spot_img
spot_img

GARUDAKSHI ONLINE FIR SYSTEM : ಗರುಡಾಕ್ಷಿ ಆನ್ಲೈನ್ ಎಫ್ಐಆರ್ ತಂತ್ರಾಂಶ ಅಭಿವೃದ್ಧಿ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

Bangalore News:

ಅರಣ್ಯ ಮತ್ತು ವನ್ಯಜೀವಿ ಅಪರಾಧಗಳನ್ನು ತಡೆಗಟ್ಟುವ ಉದ್ದೇಶದಿಂದ ಕಾನೂನು ಚೌಕಟ್ಟು ಬಲಪಡಿಸಲು ಆನ್‌ಲೈನ್ ಮೂಲಕವೇ ಎಫ್‌ಐಆರ್‌ ದಾಖಲಿಸಲು GARUDAKSHI ONLINE FIR SYSTEM ಅಭಿವೃದ್ಧಿಪಡಿಸಲಾಗಿದೆ.ಅರಣ್ಯ ಮತ್ತು ವನ್ಯಜೀವಿ ಸಂರಕ್ಷಣಾ ಕಾನೂನುಗಳ ಅಡಿಯಲ್ಲಿ ಅರಣ್ಯ ಅಪರಾಧ ಪ್ರಕರಣಗಳನ್ನು ನಿರ್ವಹಿಸಲು ಮತ್ತು ಪರಿಣಾಮಕಾರಿಯಾಗಿ ಮೇಲ್ವಿಚಾರಣೆ ಮಾಡಲು ಈ ತಂತ್ರಾಂಶವು ಸಹಕಾರಿಯಾಗಲಿದೆ.

ಈಗಾಗಲೇ ರಾಜ್ಯ ಪೊಲೀಸ್‌ ಇಲಾಖೆಯಲ್ಲಿರುವಂತೆ ಅರಣ್ಯ ಇಲಾಖೆಯಲ್ಲೂ ಸಹ ಪ್ರಥಮ ವರ್ತಮಾನ ವರದಿಯನ್ನು (ಎಫ್​ಐಆರ್​) ಗಳನ್ನು ಆನ್‌ಲೈನ್‌ ನಲ್ಲಿ/ ಡಿಜಿಟಲ್ ಸ್ವರೂಪಕ್ಕೆ ಪರಿವರ್ತಿಸುವಂತೆ ಸಚಿವ ಈಶ್ವರ್​ ಖಂಡ್ರೆ ಅವರು ಸೂಚಿಸಿದ್ದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ, ವೈಲ್ಡ್ ಲೈಫ್ ಟ್ರಸ್ಟ್ ಆಫ್​ ಇಂಡಿಯಾ (WTI) ಸಹಯೋಗದೊಂದಿಗೆ GARUDAKSHI ONLINE FIR SYSTEM ಅಭಿವೃದ್ಧಿಪಡಿಸಿದೆ.

ಅರಣ್ಯ ಮತ್ತು ವನ್ಯಜೀವಿ ಅಪರಾಧಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಚಾಲ್ತಿಯಲ್ಲಿರುವ ಕಾನೂನು ಚೌಕಟ್ಟನ್ನು ಬಲಪಡಿಸಲು ಗರುಡಾಕ್ಷಿ ಆನ್​​​ಲೈನ್ ಎಫ್​ಐಆರ್ ವ್ಯವಸ್ಥೆ ಅಭಿವೃದ್ಧಿಪಡಿಸಲಾಗಿದ್ದು, ನಾಳೆ (ಜ.7ರಂದು) ವಿಧಾನಸೌಧದಲ್ಲಿ ಅರಣ್ಯ ಸಚಿವ ಈಶ್ವರ ಖಂಡ್ರೆ ಉದ್ಘಾಟಿಸಲಿದ್ದಾರೆ.

Practically implemented in 5 categories:

GARUDAKSHI ONLINE FIR SYSTEM ಅರಣ್ಯ ಮತ್ತು ವನ್ಯಜೀವಿ ಅಪರಾಧಗಳ ನಿರ್ವಹಣೆಯಲ್ಲಿ ಅತ್ಯಂತ ಮಹತ್ವದ ಮೈಲಿಗಲ್ಲಾಗಿದ್ದು, ಪಾರದರ್ಶಕ, ಸುವ್ಯವಸ್ಥಿತ, ಪರಿಹಾರವಾಗಿ ಅರಣ್ಯ ಅಪರಾಧ ತಡೆಯಲು ಇಲಾಖೆಗೆ ಬಲ ತುಂಬಲಿದೆ.

