Tumkur News:
ಶಿವಕುಮಾರ ಸ್ವಾಮೀಜಿಯವರ 6ನೇ ವರ್ಷದ ಪುಣ್ಯ ಸಂಸ್ಮರಣೋತ್ಸವ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಇಲ್ಲಿಗೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದರು. ಸರ್ಕಾರಕ್ಕೆ ಯಾವಾಗ ಬುದ್ಧಿ ಬರತ್ತೋ ಆವಾಗ ದಾಸೋಹ ದಿನವನ್ನು ಅರ್ಥಪೂರ್ಣವಾಗಿ ಆಚರಣೆ ಮಾಡಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. BY VIJAYENDRA SLAMS ತಿವಿದರು.
ನಡೆದಾಡುವ ದೇವರು, ತ್ರಿವಿಧ ದಾಸೋಹಿ, ಕಾಯಕ ಯೋಗಿ, ಶಿವೈಕ್ಯ ಡಾ.ಶಿವಕುಮಾರ ಶ್ರೀಗಳ ಪುಣ್ಯ ಸಂಸ್ಮರಣೆಯಾಗಿದೆ. ಕೋಟ್ಯಂತರ ಭಕ್ತರಿಗೆ ಹರಸಿ ಹಾರೈಸಿದ ಶ್ರೀಗಳ ಈ ದಿನವನ್ನು ಮಾನ್ಯ ಯಡಿಯೂರಪ್ಪ ದಾಸೋಹ ದಿನವೆಂದು ಘೋಷಣೆ ಮಾಡಿದ್ದರು. ಆದರೆ, ಈ ಸರ್ಕಾರ ಈ ದಿನವನ್ನು ಅರ್ಥಪೂರ್ಣವಾಗಿ ಆಚರಣೆ ಮಾಡಬೇಕಿದೆ.
BY VIJAYENDRA SLAMS ಶ್ರೀಗಳ ಹುಟ್ಟೂರು ವೀರಾಪುರದಲ್ಲಿ ಪುತ್ಥಳಿ ನಿರ್ಮಾಣ ಕಾರ್ಯ ನೆನೆಗುದಿಗೆ ಬಿದ್ದಿದೆ. ಮುಖ್ಯಮಂತ್ರಿಗಳು ಆದಷ್ಟು ಬೇಗ ಪುತ್ಥಳಿ ನಿರ್ಮಾಣ ಕಾರ್ಯ ಮುಗಿಸುವ ಜೊತೆಗೆ ದಾಸೋಹ ದಿನವನ್ನು ಅರ್ಥಪೂರ್ಣವಾಗಿ ಆಚರಣೆ ಮಾಡಲಿ ಎಂದು ಮನವಿ ಮಾಡುವುದಾಗಿ ತಿಳಿಸಿದರು. BY VIJAYENDRA SLAMS ಇದಕ್ಕೂ ಮುನ್ನ ಕೇಂದ್ರ ಸಚಿವ ವಿ ಸೋಮಣ್ಣ, ಮೇಘಾಲಯ ರಾಜಪಾಲ ಸಿ ಹೆಚ್ ವಿಜಯಶಂಕರ್ ಕೂಡ ಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದರು.
ಇವರೊಂದಿಗೆ ಸುತ್ತೂರು ಮಠದ ಶ್ರೀಗಳು, ಮಾಜಿ ಶಾಸಕ ಸೊಗಡು ಶಿವಣ್ಣ, ಶಾಸಕ ಜ್ಯೋತಿ ಗಣೇಶ್ ಸೇರಿದಂತೆ ಇತರರು ಹಾಜರಿದ್ದರು. ಶ್ರೀ ಸಿದ್ದಗಂಗಾ ಮಠದಲ್ಲಿ ಶ್ರೀ ಶಿವಕುಮಾರ ಸ್ವಾಮೀಜಿಯವರ 6ನೇ ವರ್ಷದ ಪುಣ್ಯ ಸಂಸ್ಮರಣೋತ್ಸವ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಮಠಕ್ಕೆ ಭೇಟಿ ನೀಡಿ ಶ್ರೀಗಳ ಗದ್ದುಗೆ ದರ್ಶನ ಪಡೆದ ನಂತರ ಪತ್ರಕರ್ತರೊಂದಿಗೆ ಅವರು ಮಾತನಾಡಿದರು.
ಇದನ್ನು ಓದಿರಿ : COURT JUDGMENT : ಪರಿಹಾರದ 55 ಲಕ್ಷ ರೂಪಾಯಿ ಬಾಕಿ ಇಟ್ಟುಕೊಂಡ ಸಂಸ್ಥೆ