spot_img
spot_img

JOURNALISTS CONFERENCE : ಗ್ರಾಮೀಣ ಪತ್ರಕರ್ತರಿಗೆ ಸದ್ಯದಲ್ಲೇ ಉಚಿತ ಬಸ್ ಪಾಸ್

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

Tumkur News:

ತುಮಕೂರು ಸಿದ್ಧಾರ್ಥ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ ಕಾರ್ಯನಿರತ JOURNALISTS CONFERENCE ಸಂಘ ಆಯೋಜಿಸಿದ್ದ ಪತ್ರಕರ್ತರ 39ನೇ ರಾಜ್ಯ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದರು. ಸಂವಿಧಾನದ ಆಶಯಗಳನ್ನು ಈಡೇರಿಸುವುದೇ ಪತ್ರಿಕಾ ವೃತ್ತಿಯ ಕರ್ತವ್ಯ. ಧ್ವನಿ ಇಲ್ಲದವರ ಪರವಾಗಿ, ಸಮಾಜದಲ್ಲಿರುವ ಮೇಲು-ಕೆಳ ಜಾತಿಗಳ ನಡುವಿನ ತಾರತಮ್ಯ ಮತ್ತು ಅಸಮಾನತೆ ಕೊನೆಯಾಗುವ ದಿಕ್ಕಿನಲ್ಲಿ ಕರ್ತವ್ಯ ನಿರ್ವಹಿಸಿ ಎಂದು ಕರೆ ನೀಡಿದರು. ವರದಿಗಾರಿಕೆ ವೃತ್ತಿಪರವಾಗಿದ್ದಾಗ ಸಮಾಜದ ಪರವಾಗಿರುತ್ತದೆ. ಪತ್ರಿಕಾ ವೃತ್ತಿ ಉದ್ಯಮ ಆದ ಕೂಡಲೇ ಇದರ ಉದ್ದೇಶಗಳು ಬದಲಾಗುತ್ತವೆ. ವಸ್ತು ಸ್ಥಿತಿ ಜೊತೆಗೆ ಮೌಲ್ಯಾಧಾರಿತ ಸುದ್ದಿ ಇಂದಿನ ಅಗತ್ಯ. ಕಲ್ಪಿತ ಪತ್ರಿಕೋದ್ಯಮ ಅಪಾಯಕಾರಿ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಉಚಿತ ಬಸ್ ಪಾಸ್ ಸದ್ಯದಲ್ಲೇ ಗ್ರಾಮೀಣ ಪತ್ರಕರ್ತರ ಕೈ ಸೇರಲಿದೆ ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದರು.

Bus pass in few days:

ಗ್ರಾಮೀಣ ಪತ್ರಕರ್ತರ ಉಚಿತ ಬಸ್ ಪಾಸ್ ಸದ್ಯದಲ್ಲೇ ನಿಮ್ಮ ಕೈ ಸೇರಲಿದೆ. ಪತ್ರಕರ್ತರ ಕುಟುಂಬಕ್ಕೆ ಆರೋಗ್ಯ ವಿಮೆ ನೀಡುವ ಬಗ್ಗೆ ತೀರ್ಮಾನ ಮಾಡಲಾಗುವುದು. ಮೊದಲಿಗೆ ಸಮ್ಮೇಳನದ ಆವರಣದಲ್ಲಿ ಆಯೋಜಿಸಿದ್ದ ಮಳಿಗೆಗಳನ್ನು ವೀಕ್ಷಿಸಿದ ಮುಖ್ಯಮಂತ್ರಿಗಳು, ಮಹಿಳಾ ಸ್ವ ಸಹಾಯ ಸಂಘಗಳು ಸಿದ್ಧಪಡಿಸಿದ ತಿಂಡಿ ಸವಿದರು. ಪತ್ರಕರ್ತರ ಮಾಸಾಶನವನ್ನೂ 3 ಸಾವಿರದಿಂದ 12 ಸಾವಿರಕ್ಕೆ ಹೆಚ್ಚಿಸಲಾಗಿದೆ ಎಂದರು. ಮುಖ್ಯಮಂತ್ರಿಗಳ ಮಾಧ್ಯಮ‌ ಸಲಹೆಗಾರ ಕೆ.ವಿ.ಪ್ರಭಾಕರ್, ಗೃಹ ಸಚಿವ ಜಿ.ಪರಮೇಶ್ವರ್, ಸಹಕಾರಿ ಸಚಿವ ಕೆ.ಎನ್.ರಾಜಣ್ಣ, ರಾಜ್ಯ ಸರ್ಕಾರದ ದೆಹಲಿ ಪ್ರತಿನಿಧಿ ಟಿ.ಬಿ.ಜಯಚಂದ್ರ, ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಸೇರಿ ಜಿಲ್ಲೆಯ ಶಾಸಕರು ಹಾಗೂ ಹಲವು ಪ್ರಮುಖರು ಮತ್ತು ಜಿಲ್ಲಾಡಳಿತದ ಅಧಿಕಾರಿಗಳು ಉಪಸ್ಥಿತರಿದ್ದರು.

