spot_img
spot_img

KASHMIR Z MORH TUNNEL : ಕಾಶ್ಮೀರದಲ್ಲಿಂದು ಝಡ್-ಮೋರ್ಹಾ ಸುರಂಗ

spot_img
spot_img

Share post:

Srinagar News:

2,680 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣವಾಗಿರುವ ಈ ಸುರಂಗ ಮಾರ್ಗ​ ಝೋಜಿಲಾ ಸುರಂಗ ಯೋಜನೆಯ ನಿರ್ಣಾಯಕ ಭಾಗವಾಗಿದೆ.ಶ್ರೀನಗರ ಮತ್ತು ಲಡಾಖ್​ ನಡುವೆ ಎಲ್ಲಾ ಋತುಮಾನದಲ್ಲೂ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆ ಯೋಜನೆ ಇದಾಗಿದೆ.

ಕೇಂದ್ರಾಡಳಿತ ಪ್ರದೇಶ ಜಮ್ಮು KASHMIRದಲ್ಲಿಂದು ಪ್ರಧಾನಿ ನರೇಂದ್ರ ಮೋದಿ ಅವರು ಬಹುನಿರೀಕ್ಷಿತ ಝಡ್​ ಮೋರ್ಹ್​ ಟನಲ್​ ಉದ್ಘಾಟಿಸಲಿದ್ದಾರೆ.₹2,680 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿರುವ ಈ ಸುರಂಗ ಮಾರ್ಗ​ ಝೋಜಿಲಾ ಸುರಂಗ ಯೋಜನೆಯ ನಿರ್ಣಾಯಕ ಭಾಗವಾಗಿದೆ. 2030ರೊಳಗೆ ಕಾಮಗಾರಿ ಪೂರ್ಣಗೊಳ್ಳಲಿದ್ದು, ಶ್ರೀನಗರದಿಂದ ಲಡಾಖ್ ನಡುವೆ ಎಲ್ಲಾ ಋತುಮಾನದಲ್ಲಿ ಸಂಪರ್ಕ ಕಲ್ಪಿಸಲಿದೆ.

Sonmarg to disconnect in winter: ಚಳಿಗಾಲದಲ್ಲಿ ಭಾರಿ ಹಿಮಪಾತದಿಂದಾಗಿ ಸೋನ್​ಮಾರ್ಗ್​ ಜನರಿಗೆ ರಸ್ತೆ ಸಂಪರ್ಕ ಇಲ್ಲದಂತಾಗುತ್ತದೆ. ಹೀಗಾಗಿ ಜನರಿಗೆ ಕಣಿವೆಯ ಇತರ ಜನರೊಂದಿಗೆ ಸಂಪರ್ಕ ಸಾಧಿಸುವುದು ದುಸ್ತರವಾಗುತ್ತದೆ. ಈ ನಿಟ್ಟಿನಲ್ಲಿ ಈ ಸುರಂಗ ಮಾರ್ಗ ಪ್ರಮುಖವಾಗಿದೆ.

ಶ್ರೀನಗರ ಮತ್ತು ಲಡಾಖ್​ ಹೆದ್ದಾರಿಯಲ್ಲಿ ಪ್ರವಾಸಿಗರ ಪ್ರಮುಖ ಆಕರ್ಷಣೆಯ ತಾಣವಾಗಿರುವ ಸೋನ್​ ಮಾರ್ಗ್​​ ಅನ್ನು ಕೂಡ ಈ ಝಡ್​ ಮೋರ್ಹಾ ಟನಲ್​ ಸಂಪರ್ಕಿಸುತ್ತದೆ.ಕಾರ್ಯಕ್ರಮದಲ್ಲಿ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ, ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ಮತ್ತು ಭೂ ವಿಜ್ಞಾನ ರಾಜ್ಯ ಸಚಿವ ಜಿತೇಂದ್ರ ಸಿಂಗ್, ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ರಾಜ್ಯ ಸಚಿವ ಅಜಯ್ ತಮ್ತಾ, ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಮತ್ತು ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ, ಉಪಮುಖ್ಯಮಂತ್ರಿ ಸುರೀಂದರ್ ಕುಮಾರ್ ಚೌಧರಿ, ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸುನಿಲ್ ಶರ್ಮಾ, ಸಂಸದ ಅಗಾ ಸೈಯದ್ ರುಹುಲ್ಲಾ ಮೆಹದಿ ಮತ್ತು ಸಂಸದ ಗುಲಾಂ ಅಲಿ ಮುಂತಾದವರು ಭಾಗಿಯಾಗಲಿದ್ದಾರೆ.

ಇಂದು ಬೆಳಗ್ಗೆ 11.30ಕ್ಕೆ ಪ್ರಧಾನಿ ನರೇಂದ್ರ ಮೋದಿ ಸಾರ್ವಜನಿಕ ಕಾರ್ಯಕ್ರಮದಲ್ಲಿ ಸುರಂಗ ಮಾರ್ಗ​ ಉದ್ಘಾಟಿಸಲಿದ್ದಾರೆ. ಜಮ್ಮು ಮತ್ತು KASHMIR ಕೇಂದ್ರಾಡಳಿತ ಪ್ರದೇಶವಾದ ಬಳಿಕ ನಡೆದ ಮೊದಲ ಚುನಾವಣೆಯ ಬಳಿಕ ಪ್ರಧಾನಿ ಮೋದಿ ಅವರ ಮೊದಲ ಭೇಟಿ ಇದಾಗಿದೆ.

