Mysore/Bangalore News:
ಕಾವೇರಿ ನಿವಾಸದಲ್ಲಿ ಇಂದು ಸಿಎಂ ಸಂಸದರು ಮನವಿ ಸಲ್ಲಿಸಿ, ಮೈಸೂರು ಕ್ಷೇತ್ರದಲ್ಲಿ ಆಗಬೇಕಾಗಿರುವ ಅಭಿವೃವೃದ್ಧಿ ಯೋಜನೆಗಳು ಹಾಗೂ ಇತರೆ ವಿಷಯಗಳ ಬಗ್ಗೆ ಸುದೀರ್ಘವಾಗಿ ಸಮಾಲೋಚನೆ ನಡೆಸಿದರು. ಮೈಸೂರಿಗೆ ದೇಶ-ವಿದೇಶದ ಪ್ರಯಾಣಿಕರು ಆಗಮಿಸುತ್ತಿದ್ದು, ವಾಣಿಜ್ಯ ಚಟುವಟಿಕೆಗಳು ಹೆಚ್ಚಾಗಿವೆ. ಈ ಹಿನ್ನೆಲೆ ಪ್ರಯಾಣಿಕರಿಗೆ, ಉದ್ಯಮಿಗಳಿಗೆ, ಅನುಕೂಲವಾಗಲು ಮೈಸೂರು ವಿಮಾನ ನಿಲ್ದಾಣ ವಿಸ್ತರಣೆ ಮಾಡಬೇಕಾದ ತುರ್ತು ಅಗತ್ಯವಿದೆ.
ಈ ನಿಟ್ಟಿನಲ್ಲಿ 46 ಎಕರೆ ಭೂಮಿ ಹಸ್ತಾಂತರ ಪ್ರಕ್ರಿಯೆ ಪೂರ್ಣಗೊಳಿಸಲು ಮಧ್ಯಪ್ರವೇಶಿಸಬೇಕು ಎಂದು ಮನವಿ ಮಾಡಿದರು. ಆರ್ಥಿಕವಾಗಿ ಅಭಿವೃದ್ಧಿ ಹೊಂದುತ್ತಿರುವ ಸಾಂಸ್ಕೃತಿಕ ರಾಜಧಾನಿಯಲ್ಲಿ ವಿಮಾನ ನಿಲ್ದಾಣ ಮೊದಲ ಹಂತದ ವಿಸ್ತರಣೆಗಾಗಿ ಭೂಮಿ ಹಸ್ತಾಂತರ ಪ್ರಕ್ರಿಯೆಯನ್ನು ತ್ವರಿತವಾಗಿ ಪೂರ್ಣಗೊಳಿಸಲು ಮಧ್ಯ ಪ್ರವೇಶಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ MP YADUVEER WADIYAR MEETS CM ಚಾಮರಾಜ ಒಡೆಯರ್ ಮನವಿ ಮಾಡಿದ್ದಾರೆ.
ಕಾಲುವೆ, ವಿದ್ಯುತ್ ತಂತಿಗೆ ಪರ್ಯಾಯ ವ್ಯವಸ್ಥೆ ಮಾಡಲು ಮನವಿ ಉದ್ದೇಶಿತ ವಿಮಾನ ನಿಲ್ದಾಣದಲ್ಲಿ, ನೀರಾವರಿ ಕಾಲುವೆ, ಓವರ್ ಹೆಡ್ ವಿದ್ಯುತ್ ತಂತಿಗಳಿವೆ. ಇವುಗಳನ್ನು ಕೂಡ ರಾಜ್ಯ ಸರ್ಕಾರ ತೆರವುಗೊಳಿಸಬೇಕು ಅಥವಾ ಪರ್ಯಾಯ ವ್ಯವಸ್ಥೆ ಮಾಡಬೇಕು ಎಂದು ವಿವರಿಸಿದರು. ಈಗಾಗಲೇ ಭೂ ಸ್ವಾಧೀನಕ್ಕೆ ವಿಶೇಷ ಜಿಲ್ಲಾಧಿಕಾರಿಗಳ ಒಪ್ಪಿಗೆ ದೊರೆತಿದೆ. ಭೂ ಮಾಲೀಕರಿಗೆ ವೆಚ್ಚ ಪಾವತಿಸಿದ ನಂತರ ಹಸ್ತಾಂತರ ಪ್ರಕ್ರಿಯೆ ಸರಾಗವಾಗಲಿದೆ. ಭೂಮಿ ಹಸ್ತಾಂತರ ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣ ವಿಸ್ತರಣೆ ಯೋಜನೆಗೆ ಅಡ್ಡಿಯಾಗಿದೆ.
