ನವದೆಹಲಿ: ಜುಲೈ 23ರಂದು ಪ್ರಧಾನಿ ಮೋದಿ ಸರ್ಕಾರದ ಬಜೆಟ್ ಮಂಡನೆ ಬಳಿಕ ದೇಶದಲ್ಲಿ ಬಂಗಾರದ ಬೆಲೆ ಗಣನೀಯವಾಗಿ ಇಳಿಕೆಯಾಗುತ್ತಿದೆ. ಕೇಂದ್ರ ಸರ್ಕಾರ ಚಿನ್ನದ ಜೊತೆಗೆ ಮೊಬೈಲ್ ಫೋನ್ ಸರ್ಕ್ಯೂಟ್ ಬೋರ್ಡ್ ಅಸೆಂಬಲ್, ಮೊಬೈಲ್ ಫೋನ್ ಚಾರ್ಜರ್‌ಗಳ ಮೇಲಿನ ಸುಂಕವನ್ನು ಕಡಿಮೆ ಮಾಡಿತ್ತು. ಇದಾದ ಬೆನ್ನಲ್ಲೇ ನಿನ್ನೆ ಐಫೋನ್‌ಗಳ ದರ ಇಳಿಕೆ ಕಂಡಿತ್ತು. ಇದೀಗ ಮತ್ತೆ ಚಿನ್ನದ ಬೆಲೆಯಲ್ಲಿ ಇಳಿಕೆ ಕಂಡಿದೆ.
2024ರ ಬಜೆಟ್‌ನಲ್ಲಿ ಚಿನ್ನದ ಮೇಲಿನ ಶೇ. 6% ರಷ್ಟು ಕಸ್ಟಮ್ಸ್ ಸುಂಕದಲ್ಲಿ ಕಡಿತ ಮಾಡಲಾಗಿತ್ತು. ಪರಿಣಾಮ ಮತ್ತೆ ಚಿನ್ನ ಹಾಗೂ ಬೆಳ್ಳಿ ದರದಲ್ಲಿ ಇಳಿಕೆ ಕಂಡಿದೆ. ಚಿನ್ನದ ಬೆಲೆ ಭಾರಿ ಪ್ರಮಾಣದಲ್ಲಿ ಕುಸಿಯುತ್ತಿರುವುದರಿಂದ ಆಭರಣ ಪ್ರಿಯರು ಫುಲ್ ಖುಷ್ ಆಗಿದ್ದಾರೆ.
ಪ್ರಸ್ತುತವಾಗಿ ಚಿನ್ನದ ಬೆಲೆ 24 ಕ್ಯಾರೆಟ್‌ನ 10 ಗ್ರಾಂಗೆ 68,720 ಇದ್ದು, 22 ಕ್ಯಾರೆಟ್ 10 ಗ್ರಾಂಗೆ 62,000 ರೂ ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್‌ನ 1 ಗ್ರಾಂ ಚಿನ್ನದ ಬೆಲೆಯು 6,325 ರೂಪಾಯಿ ಇದ್ದು, 24 ಕ್ಯಾರೆಟ್ 1 ಗ್ರಾಂ ಚಿನ್ನದ ಬೆಲೆಯು 6,900 ರೂ ಇದೆ. 22 ಕ್ಯಾರೆಟ್ 8 ಗ್ರಾಂ ಚಿನ್ನದ ಬೆಲೆ 50,600 ಇದೆ. 24 ಕ್ಯಾರೆಟ್ 8 ಗ್ರಾಂ ಚಿನ್ನದ ಬೆಲೆ 55,200 ಇದೆ.
ಆಷಾಢ ಮಾಸ ಕಳೆಯಲು ಇನ್ನೂ ಒಂದು ವಾರವಷ್ಟೇ ಬಾಕಿ ಉಳಿದಿದೆ. ಇದರ ಮಧ್ಯೆ ಆಭರಣ ಖರೀದಿ ಮಾಡುವವರು ಅಂಗಡಿಗಳತ್ತ ಮುಖ ಮಾಡುತ್ತಿದ್ದಾರೆ. ಈ ಆಷಾಢ ಮಾಸದಲ್ಲಿ ಆಭರಣ ಖರೀದಿಗೆ ಜನ ಅಷ್ಟಾಗಿ ಆಸಕ್ತಿ ತೋರುವುದಿಲ್ಲ. ಕೆಲವೇ ದಿನಗಳಲ್ಲಿ ಶ್ರಾವಣ ಬರಲಿದ್ದು, ಗ್ರಾಹಕರು ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಚಿನ್ನಾಭರಣ ಖರೀದಿಗೆ ಆಸಕ್ತಿ ತೋರುತ್ತಾರೆ. ಆಷಾಢ ಮಾಸ ಮುಗಿಯುತ್ತಿದ್ದಂತೆ ಚಿನ್ನ ಹಾಗೂ ಬೆಳ್ಳಿ ದರದಲ್ಲಿ ಏರಿಕೆಯಾಗೋ ಸಾಧ್ಯತೆ ಇದೆ.