Mangaluru, Kettikal landslide
ಮಂಗಳೂರಿನಲ್ಲಿ ಗುಡ್ಡ ಕುಸಿತ ಕಂಡು ಬರುತ್ತಾ? ಏನು ಸುದ್ದಿ ನಿಜಕ್ಕೂ Wayanad landslide ತರಾ Mangaluru, Kettikal landslide ಆಗುತ್ತಾ? ಎಂಬ ಪ್ರಶ್ನೆಗಳಿಗೆ ಉತ್ತರ ಇಲ್ಲಿದೆ ನೀವೇ ಓದಿ!
Mangaluru, Kettikal ಗುಡ್ಡದಲ್ಲಿ ಎಷ್ಟು ಮನೆಗಳು ಇವೆ?
ಕೆತ್ತಿಕಲ್ ಗುಡ್ಡದ ಮೇಲ್ಭಾಗದಲ್ಲಿ 200ಕ್ಕೂ ಹೆಚ್ಚು ಮನೆಗಳಿವೆ. ಒಂದು ವೇಳೆ ಇಡೀ ಗುಡ್ಡವೇನಾದರೂ ಕುಸಿದುಹೋದಲ್ಲಿ ಕೇರಳದ ವಯನಾಡು ದುರಂತದಂತೆ ಇಲ್ಲಿಯೂ ಸಂಭವಿಸುವ ಆತಂಕ ಎದುರಾಗಿದೆ. ಅಪಾಯಕಾರಿ ಸ್ಥಳದಲ್ಲಿನ 12 ಮನೆಗಳಿಗೆ ನೋಟಿಸ್ ನೀಡಿರುವ ಅಧಿಕಾರಿಗಳು, ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಸೂಚನೆ ನೀಡಿದ್ದಾರೆ. ಹೀಗಾಗಿ ಜನ ಮನೆ ಖಾಲಿ ಮಾಡಿಕೊಂಡು ಹೋಗಿದ್ದಾರೆ. ಯಾರೋ ಮಾಡಿದ ತಪ್ಪಿಗೆ ಜನ ಶಿಕ್ಷೆ ಅನುಭವಿಸುವಂತಾಗಿದೆ.
ಮಂಗಳೂರು News Update:
(Mangaluru, Kettikal landslide) ಕೆತ್ತಿಕಲ್ ಗುಡ್ಡದ ಮೇಲಿವೆ 200ಕ್ಕೂ ಹೆಚ್ಚು ಮನೆ, ವಯನಾಡು ರೀತಿಯ ದುರಂತದ ಭೀತಿ
ಮಂಗಳೂರು ಹೊರವಲಯದ ವಾಮಂಜೂರು ಸಮೀಪದ ಕೆತ್ತಿಕಲ್ ಗುಡ್ಡದಲ್ಲಿ ಮಣ್ಣು ಕುಸಿತ ಇನ್ನೂ ಮುಂದುವರಿದಿದ್ದು, ಗುಡ್ಡದ ಮೇಲ್ಭಾಗದ ಅನೇಕರು ಮನೆ ಖಾಲಿ ಮಾಡಿ ತೆರಳಿದ್ದಾರೆ. ಎರಡು ತಿಂಗಳ ಹಿಂದಷ್ಟೇ ಮನೆ ಖರೀದಿಸಿದ್ದವರಿಗೂ ಕಂಟಕ ಎದುರಾಗಿದೆ. ನಿಜಕ್ಕೂ ಈ ಒಂದು ಗುಡ್ಡ ಕುಸಿತಕ್ಕೆ ಕಾರಣ ಏನು? ಅದಕ್ಕೆ ಒಂದೇ ಕಾರಣ ಅದು ಮಾನವ ತನ್ನ ಅತಿಯಾಸೆಗಾಗಿ ನಿಸರ್ಗವನ್ನು ಹಾಳು ಮಾಡೋದು ಎಂದು ಎಲ್ಲರೂ ಹೇಳುತ್ತಿದ್ದಾರೆ.
Wayanad landslide ತರ ಮಂಗಳೂರಿನಲ್ಲಿ?
