Mysore News:
2024ರಲ್ಲಿ ಮೈಸೂರು ಜಿಲ್ಲೆ ಹಲವು ಸಿಹಿ-ಕಹಿ ಘಟನೆಗಳಿಗೆ ಸಾಕ್ಷಿಯಾಗಿದೆ. ಅದರಲ್ಲಿನ ಹಲವು ಪ್ರಮುಖ ಸುದ್ದಿಗಳ ಕುರಿತ ಮೆಲುಕು ನೋಟ 2025ಕ್ಕೆ ಕ್ಷಣಗಣನೆ ಶುರುವಾಗಿದೆ. ಹೊಸ ವರ್ಷವನ್ನು ಅದ್ಧೂರಿಯಾಗಿ ಸ್ವಾಗತಿಸಲು ಜನ ಕಾತುರರಾಗಿದ್ದಾರೆ.
Fund sanctioned for renovation of Jayalakshmi Vilasa Palace:
ನಗರ ಮಾನಸ ಗಂಗೋತ್ರಿಯಲ್ಲಿರುವ ಪಾರಂಪರಿಕ ಕಟ್ಟಡವಾದ ಜಯಲಕ್ಷ್ಮಿ ವಿಲಾಸ ಅರಮನೆಯ ಸಂರಕ್ಷಣೆಗೆ ಅಮೆರಿಕ ಸರ್ಕಾರ ಮತ್ತು ಮುಂಬೈನ ಹರೀಶ್–ಬೀನಾ ಶಾ ಫೌಂಡೇಶನ್ ಆರ್ಥಿಕ ಬೆಂಬಲ ಘೋಷಿಸಿ ಸುಮಾರು 30 ಕೋಟಿ ರೂ. ಹಣವನ್ನು ನವಿಕೀರಣಕ್ಕೆ ಬಿಡುಗಡೆ ಮಾಡಿತ್ತು.
Three drowned in Kapila river:
ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ ಮುಗಿಸಿಕೊಂಡು, ದಕ್ಷಿಣದ ಕಾಶಿ ನಂಜನಗೂಡಿನ ನಂಜುಂಡೇಶ್ವರನ ದರ್ಶನಕ್ಕಾಗಿ ಅವರು ಆಗಮಿಸಿದ್ದಾಗ ಈ ದುರ್ಘಟನೆ ನಡೆದಿತ್ತು.ಸ್ನಾನ ಮಾಡಲು ಹೋಗಿದ್ದ ಮೂವರು ಅಯ್ಯಪ್ಪ ಮಾಲಾಧಾರಿಗಳು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ನಂಜನಗೂಡು ಪಟ್ಟಣದ ಕಪಿಲಾ ನದಿಯ ಹೆಜ್ಜಿಗೆ ಸೇತುವೆ ಬಳಿ ಸಂಭವಿಸಿತ್ತು.
Arun Yogiraj statue installed in Ayodhya:
ಈ ವರ್ಷ ಉದ್ಘಾಟನೆಯಾದ ಅಯೋಧ್ಯೆ ರಾಮ ಮಂದಿರದಲ್ಲಿ ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಅವರು ಕೆತ್ತಿದ ಬಾಲ ರಾಮನ ಮೂರ್ತಿಯನ್ನು ಪ್ರತಿಷ್ಠಾಪಿಸಲಾಯಿತು. ವಿಶೇಷವೆಂದರೆ ಮೂರ್ತಿ ಕತ್ತೆನೆಗೆ ಬಳಸಿದ ಕಲ್ಲು ಕೂಡಾ ಮೈಸೂರಿನ ಹೆಚ್.ಡಿ ಕೋಟೆಯಲ್ಲಿ ದೊರೆತಿತ್ತು.
Save Bandipur Campaign:
ಕೇರಳದ ನೀಲಾಂಬುರ್ ಮತ್ತು ಕರ್ನಾಟಕದ ನಂಜನಗೂಡಿಗೆ ವಯನಾಡಿನ ಮೂಲಕ ರೈಲು ಸಂಪರ್ಕ ಕಲ್ಪಿಸುವ ನೀಲಾಂಬುರ್ – ನಂಜನಗೂಡು ರೈಲ್ವೆ ಯೋಜನೆ ವಿರೋಧಿಸಿ ‘ಬಂಡೀಪುರ ಉಳಿಸಿ’ ಎಂಬ ಅಭಿಯಾನ ನಡೆಸಲಾಗಿತ್ತು.
