spot_img
spot_img

SAMBHAJI MAHARAJ STATUE : ಬೆಳಗಾವಿ ಜಿಲ್ಲಾಡಳಿತದ ವಿರೋಧ ನಡುವೆಯೂ ಸಂಭಾಜಿ ಮಹಾರಾಜ ಪ್ರತಿಮೆ ಅನಾವರಣ

spot_img
spot_img

Share post:

Belgaum News:

ಕಳೆದ ಐದಾರು ದಿನಗಳಿಂದ ಬೆಳಗಾವಿಯ ಅನಗೋಳದ ಸಂಭಾಜಿ ವೃತ್ತದಲ್ಲಿ 21 ಅಡಿ ಎತ್ತರದ SAMBHAJI MAHARAJ STATUE ಪ್ರತಿಮೆ ಅನಾವರಣಕ್ಕೆ ಶಾಸಕ ಅಭಯ ಪಾಟೀಲ ಹಾಗೂ ಪಾಲಿಕೆ ಸದಸ್ಯರು ವಿಶೇಷ ತಯಾರಿ ನಡೆಸಿದ್ದರು. ಆದರೆ, ಇದಕ್ಕೆ ಶ್ರೀರಾಮಸೇನಾ ಹಿಂದೂಸ್ಥಾನ ಸಂಘಟನೆ ರಮಾಕಾಂತ ಕೊಂಡೂಸ್ಕರ್ ಮತ್ತು ಅವರ ಬೆಂಬಲಿಗರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಹಾಗಾಗಿ, ಜಿಲ್ಲಾಧಿಕಾರಿಗಳು ಶನಿವಾರ ಸಭೆ ನಡೆಸಿ, ಪುತ್ಥಳಿ ಅನಾವರಣ ಕಾರ್ಯಕ್ರಮ ಮುಂದೂಡಲು ಪ್ರಯತ್ನಿಸಿದ್ದರು.‌ ಅನುಮತಿಯನ್ನೂ ನೀಡಿರಲಿಲ್ಲ.ಜಿಲ್ಲಾಡಳಿತದ ವಿರೋಧದ ನಡುವೆಯೂ ಭಾನುವಾರ ರಾತ್ರಿ ಛತ್ರಪತಿ SAMBHAJI MAHARAJ STATUE ಪ್ರತಿಮೆ ಅನಾವರಣಗೊಂಡಿತು. ಶಿವಾಜಿ ಮಹಾರಾಜರ 13ನೇ ವಂಶಸ್ಥರಾದ ಶಿವೇಂದ್ರರಾಜೇ ಭೋಸ್ಲೆ, ಶಾಸಕ ಅಭಯ್ ಪಾಟೀಲ ಸೇರಿ ಸಾವಿರಾರು ಜನರು ಇದಕ್ಕೆ ಸಾಕ್ಷಿಯಾದರು. ಬೆಳಗಾವಿಯ ಅನಗೋಳದ ಸಂಭಾಜಿ ವೃತ್ತದಲ್ಲಿ ಸಂಭಾಜಿ ಮಹಾರಾಜರ 21 ಅಡಿ ಎತ್ತರದ ಪ್ರತಿಮೆ ಅನಾವರಣ ಕಾರ್ಯಕ್ರಮ ನಡೆಯಿತು. ಅನಗೋಳ ನಾಕಾದಿಂದ ನಡೆದ ಭವ್ಯ ಶೋಭಾಯಾತ್ರೆಯಲ್ಲಿ ಸಾವಿರಾರು ಜನರು ಭಾಗವಹಿಸಿದ್ದರು. ಜಿಲ್ಲಾಡಳಿತದ ಆದೇಶಕ್ಕೆ ಸೆಡ್ಡು ಹೊಡೆದ ಶಾಸಕ ಅಭಯ ಪಾಟೀಲ, ಭಾನುವಾರವೇ ಪ್ರತಿಮೆ ಅನಾವರಣ ಮಾಡುವುದಾಗಿ ಘೋಷಣೆ ಮಾಡಿದ್ದರು. ಆ ಪ್ರಕಾರ ಅನಗೋಳ ನಾಕಾದಿಂದ ಭವ್ಯ ಶೋಭಾಯಾತ್ರೆ ನಡೆಸಿದರು‌. ಶೋಭಾ ಯಾತ್ರೆಯುದ್ದಕ್ಕೂ ಶಿವಾಜಿ, ಸಂಭಾಜಿ ಪರ ಘೋಷಣೆಗಳು ಮೊಳಗಿದವು. ಕೇಸರಿ ಸೀರೆ ತೊಟ್ಟಿದ್ದ ಮಹಿಳೆಯರು ಪೂರ್ಣಕುಂಭದೊಂದಿಗೆ ಸಾಗಿದರು. ಡೋಲ್ ತಾಶಾಗಳ ಅಬ್ಬರ ಜೋರಾಗಿತ್ತು. ಎತ್ತ ನೋಡಿದರೂ ಜನಸಾಗರವೇ ಕಂಡು ಬಂತು. ಪಟಾಕಿ, ಸಿಡಿಮದ್ದುಗಳನ್ನು ಸಿಡಿಸಿ ಶಿವಭಕ್ತರು ಸಂಭ್ರಮಿಸಿದರು. ಬಳಿಕ ಛತ್ರಪತಿ ಸಂಭಾಜಿ ಮಹಾರಾಜರ ಪುತ್ಥಳಿಗೆ ಶಿವೇಂದ್ರರಾಜೇ ಭೋಸ್ಲೆ ಅವರು ಕ್ಷೀರಾಭಿಷೇಕ ಮಾಡಿ, ಪುತ್ಥಳಿ ಅನಾವರಣಗೊಳಿಸಿದರು. ಈ ವೇಳೆ ನೆರೆದಿದ್ದ ಸಹಸ್ರಾರು ಜನರು ಶಿವಾಜಿ, ಸಂಭಾಜಿ ಮಹಾರಾಜ್ ಕೀ ಜೈ ಎಂಬ ಘೋಷಣೆಗಳನ್ನು ಮೊಳಗಿಸಿದರು.

