spot_img
spot_img

ಜಮ್ಮು ಕಾಶ್ಮೀರ ಚುನಾವಣೆಗೆ ಕೊನೆಗೂ ಮುಹೂರ್ತ ಫಿಕ್ಸ್‌.. 10 ವರ್ಷಗಳ ಬಳಿಕ 3 ಮಹತ್ವದ ಹೆಜ್ಜೆ; ಏನದು?

spot_img
spot_img

Share post:

ಹೇ ಸೀತಾರಾಮ್‌ ನ್ಯೂಸ್‌ ಡೆಸ್ಕ್:‌ ಜಮ್ಮು ಕಾಶ್ಮೀರ ಹಾಗೂ ಹರಿಯಾಣದಲ್ಲಿ ವಿಧಾನಸಭಾ ಚುನಾವಣೆಗೆ ಕ್ಷಣಗಣನೆ ಶುರುವಾಗಿದೆ. ಕೇಂದ್ರ ಚುನಾವಣಾ ಆಯುಕ್ತ ರಾಜೀವ್ ಕುಮಾರ್​ ಅವರು ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಹತ್ವದ ಘೋಷಣೆ ಮಾಡಿದ್ದಾರೆ. ನಮ್ಮ ಅಧಿಕಾರಿಗಳು ಕಣಿವೆ ರಾಜ್ಯದ ಎಲ್ಲಾ ಕಡೆಗೂ ಹೋಗಿ ಚುನಾವಣೆಯ ತಯಾರಿ ಮಾಡಿದ್ದಾರೆ. ಅಲ್ಲಿನ ಜನರ ಆಶಯವೂ ಕೂಡ ಆದಷ್ಟು ಬೇಗ ಚುನಾವಣೆ ಎದುರಿಸುವುದಾಗಿದೆ. ಜಮ್ಮು ಕಾಶ್ಮೀರದಲ್ಲಿ ಲೋಕಸಭಾ ಚುನಾವಣೆಯಲ್ಲಿ ದೂರ ದೂರದವರಗೆ ಸಾಲುಗಟ್ಟಿ ಜನ ಮತದಾನ ಮಾಡಿದ್ದಾರೆ. ಅವರಲ್ಲಿ ಹೊಸ ಬದಲಾವಣೆ ತರುವ ಹುಮ್ಮಸ್ಸಿನಲ್ಲಿದ್ದಾರೆ. ತಮ್ಮ ಭವಿಷ್ಯವನ್ನು ತಾವೇ ಬರೆದುಕೊಳ್ಳುವ ಉತ್ಸಾಹದಲ್ಲಿದ್ದಾರೆ ಎಂದು ರಾಜೀವ್ ​ಕುಮಾರ್ ಹೇಳಿದ್ದಾರೆ.

ಇದನ್ನೂ ಓದಿ: ಪ್ರಶಸ್ತಿ ಸಿಕ್ಕ ಖುಷಿಯಲ್ಲಿ ಅಪ್ಪುವನ್ನು ನೆನೆದ ರಿಷಬ್​ ಶೆಟ್ಟಿ! ಏನಂದ್ರು ಗೊತ್ತಾ?

ಜಮ್ಮು ಕಾಶ್ಮೀರದಲ್ಲಿ ಚುನಾವಣೆ ಪ್ರಕ್ರಿಯೆ ಹೇಗೆ ನಡೆಯಲಿದೆ ಅನ್ನೋದನ್ನ ವಿವರಿಸಿದ ರಾಜೀವ್​ ಕುಮಾರ್ ಬುಲೆಟ್ ಬದಲಾಗಿ ಬುಲೆಟ್​ನ್ನು ಜನರು ಆಯ್ಕೆ ಮಾಡಿಕೊಂಡಿದ್ದಾರೆ. ಜಮ್ಮು ಕಾಶ್ಮೀರದಲ್ಲಿ ಒಟ್ಟು 90 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಒಟ್ಟು 87.09 ಲಕ್ಷ ಮತದಾರರಿದ್ದಾರೆ. ಅದರಲ್ಲಿ ಮಹಿಳೆಯರು 42.62 ಲಕ್ಷ ಹಾಗೂ ಪುರುಷರು 44.46 ಲಕ್ಷ ದಷ್ಟಿದ್ದರೆ. ನೂತನ ಮತದಾರರು 3.71 ಲಕ್ಷದಷ್ಟಿದ್ದಾರೆ. ಯುವಕರು 20 ಲಕ್ಷದಷ್ಟು ಮತದಾರರಿದ್ದಾರೆ ಎಂದು ಸಂಜೀವ್ ಕುಮಾರ್ ಸ್ಪಷ್ಟಪಡಿಸಿದ್ದಾರೆ. ಒಟ್ಟು 11, 838 ಮತಗಟ್ಟೆಗಳನ್ನು ನಿರ್ಮಾಣ ಮಾಡಲಾಗುವುದು ಎಂದು ಹೇಳಿದ್ದಾರೆ.

10 ವರ್ಷಗಳ ಬಳಿಕ 3 ಹಂತದಲ್ಲಿ ಮತದಾನ!
ಜಮ್ಮು ಕಾಶ್ಮೀರದಲ್ಲಿ ಒಟ್ಟು ಮೂರು ಹಂತಗಳಲ್ಲಿ ಚುನಾವಣೆ ಮಾಡಲು ಚುನಾವಣೆ ಆಯೋಗ ಸಜ್ಜಾಗಿದೆ. ಸೆಪ್ಟಂಬರ್ 18 ರಂದು ಮೊದಲ ಹಂತ, 24 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ ಹಾಗೆ ಎರಡನೇ ಹಂತದ ಮತದಾ ಸೆ. 25 ರಂದು ನಡೆಯಲಿದ್ದು 26 ಕ್ಷೇತ್ರಗಳ ಮತದಾರರು ಮತ ಹಾಕಲಿದ್ದಾರೆ ಮತ್ತು ಅಕ್ಟೋಬರ್ 1ಕ್ಕೆ 40 ಕ್ಷೇತ್ರಗಳಿಗೆ ಮೂರನೇ ಹಂತದ ಚುನಾವಣೆಗೆ ದಿನಾಂಕ ನಿಗದಿಯಾಗಿದೆ. ಅಕ್ಟೋಬರ್ 4ಕ್ಕೆ ಅಂದ್ರೆ ಗಾಂಧಿ ಜಯಂತಿಯ ಎರಡು ದಿನದ ಬಳಿಕ ಜಮ್ಮು, ಕಾಶ್ಮೀರ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾಗಲಿದೆ.

spot_img

Related articles

MOTOROLA EDGE 60 FUSION – ಅದ್ಭುತವಾದ ಕ್ಯಾಮೆರಾ ಸೆಟಪ್, ವಾಟರ್ ಪ್ರೊಟೆಕ್ಷನ್ – ಮೊಟೊರೊಲಾದ ಹೊಸ ಫೋನ್ನ ಬೆಲೆ ಕೇವಲ ಇಷ್ಟೇ!

Motorola Edge 60 Fusion: ಬಹುನಿರೀಕ್ಷಿತ ' MOTOROLA EDGE 60 FUSION' ಕೊನೆಗೂ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಕಂಪನಿಯು ಇದನ್ನು ' MOTOROLA EDGE...

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...