spot_img
spot_img

BHUVANESHWARI STATUE : ವಿಧಾನಸೌಧದ ಆವರಣದಲ್ಲಿಂದು ಭುವನೇಶ್ವರಿಯ ಕಂಚಿನ ಪ್ರತಿಮೆ ಅನಾವರಣ

spot_img
spot_img

Share post:

Bangalore News:

ಕರ್ನಾಟಕ ಸುವರ್ಣ ಮಹೋತ್ಸವದ ಹಿನ್ನೆಲೆಯಲ್ಲಿ ‘ಹೆಸರಾಯಿತು ಕರ್ನಾಟಕ ಹಾಗೂ ಉಸಿರಾಗಲಿ ಕನ್ನಡ’ ಎಂಬ ಶೀರ್ಷಿಕೆಯಡಿ ವರ್ಷವಿಡೀ ರಾಜ್ಯಾದ್ಯಂತ ಹಲವು ಕಾರ್ಯಕ್ರಮಗಳನ್ನು ಸರ್ಕಾರ ಆಯೋಜನೆ ಮಾಡಲಾಗಿತ್ತು. ಅದರಂತೆ ಕನ್ನಡಾಂಬೆಯ ಪ್ರತಿಮೆಯನ್ನು ವಿಧಾನಸೌಧದ ಆವರಣದಲ್ಲಿ ಪ್ರತಿಷ್ಠಾಪಿಸಲು ನಿರ್ಧರಿಸಲಾಗಿತ್ತು. ಪ್ರತಿಮೆ ನಿರ್ಮಾಣ ಕಾರ್ಯ ಪೂರ್ಣಗೊಂಡಿದ್ದು, ಇಂದು ಸಂಜೆ 4.30ಕ್ಕೆ ನಡೆಯಲಿರುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಂಚಿನ ಪ್ರತಿಮೆ ಲೋಕಾರ್ಪಣೆಗೊಳಿಸಲಿದ್ದಾರೆ. ಕರ್ನಾಟಕ ಸುವರ್ಣ ಮಹೋತ್ಸವ ಹಿನ್ನೆಲೆಯಲ್ಲಿ ಶಕ್ತಿಸೌಧದ ಪಶ್ಚಿಮ ದ್ವಾರದಲ್ಲಿ ನಿರ್ಮಿಸಲಾಗಿರುವ ನೆಲಮಟ್ಟದಿಂದ 43 ಅಡಿ 6 ಇಂಚಿನ ನಾಡದೇವತೆ BHUVANESHWARI STATUE ಕಂಚಿನ ಪ್ರತಿಮೆ ಇಂದು ಅನಾವರಣಗೊಳ್ಳಲಿದೆ.

Hoysala style pedestal construction:

BHUVANESHWARI STATUE ಪ್ರತಿಮೆಯ ಸುತ್ತಲೂ ಉದ್ಯಾನವನ, ಆವರಣದ ಸುತ್ತಲೂ ವಿದ್ಯುತ್ ದೀಪಾಲಂಕಾರ ವ್ಯವಸ್ಥೆ ಮಾಡಲಾಗಿದೆ. ಪಶ್ಚಿಮದ ದ್ವಾರಕ್ಕೆ ಇರುವ ನಾಡದೇವಿ ವೀಕ್ಷಣೆಗೆ ಸಾರ್ವಜನಿಕರಿಗೆ ಮುಕ್ತ ಅವಕಾಶವನ್ನು ಕಲ್ಪಿಸಲಾಗಿದೆ. ಇದಕ್ಕೆಂದೇ ಪಶ್ಚಿಮಕ್ಕೆ ಪ್ರತ್ಯೇಕ ಗೇಟ್ ವ್ಯವಸ್ಥೆ ಮಾಡಲಾಗಿದೆ. ಬೆಳಗ್ಗೆಯಿಂದ ಸಂಜೆವರೆಗೆ ಸಾರ್ವಜನಿಕರ ಭೇಟಿಗೆ ಅವಕಾಶ ಇರಲಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ತಿಳಿಸಿದ್ದಾರೆ.

ನಾಡದೇವಿ BHUVANESHWARI STATUE ಪ್ರತಿಮೆಯ ಹಿಂದೆ ಕರ್ನಾಟಕ ನಕ್ಷೆ ಹಾಗೂ ಉಬ್ಬು ಶಿಲ್ಪ ಇರಲಿದೆ‌. ಮುಂಭಾಗದಲ್ಲಿ‌ ಭೌಗೋಳಿಕ ನಕ್ಷೆ ಇದ್ದರೆ, ಹಿಂಬದಿಯಲ್ಲಿ ನಾಡಗೀತೆಯನ್ನು ಕೆತ್ತಲಾಗಿದೆ. ಕರ್ನಾಟಕದ ಪ್ರಸಿದ್ಧ ಶಿಲ್ಪಕಲಾ ಶೈಲಿಗಳಾದ ಹೊಯ್ಸಳ, ಚಾಲುಕ್ಯ ಕದಂಬ ಹಾಗೂ ಆಧುನೀಕ ನೈಜ ಶಿಲ್ಪಗಳ ಶೈಲಿಗಳನ್ನು ಅಳವಡಿಸಿ ಪ್ರತಿಮೆ ನಿರ್ಮಿಸಲಾಗಿದೆ. ಹೊಯ್ಸಳ ಲಾಂಛನ, ವೈಜಯಜಯಂತಿ ಮಾಲೆ, ಕಂಠಿಹಾರ, ಗಂಡ ಭೇರುಂಡ ಇರಲಿದೆ.