ಪ್ರಧಾನಿ ನರೇಂದ್ರ ಮೋದಿ ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಗಿಯಾಗಲಿರುವ ಸ್ಥಳವನ್ನು ವಾರದ ಹಿಂದೆಯೇ ಬಿಗಿ ಭದ್ರತೆಯಲ್ಲಿ ಬಂದ್​ ಮಾಡಲಾಗಿದೆ. ಲೇಹ್-ಶ್ರೀನಗರ ಹೆದ್ದಾರಿಯನ್ನು ಕೂಡ ಶನಿವಾರದಿಂದ ಬಂದ್​ ಮಾಡಲಾಗಿದ್ದು, ಇಂದು ತೆರೆಯಲಾಗುತ್ತದೆ.

Features of Subway:

ನ್ಯೂ ಆಸ್ಟ್ರಿಯನ್​ ಟನೆಲಿಂಗ್​ ಮಾದರಿಯಲ್ಲಿ ನಿರ್ಮಿಸಲಾಗಿದ್ದು, ಸ್ಥಿರತೆ ಮತ್ತು ತುರ್ತು ಸಂವಹನ ಮಾರ್ಗ​, ಅಗ್ನಿಶಾಮಕ ಸಾಧನ ಮತ್ತು ಕಣ್ಗಾವಲು ವ್ಯವಸ್ಥೆ ಹೊಂದಿದೆ.

ಸಮುದ್ರ ಮಟ್ಟದಿಂದ 8,650 ಅಡಿ ಎತ್ತರದಲ್ಲಿದ್ದು, ಟನಲ್​ನೊಳಗೆ ಗಾಳಿಯಾಡಲು ಅತ್ಯಾಧುನಿಕ ವ್ಯವಸ್ಥೆ ಮಾಡಲಾಗಿದೆ.

6.4 ಕಿ.ಮೀ ಉದ್ದದ ಸುರಂಗ ಮಾರ್ಗ​ 10 ಮೀಟರ್​ ಅಗಲವಿದೆ.

ಎರಡು ರಸ್ತೆ ಮಾರ್ಗದಲ್ಲಿ ವಾಹನಗಳು ಸಂಚರಿಸಬಹುದು.

ತುರ್ತು ಪರಿಸ್ಥಿತಿಯಲ್ಲಿ ಸವಾರರ ಸುರಕ್ಷತೆಗೆ 6.4 ಕಿ.ಮೀ ಉದ್ದ, 7.5 ಮೀಟರ್ ಅಗಲದ ಎಸ್ಕೇಪ್ ಟನಲ್ ಇದೆ.

80 ಕಿ.ಮೀ ವೇಗದಲ್ಲಿ ಗಂಟೆಗೆ 100 ಕಾರುಗಳು ಸಂಚರಿಸಬಹುದು.

2012ರಲ್ಲಿ ಗಡಿ ರಸ್ತೆ ಸಂಸ್ಥೆ (ಬಿಆರ್​ಒ) ಯೋಜನೆಯ ಹೊಣೆ ಹೊತ್ತಿತ್ತು. ಬಳಿಕ ರಾಷ್ಟ್ರೀಯ ಹೆದ್ದಾರಿ ಮತ್ತು ಸೌಕರ್ಯ ಅಭಿವೃದ್ಧಿ ಕಾರ್ಪೊರೇಷನ್​ ನಿಯಮಿತಿ ಇದರ ನಿರ್ವಹಣೆ ನಡೆಸಿದೆ. 2023ರ ಆಗಸ್ಟ್‌ನಲ್ಲಿ ಟನಲ್​ ನಿರ್ಮಾಣ ಗುರಿ ಹೊಂದಲಾಗಿತ್ತು. ಜಮ್ಮು ಮತ್ತು KASHMIR ಚುನಾವಣೆ ಹಿನ್ನೆಲೆಯಲ್ಲಿ ಉದ್ಘಾಟನೆ ವಿಳಂಬಗೊಂಡಿದ್ದು, ಇದೀಗ ಚಾಲನೆ ಸಿಗುತ್ತದೆ.

ಇದನ್ನು ಓದಿರಿ : SUKMA IED BLAST : ಆಟವಾಡುತ್ತಾ ನಕ್ಸಲರಿಟ್ಟ ಐಇಡಿ ಮೇಲೆ ಕಾಲಿಟ್ಟ ಬಾಲಕಿ!

 

Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

MOTOROLA EDGE 60 FUSION – ಅದ್ಭುತವಾದ ಕ್ಯಾಮೆರಾ ಸೆಟಪ್, ವಾಟರ್ ಪ್ರೊಟೆಕ್ಷನ್ – ಮೊಟೊರೊಲಾದ ಹೊಸ ಫೋನ್ನ ಬೆಲೆ ಕೇವಲ ಇಷ್ಟೇ!

Motorola Edge 60 Fusion: ಬಹುನಿರೀಕ್ಷಿತ ' MOTOROLA EDGE 60 FUSION' ಕೊನೆಗೂ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಕಂಪನಿಯು ಇದನ್ನು ' MOTOROLA EDGE...

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...