Three youths succumbed to unscientific hump:
ಮೈಸೂರು ನಗರದ ಬೋಗಾದಿ ಮುಖ್ಯ ರಸ್ತೆಯಲ್ಲಿ ಮೈಸೂರು ವಿಶ್ವವಿದ್ಯಾನಿಲಯದ ಮಾನಸ ಗಂಗೋತ್ರಿ ಮುಖ್ಯ ದ್ವಾರದ ಎರಡು ಬದಿಯಲ್ಲಿ ನಿರ್ಮಿಸಿದ್ದ ಅವೈಜ್ಞಾನಿಕ ಹಂಪ್ಗೆ ಮೂವರು ಬಲಿಯಾಗಿದ್ದರು. ಘಟನೆ ಬಳಿಕ ಹಂಪ್ ತೆಗೆದುಹಾಕಲಾಗಿತ್ತು.ಚಾಮುಂಡಿ ಬೆಟ್ಟಕ್ಕೆ ಆಗಮಿಸುವ ಸಾರ್ವಜನಿಕರಿಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಸದುದ್ದೇಶದಿಂದ ಶ್ರೀಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ವಿಧಿಯೇಕ 2024ಕ್ಕೆ ಫೆ.21ರಂದು ವಿಧಾನಸಭೆಯಲ್ಲಿ ಸರ್ವಾನುಮತದಿಂದ ಅಂಗೀಕಾರಗೊಂಡಿತ್ತು.ಕೇಂದ್ರ ಸರ್ಕಾರದ ಭಾರತೀಯ ಕಂಟೇನರ್ ನಿಗಮ(ಸಿಒಎನ್‌ಸಿಒಆರ್)ದಿಂದ ಜಿಲ್ಲೆಯ ನಂಜನಗೂಡು ತಾಲೂಕಿನ ಹಿಮ್ಮಾವು ಕೈಗಾರಿಕಾ ಪ್ರದೇಶದಲ್ಲಿ ಮಲ್ಟಿ ಮಾಡಲ್ ಲಾಜಿಸ್ಟಿಕ್ ಪಾರ್ಕ್’ (ಎಂಎಂಎಲ್‌ಪಿ) ಲೋಕಾರ್ಪಣೆಗೊಂಡಿತ್ತು.
Honorary doctorate to four from University of Mysore:
103ನೇ ಘಟಿಕೋತ್ಸವ ಸಮಾರಂಭದಲ್ಲಿ ವಿಶ್ವವಿಖ್ಯಾತ ಕ್ರಿಕೆಟಿಗರಾದ ಜಾವಗಲ್ ಶ್ರೀನಾಥ್ ಅವರಿಗೆ ಗೌರವ ಪದವಿ ನೀಡಿ ಗೌರವಿಸಲು ನಿರ್ಧರಿಸಲಾಗಿತ್ತು. ಆದರೆ ಅವರ ಬಿಡುವಿಲ್ಲದ ಕಾರಣ ಅಂದು ಬರಲಾಗಲಿಲ್ಲ. ಈ ಘಟಿಕೋತ್ಸವದಲ್ಲಿ ಅವರನ್ನೂ ಗೌರವಿಸಲಾಗಿತ್ತು. ಮೈಸೂರು ವಿಶ್ವವಿದ್ಯಾಲಯದ 104ನೇ ಘಟಿಕೋತ್ಸವ ಸಮಾರಂಭದಲ್ಲಿ ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ, ಪ್ರಾಧ್ಯಾಪಕ ಡಾ. ಭಾಷ್ಯಂ ಸ್ವಾಮೀಜಿ ಮತ್ತು ಎಂ.ಆರ್. ಸೀತಾರಾಮ್ ಅವರಿಗೆ ಗೌರವ ಡಾಕ್ಟರೇಟ್ ಪದವಿ ನೀಡಿ ಗೌರವಿಸಲಾಗಿತ್ತು.
MP V. Srinivas Prasad is late:
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಚಾಮರಾಜನಗರದ ಮಾಜಿ ಸಂಸದ ಶ್ರೀನಿವಾಸ್ ಪ್ರಸಾದ್ (76) ಅವರು ಏಪ್ರಿಲ್ 28 ರಂದು ಇಹಲೋಕ ತ್ಯಜಿಸಿದ್ದರು. ರಾಜ್ಯದ ಗಮನ ಸೆಳೆದಿದ್ದ ಮೈಸೂರು- ಕೊಡಗು ಲೋಕಸಭೆ ಚುನಾವಣೆಯಲ್ಲಿ ಬರೋಬ್ಬರಿ 1,39,262 ಮತಗಳ ಅಂತರದಿಂದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಜಯ ಸಾಧಿಸಿದ್ದರು.