ಈ ನಿಟ್ಟಿನಲ್ಲಿ ಮುಖ್ಯಮಂತ್ರಿ ಅವರು ಮಧ್ಯ ಪ್ರವೇಶಿಸಿ ತ್ವರಿತ ಗತಿಯಲ್ಲಿ ಪ್ರಕ್ರಿಯೆ ಪೂರ್ಣಗೊಳಿಸಬೇಕು ಎಂದು ಯದುವೀರ್ ಮನವಿ ಸಲ್ಲಿಸಿದರು. ಕಾವೇರಿ ನಿವಾಸದಲ್ಲಿ ಇಂದು ಸಿಎಂ ಸಂಸದರು ಮನವಿ ಸಲ್ಲಿಸಿ, ಮೈಸೂರು ಕ್ಷೇತ್ರದಲ್ಲಿ ಆಗಬೇಕಾಗಿರುವ ಅಭಿವೃವೃದ್ಧಿ ಯೋಜನೆಗಳು ಹಾಗೂ ಇತರೆ ವಿಷಯಗಳ ಬಗ್ಗೆ ಸುದೀರ್ಘವಾಗಿ ಸಮಾಲೋಚನೆ ನಡೆಸಿದರು.
Plea to preserve Devaraj Market:
ಮೈಸೂರಿನಲ್ಲಿ ಉದ್ದೇಶಿತ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂಗಾಗಿ ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ (KSCA)ಗೆ ಭೂಸ್ವಾಧೀನ ಪ್ರಕ್ರಿಯೆ ಭಾರಿ ವಿಳಂಬವಾಗಿದೆ. ಈ ನಿಟ್ಟಿನಲ್ಲಿಯೂ ಕ್ರಮ ಕೈಗೊಳ್ಳಬೇಕು.
ಜಾಗತಿಕ ಮಟ್ಟದಲ್ಲಿ ಮೈಸೂರು ಖ್ಯಾತಿಯನ್ನು ಪಸರಿಸಲು ವಿಶ್ವದರ್ಜೆಯ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನ ನಿರ್ಮಾಣಕ್ಕೆ ಆದ್ಯತೆ ನೀಡಬೇಕಾಗಿದೆ. ಇದರಿಂದ ಮೈಸೂರಿನಲ್ಲಿ ಆರ್ಥಿಕ ಚಟುವಟಿಕೆ ಹೆಚ್ಚಾಗಲಿದೆ. ರಾಜ್ಯದ ಆರ್ಥಿಕತೆಗೂ ನೆರವಾಗಲಿದೆ ಎಂದರು. ದೇವರಾಜ ಮಾರುಕಟ್ಟೆ ಕಟ್ಟಡ ಮತ್ತು ಲ್ಯಾಂಡ್ಸ್ ಡೌನ್ ಕಟ್ಟಡಗಳು ಪಾರಂಪರಿಕ ಕಟ್ಟಡಗಳಾಗಿವೆ. ಮೈಸೂರಿಗೆ ಇವು ಕಳಶಪ್ರಾಯವಾಗಿವೆ. ಇವುಗಳನ್ನು ಕೆಡವದೇ ಉಳಿಸಿಕೊಂಡು ಸಂರಕ್ಷಿಸಬೇಕು.
ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಿ ಎಂದು ಸಿಎಂಗೆ ಸಂಸದ ಯದುವೀರ್ ಅವರು ಇದೇ ಸಂದರ್ಭದಲ್ಲಿ ಮನವಿ ಮಾಡಿದರು. ಸಂಸದರು ನೀಡಿರುವ ಮನವಿಗೆ ಸ್ಪಂದಿಸಿರುವ ಸಿಎಂ ಸಿದ್ದರಾಮಯ್ಯ, ಮೈಸೂರು ವಿಮಾನ ನಿಲ್ದಾಣ ಹಾಗೂ ಕ್ರಿಕೆಟ್ ಮೈದಾನಕ್ಕೆ ಸಂಬಂಧಿಸಿದ ಭೂಮಿ ಹಸ್ತಾಂತರ ವಿಷಯದಲ್ಲಿ ಸೂಕ್ತ ಕ್ರಮವನ್ನು ಶೀಘ್ರದಲ್ಲಿಯೇ ಕೈಗೊಳ್ಳುವುದಾಗಿ ಭರವಸೆ ನೀಡಿದರು.
ಇದನ್ನು ಓದಿರಿ : GARUDAKSHI ONLINE FIR SYSTEM : ಗರುಡಾಕ್ಷಿ ಆನ್ಲೈನ್ ಎಫ್ಐಆರ್ ತಂತ್ರಾಂಶ ಅಭಿವೃದ್ಧಿ