spot_img
spot_img

ಅ. 26, 27 ರಂದು ಗ್ರಾಮ ಆಡಳಿತ ಅಧಿಕಾರಿ ಸ್ಪರ್ಧಾತ್ಮಕ ಪರೀಕ್ಷೆ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ದಾವಣಗೆರೆ: ಅಕ್ಟೋಬರ್ 26, 27 ರಂದು ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಯ ನೇಮಕಾತಿಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದ್ದು,
ಕಟ್ಟುನಿಟ್ಟಾಗಿ ಹಾಗೂ ವ್ಯವಸ್ಥಿತವಾಗಿ ಪರೀಕ್ಷೆ ನಡೆಸಲು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಅವರು ತಿಳಿಸಿದರು.
ಜಿಲ್ಲಾಡಳಿತ ಭವನದ ತುಂಗಭದ್ರಾ ಸಭಾಂಗಣದಲ್ಲಿ ಪರೀಕ್ಷಾ ಪೂರ್ವ ಸಿದ್ದತಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಅ.26 ರಂದು 5 ಕೇಂದ್ರಗಳಲ್ಲಿ ಮತ್ತು ಅ.27 ರಂದು 38 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ ಎಂದು ತಿಳಿಸಿದರು.

ಅತ್ಯಂತ ಪಾರದರ್ಶಕವಾಗಿ ಪರೀಕ್ಷೆ ನಡೆಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಅವರು ಪರೀಕ್ಷೆಗೆ ನಿಯೋಜಿತ ಅಧಿಕಾರಿಗಳಿಗೆ ಸೂಚಿಸಿದರು.

ಅ.26 ರಂದು 5 ಪರೀಕ್ಷಾ ಕೇಂದ್ರಗಳಲ್ಲಿ 2090 ಅಭ್ಯರ್ಥಿಗಳು, ಅ.27 ರಂದು 17920 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಅ.26 ರಂದು ಮಧ್ಯಾಹ್ನ 2.30 ರಿಂದ ಸಂಜೆ 4.30 ರವರೆಗೆ ಕಡ್ಡಾಯ ಕನ್ನಡ ಭಾಷೆ ಅ.27 ರಂದು ಬೆಳಿಗ್ಗೆ 10-30ರಿಂದ 12.30ರವರೆಗೆ ಪತ್ರಿಕೆ-1 ಹಾಗೂ ಮಧ್ಯಾಹ್ನ 2-30ರಿಂದ ಸಂಜೆ 4.30 ರವರೆಗೆ ಪತ್ರಿಕೆ-2ರ ಪರೀಕ್ಷೆಗಳು ನಡೆಯಲಿವೆ ಎಂದು ಅವರು ತಿಳಿಸಿದರು.

ಕೇಂದ್ರದೊಳಗೆ ಅಭ್ಯರ್ಥಿಗಳು ಯಾವುದೇ ಎಲೆಕ್ಟ್ರಾನಿಕ್ ಡಿವೈಸ್, ಮೈಕ್ರೋಪೂನ್ ಇನ್ನಿತರ ಉಪಕರಣ ಬಳಸದಂತೆ ನಿಗಾವಹಿಸಬೇಕು. ಪರೀಕ್ಷಾ ಹಿಂದಿನ ದಿನ ಸಿಸಿಟಿವಿ ಕ್ಯಾಮರಾ, ಕೇಂದ್ರದೊಳಗೆ ಪ್ರವೇಶ ಮಾಡುವಾಗ ಸಂಪೂರ್ಣ ತಪಾಸಣೆ ಮಾಡಿ ಭಾವಚಿತ್ರಗಳನ್ನು ಮೂಲ ದಾಖಲೆಗಳೊಂದಿಗೆ ಪರೀಕ್ಷೆ ಮಾಡಲು ಸೂಚಿಸಿ ಪ್ರಶ್ನೆ ಪತ್ರಿಕೆಯನ್ನು ಅಭ್ಯರ್ಥಿಗಳಿಗೆ ನೀಡುವಾಗ ಮತ್ತು ಉತ್ತರ ಪತ್ರಿಕೆ ವಾಪಾಸ್ ಪಡೆಯುವುದನ್ನು ಹಾಗೂ ಖಜಾನೆ ಕಳುಹಿಸುತ್ತಿರುವ ಕುರಿತು ವಿಡಿಯೋ ಮಾಡಬೇಕೆಂದರು.

ಪರೀಕ್ಷಾ ಕೊಠಡಿಗಳಲ್ಲಿ ಸಾಕಷ್ಟು ಗಾಳಿ ಬೆಳಕಿನ ವ್ಯವಸ್ಥೆ ಇರುವಂತೆ ನೋಡಿಕೊಳ್ಳಬೇಕು. ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ಪ್ರತ್ಯೇಕ ಶೌಚಾಲಯ ವ್ಯವಸ್ಥೆ ಸೇರಿದಂತೆ ಅಗತ್ಯ ಕ್ರಮ ವಹಿಸಬೇಕು. ಪರೀಕ್ಷೆಗಳಲ್ಲಿ
ಯಾವುದೇ ಲೋಪವಾಗದಂತೆ ಕರ್ತವ್ಯ ನಿರ್ವಹಿಸಬೇಕು. ಪುರುಷ ಅಭ್ಯರ್ಥಿಗಳು ಪೂರ್ಣ ತೋಳಿನ ಶರ್ಟ್ ಧರಿಸಬಾರದು, ಮಹಿಳೆಯರು ಮಂಗಲ್ಯಸರವನ್ನು ಬಿಟ್ಟು ಬೇರೆ ಯಾವುದೇ ರೀತಿಯ ಆಭರಣಗಳನ್ನು ಧರಿಸಬಾರದು. ಕಿವಿಯಲ್ಲಿ ಹಿಯರ್ ಫೋನ್ಗಳ ಹಾಕಿರುವುದನ್ನು ಪರೀಕ್ಷಿಸುವಂತೆ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಸೂಚಿಸಿದರು. ಯಾವುದೇ ಕಾರಣಕ್ಕೂ ತಮಗೆ ವಹಿಸಿದ ಕರ್ತವ್ಯಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಯಿತು.

