Mysore News:
ಇನ್ಫೋಸಿಸ್ ಕ್ಯಾಂಪಸ್ನಲ್ಲಿ ಕಾಣಿಸಿಕೊಂಡ LEOPARD ಇನ್ನೂ ಸೆರೆಯಾಗದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಅಲ್ಲಿನ ಟ್ರೈನಿ ಉದ್ಯೋಗಿಗಳಿಗೆ ಜ.26ರವರೆಗೆ ರಜೆ ನೀಡಲಾಗಿದೆ.ಇಲ್ಲಿನ ಇನ್ಫೋಸಿಸ್ ಕ್ಯಾಂಪಸ್ನಲ್ಲಿ ಪ್ರತ್ಯಕ್ಷವಾಗಿದ್ದ ಚಿರತೆ ಸೆರೆಗೆ ಕಾರ್ಯಾಚರಣೆ ಮುಂದುವರೆದಿದ್ದು, ಸುರಕ್ಷತಾ ಕ್ರಮವಾಗಿ ಕಂಪನಿಯ ಟ್ರೈನಿ ಉದ್ಯೋಗಿಗಳಿಗೆ ಜನವರಿ 26ರವರೆಗೆ ರಜೆ ಘೋಷಣೆ ಮಾಡಲಾಗಿದೆ.
ಆದರೆ ಕಾರ್ಯಾಚರಣೆ ವೇಳೆ ಇನ್ನೂ ಪತ್ತೆಯಾಗದ LEOPARDಯನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ.ಕಳೆದ 10 ದಿನಗಳ ಹಿಂದೆ ಕಾಣಿಸಿಕೊಂಡಿದ್ದ ಚಿರತೆ, ಬೋನಿಗೆ ಬೀಳದೆ ಅರಣ್ಯ ಇಲಾಖೆಗೆ ಚಳ್ಳೆಹಣ್ಣು ತಿನ್ನಿಸುತ್ತಿದೆ. ಕ್ಯಾಮೆರಾದಲ್ಲಿ LEOPARDಯ ಚಲನವಲನ ಸೆರೆಯಾಗಿದೆ.ಇದನ್ನು ಹೊರತುಪಡಿಸಿದರೆ, ಕಳೆದ 9 ದಿನದಿಂದ LEOPARDಯಾರ ಕಣ್ಣಿಗೂ ಕಂಡಿಲ್ಲ. ಅದರ ಸೆರೆಗಾಗಿ ಇನ್ಫೋಸಿಸ್ ಆವರಣದಲ್ಲಿ 12ಕ್ಕೂ ಹೆಚ್ಚು ಕ್ಯಾಮರಾ ಟ್ರ್ಯಾಪ್ ಅಳವಡಿಸಲಾಗಿದ್ದು, ಎರಡು ಬೋನ್ ಇಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಡಿಸೆಂಬರ್ 31ರಂದು ಮುಂಜಾನೆ ಇನ್ಫೋಸಿಸ್ ಭದ್ರತಾ ಸಿಬ್ಬಂದಿಯ ಜೀಪ್ ಎದುರು LEOPARDಯೊಂದು ಹಾದು ಹೋಗಿತ್ತು.
ಅಲ್ಲದೆ, ಅಂದು LEOPARDಯ ಚಲನವಲನ ಸಿಸಿಟಿವಿ ಕ್ಯಾಮೆರಾದಲ್ಲಿ ಪತ್ತೆಯಾಗಿತ್ತು.ಈ ಹಿನ್ನೆಲೆಯಲ್ಲಿ ಹೆಜ್ಜೆ ಗುರುತು ಇದ್ದ ಸ್ಥಳದಲ್ಲಿ ಮತ್ತೆ 10 ಕ್ಯಾಮೆರಾ ಟ್ರ್ಯಾಪ್ ಅಳವಡಿಸಿ, 1 ಕ್ಯಾಟಲ್ ಪೆನ್ಕೇಜ್ (ಬೋನು) ಅಳವಡಿಸಿ LEOPARD ಸೆರೆ ಕಾರ್ಯಾಚರಣೆಯನ್ನು ಮತ್ತಷ್ಟು ಬಿಗಿಗೊಳಿಸಿದ್ದಾರೆ.LEOPARD ತನ್ನ ಆವಾಸ ಸ್ಥಾನವನ್ನು ಬೇರೆ ಕಡೆ ಬದಲಾಯಿಸುತ್ತಿದೆ ಎನ್ನಲಾಗುತ್ತಿದೆ. ಈ ನಡುವೆ ಅರಣ್ಯ ಇಲಾಖೆ ಸಿಬ್ಬಂದಿ ಇನ್ಫೋಸಿಸ್ ಆವರಣದಲ್ಲಿ ಕೂಂಬಿಂಗ್ ಕಾರ್ಯಾಚರಣೆ ಮುಂದುವರೆಸಿದ್ದು, LEOPARDಯ ಹೆಜ್ಜೆ ಗುರುತನ್ನು ಪತ್ತೆ ಹಚ್ಚಿದ್ದಾರೆ.
ಇದನ್ನು ಓದಿರಿ : CYBER CRIME : ನಕಲಿ ಕಾಲ್ ಸೆಂಟರ್ ಪತ್ತೆ, 11 ಜನರ ಬಂಧನ