Kannada flag to be flown on transport bus:

ಪ್ರತಿಮೆ ಅನಾವರಣದ ಕಾರ್ಯಕ್ರಮದ ಅಂಗವಾಗಿ ಬೆಂಗಳೂರಿನ 4 ದಿಕ್ಕುಗಳಿಂದ ಮೆರವಣಿಗೆ ಆಗಮಿಸಲಿದ್ದು, ಜ್ಞಾನಪೀಠ ಪುರಸ್ಕೃತರು ಹಾಗೂ ನಾಡಿನ ಹೆಸರಾಂತ ಮಹನೀಯರ ಫೋಟೋಗಳುಳ್ಳ ಪಲ್ಲಕ್ಕಿ ಮೆರವಣಿಗೆಯಲ್ಲಿ ಬರಲಿವೆ. BHUVANESHWARI STATUE ಸ್ಥಳೀಯ ಬಿಬಿಎಂಪಿಯನ್ನು ಮೆರವಣಿಗೆಗೆ ಬಳಸಿಕೊಳ್ಳಲಾಗಿದ್ದು, ಇಂದು ಬಿಎಂಟಿಸಿ ಹಾಗೂ ಕೆಎಸ್​​ಆರ್​ಟಿಸಿ ಬಸ್​​ಗಳಲ್ಲಿ ಕನ್ನಡದ ಧ್ವಜ ಹಾರಾಡಲಿದೆ.

ಉಚಿತವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಕನ್ನಡದ ಧ್ವಜವನ್ನು ವಿತರಿಸಲಾಗುವುದು ಎಂದು ಸಚಿವರು ಹೇಳಿದ್ದಾರೆ. ಪಂಪ, ರನ್ನ, ಪೊನ್ನ, ಜನ್ನ, ಸರ್‌.ಎಂ.ವಿಶ್ವೇಶ್ವರಯ್ಯ, ಸರ್‌ ಸಿ.ವಿ.ರಾಮನ್, ಸಿ.ಎನ್‌.ಆರ್‌.ರಾವ್, ಭೀಮ್‌ಸೇನ್‌ ಜೋಶಿ, ಡಾ.ರಾಜ್‌ಕುಮಾರ್‌, ಎಸ್.‌ನಿಜಲಿಂಗಪ್ಪ, ಶಿವಕುಮಾರ ಸ್ವಾಮೀಜಿ‌, ದೇ.ಜವರೇಗೌಡ, ಡಾ. ವಿರೇಂದ್ರ ಹೆಗಡೆ, ಡಾ. ಪುನೀತ್‌ ರಾಜ್‌ಕುಮಾರ್ ಅವರ ಫೋಟೋವಿರುವ ಪಲ್ಲಕ್ಕಿ ಮೆರವಣಿಗೆಯಲ್ಲಿ ಸಾಗಲಿವೆ.

ಜ್ಞಾನಪೀಠ ಪ್ರಶಸ್ತಿ ಪುರಸ್ಕತರು ಹಾಗೂ ರಾಷ್ಟ್ರಕವಿಗಳಾದ ಕುವೆಂಪು, ದ.ರಾ.ಬೇಂದ್ರೆ, ಶಿವರಾಮಕಾರಂತ, ಮಾಸ್ತಿ ವೆಂಕಟೇಶ ಅಯ್ಯಾಂಗಾರ್‌, ವಿ‌.ಕೃ. ಗೋಕಾಕ್‌, ಡಾ. ಯು. ಆರ್.‌ ಅನಂತ ಮೂರ್ತಿ, ಡಾ. ಗಿರೀಶ್‌ ಕಾರ್ನಾಡ್‌, ಡಾ. ಚಂದ್ರಶೇಖರ ಕಂಬಾರ, ಮಂಜೇಶ್ವರ ಗೋವಿಂದ ಪೈ, ಡಾ. ಜಿ.ಎಸ್.‌ ಶಿವರುದ್ರಪ್ಪ ಅವರ ಫೋಟೋ ಮೆರವಣಿಗೆಯಲ್ಲಿ ಬರಲಿವೆ. ನಾಡದೇವಿ BHUVANESHWARI STATUE ಪ್ರತಿಮೆ ಅನಾವರಣದ ಬಳಿಕ ಕನ್ನಡ ಗೀತೆಗಳ ಕಾರ್ಯಕ್ರಮ ಮತ್ತು ಹೊನ್ನ ಬಿತ್ತೇವು – ನೃತ್ಯ ರೂಪಕ ಕಾರ್ಯಕ್ರಮ ಸೇರಿದಂತೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.

