spot_img
spot_img

TEAM INDIA PLAYER ENGAGEMENT:ಸಂಸದೆ ಜೊತೆ ನಿಶ್ಚಿತಾರ್ಥ ಮಾಡಿಕೊಂಡ ಟೀಂ ಇಂಡಿಯಾ ಸ್ಟಾರ್ ಕ್ರಿಕೆಟರ್!.

spot_img
spot_img

Share post:

 

New Delhi News:

ಈ ಬಗ್ಗೆ ಕುಟುಂಬಸ್ಥರು ಪ್ರತಿಕ್ರಿಯೆ ನೀಡಿದ್ದಾರೆ.ಟೀಂ ಇಂಡಿಯಾದ ಯಂಗ್​ ಪ್ಲೇಯರ್​ ಸದ್ದಿಲ್ಲದೇ ಲೋಕಸಭಾ ಸಂಸದೆಯೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ. ಈ ಫೋಟೋಗಳಲ್ಲಿ ರಿಂಕು ಅವರ ಇಡೀ ಮನೆ ಸಿಂಗಾರಗೊಂಡಂತೆ ಕಾಣುತ್ತಿದ್ದು, ಇವರಿಬ್ಬರ ನಿಶ್ಚಿತಾರ್ಥ ನಡೆದಿದೆ ಎಂದು ನೆಟ್ಟಿಗರು ಊಹೆ ಮಾಡುತ್ತಿದ್ದಾರೆ.

TEAM ಇಂಡಿಯಾದ ಸ್ಟಾರ್​ ಕ್ರಿಕೆಟರ್​ ರಿಂಕು ಸಿಂಗ್ ಸದ್ದಿಲ್ಲದೇ ಉತ್ತರ ಪ್ರದೇಶದ ಸಮಾಜವಾದಿ ಪಕ್ಷದ ಸಂಸದೆ ಪ್ರಿಯಾ ಸರೋಜ್ ಅವರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ ಎಂದು ವರದಿಗಳು ಹರಿದಾಡಿವೆ. ಪ್ರಿಯಾ ಸರೋಜ್ ಇತ್ತೀಚೆಗೆ 25ನೇ ವಯಸ್ಸಿನಲ್ಲಿ ಮಚ್ಲಿಶಹರ್ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾಗಿದ್ದರು.

ಸದ್ಯ ನಿಶ್ಚಿತಾರ್ಥ ಮಾಡಿಕೊಂಡಿದ್ದು, ಈ ಇಬ್ಬರೂ ಶೀಘ್ರದಲ್ಲೇ ಹಸೆಮಣೆ ಏರಲಿದ್ದಾರೆ ಎಂದು ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.ಇದಷ್ಟೇ ಅಲ್ಲದೇ ಸಹ ಕ್ರಿಕೆಟಿಗರು ಮತ್ತು ಅಭಿಮಾನಿಗಳು ರಿಂಕು ಸಿಂಗ್​ಗೆ ಸಾಮಾಜಿಕ ಜಾಲತಾಣಗಳಲ್ಲಿ ಅಭಿನಂದಿಸಿದ್ದಾರೆ ಎಂದು ಹೇಳಲಾಗಿದೆ.

ರಿಂಕುವಿನ ತಂಗಿ ನೇಹಾ ಸಿಂಗ್ ಕೂಡ ತನ್ನ ಅಣ್ಣನ ಜೊತೆಗಿನ ಫೋಟೋಗಳನ್ನು ಶೇರ್ ಮಾಡಿಕೊಂಡಿದ್ದಾರೆ.ತೂಫಾನಿ ಸರೋಜ್ ಅವರು ಮಾಧ್ಯಮದವರೊಂದಿಗೆ ದೂರವಾಣಿ ಮೂಲಕ ಪ್ರತಿಕ್ರಿಯೆ ನೀಡಿದ್ದು, ‘ಅಲಿಘರ್‌ನಲ್ಲಿ ನ್ಯಾಯಾಧೀಶರಾಗಿ ಕೆಲಸ ಮಾಡುವ ತನ್ನ ಎರಡನೇ ಅಳಿಯನ ಮನೆಗೆ ಮದುವೆ ಕಾರ್ಯಕ್ರಮಕ್ಕೆ ಹೋಗಿದ್ದೇವು.

ಇದೇ ವೇಳೆ ಪ್ರಿಯಾ ಸರೋಜ್ ಮತ್ತು ರಿಂಕು ಸಿಂಗ್ ವಿವಾಹದ ಬಗ್ಗೆ ಮಾತುಕತೆ ನಡೆದಿದೆ. ಸದ್ಯಕ್ಕೆ ಈ ವಿಚಾರವಾಗಿ ಎರಡೂ ಕುಟುಂಬಗಳ ನಡುವೆ ಮಾತುಕತೆ ನಡೆದಿದ್ದು, ನಿಶ್ಚಿತಾರ್ಥ ವಿಚಾರ ಅಂತಿಮ ನಿಣಾರ್ಯಕ್ಕೆ ಬಂದಿಲ್ಲ ಎಂದು ತಿಳಿಸಿದ್ದಾರೆ.