I am privileged to be a part of the programme:

ಶಿವೇಂದ್ರರಾಜೇ ಭೋಸ್ಲೆ ಮಾತನಾಡಿ, ”ಬೆಳಗಾವಿ ಪ್ರಮುಖ ವೃತ್ತದಲ್ಲಿ ಸಂಭಾಜಿ ಮಹಾರಾಜರ ಪ್ರತಿಮೆ ಪ್ರತಿಷ್ಠಾಪನೆಯಾಗಿದ್ದು ಸಂತಸ ತಂದಿದೆ. ಶಾಸಕ ಅಭಯ ಪಾಟೀಲ ಅವರೇ ಇಂಥದ್ದೊಂದು ದೊಡ್ಡ ಕೆಲಸಕ್ಕೆ ಕಾರಣ. ನಾನು ಈ ಕಾರ್ಯಕ್ರಮಕ್ಕೆ ಬರಬಾರದು ಎಂಬುದು ಕೆಲವರ ಉದ್ದೇಶವಾಗಿತ್ತು. ಇದಕ್ಕಾಗಿ ತಡೆಯುವ ಯತ್ನ ಮಾಡಿದರು. ಆದರೆ, ನಿಮ್ಮ ಮತ್ತು ಅಭಯ ಪಾಟೀಲ ಮೇಲಿನ ಪ್ರೀತಿಗಾಗಿ ಬಂದಿದ್ದೇನೆ. ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದು ನನ್ನ ಸೌಭಾಗ್ಯ. ಮುಂದಿನ ದಿನಗಳಲ್ಲಿ ನೀವೂ ಸಹ ಅವರ ಬೆನ್ನಿಗೆ ನಿಲ್ಲುವಂತೆ” ಕರೆ ನೀಡಿದರು.

