spot_img
spot_img

KUMBHAMELA SPECIAL TRAIN – ಪ್ರಯಾಗ್ ರಾಜ್ಗೆ ಹುಬ್ಬಳ್ಳಿ, ಮೈಸೂರಿನಿಂದ ವಿಶೇಷ ರೈಲು

spot_img
spot_img

Share post:

Hubli News:

ಕುಂಭಮೇಳದ ಸಮಯದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು ನೈಋತ್ಯ ರೈಲ್ವೆಯು ಹುಬ್ಬಳ್ಳಿ ಹಾಗೂ ಮೈಸೂರಿನಿಂದ ಪ್ರಯಾಗ್ ರಾಜ್​​ಗೆ ವಿಶೇಷ ಏಕಮುಖ ಎಕ್ಸ್ ಪ್ರೆಸ್ ರೈಲು ಸೇವೆ ನೀಡಲಿದೆ.

Special Train from Mysore:

ಮೈಸೂರು-ಪ್ರಯಾಗ್ ವಿಶೇಷ ಏಕಮುಖ ಎಕ್ಸ್ ಪ್ರೆಸ್ ರೈಲು ಡಿಸೆಂಬರ್ 23, 2024 (ಸೋಮವಾರ) 00:30 ಗಂಟೆಗೆ ಮೈಸೂರಿನಿಂದ ಹೊರಟು, ಬುಧವಾರ 3:00 ಗಂಟೆಗೆ ಪ್ರಯಾಗ್ ರಾಜ್ ಜಂಕ್ಷನ್ ತಲುಪಲಿದೆ.

Where to stop:

ಮಾರ್ಗಮಧ್ಯದಲ್ಲಿ, ಈ ರೈಲು ಮಂಡ್ಯಾ, ಕೆಎಸ್ಆರ್ ಬೆಂಗಳೂರು, ಯಶವಂತಪುರ, ತುಮಕೂರು, ಅರಸೀಕೆರೆ, ಕಡೂರು, ಚಿಕ್ಕಜಾಜೂರು, ದಾವಣಗೆರೆ, ಎಸ್ಎಂಎಂ ಹಾವೇರಿ, ಎಸ್ಎಸ್ಎಸ್ ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ಘಟಪ್ರಭಾ, ಮಿರಜ್, ಸಾಂಗ್ಲಿ, ಕರಾಡ್, ಪುಣೆ, ದೌಂಡ್ ಚೋರ್ಡ್ ಲೈನ್, ಅಹ್ಮದನಗರ, ಮನ್ಮಡ, ಭುಸಾವಲ್, ಖಾಂಡ್ವಾ, ತಲ್ವಾಡಿಯಾ, ಛಾನೆರಾ, ಖಿರ್ಕಿಯಾ, ಹರ್ದಾ, ಬನಪುರ, ಇಟಾರ್ಸಿ, ಪಿಪರಿಯಾ, ನರಸಿಂಗಪುರ, ಜಬಲ್ಪುರ, ಕಟ್ನಿ, ಮೈಹಾರ್, ಸತ್ನಾ ಮತ್ತು ಮಾಣಿಕ್ಪುರ ನಿಲ್ದಾಣಗಳಲ್ಲಿ ನಿಲ್ಲಲಿದೆ.

Hubli to Prayagraj Special Train:

ಹುಬ್ಬಳ್ಳಿಯಿಂದ ಪ್ರಯಾಗ್‌ ರಾಜ್‌ಗೆ ಏಕಮಾರ್ಗ ವಿಶೇಷ ಎಕ್ಸ್‌ಪ್ರೆಸ್ ರೈಲಿನ ವಿವರಗಳು. ಡಿಸೆಂಬರ್ 26, 2024 (ಗುರುವಾರ) ರಂದು ಎಸ್ಎಸ್ಎಸ್ ಹುಬ್ಬಳ್ಳಿ-ಪ್ರಯಾಗ್‌ರಾಜ್ ಏಕಮಾರ್ಗ ವಿಶೇಷ ಎಕ್ಸ್ ಪ್ರೆಸ್ (ರೈಲು ಸಂಖ್ಯೆ 07369) ರೈಲು ಹುಬ್ಬಳ್ಳಿಯಿಂದ 11:00 ಗಂಟೆಗೆ ಹೊರಟು, ಶನಿವಾರ 03:00 ಗಂಟೆಗೆ ಪ್ರಯಾಗ್‌ರಾಜ್ ತಲುಪಲಿದೆ.

ಈ ರೈಲು ಧಾರವಾಡ, ಬೆಳಗಾವಿ, ಘಟಪ್ರಭಾ, ಮಿರಜ್, ಸಾಂಗ್ಲಿ, ಕರಾಡ್, ಪುಣೆ, ದೌಂಡ್ ಚೋರ್ಡ್ ಲೈನ್, ಅಹ್ಮದನಗರ, ಮನ್ಮಡ, ಭುಸಾವಲ್, ಖಾಂಡ್ವಾ, ತಲ್ವಾಡಿಯಾ, ಛಾನೆರಾ, ಖಿರ್ಕಿಯಾ, ಹರ್ದಾ, ಬಾನಾಪುರ, ಇಟಾರ್ಸಿ, ಪಿಪರಿಯಾ, ನರಸಿಂಗಪುರ, ಜಬಲ್ಪುರ, ಕಟ್ನಿ, ಮೈಹಾರ್, ಸತ್ನಾ ಮತ್ತು ಮಾಣಿಕ್ಪುರ ನಿಲ್ದಾಣಗಳಲ್ಲಿ ನಿಲುಗಡೆಯಾಗಲಿದೆ. ಈ ರೈಲು 11 ಸ್ಲೀಪರ್ ಕ್ಲಾಸ್, ಏಳು ಜನರಲ್ ಸೆಕೆಂಡ್ ಕ್ಲಾಸ್ ಮತ್ತು ಎಸ್ಎಲ್ಆರ್​​ಡಿ ಸೇರಿದಂತೆ ಒಟ್ಟು 20 ಬೋಗಿಗಳನ್ನು ಹೊಂದಿರುತ್ತದೆ.ಈ ರೈಲಿನ ಆಗಮನ ಮತ್ತು ನಿರ್ಗಮನದ ಸಮಯವನ್ನು ತಿಳಿಯಲು,  139 ನಂಬರ್​ಗೆ ಡಯಲ್ ಮಾಡಿ ಅಥವಾ NTES ಅಪ್ಲಿಕೇಶನ್ ಡೌನ್ಲೋಡ್ ಮಾಡಿ ಮಾಹಿತಿ ಪಡೆದುಕೊಳ್ಳಬಹುದು ಎಂದು ನೈರುತ್ಯ ರೈಲ್ವೆ ಪ್ರಕಟಣೆಯಲ್ಲಿ ತಿಳಿಸಿದೆ.

Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

MOTOROLA EDGE 60 FUSION – ಅದ್ಭುತವಾದ ಕ್ಯಾಮೆರಾ ಸೆಟಪ್, ವಾಟರ್ ಪ್ರೊಟೆಕ್ಷನ್ – ಮೊಟೊರೊಲಾದ ಹೊಸ ಫೋನ್ನ ಬೆಲೆ ಕೇವಲ ಇಷ್ಟೇ!

Motorola Edge 60 Fusion: ಬಹುನಿರೀಕ್ಷಿತ ' MOTOROLA EDGE 60 FUSION' ಕೊನೆಗೂ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಕಂಪನಿಯು ಇದನ್ನು ' MOTOROLA EDGE...

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...