spot_img
spot_img

MODI AND KEJRIWAL ARE LIKE BROTHERS:ಓವೈಸಿ ವಾಗ್ದಾಳಿ.

spot_img
spot_img

Share post:

New Delhi News:

ದೆಹಲಿ ಚುನಾವಣೆಗೆ ಎಐಎಂಐಎಂ ಪಕ್ಷದಿಂದ ಇಬ್ಬರು ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲಾಗಿದ್ದು, ಮುಸ್ತಾಫಾಬಾದ್​ನಿಂದ ತಹೀರ್​ ಹುಸೇನ್​ ಮತ್ತು ಓಕ್ಲಾದಿಂದ ಶಿಫ-ಉರ್​-ರೆಹಮಾನ್​ ಕಣದಲ್ಲಿದ್ದಾರೆ. ಈ ಇಬ್ಬರು ಅಭ್ಯರ್ಥಿಗಳು ಪ್ರಸ್ತುತ ದೆಹಲಿ ಗಲಭೆ ಪ್ರಕರಣದಲ್ಲಿ ಜೈಲಿನಲ್ಲಿದ್ದಾರೆ.

ತಹೀರ್​ ಹುಸೇನ್​ ಎಎಪಿ ಕೌನ್ಸಿಲರ್​ ಆದ ಸಂದರ್ಭದಲ್ಲಿ ಜೈಲು ಸೇರಿದ್ದರು. ಇವರು ಕಳೆದ ಡಿಸೆಂಬರ್​ನಲ್ಲಿ ಎಐಎಂಐಎಂ ಸೇರಿದ್ದರು.ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ್​ ಕೇಜ್ರಿವಾಲ್​ ಮತ್ತು ಪ್ರಧಾನಿ ನರೇಂದ್ರ MODI ಅವರು ಒಂದೇ ನಾಣ್ಯದ ಎರಡು ಮುಖವಿದ್ದಂತೆ.

ಅವರಲ್ಲಿ ಹೆಚ್ಚಿನ ವ್ಯತ್ಯಾಸವಿಲ್ಲ ಎಂದು ಎಐಎಂಐಎಂ ಅಧ್ಯಕ್ಷ ಅಸಾಸುದ್ದೀನ್​ ಓವೈಸಿ ತಿಳಿಸಿದ್ದಾರೆ.ಓಕ್ಲಾದ ತಮ್ಮ ಪಕ್ಷದ ಅಭ್ಯರ್ಥಿ ಶಿಫ-ಉರ್​- ರೆಹಮಾನ್​ ಪರ ಪ್ರಚಾರ ನಡೆಸಿದ ಬಳಿಕ ಶಹೀನ್​ ಬಾಗ್​ನಲ್ಲಿ ಪಾದಯಾತ್ರೆ ನಡೆಸಿದರು.

ಚುನಾವಣೆಯಲ್ಲಿ ಜನರು ಗಾಳಿಪಟದ ಗುರುತಿಗೆ ಮತ ಹಾಕಬೇಕು ಎಂದು ಮನವಿ MODIದರು.ತಹೀರ್​ ಹುಸೇನ್​ ಮತ್ತು ಶಿಫ-ಉರ್​-ರೆಹಮಾನ್​ ಕಳೆದ ಐದು ವರ್ಷದಿಂದ ಇಲ್ಲಿಯವರೆಗೂ ಜೈಲಿನಲ್ಲೇ ಇದ್ದಾರೆ. ಆದರೆ, ಮದ್ಯ ನೀತಿ ಪ್ರಕರಣದಲ್ಲಿ ಕೇಜ್ರಿವಾಲ್, ಸಿಸೋಡಿಯಾ ಮತ್ತು ಸಂಜಯ್​ ಸಿಂಗ್​​ ಅವರಿಗೆ ಹೇಗೆ ಜಾಮೀನು ದೊರಕಿತು ಎಂದು ಪ್ರಶ್ನಿಸಿದರು. ಇನ್ನು ಜೈಲಿನಲ್ಲೇ ಇರುವ ಅವರ ತಪ್ಪಾದರೂ ಏನು ಎಂದರು.

MODI ಮತ್ತು ಕೇಜ್ರಿವಾಲ್​ ಸಹೋದರರಿದ್ದಂತೆ, ಒಂದೇ ನಾಣ್ಯದ ಎರಡು ಮುಖ. ಇಬ್ಬರು ಆರ್​ಎಸ್​ಎಸ್​ ತತ್ವ ಹೊಂದಿರುವವರು. ಒಬ್ಬರು ಶಾಖೆಯಿಂದ ಬಂದರೆ, ಮತ್ತೊಬ್ಬರು ಅದರ ಸಂಸ್ಥೆಯಿಂದ ಹೊರ ಬಂದಿರುವವರು ಎಂದು ಚುನಾವಣಾ ಪ್ರಚಾರದಲ್ಲಿ ಓವೈಸಿ ವಾಗ್ದಾಳಿ ನಡೆಸಿದರು.ಓಕ್ಲಾ ಕ್ಷೇತ್ರದಲ್ಲಿ ಅಭಿವೃದ್ಧಿ ಕೊರತೆ ವಿರುದ್ಧ ಟೀಕಿಸಿದ ಅವರು, ಇತರೆ ಕ್ಷೇತ್ರದಲ್ಲಿ ಅಭಿವೃದ್ಧಿಯಾಗಿದ್ದು, ಓಕ್ಲಾವನ್ನು ಕಸದ ರಾಶಿಯಾಗಿ ಎಎಪಿ ಸರ್ಕಾರ ಮಾಡಿದೆ ಎಂದು ವಾಗ್ದಾಳಿ ನಡೆಸಿರು. ಈ ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಅಸಾಧ್ಯ ಎಂದರು. (ಪಿಟಿಐ)

 

ಇದ್ದನು ಓದಿರಿ :SUPPORT PRICE FOR CHICKPEA: ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಎಸ್.ಪಾಟೀಲ್.

Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

MOTOROLA EDGE 60 FUSION – ಅದ್ಭುತವಾದ ಕ್ಯಾಮೆರಾ ಸೆಟಪ್, ವಾಟರ್ ಪ್ರೊಟೆಕ್ಷನ್ – ಮೊಟೊರೊಲಾದ ಹೊಸ ಫೋನ್ನ ಬೆಲೆ ಕೇವಲ ಇಷ್ಟೇ!

Motorola Edge 60 Fusion: ಬಹುನಿರೀಕ್ಷಿತ ' MOTOROLA EDGE 60 FUSION' ಕೊನೆಗೂ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಕಂಪನಿಯು ಇದನ್ನು ' MOTOROLA EDGE...

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...