spot_img
spot_img

J AND K AND LADAKH HIGH COURT – ಮಹಿಳಾ ವಕೀಲರು ಬುರ್ಖಾ ಧರಿಸಿ ವಾದ ಮಾಡುವಂತಿಲ್ಲ

spot_img
spot_img

Share post:

Srinagar News:

ಬುರ್ಖಾ ಧರಿಸಿ ವಾದ ಮಾಡುವಂತಿಲ್ಲ ಎಂದು ಜಮ್ಮು- ಕಾಶ್ಮೀರ ಮತ್ತು ಲಡಾಖ್ ಹೈಕೋರ್ಟ್ ತಿಳಿಸಿದೆ. ಬಾರ್ ಕೌನ್ಸಿಲ್ ಆಫ್ ಇಂಡಿಯಾದ ವಸ್ತ್ರ ಸಂಹಿತೆ ನಿಯಮಗಳ ಪ್ರಕಾರ ಮಹಿಳಾ ವಕೀಲರು ಬುರ್ಖಾ ಧರಿಸಿ ನ್ಯಾಯಾಲಯದ ಕಲಾಪಗಳಲ್ಲಿ ಭಾಗವಹಿಸುವಂತಿಲ್ಲ ಎಂದು ಜಮ್ಮು- ಕಾಶ್ಮೀರ ಮತ್ತು ಲಡಾಖ್ ಹೈಕೋರ್ಟ್ ಆದೇಶಿಸಿದೆ. ಡಿ.13ರಂದು ಸೈಯದ್ ಐನೈನ್ ಖಾದ್ರಿ ಎಂದು ಪರಿಚಯಿಸಿಕೊಂಡ ಮಹಿಳಾ ವಕೀಲರೊಬ್ಬರು ಮುಖ ಮುಚ್ಚಿಕೊಂಡು ನ್ಯಾಯಾಲಯದಲ್ಲಿ ವಾದ ಮಂಡಿಸಲು ಹಾಜರಾಗಿದ್ದರು. ಇದನ್ನು ಗಮನಿಸಿದ ನ್ಯಾಯಾಲಯ, ಬುರ್ಖಾ ಧರಿಸಿ ನ್ಯಾಯಾಲಯದಲ್ಲಿ ಹಾಜರಾಗುವಂತಿಲ್ಲ ಎಂದು ಹೇಳಿತು.

‘Violation of my fundamental rights’-Lawyer refuses to remove burqa:

“ವ್ಯಕ್ತಿಯಾಗಿ ಮತ್ತು ವೃತ್ತಿಪರವಾಗಿ ಅವರ ನಿಜವಾದ ಗುರುತನ್ನು ದೃಢೀಕರಿಸಲು ಈ ನ್ಯಾಯಾಲಯಕ್ಕೆ ಸಾಧ್ಯವಾಗದಿರುವುದರಿಂದ ತನ್ನನ್ನು ವಕೀಲೆ ಸೈಯದ್ ಐನೈನ್ ಖಾದ್ರಿ ಎಂದು ಗುರುತಿಸಿಕೊಳ್ಳುವ ವ್ಯಕ್ತಿಯು ಅರ್ಜಿದಾರರ ವಕೀಲರೆಂದು ಈ ನ್ಯಾಯಾಲಯವು ಪರಿಗಣಿಸುವುದಿಲ್ಲ.” ಎಂದು ನ್ಯಾಯಮೂರ್ತಿ ಭಾರತಿ ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.ತರುವಾಯ ಪ್ರಕರಣವನ್ನು ಮುಂದೂಡಿದ ನ್ಯಾಯಾಲಯ, ಬುರ್ಖಾ ಧರಿಸಿ ವಾದ ಮಾಡಲು ಅವಕಾಶವಿದೆಯೇ ಎಂಬುದನ್ನು ಪರಿಶೀಲಿಸಿ ವರದಿ ಸಲ್ಲಿಸುವಂತೆ ರಿಜಿಸ್ಟ್ರಾರ್ ಜನರಲ್​ಗೆ ಆದೇಶಿಸಿತು. ಈ ಬಗ್ಗೆ ಪರಿಶೀಲನೆ ನಡೆಸಿದ ರಿಜಿಸ್ಟ್ರಾರ್ ಜನರಲ್ ಬುರ್ಖಾ ಧರಿಸಿ ವಾದ ಮಾಡಲು ಅವಕಾಶ ನೀಡುವಂಥ ಯಾವುದೇ ನಿಬಂಧನೆ ಇಲ್ಲ ಎಂದು ಡಿಸೆಂಬರ್ 5 ರಂದು ನ್ಯಾಯಾಲಯಕ್ಕೆ ಮಾಹಿತಿ ನೀಡಿದ್ದರು.

