spot_img
spot_img

HEALTH BENEFITS OF FLAX SEED : ಆರೋಗ್ಯ ತಜ್ಞರ ಮಹತ್ವದ ಸಲಹೆ

spot_img
spot_img

Share post:

Health benefits of flax Seed:

ಅಗಸೆ ಬೀಜಗಳು ಚಿಕ್ಕದಾಗಿ ಕಂಡರೂ, ಇದರಿಂದ ಮಾತ್ರ ಅನೇಕ ಆರೋಗ್ಯದ ಪ್ರಯೋಜನಗಳು ಲಭಿಸುತ್ತವೆ ಎಂದು ಆರೋಗ್ಯ ತಜ್ಞರು ಸಲಹೆ ನೀಡುತ್ತಾರೆ. ಅಗಸೆ ಬೀಜಗಳನ್ನು ಸೇವಿಸುವುದರಿಂದ ಅಧಿಕ ಕೊಲೆಸ್ಟ್ರಾಲ್, ಮಧುಮೇಹ ಸೇರಿದಂತೆ ಹಲವು ರೋಗಗಳನ್ನು ನಿಯಂತ್ರಣದಲ್ಲಿಡಬಹುದು ಎನ್ನುತ್ತಾರೆ ಆರೋಗ್ಯ ತಜ್ಞರು. ಅಗಸೆ ಬೀಜಗಳ ಸೇವನೆಯು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಅಗಸೆ ಬೀಜದಲ್ಲಿ ಪೋಷಕಾಂಶಗಳು ಸಮೃದ್ಧವಾಗಿವೆ. ಇದರಲ್ಲಿ ವಿಟಮಿನ್-ಬಿ1, ಪ್ರೊಟೀನ್, ಒಮೆಗಾ-3 ಕೊಬ್ಬಿನಾಮ್ಲಗಳು, ಫೈಬರ್, ತಾಮ್ರ, ಫೋಲೇಟ್, ಮೆಗ್ನೀಸಿಯಮ್, ಮ್ಯಾಂಗನೀಸ್, ಸತು ಸೇರಿದಂತೆ ಅನೇಕ ಪೋಷಕಾಂಶಗಳನ್ನು ಒಳಗೊಂಡಿದೆ.

Benefits of Roasted Flaxseed:

