spot_img
spot_img

LAKSHMI HEBBALKAR : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಆರೋಗ್ಯ ವಿಚಾರಿಸಿದ ಸಚಿವ ಸತೀಶ್ ಜಾರಕಿಹೊಳಿ

spot_img
spot_img

Share post:

Belgaum News:

ಸದ್ಯ ಸಚಿವೆ LAKSHMI HEBBALKAR ಆರೋಗ್ಯವಾಗಿದ್ದಾರೆ. ಆದಷ್ಟು ಬೇಗ ಗುಣಮುಖರಾಗಲಿ ಎಂದು ನಾವು ಬಯಸುತ್ತೇವೆ. ವೈದ್ಯರು ಕೂಡ LAKSHMI HEBBALKAR ಅವರು ಶೀಘ್ರವೇ ಗುಣಮುಖರಾಗುತ್ತಾರೆ ಎಂದು ಹೇಳಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ತಿಳಿಸಿದರು. ಸಚಿವ ಸತೀಶ್ ಜಾರಿಕಿಹೊಳಿ ಅವರು ಆಸ್ಪತ್ರೆಗೆ ಭೇಟಿ ನೀಡಿ ಸಚಿವೆ LAKSHMI HEBBALKAR ಅವರ ಆರೋಗ್ಯ ವಿಚಾರಿಸಿದರು.

ರಸ್ತೆ ಅಪಘಾತದಲ್ಲಿ ಗಾಯಗೊಂಡು ಬೆಳಗಾವಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ LAKSHMI HEBBALKAR ಅವರನ್ನು ಗುರುವಾರ ರಾತ್ರಿ ಸತೀಶ್ ಜಾರಕಿಹೊಳಿ ಭೇಟಿಯಾಗಿ ಆರೋಗ್ಯ ವಿಚಾರಿಸಿದರು. ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, LAKSHMI HEBBALKAR ಅವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದೇನೆ. ಚೇತರಿಸಿಕೊಳ್ಳಲು ಇನ್ನೂ ನಾಲ್ಕೈದು ದಿನ ಬೇಕಾಗುತ್ತದೆ ಎಂದು ವೈದ್ಯರು ಹೇಳಿದ್ದಾರೆ ಎಂದು ಮಾಹಿತಿ ನೀಡಿದರು.

LAKSHMI HEBBALKAR ಅವರಿಗೆ ಚಿಕಿತ್ಸೆ ನೀಡುತ್ತಿರುವ ಡಾ. ರವಿ ಪಾಟೀಲ ಮಾತನಾಡಿ, ಮೂರು ದಿನಗಳಿಂದ ಅವರಿಗೆ ಚಿಕಿತ್ಸೆ ಮುಂದುವರಿದಿದ್ದು, ಸಾಕಷ್ಟು ಚೇತರಿಕೆ ಕಂಡು ಬಂದಿದೆ. ಮೊದಲ‌ ದಿನದ ಎಂಆರ್​ಐ ಸ್ಕ್ಯಾನ್, ಅಲ್ಟ್ರಾ ಸೌಂಡ್ ಸ್ಕ್ಯಾನ್ ವರದಿಗೂ‌ ಇಂದು ಮಾಡಿದ ಪರೀಕ್ಷೆಯಲ್ಲಿ ಬಹಳಷ್ಟು ಸುಧಾರಣೆ ಕಾಣಿಸಿದೆ. ಯಾವುದೇ ತೀವ್ರತರವಾದ ಗಾಯ ಕಂಡುಬಂದಿಲ್ಲ ಎಂದರು.

ನಾವು ಕೂಡ ಸಂಪೂರ್ಣ ಚೇತರಿಸಿಕೊಳ್ಳುವವರೆಗೆ ಆಸ್ಪತ್ರೆಯಲ್ಲೆ ಇರುವುದು ಒಳ್ಳೆಯದು ಎಂದು ಸಲಹೆ ನೀಡಿದ್ದೇವೆ. ಯಾಕೆಂದರೆ ಆಸ್ಪತ್ರೆಯಲ್ಲಿ ಅವರಿಗೆ ಹೆಚ್ಚಿನ ಚಿಕಿತ್ಸೆ ದೊರೆಯುತ್ತದೆ. ಅವರು ಚೇತರಿಸಿಕೊಳ್ಳಲು ಇನ್ನೂ‌ ಒಂದು ವಾರ ಅಥವಾ ಹತ್ತು ದಿನ ಸಮಯಾವಕಾಶ ಬೇಕಾಗುತ್ತದೆ ಎಂದು ಸತೀಶ ಜಾರಕಿಹೊಳಿ ಹೇಳಿದರು. LAKSHMI HEBBALKAR ಅವರು ಚಿಕಿತ್ಸೆಗೆ ಚೆನ್ನಾಗಿ ಸ್ಪಂದಿಸುತ್ತಿದ್ದಾರೆ.