Congratulations to KV Prabhakar:

ರಾಜ್ಯದ ಪತ್ರಕರ್ತ ಸಮುದಾಯದ ವೃತ್ತಿಪರ ಸಮಸ್ಯೆಗಳಿಗೆ ಅತ್ಯಂತ ಸಹೃದಯತೆಯಿಂದ ಸ್ಪಂದಿಸಿ, ಪರಿಹಾರ ಒದಗಿಸಿ ಕೊಡುತ್ತಿರುವುದರ ಜೊತೆಗೆ ಸಮ್ಮೇಳನದ ಯಶಸ್ಸಿಗೆ ಸಕಲ ರೀತಿಯಲ್ಲಿ ಸಂಪೂರ್ಣ ಸಹಕಾರ ನೀಡಿದ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅವರಿಗೆ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಸಮ್ಮೇಳನ ವಿಶೇಷ ಅಭಿನಂದನೆ ಸಲ್ಲಿಸಿತು.

ಇದನ್ನು ಓದಿರಿ : NAGPUR VIDARBHA ORANGES : ಕಿತ್ತಳೆಗೆ ಬೇಡಿಕೆ ಬರಬೇಕಾದರೆ ರೈತರಲ್ಲಿ ಇರುವ ಈ ತಪ್ಪು ತಿಳಿವಳಿಕೆ ಹೋಗಬೇಕಿದೆ

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

WOMAN DONATES 35 YEARS OF SAVINGS:35 ವರ್ಷದ ಉಳಿತಾಯದ ಹಣವನ್ನು ಶಿಕ್ಷಣ ಸಂಸ್ಥೆಗೆ ದಾನ ಮಾಡಿದ ಮಹಿಳೆ.

Tirupati (Andhra Pradesh) News: ರೇಣಿಗುಂಟದ ಸಿ.ಮೋಹನ ದಾನ ಮಾಡಿದ WOMAN. ಇವರು ವಿಶ್ವಸಂಸ್ಥೆಯ ಅಭಿವೃದ್ಧಿ ಮತ್ತು ನಿರ್ವಹಣೆ ವಲಯದಲ್ಲಿ ಕೊಸೊವೊ, ಅಲ್ಬೇನಿಯಾ, ಯೆಮೆನ್, ಸೌದಿ...

BOMB THREAT CALLS TO AIRLINES : 2024ರಲ್ಲಿ ವಿಮಾನಗಳಿಗೆ ಬಂದಿದ್ದು ಬರೋಬ್ಬರಿ 728 ಹುಸಿ ಬಾಂಬ್ ಕರೆ, ಇಂಡಿಗೋಗೆ ಅತಿ ಹೆಚ್ಚು

New Delhi News: 2024ರಲ್ಲಿ ಒಟ್ಟು 728 ಹುಸಿ ಬಾಂಬ್​ ಕರೆಗಳು ವಿವಿಧ ವಿಮಾನಯಾನ ಸಂಸ್ಥೆಗಳಿಗೆ ಬಂದಿವೆ. ಅದರಲ್ಲಿ 714 ದೇಶಿಯ ವಿಮಾನ ಸಂಸ್ಥೆಗಳಿಗೆ ಬಂದಿವೆ....

HOUSE BURGLAR ARREST : ಪ್ರೊಪೆಷನಲ್ ಬಾಕ್ಸರ್ನಿಂದ 150ಕ್ಕೂ ಹೆಚ್ಚು ಮನೆಗಳ್ಳತನ

Bangalore News: HOUSE BURGLAR ARREST  ಬಾಕ್ಸಿಂಗ್ ಬಿಟ್ಟು ಕಳ್ಳತನಕ್ಕಿಳಿದು, 150ಕ್ಕೂ ಹೆಚ್ಚು ಮನೆಗೆ ಕನ್ನ ಹಾಕಿದ್ದ ಕುಖ್ಯಾತ ಅಂತಾರಾಜ್ಯ ಖದೀಮನನ್ನು ಪೊಲೀಸರು ಬಂಧಿಸಿದ್ದಾರೆ.ಸೋಲ್ಹಾಪುರದ ಮಂಗಳವಾರ್...

IRAN SATELLITES : ದೇಶೀಯವಾಗಿ ತಯಾರಿಸಿದ 3 ಉಪಗ್ರಹಗಳನ್ನು ಅನಾವರಣಗೊಳಿಸಿದ ಇರಾನ್

Tehran News: IRAN SATELLITES ತಾನು ದೇಶೀಯವಾಗಿ ತಯಾರಿಸಿದ ಮೂರು ಉಪಗ್ರಹಗಳನ್ನು ಅನಾವರಣಗೊಳಿಸಿದೆ. ಇರಾನ್ ಅಧ್ಯಕ್ಷ ಮಸೂದ್ ಪೆಜೆಶ್ಕಿಯಾನ್, ಮಾಹಿತಿ ಮತ್ತು ಸಂವಹನ ತಂತ್ರಜ್ಞಾನ ಸಚಿವ...