ಕೌಟುಂಬಿಕ ಹಿಂಸಾಚಾರದ ದೂರು ರದ್ದುಗೊಳಿಸುವಂತೆ ಕೋರಿದ ಪ್ರಕರಣದಲ್ಲಿ ತಾನು ಅರ್ಜಿದಾರರನ್ನು ಪ್ರತಿನಿಧಿಸುತ್ತಿದ್ದೇನೆ ಎಂದು ಅವರು ನ್ಯಾಯಾಲಯಕ್ಕೆ ಹೇಳಿದರು. ಆದರೆ ಬುರ್ಖಾ ತೆಗೆದು ವಾದ ಮಂಡಿಸುವಂತೆ ನ್ಯಾಯಮೂರ್ತಿ ರಾಹುಲ್ ಭಾರತಿ ಸೂಚಿಸಿದಾಗ, ಅದು ತನ್ನ ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗುತ್ತದೆ ಎಂದು ಹೇಳಿ ಬುರ್ಖಾ ತೆಗೆಯಲು ನಿರಾಕರಿಸಿದ್ದರು. ಹೀಗಾಗಿ ಮಹಿಳಾ ವಕೀಲರ ಗುರುತು ಪರಿಚಯಗಳನ್ನು ಖಾತರಿಪಡಿಸಿಕೊಳ್ಳಲು ಸಾಧ್ಯವಾಗದ್ದರಿಂದ ನ್ಯಾಯಾಲಯ ಆಕೆ ವಾದ ಮಂಡನೆ ಮಾಡದಂತೆ ನಿರ್ಬಂಧಿಸಿತು.

ಬಿಸಿಐ ನಿಯಮಗಳ ಅಧ್ಯಾಯ 4 (ಭಾಗ 6) ರ ಸೆಕ್ಷನ್ 49 (1) (ಜಿಜಿ) ಅಡಿಯಲ್ಲಿ ನಿಯಮಗಳನ್ನು ಉಲ್ಲೇಖಿಸಿದ ನ್ಯಾಯಮೂರ್ತಿ ಮೋಕ್ಷ ಖಜುರಿಯಾ ಕಾಜ್ಮಿ, ಮುಖ ಮುಚ್ಚುವಂಥ ಉಡುಪು ಧರಿಸಲು ಅನುಮತಿ ನೀಡುವಂಥ ಯಾವುದೇ ನಿಯಮವಿಲ್ಲ ಎಂದು ಡಿಸೆಂಬರ್ 13ರಂದು ದೃಢಪಡಿಸಿದರು. ವರದಿಯ ಪ್ರಕಾರ, ವಕೀಲರಿಗೆ ನಿಗದಿಪಡಿಸಿದ ಡ್ರೆಸ್ ಕೋಡ್ ಹಲವಾರು ಮಾರ್ಗಸೂಚಿಗಳನ್ನು ಒಳಗೊಂಡಿದೆ. ಮಹಿಳೆಯರು ಬಿಳಿ ಕಾಲರ್ ಹೊಂದಿರುವ ಕಪ್ಪು ಪೂರ್ಣ-ತೋಳಿನ ಜಾಕೆಟ್ ಅಥವಾ ರವಿಕೆಯನ್ನು ಮೇಲಿನ ಉಡುಪು ಆಗಿ ಧರಿಸಬೇಕಾಗುತ್ತದೆ. ಪರ್ಯಾಯವಾಗಿ, ಕಾಲರ್ ಹೊಂದಿರುವ ಅಥವಾ ಇಲ್ಲದ, ಬಿಳಿ ಬ್ಯಾಂಡ್​ಗಳೊಂದಿಗೆ ಜೋಡಿಸಲಾದ ಬಿಳಿ ರವಿಕೆ ಮತ್ತು ಕಪ್ಪು ಕೋಟ್ ಅನ್ನು ಸಹ ಅನುಮತಿಸಲಾಗಿದೆ.