  • ಹುರಿದ ಅಗಸೆ ಬೀಜಗಳನ್ನು ಸೇವಿಸುವುದರಿಂದ ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆಯಾಗುತ್ತದೆ. ಅಧಿಕ ಕೊಲೆಸ್ಟ್ರಾಲ್ ಸಮಸ್ಯೆಯಿಂದ ಬಳಲುತ್ತಿರುವವರು ಪ್ರತಿದಿನ ಬೆಳಿಗ್ಗೆ ಹಾಗೂ ಸಂಜೆ ಒಂದು ಚಮಚ ಹುರಿದ ಅಗಸೆ ಬೀಜಗಳನ್ನು ಸೇವಿಸಿದರೆ ಅವರ ಸಮಸ್ಯೆಯನ್ನು ಕಡಿಮೆ ಮಾಡಬಹುದು ಎಂದು ತಜ್ಞರು ಸಲಹೆ ನೀಡುತ್ತಾರೆ.
  • ಹುರಿದ ಅಗಸೆ ಬೀಜಗಳನ್ನು ತಿನ್ನುವುದು ಮಧುಮೇಹ ರೋಗಿಗಳಿಗೆ ತುಂಬಾ ಪ್ರಯೋಜನಕಾರಿ. ಇದು ಕರಗುವ ಫೈಬರ್ ಅನ್ನು ಹೊಂದಿರುತ್ತದೆ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ.
  • ಅಗಸೆ ಬೀಜಗಳ ಸೇವನೆಯಿಂದ ರಕ್ತದಲ್ಲಿನ ಸಕ್ಕರೆಯ ಹೀರಿಕೊಳ್ಳುವಿಕೆಯನ್ನು ನಿಧಾನಗೊಳಿಸುತ್ತದೆ. ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಇದರ ನಿಯಮಿತ ಸೇವನೆಯು ಮಧುಮೇಹದ ಲಕ್ಷಣಗಳನ್ನು ಕಡಿಮೆ ಮಾಡುತ್ತದೆ.
  • ಆರೋಗ್ಯ ತಜ್ಞರ ಪ್ರಕಾರ, ಅಗಸೆ ಬೀಜಗಳಲ್ಲಿ ಫೈಬರ್​ ಸಮೃದ್ಧವಾಗಿವೆ. ಇದು ಅಜೀರ್ಣ ಸಮಸ್ಯೆಯನ್ನು ಹೋಗಲಾಡಿಸಲು ಸಹ ಸಹಾಯ ಮಾಡುತ್ತದೆ. ಅಜೀರ್ಣದ ಸಂದರ್ಭದಲ್ಲಿ, ಹುರಿದ ಅಗಸೆಬೀಜದ ಪುಡಿಯ ಸೇವನೆಯು ಅತ್ಯಂತ ಪ್ರಯೋಜನಕಾರಿಯಾಗಿದೆ.
  • ಅಗಸೆ ಬೀಜಗಳು ಗ್ಯಾಸ್ಟ್ರಿಕ್​, ಮಲಬದ್ಧತೆ, ಅಜೀರ್ಣದಂತಹ ಸಮಸ್ಯೆಗಳಿಂದ ಪರಿಹಾರ ನೀಡುತ್ತದೆ. ಅಜೀರ್ಣದಂತಹ ಸಮಸ್ಯೆಗಳನ್ನು ನಿವಾರಿಸಲು, ನೀವು ಬಿಸಿನೀರಿನೊಂದಿಗೆ ಹುರಿದ ಅಗಸೆಬೀಜದ ಪುಡಿಯನ್ನು ಸೇವಿಸಬಹುದು.
  • ಹುರಿದ ಅಗಸೆಬೀಜವನ್ನು ಸೇವಿಸುವುದರಿಂದ ನಿದ್ರಾಹೀನತೆಯ ಸಮಸ್ಯೆಗೆ ದೂರವಾಗಿಸಲು ಸಹಾಯ ಮಾಡುತ್ತದೆ. ಇದು ಒತ್ತಡವನ್ನು ಕಡಿಮೆ ಮಾಡುವ ಮೂಲಕ ನಿದ್ರೆಯನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಅಗಸೆ ಬೀಜಗಳು ಫೈಬರ್ ಅನ್ನು ಹೊಂದಿರುತ್ತವೆ.
  • ಇದು ಹೃದಯದ ಆರೋಗ್ಯವನ್ನು ಕಾಪಾಡುತ್ತದೆ ಹಾಗೂ ಜೀರ್ಣ ಶಕ್ತಿಯನ್ನು ದ್ವಿಗುಣಗೊಳಿಸುತ್ತದೆ. ಮಾಂಸಾಹಾರಿ ತಿನ್ನುವವರು ಮೊಟ್ಟೆಯ ಬದಲು ಅಗಸೆ ಬೀಜಗಳನ್ನು ಸೇವಿಸುವುದು ಉತ್ತಮ.
  • ಚಳಿಗಾಲದಲ್ಲಿ ನೆಗಡಿ, ಕೆಮ್ಮಿನಂಥ ಸೀಸನ್ ಕಾಯಿಲೆಗಳು ಸಾಮಾನ್ಯವಾಗಿರುತ್ತವೆ. ಇಂತಹ ಕಾಯಿಲೆಗಳಿಂದ ದೂರವಿರಲು ಅಗಸೆ ಬೀಜಗಳನ್ನು ಸೇವಿಸುವುದು ಒಳ್ಳೆಯದು ಎನ್ನುತ್ತಾರೆ ತಜ್ಞರು.
  • ಅಗಸೆ ಬೀಜಗಳು ಒಮೆಗಾ-3 ಕೊಬ್ಬಿನಾಮ್ಲಗಳು ಮತ್ತು ಅಮೈನೋ ಆಮ್ಲಗಳನ್ನು ಸಹ ಹೊಂದಿರುತ್ತವೆ. ಇವು ನಮ್ಮ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತವೆ.
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

MOTOROLA EDGE 60 FUSION – ಅದ್ಭುತವಾದ ಕ್ಯಾಮೆರಾ ಸೆಟಪ್, ವಾಟರ್ ಪ್ರೊಟೆಕ್ಷನ್ – ಮೊಟೊರೊಲಾದ ಹೊಸ ಫೋನ್ನ ಬೆಲೆ ಕೇವಲ ಇಷ್ಟೇ!

Motorola Edge 60 Fusion: ಬಹುನಿರೀಕ್ಷಿತ ' MOTOROLA EDGE 60 FUSION' ಕೊನೆಗೂ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಕಂಪನಿಯು ಇದನ್ನು ' MOTOROLA EDGE...

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...