ಭಯಾನಕ ಸನ್ನಿವೇಶದಲ್ಲಿ ಇದೀಗ ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಬಳಿಯೂ ಅಂಥದ್ದೇ ಅನಾಹುತ ಸಂಭವಿಸುವ ಭೀತಿ ಎದುರಾಗಿದೆ. ನಗರದ ಹೊರವಲಯದ ವಾಮಂಜೂರು ಸಮೀಪದ ಕೆತ್ತಿಕಲ್ ಗುಡ್ಡದ ಮಣ್ಣು ಕುಸಿಯುತ್ತಲೇ ಇದ್ದು ಆತಂಕ ಸೃಷ್ಟಿಸಿದೆ.ಅದೇ ರೀತಿ Wayanad landslide ನಲ್ಲಿ ಇನ್ನು ಮೃತ ಶರೀರಗಳು ಪತ್ತೆಯಾಗುತ್ತಲೇ ಇವೆ. ಹಾಗು ವಯನಾಡಿನಲ್ಲಿ ಸಂಭವಿಸಿದ ಭೀಕರ ಭೂಕುಸಿತ, ಗುಡ್ಡ ಕುಸಿತದ ಪರಿಣಾಮ ನೂರಾರು ಜನ ಮೃತಪಟ್ಟಿದ್ದಾರೆ. ಇನ್ನೂ ಮೃತದೇಹಗಳು ಪತ್ತೆಯಾಗುತ್ತಲೇ ಇವೆ.
ಮಂಗಳೂರು ಗುಡ್ಡಕುಸಿತಕ್ಕೂ ಮುನ್ನ ಏನು ಹೇಳಲಾಗಿತ್ತು?
ಗುಡ್ಡ ಅಗೆಯುವ ಸಂದರ್ಭ ಅಧಿಕಾರಿಗಳ ಗಮನಕ್ಕೆ ತರಲಾಗಿತ್ತು. ಆದರೆ, ಆ ಬಗ್ಗೆ ಅಧಿಕಾರಿಗಳು ಮೌನವಹಿಸಿದ್ದರು. ಇದೀಗ ಊರೆಲ್ಲಾ ಕೊಳ್ಳೆ ಹೊಡೆದ ಮೇಲೆ ಕೋಟೆ ಬಾಗಿಲು ಮುಚ್ಚಿದ್ದಾರೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾರಣ ಅದು ಒಂದೇ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಾಗಿ ಅವೈಜ್ಞಾನಿಕವಾಗಿ ಗುಡ್ಡ ಅಗೆತ ಮಾಡಿರುವ ಕಾರಣ ಇದೀಗ ಭಾರಿ ಮಳೆಯ ಸಂದರ್ಭದಲ್ಲಿ ಗುಡ್ಡದ ಮಣ್ಣು ಕುಸಿಯುತ್ತಿದೆ. ಹೆದ್ದಾರಿ ಕಾಮಗಾರಿ ಜೊತೆ ಮಣ್ಣು ಗಣಿಗಾರಿಕೆ ನಡೆಸಿದ ಆರೋಪವೂ ಇಲ್ಲಿ ಕೇಳಿಬಂದಿದೆ. ಬೇಕಾಬಿಟ್ಟಿಯಾಗಿ ಕೆತ್ತಿಕಲ್ ಗುಡ್ಡ ಅಗೆಯಲಾಗಿದ್ದು, ಆ ಸ್ಥಳ ಭಯಾನಕವಾಗಿದೆ.
ಇನ್ನಷ್ಟು ಓದಿರಿ:
ಬೆಳಗಾವಿ: ಅಕ್ರಮ ಸಂಬಂಧ ಪ್ರಶ್ನಿಸಿದ್ದಕ್ಕೆ ಹೆಂಡತಿಗೆ ಮನಸೋ ಇಚ್ಛೆ ಥಳಿಸಿ ಹಲ್ಲೆ ಮಾಡಿದ ಪಿಎಸ್ಐ
ಮೈದುಂಬಿ ಹರಿಯುತ್ತಿರುವ ಜೋಗ ಜಲಪಾತ ವೀಕ್ಷಣೆಗೆ ಹುಬ್ಬಳ್ಳಿಯಿಂದ NWKRTC ವಿಶೇಷ ಬಸ್