ ಮಾಡಿಕೊಂಡಿದೆ. ಈ ಮೈತ್ರಿ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್​ಗೆ ಉತ್ತಮ ಫಲಿತಾಂಶ ನೀಡಿತು. ಗ್ಯಾರಂಟಿಗಳ ಜನಪ್ರಿಯತೆ ಮಧ್ಯೆ ಆಡಳಿತಾರೂಢ ಕಾಂಗ್ರೆಸ್ ಅನ್ನು ರಾಜ್ಯದಲ್ಲಿ ಒಂದಂಕಿಗೆ ಕಟ್ಟಿಹಾಕುವಲ್ಲಿ ಮೈತ್ರಿ ಯಶಕಂಡಿತು.ಲೋಕಸಭೆ ಚುನಾವಣೆಗೆ ಮುನ್ನ ನಡೆದ ಬಿಜೆಪಿ-ಜೆಡಿಎಸ್ ಮೈತ್ರಿ ರಾಜ್ಯ ರಾಜಕೀಯದ ದೊಡ್ಡ ವಿದ್ಯಮಾನ. ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಂಡು ಅಖಾಡಕ್ಕಿಳಿದಿದ್ದವು.‌ ಆ ಮೂಲಕ ರಾಜ್ಯದಲ್ಲಿನ ಆಡಳಿತಾರೂಢ ಕಾಂಗ್ರೆಸ್​ಗೆ ಪ್ರಬಲ ಪೈಪೋಟಿ ನೀಡಿತು. 2019ರ ಚುನಾವಣೆಯಲ್ಲಿ ಜೆಡಿಎಸ್-ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡಿದ್ದರೆ, ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿತು.

Defection Politics:

ಕೊಪ್ಪಳದ ಮಾಜಿ ಸಂಸದ ಕರಡಿ ಸಂಗಣ್ಣಗೆ ಬಿಜೆಪಿ ಟಿಕೆಟ್ ಕೈತಪ್ಪಿದ ಕಾರಣ ಕಾಂಗ್ರೆಸ್ ಸೇರಿದ್ದರು. ಅದೇ ರೀತಿ ಜಯಪ್ರಕಾಶ್ ಹೆಗ್ಡೆ ಟಿಕೆಟ್ ಸಿಗದೇ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿ ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಕೈ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು.‌ ಇತ್ತೀಚೆಗೆ ಸಿ.ಪಿ.ಯೋಗೇಶ್ಚರ್ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿರುವುದು ಅಚ್ಚರಿ ಮೂಡಿಸಿತು. ಚನ್ನಪಟ್ಟಣ ಉಪಸಮರದಲ್ಲಿ ಬಿಜೆಪಿ ಟಿಕೆಟ್ ಸಿಗದ ಕಾರಣ ಅನ್ಯಮಾರ್ಗವಿಲ್ಲದೆ ಸಿ.ಪಿ.ಯೋಗೇಶ್ವರ್ ಕಾಂಗ್ರೆಸ್ ಸೇರಿದ್ದು ರಾಜಕೀಯ ಪಡಸಾಲೆಯಲ್ಲಿ ಅಚ್ಚರಿ ಮೂಡಿಸಿತು. 2023ರ ವಿಧಾನಸಭೆ ಚುನಾವಣೆಯಲ್ಲಿ ಟಿಕೆಟ್ ಸಿಗದ ಸಿಟ್ಟಿನಲ್ಲಿ ಕಾಂಗ್ರೆಸ್ ಸೇರಿದ್ದ ಜಗದೀಶ್ ಶೆಟ್ಟರ್, 2024ರಲ್ಲಿ ಮತ್ತೆ ಮಾತೃಪಕ್ಷ ಬಿಜೆಪಿಗೆ ಮರಳಿ, ಬೆಳಗಾವಿ ಲೋಕಸಭೆ ಕ್ಷೇತ್ರದಿಂದ ಗೆದ್ದರು. ಇತ್ತ ತುಮಕೂರು ಕ್ಷೇತ್ರದಿಂದ ಟಿಕೆಟ್ ಕೈ ತಪ್ಪಿದ್ದರಿಂದ ಮುದ್ದಹನುಮೇಗೌಡ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾದರು. ಆದರೆ, ಚುನಾವಣೆಯಲ್ಲಿ ಕ್ಷೇತ್ರದ ಜನರು ಅವರ ಕೈ ಹಿಡಿಯಲಿಲ್ಲ.‌

KS Eshwarappa rebellion, ousted:

ಶಿವಮೊಗ್ಗ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ವಿರುದ್ಧ ಕಣಕ್ಕಿಳಿದ ಕೆ.ಎಸ್.ಈಶ್ವರಪ್ಪ ಚುನಾವಣೆಯಲ್ಲಿ ಹೀನಾಯ ಸೋಲು ಕಾಣಬೇಕಾಯಿತು. ಬಂಡಾಯದ ಬಾವುಟ ಹಾರಿಸಿದ ಕಾರಣ ಈಶ್ವರಪ್ಪರನ್ನು ಬಿಜೆಪಿಯಿಂದ ಉಚ್ಛಾಟಿಸಲಾಯಿತು.ಕೆ.ಎಸ್.ಈಶ್ವರಪ್ಪ ಬಿಜೆಪಿ ಹಿರಿಯ ನಾಯಕ. ತಮ್ಮ ಮಗನಿಗೆ ಲೋಕಸಮರದಲ್ಲಿ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಬಂಡಾಯದ ಬಾವುಟ ಹಾರಿಸಿದ್ದರು. ಶಿವಮೊಗ್ಗ ಕ್ಷೇತ್ರದಿಂದ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವುದು ಅಚ್ಚರಿಯ ಬೆಳವಣಿಗೆಯಾಗಿತ್ತು.‌ ಬಣ ರಾಜಕೀಯ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್​ನಲ್ಲಿ ಬಣ ರಾಜಕೀಯದ ಮೇಲಾಟ ಕಂಡುಬಂತು. ಬಿಜೆಪಿಯಲ್ಲಿ ವಿಜಯೇಂದ್ರ ಟೀಂ ಹಾಗೂ ಯತ್ನಾಳ್ ಟೀಂ ಮಧ್ಯೆ ಬಹಿರಂಗ ಬಣ ಗುದ್ದಾಟವಾಯಿತು. ಕುಟುಂಬ ರಾಜಕಾರಣದ ವಿರುದ್ದ ಸೆಟೆದು ನಿಂತ ಬಸನಗೌಡ ಪಾಟೀಲ್ ಯತ್ನಾಳ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ಯಡಿಯೂರಪ್ಪ ವಿರುದ್ಧ ತೊಡೆತಟ್ಟಿದರು.

ಯತ್ನಾಳ್ ಬಂಡಾಯದ ಟೀಂಗೆ ರಮೇಶ್ ಜಾರಕಿಹೊಳಿ, ಕುಮಾರ ಬಂಗಾರಪ್ಪ, ಹರೀಶ್, ಅರವಿಂದ ಲಿಂಬಾವಳಿ ಸೇರಿಕೊಂಡರು. ಇತ್ತ ವಿಜಯೇಂದ್ರ ಪರ ಮಾಜಿ ಶಾಸಕ ರೇಣುಕಾಚಾರ್ಯ, ಕಟ್ಟಾ ಸುಬ್ರಮಣ್ಯ ನಾಯ್ಡು, ಬಿ.ಸಿ.ಪಾಟೀಲ್ ಸೇರಿದಂತೆ ಕೆಲ ಮುಖಂಡರು ಬೆಂಬಲವಾಗಿ ನಿಂತರು.ಕಾಂಗ್ರೆಸ್​ನಲ್ಲೂ ಬಣ ರಾಜಕೀಯದ ಮುಸುಕಿನ ಗುದ್ದಾಟ ಜೋರಾಗೇ ಸದ್ದು ಮಾಡಿತು. ನಾಯಕತ್ವ ಬದಲಾವಣೆ ಕೂಗಿನ ಮಧ್ಯೆ ಸಿಎಂ ಸಿದ್ದರಾಮಯ್ಯ ಬಣ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಬಣದ ಮುಸುಕಿನ ಗುದ್ದಾಟ ಮುನ್ನೆಲೆಗೆ ಬಂತು. ಸಚಿವರಾದ ಸತೀಶ್ ಜಾರಕಿಹೊಳಿ, ಜಿ.ಪರಮೇಶ್ವರ್, ಹೆಚ್.ಸಿ.ಮಹದೇವಪ್ಪ ತಂಡಗಳು ಪ್ರತ್ಯೇಕ ಸಭೆಗಳನ್ನು ನಡೆಸಿ ಕಾಂಗ್ರೆಸ್ ಗುಂಪುಗಾರಿಕೆ ಸುದ್ದಿಯಾಯಿತು.

ಹೈಕಮಾಂಡ್ ತಪರಾಕಿ ಬಳಿಕ ಸದ್ಯ ಬಣಗಳು ಮೌನಕ್ಕೆ ಶರಣಾಗಿವೆ.ಇತ್ತ ಜೆಡಿಎಸ್ ಪಕ್ಷದಲ್ಲೂ ಬಣ ರಾಜಕೀಯ ಜೋರಾಗೇ ಸದ್ದಾಯಿತು. ಜಿ.ಟಿ.ದೇವೇಗೌಡರು ಬಹಿರಂಗವಾಗಿ ಪಕ್ಷದ ನಾಯಕತ್ವದ ಮೇಲೆ ತಮ್ಮ ಅಸಮಾಧಾನ ಹೊರಹಾಕಿದರು.‌ ಪಕ್ಷದ ಪ್ರಮುಖ ತೀರ್ಮಾನಗಳಲ್ಲಿ ತಮ್ಮನ್ನು ಕಡೆಗಣಿಸುತ್ತಿರುವ ಬಗ್ಗೆ ಅತೃಪ್ತಿ ವ್ಯಕ್ತಪಡಿಸಿದರು.

