spot_img
spot_img

ಆಭರಣ ಪ್ರಿಯರಿಗೆ ಮತ್ತೆ ಗುಡ್​ನ್ಯೂಸ್​.. ಬಂಗಾರದ ಬೆಲೆಯಲ್ಲಿ ಇಳಿಕೆ; ಇಂದಿನ ಚಿನ್ನದ ದರ ಎಷ್ಟಿದೆ?

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ನವದೆಹಲಿ: ಜುಲೈ 23ರಂದು ಪ್ರಧಾನಿ ಮೋದಿ ಸರ್ಕಾರದ ಬಜೆಟ್​ ಮಂಡನೆ ಬಳಿಕ ದೇಶದಲ್ಲಿ ಬಂಗಾರದ ಬೆಲೆ ಗಣನೀಯವಾಗಿ ಇಳಿಕೆಯಾಗುತ್ತಿದೆ. ಕೇಂದ್ರ ಸರ್ಕಾರ ಚಿನ್ನದ ಜೊತೆಗೆ ಮೊಬೈಲ್ ಫೋನ್ ಸರ್ಕ್ಯೂಟ್ ಬೋರ್ಡ್‌ ಅಸೆಂಬಲ್‌, ಮೊಬೈಲ್ ಫೋನ್ ಚಾರ್ಜರ್‌ಗಳ ಮೇಲಿನ ಸುಂಕವನ್ನು ಕಡಿಮೆ ಮಾಡಿತ್ತು. ಇದಾದ ಬೆನ್ನಲ್ಲೇ ನಿನ್ನೆ ಐಫೋನ್‌ಗಳ ದರ ಇಳಿಕೆ ಕಂಡಿತ್ತು. ಇದೀಗ ಮತ್ತೆ ಚಿನ್ನದ ಬೆಲೆಯಲ್ಲಿ ಇಳಿಕೆ ಕಂಡಿದೆ.

2024ರ ಬಜೆಟ್‌ನಲ್ಲಿ ಚಿನ್ನದ ಮೇಲಿನ ಶೇ. 6% ರಷ್ಟು ಕಸ್ಟಮ್ಸ್ ಸುಂಕದಲ್ಲಿ ಕಡಿತ ಮಾಡಲಾಗಿತ್ತು. ಪರಿಣಾಮ ಮತ್ತೆ ಚಿನ್ನ ಹಾಗೂ ಬೆಳ್ಳಿ ದರದಲ್ಲಿ ಇಳಿಕೆ ಕಂಡಿದೆ. ಚಿನ್ನದ ಬೆಲೆ ಭಾರಿ ಪ್ರಮಾಣದಲ್ಲಿ ಕುಸಿಯುತ್ತಿರುವುದರಿಂದ ಆಭರಣ ಪ್ರಿಯರು ಫುಲ್ ಖುಷ್ ಆಗಿದ್ದಾರೆ.

ಪ್ರಸ್ತುತವಾಗಿ ಚಿನ್ನದ ಬೆಲೆ 24 ಕ್ಯಾರೆಟ್‌ನ 10 ಗ್ರಾಂಗೆ 68,720 ಇದ್ದು, 22 ಕ್ಯಾರೆಟ್ 10 ಗ್ರಾಂಗೆ 62,000 ರೂ ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್​ನ​ 1 ಗ್ರಾಂ ಚಿನ್ನದ ಬೆಲೆಯು 6,325 ರೂಪಾಯಿ ಇದ್ದು, 24 ಕ್ಯಾರೆಟ್ 1 ಗ್ರಾಂ ಚಿನ್ನದ ಬೆಲೆಯು 6,900 ರೂ ಇದೆ. 22 ಕ್ಯಾರೆಟ್​ 8 ಗ್ರಾಂ ಚಿನ್ನದ ಬೆಲೆ 50,600 ಇದೆ. 24 ಕ್ಯಾರೆಟ್ 8 ಗ್ರಾಂ ಚಿನ್ನದ ಬೆಲೆ 55,200 ಇದೆ.