ಈ ದಿಕ್ಕಿನಿಂದ ಕದಂಬರು, ಚಾಲುಕ್ಯರು, ರಾಷ್ಟ್ರಕೂಟರು, ಹೊಯ್ಸಳರು, ವಿಜಯನಗರ ಅರಸರು, ಗಂಗರು, ಮೈಸೂರು ರಾಜ್ಯರ ಲಾಂಛನ ಹಾಗೂ ಹಲ್ಮಿಡಿ ಶಾಸನದ ಪ್ರತಿರೂಪ ಬರಲಿದೆ. ಇನ್ನು ದಕ್ಷಿಣ ದಿಕ್ಕಿನಿಂದ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣ, ಕನಕದಾಸರು, ಪುರಂದರದಾಸರು, ಸಂಚಿ ಹೊನ್ನಮ್ಮ, ದಾನ ಚಿಂತಾಮಣಿ ಅತ್ತಿಮಬ್ಬೆ, ಅಕ್ಕಮಹಾದೇವಿ, ಕುಮಾರವ್ಯಾಸ, ಸಂತ ಶಿಶುನಾಳ ಷರೀಫ, ರೆವರೆಂಡ್ ಎಫ್ ಕಿಟ್ಟೆಲ್, ಬಿ.ಎಲ್.‌ ರೈಸ್ ಅವರ ಪಲ್ಲಕ್ಕಿ ಬರಲಿದ್ದು, ನಾಲ್ಕು ದಿಕ್ಕುಗಳಿನಿಂದ ಮೆರವಣಿಗೆ ಸಾಗಿ ಅಂತಿಮವಾಗಿ ನಾಡದೇವಿ BHUVANESHWARI STATUE ಪ್ರತಿಮೆ ಇರುವ ವಿಧಾನಸೌಧದ ಬಳಿ ತಲುಪಲಿವೆ.

ಇಂದು ಮಧ್ಯಾಹ್ನ 12 ಗಂಟೆ ಸುಮಾರಿಗೆ ಪ್ರತಿಯೊಂದು ದಿಕ್ಕಿನಲ್ಲಿ ಶಾಸಕರು ಮೆರವಣಿಗೆ ಚಾಲನೆ ನೀಡಲಾಗಿದ್ದು, ಹತ್ತಾರು ಕಲಾ ತಂಡಗಳು ಸೇರಿದಂತೆ ಸಾವಿರಾರು ಮಂದಿ ಮೆರವಣಿಗೆಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದೆ.

Features of Statue:

  • ನೆಲಮಟ್ಟದಿಂದ ಪ್ರತಿಮೆಯ ಎತ್ತರ – 43 ಅಡಿ 6 ಇಂಚು
  • ಪ್ರತಿಮೆಯ ಲೋಹದ ಒಟ್ಟು ತೂಕ – 31.50 ಟನ್
  • ಭುವನೇಶ್ವರಿ ಪ್ರತಿಮೆ – 20 ಟನ್
  • ಕರ್ನಾಟಕ ನಕ್ಷೆ – 11.50 ಟನ್
  • ಭುವನೇಶ್ವರಿ ಪ್ರತಿಮೆಯ ಒಟ್ಟು ವಿಸ್ತೀರ್ಣ (ಉದ್ಯಾನವನ ಸೇರಿದಂತೆ) – 4500 ಚ.ಮೀ
  • ಕಲ್ಲು ಕಟ್ಟಡದ ಪೀಠದ ವಿವರ – ಕಲ್ಲಿನ ಹೊಯ್ಸಳ ಶೈಲಿಯ ಪೀಠ ಮತ್ತು ಪ್ರದಕ್ಷಣ ಪಥದ ಸುತ್ತ ಕರ್ಣಕೂಟ ಮತ್ತು ಅಲಂಕಾರಿಕ ಕಲ್ಲಿನ ಕೈಪಿಡಿ
  • ಕಾಮಗಾರಿಯ ಅಂದಾಜು ವೆಚ್ಚ : 21‌.24 ಕೋಟಿ ರೂ.

ಇದನ್ನು ಓದಿರಿ : CM MEETS SHIVANNA : ನಟ ಶಿವರಾಜ್ ಕುಮಾರ್ ನಿವಾಸಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ

Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

MOTOROLA EDGE 60 FUSION – ಅದ್ಭುತವಾದ ಕ್ಯಾಮೆರಾ ಸೆಟಪ್, ವಾಟರ್ ಪ್ರೊಟೆಕ್ಷನ್ – ಮೊಟೊರೊಲಾದ ಹೊಸ ಫೋನ್ನ ಬೆಲೆ ಕೇವಲ ಇಷ್ಟೇ!

Motorola Edge 60 Fusion: ಬಹುನಿರೀಕ್ಷಿತ ' MOTOROLA EDGE 60 FUSION' ಕೊನೆಗೂ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಕಂಪನಿಯು ಇದನ್ನು ' MOTOROLA EDGE...

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...