Surprise result in by-election:

ಕುಮಾರಸ್ವಾಮಿ ಹಾಗೂ ಡಿಸಿಎಂ ಡಿಕೆಶಿಯ ಪ್ರತಿಷ್ಠೆಯ ಕಣವಾಗಿದ್ದ ಚನ್ನಪಟ್ಟಣದಲ್ಲಿ ಡಿ.ಕೆ.ಬ್ರದರ್ಸ್ ತಂತ್ರಗಾರಿಕೆ ಫಲ ನೀಡಿತು. ಸಿ.ಪಿ.ಯೋಗೇಶ್ವರ್ ಅವರನ್ನು ಕೊನೇ ಕ್ಷಣದಲ್ಲಿ ಕಾಂಗ್ರೆಸ್ ಸೆಳೆದು ಟಿಕೆಟ್ ನೀಡಿ ಚನ್ನಪಟ್ಟಣವನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾದರು. ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅಖಾಡ ಶಿಗ್ಗಾಂವಿ ಉಪಸಮರದಲ್ಲಿ ಅವರ ಪುತ್ರ ಭರತ್ ಬೊಮ್ಮಾಯಿಯನ್ನು ಸೋಲಿಸುವ ಮೂಲಕ ಕಾಂಗ್ರೆಸ್ ಅಚ್ಚರಿ ಮೂಡಿಸಿತು.‌ ಸಂಡೂರಿನಲ್ಲೂ ಸಂಸದ ತುಕಾರಾಂ ಪತ್ನಿ ಗೆಲುವು ಸಾಧಿಸುವ ಮೂಲಕ ಮೂರು ಕ್ಷೇತ್ರಗಳ ಉಪಸಮರದಲ್ಲಿ ಕಾಂಗ್ರೆಸ್ ಗೆದ್ದು ಬೀಗಿತು.‌

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

EDUCATION SOCIETY : 5 ಮತ್ತು 8 ನೇ ತರಗತಿ ವಿದ್ಯಾರ್ಥಿಗಳಿಗೆ ‘ನೋ-ಡಿಟೆನ್ಷನ್ ನೀತಿ’ ರದ್ದುಗೊಳಿಸಿದ ಕೇಂದ್ರ

New Delhi News: 2019 ರ ಶಿಕ್ಷಣ ಹಕ್ಕು ಕಾಯಿದೆ(ಆರ್‌ಟಿಇ) ತಿದ್ದುಪಡಿಯ ನಂತರ, ಕನಿಷ್ಠ 16 ರಾಜ್ಯಗಳು ಮತ್ತು ಎರಡು ಕೇಂದ್ರಾಡಳಿತ ಪ್ರದೇಶಗಳು ಈಗಾಗಲೇ ಈ...

J AND K AND LADAKH HIGH COURT – ಮಹಿಳಾ ವಕೀಲರು ಬುರ್ಖಾ ಧರಿಸಿ ವಾದ ಮಾಡುವಂತಿಲ್ಲ

Srinagar News: ಬುರ್ಖಾ ಧರಿಸಿ ವಾದ ಮಾಡುವಂತಿಲ್ಲ ಎಂದು ಜಮ್ಮು- ಕಾಶ್ಮೀರ ಮತ್ತು ಲಡಾಖ್ ಹೈಕೋರ್ಟ್ ತಿಳಿಸಿದೆ. ಬಾರ್ ಕೌನ್ಸಿಲ್ ಆಫ್ ಇಂಡಿಯಾದ ವಸ್ತ್ರ ಸಂಹಿತೆ...

C T RAVI CASE – ಕೆಲವು ಬಾರಿ ಸರ್ಕಾರಕ್ಕೆ ಮುಜುಗರ

Bangalore News: "ಕೆಲವು ಬಾರಿ ಸರ್ಕಾರಕ್ಕೆ ‌ಮುಜುಗರ ಆಗುತ್ತದೆ" ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು."ಪೊಲೀಸರಿಗೆ ಅವರದ್ದೇ ಆದ ನಿಯಮವಿದೆ. ಎಲ್ಲದಕ್ಕೂ ನಮ್ಮನ್ನು ಕೇಳಬೇಕಿಲ್ಲ. ಉನ್ನತ...

BENGALURU SECURITY – ಕ್ರಿಸ್ಮಸ್, ಹೊಸ ವರ್ಷಾಚರಣೆ ವೇಳೆ ಅಹಿತಕರ ಘಟನೆ ನಡೆದರೆ ಡಿಸಿಪಿಗಳೇ ಹೊಣೆ

Bangalore News: ಬೆಂಗಳೂರಿನ ಎಂ.ಜಿ.ರಸ್ತೆ, ಬಿಗ್ರೇಡ್ ರಸ್ತೆ ಹಾಗೂ ಚರ್ಚ್ ಸ್ಟ್ರೀಟ್​​ನಲ್ಲಿ ಹೊಸ ವರ್ಷ ಆಚರಿಸಲು ಸಾರ್ವಜನಿಕರಿಗೆ ನಿರ್ಬಂಧ ವಿಧಿಸಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್...