ಅಭ್ಯರ್ಥಿಗಳ ಆಧಾರ್ ಕಾರ್ಡ್ ತಪಾಸಣೆ ನಡೆಸಿ ಖಚಿತಪಡಿಸಿಕೊಳ್ಳಬೇಕು. ಮೊಬೈಲ್, ಕ್ಯಾಲಕುಲೇಟರ್ ಸೇರಿದಂತೆ ಯಾವುದೇ ಎಲೆಕ್ಟ್ರಾನಿಕ್ ಉಪಕರಣಗಳನ್ನು ಬಳಸದೇ ಇರುವುದು ಖಚಿತ ಪಡಿಸಿಕೊಳ್ಳಬೇಕು ಪರೀಕ್ಷಾ ಕೇಂದ್ರಗಳಲ್ಲಿ ಅಧಿಕೃತವಾಗಿ ನೇಮಕವಾದ ಸಿಬ್ಬಂದಿಗಳಿಗೆ ಮಾತ್ರ ಕರ್ತವ್ಯ ನಿರ್ವಹಿಸುವಂತೆ ನೋಡಿಕೊಳ್ಳಬೇಕು ಅವರು ಗುರುತಿನ ಚೀಟಿ ಹೊಂದಿರಬೇಕು. ಪಾರದರ್ಶಕ ಹಾಗೂ ವ್ಯವಸ್ಥಿತವಾಗಿ ಪರೀಕ್ಷೆ ನಡೆಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಲಾಯಿತು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಪಿ.ಎನ್.ಲೋಕೇಶ್, ಉಪವಿಭಾಗಾಧಿಕಾರಿ ಸಂತೋಷ್ ಪಾಟೀಲ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಮಂಜುನಾಥ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಕರಿಸಿದ್ದಪ್ಪ, ಮಾರ್ಗಾಧಿಕಾರಿಗಳು, ಅಧೀಕ್ಷಕರು, ಸ್ಥಾನಿಕ ನಿರೀಕ್ಷಣಾಧಿಕಾರಿಗಳು, ಪರೀಕ್ಷಾ ಕೇಂದ್ರಗಳ ವೀಕ್ಷಕರು ಉಪಸ್ಥಿತರಿದ್ದರು.

 

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

ನ. ೨೬ ರ ಸಂವಿಧಾನ ದಿನಾಚರಣೆ ಡಾ. ಬಿ. ಆರ್. ಅಂಬೇಡ್ಕರ ಭಾವಚಿತ್ರ ಕಡ್ಡಾಯ : ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ಆಗಸ್ಟ್-15ರ ಸ್ವಾತಂತ್ರ್ಯ ದಿನಾಚರಣೆ ಮತ್ತು ನವೆಂಬರ್- 260 ಸಂವಿಧಾನದ ದಿನಾಚರಣೆ ಸಂದರ್ಭದಲ್ಲಿ ಡಾ.ಬಿ.ಆರ್ ಅಂಬೇಡ್ಕ‌ರವರ ಭಾವಚಿತ್ರವನ್ನು ಕಡ್ಡಾಯವಾಗಿ ಇಡಬೇಕು ಎಂದು ರಾಜ್ಯ...

ಅಂಚೆ ಮೂಲಕ ಕನ್ನಡ ಶಿಕ್ಷಣ ಯೋಜನೆ

ಉಡುಪಿ : ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯ ಹಾಗೂ ಮೈಸೂರಿನ ಭಾರತೀಯ ಭಾಷೆಗಳ ಕೇಂದ್ರಗಳು ಒಂದಾಗಿ 1985ರ ನವೆಂಬರ್ 1ರಿಂದ ರಾಜ್ಯದಲ್ಲಿರುವ ಕನ್ನಡ ಬಾರದ...

ನ.25 ರಿಂದ ಚಳಿಗಾಲ ಸಂಸತ್​ ಅಧಿವೇಶನ : ವಕ್ಫ್​ ತಿದ್ದುಪಡಿ

ನವದೆಹಲಿ: ದೇಶದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿರುವ ಮುಸಲ್ಮಾನ್​ ವಕ್ಫ್(ತಿದ್ದುಪಡಿ) ವಿಧೇಯಕ-2024 ಇದೇ ತಿಂಗಳ 25ರಿಂದ ಆರಂಭವಾಗಲಿರುವ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಮಂಡನೆಗೆ ಬರಲಿದೆ ಎಂದು...

ಗೂಗಲ್​ ಮ್ಯಾಪ್ ಎಡವಟ್ಟು : ಮಿನಿ ಬಸ್​ ಅಪಘಾತ

ಕಣ್ಣೂರು: ರಂಗಭೂಮಿ ಕಲಾವಿದರನ್ನು ಹೊತ್ತು ಸಾಗುತ್ತಿದ್ದ ಮಿನಿಬಸ್​ವೊಂದು ಕಣ್ಣೂರಿನ ಸಮೀಪದ ಕೆಲಕಮ್​ ಬಳಿ ಅಪಘಾತಕ್ಕೆ ಒಳಗಾಗಿದ್ದಾರೆ. ಮಿನಿ ಬಸ್​ ಚಾಲಕ ಗೂಗಲ್ ಮ್ಯಾಪ್​ ಸಹಾಯದಿಂದ...