ಆದರೆ, ಈ ಬಗ್ಗೆ ರಿಂಕು ಸಿಂಗ್​ ಆಗಲಿ ಸಂಸದೆ ಪ್ರಿಯಾ ಸರೋಜ್​ ಆಗಲಿ ಅಧಿಕೃತ ಹೇಳಿಕೆ ನೀಡಲ್ಲ. ಆದರೆ ಸಂಸದೆ ಪ್ರಿಯಾ ಸರೋಜ್​ ಅವರ ತಂದೆ ತುಫಾನಿ ಸರೋಜ್​ ಪ್ರತಿಕ್ರಿಯೆ ನೀಡಿದ್ದು ಎಲ್ಲಾ ಗೊಂದಲಗಳಿಗೆ ತೆರೆ ಎಳೆದಿದ್ದಾರೆ.

Background of Priya Saroj:ಪ್ರಸ್ತುತ ಅವರು ಶಾಸಕರಾಗಿದ್ದಾರೆ. ಪ್ರಿಯಾ ಸರೋಜ್ ದೆಹಲಿ ವಿಶ್ವವಿದ್ಯಾನಿಲಯದಲ್ಲಿ ಎಲ್​ಎಲ್​ಬಿ ಅಧ್ಯಯನ ಮಾಡಿದ್ದರು ಸುಪ್ರೀಂ ಕೋರ್ಟ್ ವಕೀಲರಾಗಿಯೂ ಕೆಲಸ ಮಾಡಿದ್ದಾರೆ.

ಬಿಜೆಪಿ ಅಭ್ಯರ್ಥಿ ಬಿಪಿ ಸರೋಜ್ ವಿರುದ್ಧ 35 ಸಾವಿರ ಮತಗಳ ಅಂತರದಿಂದ ಜಯಭೇರಿ ಬಾರಿಸಿದ್ದರು. 25ನೇ ವಯಸ್ಸಿನಲ್ಲಿ ಸಂಸದೆಯಾಗಿ ಆಯ್ಕೆಯಾದ ಅವರು ಎರಡನೇ ಕಿರಿಯ ಲೋಕಸಭೆ ಸಂಸದರಾಗಿ ಗುರುತಿಸಿಕೊಂಡಿದ್ದಾರೆ.

ಪ್ರಿಯಾ ಸರೋಜ್ ರಾಜಕೀಯ ಹಿನ್ನೆಲೆಯುಳ್ಳ ಕುಟುಂಬದಿಂದ ಬಂದವರಾಗಿದ್ದಾರೆ. ಇವರ ತಂದೆ ತುಫಾನಿ ಸರೋಜ್ ಮಚ್ಲಿಶಹರ್ ಕ್ಷೇತ್ರದಿಂದ ಸತತ ಮೂರು ಬಾರಿ ಸಂಸದರಾಗಿ (1999, 2004 ಮತ್ತು 2009) ಸ್ಪರ್ಧಿಸಿ ಹ್ಯಾಟ್ರಿಕ್​ ಗೆಲುವು ಸಾಧಿಸಿದ್ದರು.  ಸಮಾಜವಾದಿ ಪಕ್ಷದ ಪ್ರಿಯಾ ಸರೋಜ್ ಕಳೆದ ವರ್ಷ ನಡೆದ ಲೋಕಸಭಾ ಚುನಾವಣೆಯಲ್ಲಿ ಉತ್ತರ ಪ್ರದೇಶದ ಮಚ್ಲಿಶಹರ್ ಕ್ಷೇತ್ರದಿಂದ ಸ್ಪರ್ಧಿಸಿದ್ದರು.

Rinku Singh: 30 ಲಕ್ಷಕ್ಕೆ ರಿಂಕು ಸಿಂಗ್​ ಅವರನ್ನು ಖರೀದಿಸಿದ್ದ ಕೆಕೆಆರ್​ ಇದೀಗ 13 ಕೋಟಿ ರೂ ನೀಡಿ ತಂಡದಲ್ಲಿ ರಿಟೇನ್​ ಮಾಡಿಕೊಂಡಿದೆ.

TEAM ಇಂಡಿಯಾದ ಸ್ಟಾರ್​ ಆಟಗಾರನಾಗಿ ಗುರುತಿಸಿಕೊಂಡಿರುವ ರಿಂಕ್​ ಸಿಂಗ್​ ಫಿನಿಶರ್​ ಆಗಿಯೂ ಖ್ಯಾತಿ ಪಡೆದಿದ್ದಾರೆ. ಇದಲ್ಲದೇ ಇಂಡಿಯನ್​ ಪ್ರೀಮಿಯರ್​ ಲೀಗ್​ನಲ್ಲಿ ಕೋಲ್ಕತ್ತಾ ನೈಟ್​ ರೈಡರ್ಸ್​ ತಂಡದ ಭಾಗವಾಗಿದ್ದಾರೆ.

 

ಇದ್ದನು ಓದಿರಿ :INDIA CLINCH KHO KHO WORLD CUP: ಚೊಚ್ಚಲ ಪ್ರಶಸ್ತಿಗೆ ಮುತ್ತಿಕ್ಕಿದ ಮಹಿಳಾ, ಪುರುಷರ ತಂಡಗಳು.

Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

MOTOROLA EDGE 60 FUSION – ಅದ್ಭುತವಾದ ಕ್ಯಾಮೆರಾ ಸೆಟಪ್, ವಾಟರ್ ಪ್ರೊಟೆಕ್ಷನ್ – ಮೊಟೊರೊಲಾದ ಹೊಸ ಫೋನ್ನ ಬೆಲೆ ಕೇವಲ ಇಷ್ಟೇ!

Motorola Edge 60 Fusion: ಬಹುನಿರೀಕ್ಷಿತ ' MOTOROLA EDGE 60 FUSION' ಕೊನೆಗೂ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಕಂಪನಿಯು ಇದನ್ನು ' MOTOROLA EDGE...

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...