Actor Darshan Arrested:
ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಅವರನ್ನು ಮೈಸೂರು ನಗರದಲ್ಲಿ ಬೆಂಗಳೂರು ಪೊಲೀಸರು ಬಂಧಿಸಿದ್ದರು.
Transfer of Muda Officers:
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ಬದಲಿ ನಿವೇಶನಗಳ ಹಂಚಿಕೆಯಲ್ಲಿ ಅವ್ಯವಹಾರ ಆರೋಪ ಕೇಳಿಬಂದ ಹಿನ್ನೆಲೆ ಮುಡಾ ಆಯುಕ್ತ ಸೇರಿದಂತೆ ಮೂವರು ಅಧಿಕಾರಿಗಳನ್ನು ಸರ್ಕಾರ ವರ್ಗಾವಣೆ ಮಾಡಿ ಆದೇಶಿಸಿತ್ತು. ಮೈಸೂರು ನಗರದ ಮೊದಲ ಮಹಿಳಾ ಪೊಲೀಸ್ ಆಯುಕ್ತೆಯಾಗಿ ಸೀಮಾ ಲಾಟ್ಕರ್ ಅವರು ನೇಮಕವಾಗಿದ್ದರು.
ಮುಡಾ ಹಗರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಪ್ರತಿಪಕ್ಷಗಳಾದ ಬಿಜೆಪಿ – ಜೆಡಿಎಸ್ ನಡೆಸಿದ್ದ ಮೈಸೂರು ಚಲೋ ಪಾದಯಾತ್ರೆಗೆ ಪ್ರತಿಯಾಗಿ ಕಾಂಗ್ರೆಸ್ ಸರ್ಕಾರದಿಂದ ಜನಾಂದೋಲನ ಸಮಾವೇಶ ನಡೆಸಿತ್ತು. ಮುಡಾ, ವಾಲ್ಮೀಕಿ ಹಗರಣಗಳ ವಿರುದ್ಧ ಬಿಜೆಪಿ-ಜೆಡಿಎಸ್ ಜೊತೆಯಾಗಿ ಮೈಸೂರು ಚಲೋ ಪಾದಯಾತ್ರೆಯ ಸಮಾರೋಪ ಸಮಾರಂಭ ಮೈಸೂರು ನಗರದಲ್ಲಿ ನಡೆದಿತ್ತು.
ವಿಶ್ವವಿಖ್ಯಾತ ಮೈಸೂರು ದಸರಾಕ್ಕಾಗಿ 9 ಆನೆಗಳು ಹುಣಸೂರು ತಾಲೂಕಿನ ವೀರನಹೊಸಹಳ್ಳಿಯಿಂದ ಗಜಪಯಣದ ಮೂಲಕ ನಗರಕ್ಕೆ ಆಗಮಿಸಿದ್ದವು. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ(ಮುಡಾ) ಹಗರಣ ಸಂಬಂಧ ಹಿಂದಿನ ಮುಡಾ ಆಯುಕ್ತ, ಹಾವೇರಿ ವಿಶ್ವವಿದ್ಯಾಲಯದ ಕುಲಸಚಿವರಾಗಿ ನೇಮಕವಾಗಿದ್ದ ಜಿ.ಟಿ ದಿನೇಶ್ ಕುಮಾರ್ ಅವರನ್ನು ರಾಜ್ಯ ಸರ್ಕಾರ ಅಮಾನತು ಮಾಡಿ ಆದೇಶಿಸಿತ್ತು.
ಮುಡಾ ಹಗರಣ ಸಂಬಂಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಆದೇಶಿಸಿ, ಎಫ್‌ಐಆರ್ ದಾಖಲಿಸಲು ಮೈಸೂರು ಲೋಕಾಯುಕ್ತ ಪೊಲೀಸರಿಗೆ ಸೂಚನೆ ನೀಡಿತ್ತು. ನಂತರ ಮೈಸೂರಿನ ಲೋಕಾಯುಕ್ತ ಪೊಲೀಸರು ಸಿಎಂ ಸಿದ್ದರಾಮಯ್ಯನವರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದರು. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್‌ಐಆರ್ ದಾಖಲಾಗುತ್ತಿದ್ದಂತೆ, ಸಿಎಂ ಪತ್ನಿ ತಮಗೆ ನೀಡಿದ್ದ 14 ಸೈಟ್ಗಳನ್ನ ವಾಪಸ್ ಮುಡಾಗೆ ನೀಡಿದ್ದರು.