MLAs who thanked:

“ಆದರೂ ನಿಮ್ಮೆಲ್ಲರ ಶಕ್ತಿ ಮುಂದೆ ಯಾವ ಆಟವೂ ನಡೆಯಲಿಲ್ಲ. ಪೊಲೀಸರಿಗೂ ನಮ್ಮ ಮೇಲೆ ಹೆಚ್ಚಿನ ಪ್ರೀತಿಯಿದೆ. ಹಾಗಾಗಿ, ಅವರೂ ಕೂಡ ಹಗಲಿರುಳು ಇಲ್ಲಿ ಭದ್ರತೆ ಒದಗಿಸಿದರು. ಇಷ್ಟೊಂದು ಅದ್ಧೂರಿ ಕಾರ್ಯಕ್ರಮಕ್ಕೆ ಆಗಮಿಸಿದ ಸಾವಿರಾರು ಶಿವಭಕ್ತರಿಗೆ, ಮಹಿಳೆಯರಿಗೆ ವಿಶೇಷವಾದ ಧನ್ಯವಾದಗಳು. ಅಲ್ಲದೇ, ಎರಡು ಸಾವಿರಕ್ಕೂ ಅಧಿಕ ಕುಂಭ ಹೊತ್ತ ಮಹಿಳೆಯರು ಸುಮಾರು ಮೂರ್ನಾಲ್ಕು ಗಂಟೆಗಳ ಕಾಲ ನಿಂತು ಕಾರ್ಯಕ್ರಮದ ಯಶಸ್ಸಿಗೆ ಸಾಕ್ಷಿಯಾಗಿದ್ದಿರಿ. ನಿಮಗೂ, ಅವರಿಗೂ ಅನಂತ ಧನ್ಯವಾದಗಳನ್ನು ಸಲ್ಲಿಸುತ್ತೇನೆ” ಎಂದು ತಿಳಿಸಿದರು. ಅಭಯ ಪಾಟೀಲ ಮಾತನಾಡಿ, “SAMBHAJI MAHARAJ STATUE  ಪುತ್ಥಳಿ ಅನಾವರಣಕ್ಕೆ ನಾನಾ ರೀತಿಯಲ್ಲಿ ಅಡೆತಡೆಯನ್ನುಂಟು ಮಾಡಿದರೂ ಕೂಡ, ಶಿವಭಕ್ತರ ಶಕ್ತಿಯಿಂದ ಇಂದು ಇಲ್ಲಿ ಭಗವಾ ಧ್ವಜ ಹಾರಾಡಿದೆ.‌ ನಿನ್ನೆ ಜಿಲ್ಲಾಧಿಕಾರಿಗಳು ಇದೇ ಸ್ಥಳದಲ್ಲಿ ಬಂದು ಹೇಳಿಕೆ ನೀಡಿ ಭಾನುವಾರ ಸಂಜೆ ಯಾರೂ ಇಲ್ಲಿ ಬರಬೇಡಿ, ಎಲ್ಲರೂ ಮನೆಯಲ್ಲಿ ಇರುವಂತೆ ಹೇಳಿದ್ದರು. ಭಾನುವಾರ ಮಧ್ಯಾಹ್ನದವರೆಗೂ ಬಹಳಷ್ಟು ಅಡೆತಡೆಗಳನ್ನುಂಟು ಮಾಡಲಾಯಿತು” ಎಂದರು.

ಇದನ್ನು ಓದಿರಿ : CM SIDDARAMAIAH : ಅಪಾಯಕಾರಿ ವೈರಸ್ ಅಲ್ಲ, ಆದರೂ ಮುಂಜಾಗ್ರತಾ ಕ್ರಮ ಕೈಗೊಂಡಿದ್ದೇವೆ

Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

MOTOROLA EDGE 60 FUSION – ಅದ್ಭುತವಾದ ಕ್ಯಾಮೆರಾ ಸೆಟಪ್, ವಾಟರ್ ಪ್ರೊಟೆಕ್ಷನ್ – ಮೊಟೊರೊಲಾದ ಹೊಸ ಫೋನ್ನ ಬೆಲೆ ಕೇವಲ ಇಷ್ಟೇ!

Motorola Edge 60 Fusion: ಬಹುನಿರೀಕ್ಷಿತ ' MOTOROLA EDGE 60 FUSION' ಕೊನೆಗೂ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಕಂಪನಿಯು ಇದನ್ನು ' MOTOROLA EDGE...

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...