ನ್ಯಾಯಾಲಯದ ರಿಜಿಸ್ಟ್ರಾರ್ ಅವರು ಡಿಸೆಂಬರ್ 5ರಂದು ಸಲ್ಲಿಸಿದ ವರದಿಯಲ್ಲಿ, ಬಿಸಿಐ ನಿಯಮಗಳ ಅಧ್ಯಾಯ 4 (ಭಾಗ 6)ರಲ್ಲಿ ಮಹಿಳಾ ವಕೀಲರ ಡ್ರೆಸ್ ಕೋಡ್ ಪ್ರಕಾರ ನ್ಯಾಯಾಲಯದಲ್ಲಿ ಬುರ್ಖಾ ಧರಿಸುವಂತಿಲ್ಲ ಎಂದು ತಿಳಿಸಲಾಗಿದೆ. ಕೆಳ ಉಡುಪುಗಳಿಗಾಗಿ ಮಹಿಳೆಯರು ಬಿಳಿ, ಕಪ್ಪು ಅಥವಾ ಯಾವುದೇ ಮೃದುವಾದ ಬಣ್ಣದ ಸೀರೆಗಳು ಅಥವಾ ಉದ್ದನೆಯ ಸ್ಕರ್ಟ್​ಗಳನ್ನು ಧರಿಸಬಹುದು. ಇತರ ಆಯ್ಕೆಗಳಲ್ಲಿ ಫ್ಲೇರ್ಡ್ ಪ್ಯಾಂಟ್, ಚೂಡಿದಾರ್-ಕುರ್ತಾ, ಸಲ್ವಾರ್-ಕುರ್ತಾ ಅಥವಾ ಬಿಳಿ, ಕಪ್ಪು, ಕಪ್ಪು-ಪಟ್ಟಿ ಅಥವಾ ಬೂದು ಬಣ್ಣದ ಪಂಜಾಬಿ ಉಡುಪುಗಳು ಸೇರಿವೆ. ಇವುಗಳನ್ನು ಬಿಳಿ ಅಥವಾ ಕಪ್ಪು ಬಣ್ಣದಲ್ಲಿ ದುಪಟ್ಟಾದೊಂದಿಗೆ ಅಥವಾ ಇಲ್ಲದೆ ಧರಿಸಬಹುದು. ಸಾಂಪ್ರದಾಯಿಕ ಉಡುಗೆ, ಕಪ್ಪು ಕೋಟ್ ಮತ್ತು ಬ್ಯಾಂಡ್ ಗಳೊಂದಿಗೆ ಜೋಡಿಸಲ್ಪಟ್ಟರೂ ಸಹ ಅದು ಸ್ವೀಕಾರಾರ್ಹವಾಗಿದೆ.

 

Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

MOTOROLA EDGE 60 FUSION – ಅದ್ಭುತವಾದ ಕ್ಯಾಮೆರಾ ಸೆಟಪ್, ವಾಟರ್ ಪ್ರೊಟೆಕ್ಷನ್ – ಮೊಟೊರೊಲಾದ ಹೊಸ ಫೋನ್ನ ಬೆಲೆ ಕೇವಲ ಇಷ್ಟೇ!

Motorola Edge 60 Fusion: ಬಹುನಿರೀಕ್ಷಿತ ' MOTOROLA EDGE 60 FUSION' ಕೊನೆಗೂ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಕಂಪನಿಯು ಇದನ್ನು ' MOTOROLA EDGE...

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...