Literature Dr. Dasara Inauguration by Hampana:
ವಿಶ್ವವಿಖ್ಯಾತ ದಸರಾ ಮಹೋತ್ಸವಕ್ಕೆ ಚಾಮುಂಡೇಶ್ವರಿ ದೇವಿಗೆ ಪುಷ್ಪಾರ್ಚನೆ ಮಾಡಿ, ಪೂಜೆ ಸಲ್ಲಿಸುವ ಮೂಲಕ ಹಿರಿಯ ಸಾಹಿತಿ ಹಂಪ ನಾಗರಾಜಯ್ಯ ಅವರು ಚಾಲನೆ ನೀಡಿದರು. ದಸರಾ ವೇಳೆ ಅರಮನೆ ನಗರಿಯಲ್ಲಿ ಸಂಭ್ರಮ ಮನೆ ಮಾಡಿತ್ತು. ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹಾಗೂ ಪತ್ನಿ ತ್ರಿಷಿಕಾ ದಂಪತಿಗೆ ಎರಡನೇ ಗಂಡು ಮಗು ಜನಿಸಿತ್ತು.ವಿಶ್ವವಿಖ್ಯಾತ ಮೈಸೂರು ದಸರಾದ ಆಕರ್ಷಣೆಯಾದ ‘ಜಂಬೂಸವಾರಿ’ ಮಳೆಯ ನಡುವೆಯೂ ಅದ್ಧೂರಿಯಾಗಿ ನಡೆಯಿತು.
Mari Gowda resigns as Muda president:
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನಕ್ಕೆ ಅನಾರೋಗ್ಯದ ಕಾರಣ ನೀಡಿ ಮರೀಗೌಡ ಅವರು ರಾಜೀನಾಮೆ ನೀಡಿದ್ದರು.ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದ ಅಕ್ರಮ ಸೈಟು ಹಂಚಿಕೆ ಪ್ರಕರಣ ಸಂಬಂಧ ಜಾರಿ ನಿರ್ದೇಶನಾಲಯದ(ಇ.ಡಿ) ಅಧಿಕಾರಿಗಳು ಮುಡಾ ಕಚೇರಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಅಗತ್ಯ ದಾಖಲೆಗಳನ್ನು ವಶಕ್ಕೆ ಪಡೆದಿದ್ದರು.ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ಸೇರಿದಂತೆ ನಾಲ್ವರ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು. ಹೀಗಾಗಿ ಸಿಎಂ ಸಿದ್ದರಾಮಯ್ಯನವರು ನಗರದ ದಿವಾನ್ಸ್ ರಸ್ತೆಯಲ್ಲಿರುವ ಲೋಕಾಯುಕ್ತ ಕಚೇರಿಗೆ ಆಗಮಿಸಿ ವಿಚಾರಣೆ ಎದುರಿಸಿದ್ದರು.
Rape of young woman:
ಯುವತಿಯೋರ್ವಳ ಮೇಲೆ ಯುವಕರಿಬ್ಬರು ಅತ್ಯಾಚಾರ ಎಸಗಿದ್ದ ಘಟನೆ ಮೈಸೂರಿನ ವಿಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿತ್ತು.
Muda’s first meeting after the scandal:
50:50 ಸೈಟ್ ಹಂಚಿಕೆ ಹಗರಣ ಬೆಳಕಿಗೆ ಬಂದ ನಂತರ ಮೊದಲ ಬಾರಿಗೆ ಜಿಲ್ಲಾಧಿಕಾರಿ ಲಕ್ಷ್ಮೀಕಾಂತ್ ರೆಡ್ಡಿ ನೇತೃತ್ವದಲ್ಲಿ ಮುಡಾ ಸಭೆ ನಡೆದಿತ್ತು.ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ(ಮುಡಾ) ನಡೆದಿರುವ ಅಕ್ರಮಗಳ ಬಗ್ಗೆ ತನಿಖೆ ನಡೆಸಲು ನಿವೃತ್ತ ನ್ಯಾಯಮೂರ್ತಿ ದೇಸಾಯಿ ಅವರು ಮುಡಾ ಕಚೇರಿಗೆ ಭೇಟಿ ನೀಡಿ, ಕಡತಗಳನ್ನು ಪರಿಶೀಲಿಸಿದ್ದರು. ಮುಡಾ ಹಗರಣ ಸಂಬಂಧ ಮೈಸೂರು ಲೋಕಾಯುಕ್ತ ಎಸ್ಪಿ ಕಚೇರಿಯಲ್ಲಿ ಮುಡಾ ಮಾಜಿ ಆಯುಕ್ತ ಡಿ.ಬಿ ನಟೇಶ್ ವಿಚಾರಣೆ ಎದುರಿಸಿದ್ದರು.