ಆಷಾಢ ಮಾಸ ಕಳೆಯಲು ಇನ್ನೂ ಒಂದು ವಾರವಷ್ಟೇ ಬಾಕಿ ಉಳಿದಿದೆ. ಇದರ ಮಧ್ಯೆ ಆಭರಣ ಖರೀದಿ ಮಾಡುವವರು ಅಂಗಡಿಗಳತ್ತ ಮುಖ ಮಾಡುತ್ತಿದ್ದಾರೆ. ಈ ಆಷಾಢ ಮಾಸದಲ್ಲಿ ಆಭರಣ ಖರೀದಿಗೆ ಜನ ಅಷ್ಟಾಗಿ ಆಸಕ್ತಿ ತೋರುವುದಿಲ್ಲ. ಕೆಲವೇ ದಿನಗಳಲ್ಲಿ ಶ್ರಾವಣ ಬರಲಿದ್ದು, ಗ್ರಾಹಕರು ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಚಿನ್ನಾಭರಣ ಖರೀದಿಗೆ ಆಸಕ್ತಿ ತೋರುತ್ತಾರೆ. ಆಷಾಢ ಮಾಸ ಮುಗಿಯುತ್ತಿದ್ದಂತೆ ಚಿನ್ನ ಹಾಗೂ ಬೆಳ್ಳಿ ದರದಲ್ಲಿ ಏರಿಕೆಯಾಗೋ ಸಾಧ್ಯತೆ ಇದೆ.

WhatsApp Group Join Now
Telegram Group Join Now
Instagram Account Follow Now
spot_img

Related articles

ಕಾರ್ಪೊರೇಟ್ ಯುಗದಲ್ಲಿ Ratan Tata ವ್ಯಾಪಾರ ಸಾಮ್ರಾಜ್ಯ ಕಟ್ಟಿದ್ದು ಹೇಗೆ ?

Ratan Tata Death ವಿಶ್ವದ ಅತ್ಯಂತ ಪ್ರಭಾವಿ ಕೈಗಾರಿಕೋದ್ಯಮಗಳಲ್ಲಿ ಒಬ್ಬರಾದ ರತನ್ ಟಾಟಾ. ೧೦೦ ಕ್ಕೂ ಹೆಚ್ಚು ದೇಶಗಳಲ್ಲಿ ೩೦ ಕ್ಕೂ ಹೆಚ್ಚು ಕಂಪನಿಗಳನ್ನು ಹೊಂದಿದ್ದು...

ಎರಡನೇ ಟೆಸ್ಟ್‌ಗೆ ತಂಡ ಹೇಗೆ ಇರಲಿದೆ ಎಂಬ ಪ್ರಶ್ನೆ ಉದ್ಭವಿಸಿದೆ ? ಸ್ಟಾರ್​ ಆಟಗಾರನಿಗೆ ಕೊಕ್​​̤!

ಬಾಂಗ್ಲಾದೇಶ ತಂಡ ಟೆಸ್ಟ್ ಮತ್ತು ಟಿ20 ಸರಣಿಗಾಗಿ ಭಾರತದ ಪ್ರವಾಸ ಕೈಗೊಂಡಿದೆ. ಈಗಾಗಲೇ ಟೀಮ್​ ಇಂಡಿಯಾ 2 ಪಂದ್ಯಗಳ ಟೆಸ್ಟ್​ ಸರಣಿಯಲ್ಲಿ 1-0 ಮುನ್ನಡೆ...

ತಿರುಪತಿ ವಿಚಾರ : ಡಿಸಿಎಂ ಪವನ್ ಕಲ್ಯಾಣ್‌ಗೆ ಕ್ಷಮೆ ಕೇಳಿದ ನಟ ಯಾರು ?

ತಿರುಪತಿ-ತಿರುಮಲ ಲಡ್ಡು ಪ್ರಸಾದದಲ್ಲಿ ಕಲಬೆರಕೆ ವಿಚಾರ ದೇಶಾದ್ಯಂತ ವ್ಯಾಪಕ ಸುದ್ದಿಗೆ ಗ್ರಾಸವಾಗಿರುವಂತೆಯೇ ಲಡ್ಡು ವಿಚಾರವಾಗಿ ಸಾಕಷ್ಟು ರೀಲ್ಸ್ ಗಳು ಮತ್ತು ಮೀಮ್ಸ್ ಗಳು ಹರಿದಾಡುತ್ತಿವೆ....

ನಿಮ್ಮ ಮನೆಯಲ್ಲಿರುವ ತುಪ್ಪ ಶುದ್ಧವಾಗಿದೆಯಾ ಕಲಬೆರಕೆವಾಗಿದೆಯಾ ? ಇಲ್ಲಿವೆ ಸರಳವಾದ ಉಪಾಯಗಳು.!

ತಿರುಪತಿ ಬಾಲಾಜಿಯ ಪ್ರಸಾದದಲ್ಲಿ ಕಲಬೆರಕೆ ಆಗಿದೆ ಎಂಬ ವಿಷಯ ತಿಳಿದಾಗಿನಿಂದ ತುಪ್ಪದ ವಿಚಾರದಲ್ಲಿ ಅನೇಕ ಸಂಶಯಗಳು ಮೂಡುತ್ತಿವೆ. ನಂದಿನಿ ತುಪ್ಪದ ಬಿಟ್ರೆ ಬೇರೆ ಯಾವ...