ಬೆನ್ನು ಹುರಿಗೆ ಪೆಟ್ಟಾಗಿದ್ದರಿಂದ ಅವರಿಗೆ ಒಂದು ತಿಂಗಳು ಬೆಡ್ ರೆಸ್ಟ್ ಹೇಳಿದ್ದೇವೆ. ಸರಿಯಾಗಿ ಊಟ ತೆಗೆದುಕೊಳ್ಳುತ್ತಿದ್ದಾರೆ. ಇದನ್ನೆಲ್ಲಾ ನೋಡಿದರೆ ಆದಷ್ಟು ಬೇಗನೇ ಅವರು ಗುಣಮುಖರಾಗಿ ಎಂದಿನಂತೆ ತಮ್ಮ ಕಾರ್ಯ ಚಟುವಟಿಕೆ ಶುರು ಮಾಡಲಿದ್ದಾರೆ ಅಂತಾ ಅನಿಸುತ್ತದೆ.

ಇನ್ನು ಮೂರ್ನಾಲ್ಕು ದಿನಗಳಲ್ಲಿ ಅವರನ್ನು ಡಿಸ್ಚಾರ್ಜ್ ಮಾಡಲು ನಿರ್ಧರಿಸಿದ್ದೇವೆ. ಅದೇ ರೀತಿ ಚನ್ನರಾಜ ಹಟ್ಟಿಹೊಳಿ, ಗನ್ ಮ್ಯಾನ್ ಹಾಗೂ ಕಾರು ಚಾಲಕ ಆರೋಗ್ಯದಲ್ಲಿ ಸಂಪೂರ್ಣ ಚೇತರಿಸಿಕೊಂಡಿದ್ದು, ಅವರೆಲ್ಲಾ ಮನೆಗೆ ಹೋಗಿದ್ದಾರೆ ಎಂದು ಹೇಳಿದರು.

Minister’s car accident on Monday:

ಚನ್ನಮ್ಮನ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಬಳಿ ಸೋಮವಾರ ಬೆಳಗ್ಗೆ 5 ಗಂಟೆಗೆ ಬೆಂಗಳೂರಿನಿಂದ ಬೆಳಗಾವಿಗೆ ಪ್ರಯಾಣಿಸುತ್ತಿದ್ದ ಸಚಿವೆ LAKSHMI HEBBALKAR ಅವರಿದ್ದ ಕಾರು ಅಪಘಾತಕ್ಕೀಡಾತ್ತು. ಕಾರು ಚಾಲಕನ ನಿಯಂತ್ರಣ ತಪ್ಪಿ ಸರ್ವೀಸ್ ರಸ್ತೆಯ ಪಕ್ಕದ ಮರಕ್ಕೆ ಡಿಕ್ಕಿ ಹೊಡೆದಿತ್ತು.

ಪರಿಣಾಮ LAKSHMI HEBBALKAR , ಸಹೋದರ ಮತ್ತು ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಕಾರು ಚಾಲಕ ಹಾಗೂ ಗನ್ ಮ್ಯಾನ್ ಗಾಯಗೊಂಡಿದ್ದರು.

ಇದನ್ನು ಓದಿರಿ : PRISONER SUICIDE ATTEMPT : ಶಿವಮೊಗ್ಗ ಕೇಂದ್ರ ಕಾರಾಗೃಹದ ಸಜಾ ಬಂಧಿ ಆತ್ಮಹತ್ಯೆಗೆ ಯತ್ನ

Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

MOTOROLA EDGE 60 FUSION – ಅದ್ಭುತವಾದ ಕ್ಯಾಮೆರಾ ಸೆಟಪ್, ವಾಟರ್ ಪ್ರೊಟೆಕ್ಷನ್ – ಮೊಟೊರೊಲಾದ ಹೊಸ ಫೋನ್ನ ಬೆಲೆ ಕೇವಲ ಇಷ್ಟೇ!

Motorola Edge 60 Fusion: ಬಹುನಿರೀಕ್ಷಿತ ' MOTOROLA EDGE 60 FUSION' ಕೊನೆಗೂ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಕಂಪನಿಯು ಇದನ್ನು ' MOTOROLA EDGE...

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...