ಗರುಡಾಕ್ಷಿ ತಂತ್ರಾಂಶವನ್ನು ಪ್ರಾಯೋಗಿಕವಾಗಿ ಬೆಂಗಳೂರು ನಗರ ವಿಭಾಗ, ಬೆಂಗಳೂರು ಅರಣ್ಯ ಸಂಚಾರಿ ದಳ ವಿಭಾಗ, ಭದ್ರಾವತಿ ವಿಭಾಗ, ಶಿರಸಿ ವಿಭಾಗ ಮತ್ತು ಮಲೆ ಮಹದೇಶ್ವರ ವನ್ಯ ಜೀವಿ ವಿಭಾಗಗಳಲ್ಲಿ ಪ್ರಾಯೋಗಿಕವಾಗಿ (Pilot) ಜಾರಿಗೊಳಿಸಲಾಗತ್ತದೆ. ನಂತರ ಇದನ್ನು ಹಂತ ಹಂತವಾಗಿ ಎಲ್ಲ ವಿಭಾಗಕ್ಕೂ ವಿಸ್ತರಿಸಲಾಗುತ್ತದೆ ಎಂದು ಸಚಿವರು ತಿಳಿಸಿದರು.

ಇದನ್ನು ಓದಿರಿ : MYSURU BANDH ON TUESDAY : ಅಂಬೇಡ್ಕರ್ ಕುರಿತು ಅಮಿತ್ ಶಾ ಹೇಳಿಕೆ ಖಂಡಿಸಿ ನಾಳೆ ಮೈಸೂರು ಬಂದ್

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

MAN MIXES POISON IN FOOD : ತನ್ನ ಒಪ್ಪಿಗೆ ಇಲ್ಲದೆ ವಿವಾಹವಾದ ಸೋದರ ಸೊಸೆ

Kolhapur (Maharashtra) News : ತನ್ನ ಸಹೋದರಿ ಪುತ್ರಿಯ ಆರತಕ್ಷತೆ ಸಮಾರಂಭದಲ್ಲಿ ತಯಾರಿಸಿದ ಆಹಾರದಲ್ಲಿ ಸೋದರ ಮಾವ POISONಪ್ರಾಶನ ಮಾಡಿದ ಆಘಾತಕಾರಿ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.ತನ್ನ...

ANGANWADI WORKERS HONORARIUM HIKE : ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಹೆಚ್ಚಳಕ್ಕೆ ಕ್ರಮ

Bangalore News: ANGANWADI ಕಾರ್ಯಕರ್ತೆಯರ ಗೌರವಧನ ಹೆಚ್ಚಳ ಮಾಡಲು ಕ್ರಮ ಕೈಗೊಳ್ಳುವುದಾಗಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭರವಸೆ ನೀಡಿದರು.ರಾಜ್ಯದಲ್ಲಿ ANGANWADI ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಗೌರವಧನ...

HOW TO STORE FOOD IN FRIDGE : ನೀವು ಫ್ರಿಡ್ಜ್ನಲ್ಲಿ ಇಟ್ಟಿರುವ ಆಹಾರ ಸೇವಿಸುತ್ತೀರಾ?

RULES FOR STARING FOOD SAFETY IN A FRIDGE NEWS: ಫ್ರಿಡ್ಜ್‌ನಲ್ಲಿ ಆಹಾರವನ್ನು ಸುರಕ್ಷಿತವಾಗಿ ಸಂಗ್ರಹಿಸುವ ನಿಯಮಗಳ ಬಗ್ಗೆ ನಿಮಗೆ ತಿಳಿದಿದೆಯೇ? ಹಾಗಾದರೆ ಆಹಾರ...

SUGAR TEST WITHOUT NEEDLE : ಸೂಜಿ, ರಕ್ತ ಬಳಸದೆ ಶುಗರ್ ಟೆಸ್ಟ್ ಮಾಡೋದು ಹೇಗೆ?

News to Stay Without Sugar Test: ಮಧುಮೇಹ ಪರೀಕ್ಷೆ ಮಾಡಿಕೊಳ್ಳುವುದು ಇನ್ನೂ ಸುಲಭವಾಗಿದೆ. ಗ್ಲೂಕೋಸ್ ಮಟ್ಟವನ್ನು ತಿಳಿದುಕೊಳ್ಳುವುದು ತುಂಬಾ ಸರಳವಾಗಿದೆ. ಈ ಕುರಿತು ಸಂಶೋಧಕರು...